Site icon Vistara News

Karnataka Election 2023: ಚುನಾವಣಾ ಅಕ್ರಮ ತಡೆಗೆ ಗಣಿ ಕಾರ್ಮಿಕರಿಗೆ ಮತದಾನ ಜಾಗೃತಿ ಅಭಿಯಾನ

Karnataka election Voting awareness campaign for miners‌

ಹೊಸಪೇಟೆ: ಸಾರ್ವತ್ರಿಕ ವಿಧಾನಸಭಾ ಚುನಾವಣೆ (Karnataka election 2023) ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾರರು (Voters) ಸಹಕಾರ ನೀಡಬೇಕು. ಯಾವುದೇ ಆಮಿಷಗಳಿಗೆ ಒಳಗಾಗದಂತೆ ಮತಚಲಾಯಿಸುವ ದೃಢ ಸಂಕಲ್ಪ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಬಿ.ಸದಾಶಿವ ಪ್ರಭು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿಯಿಂದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಡಣಾಪುರ ಗ್ರಾಮದ ಬಿಎಂಎಂ ಗಣಿಗಾರಿಕೆ ಸಂಸ್ಥೆಯಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ:BJP Karnataka: ಬಿ.ಎಲ್‌. ಸಂತೋಷ್‌ ಹೇಳಿದಂತೆ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ: ಸಭೆ ನಂತರ ಬಿ.ಎಸ್‌. ಯಡಿಯೂರಪ್ಪ ಮಾತು

ಬಳಿಕ ಗಣಿ ಸಂಸ್ಥೆಯ ಗಿರೀಶ್ ಮಾತನಾಡಿ, ಮತದಾನ ನಡೆಯುವ ಮೇ 10 ರಂದು ಗಣಿ ಕಾರ್ಮಿಕರು ಕಡ್ಡಾಯ ಮತದಾನವನ್ನು ಮಾಡಬೇಕು, ಸಂಸ್ಥೆಯಿಂದ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗುತ್ತದೆ ಎಂದು ಹೇಳಿದರು.

ಈ ವೇಳೆ ಗಣಿ ಕಾರ್ಮಿಕರಿಗೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಗಣಿ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ತಾಲೂಕು ಪಂಚಾಯತ್ ನರೇಗಾ ಸಿಬ್ಬಂದಿ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.

Exit mobile version