ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ರಾಜ್ಯದ ಕಾರ್ಯಕರ್ತರೊಂದಿಗೆ ನಡೆಸಿದ ವರ್ಚುವಲ್ ಸಂವಾದವನ್ನು ಕೊಪ್ಪಳದಲ್ಲಿಯೂ ಬಿಜೆಪಿಯ ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ವೀಕ್ಷಿಸಿದರು. ನಗರದ ತಾಲೂಕು ಕ್ರೀಡಾಂಗಣದಲ್ಲಿ ಮೋದಿ ಸಂವಾದದ ವರ್ಚುವಲ್ ಲೈವ್ ಸಂವಾದ ವೀಕ್ಷಿಸಲು ಬಿಜೆಪಿ ವ್ಯವಸ್ಥೆ ಮಾಡಿತ್ತು.
ಸಂವಾದದ ಬಳಿಕ ಸಂಸದ ಸಂಗಣ್ಣ ಕರಡಿ ಮಾತನಾಡಿ, ಮೋದಿಯವರು ಹೇಳಿದಂತೆ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಪಕ್ಷದ ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Karnataka Election : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೋಮುಗಲಭೆ; ಶಾ ಬೆಂಬಲಕ್ಕೆ ನಿಂತ ಸಿ.ಟಿ. ರವಿ, ಕರಂದ್ಲಾಜೆ
ಕರ್ನಾಟಕ ದೇಶದ ಅಭಿವೃದ್ದಿಗೆ ಮುನ್ನುಡಿಯಾಗಲಿದೆ. ಮೋದಿ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಹೇಳಿದ್ದಾರೆ. ಸ್ಟಾರ್ಟ್ ಅಪ್ ಯೋಜನೆಗೆ ಕರ್ನಾಟಕದಲ್ಲಿ ವಿಫುಲ ಅವಕಾಶಗಳಿವೆ ಎಂದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ನೆನೆಗುದಿಗೆ ಬಿದ್ದಿರುವ ಸಿಂಗಟಾಲೂರು, ವಿವಿಧ ಏತ ನೀರಾವರಿ ಪೂರ್ಣಗೊಳಿಸುವುದು. ಕೊಪ್ಪಳಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗಾಗಿ ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.