karnataka-election: Assam CM Himant Biswa sarma alleges PFI behind Congress Manifesto Karnataka Election : ಕಾಂಗ್ರೆಸ್ ಪ್ರಣಾಳಿಕೆ ಹಿಂದೆ ಪಿಎಫ್‍ಐ ಒತ್ತಡ ಎಂದ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ - Vistara News

ಕರ್ನಾಟಕ

Karnataka Election : ಕಾಂಗ್ರೆಸ್ ಪ್ರಣಾಳಿಕೆ ಹಿಂದೆ ಪಿಎಫ್‍ಐ ಒತ್ತಡ ಎಂದ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ

Congress Manifesto : ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ನಿಷೇಧಿಸುವುದಾಗಿ ಹೇಳಿರುವುದರ ಹಿಂದೆ ಪಿಎಫ್‌ಐ ಒತ್ತಡವಿದೆ ಎಂಬ ಆರೋಪ ಮಾಡಿದ್ದಾರೆ ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮಾ.

VISTARANEWS.COM


on

karnataka-election: Assam CM Himant Biswa sarma alleges PFI behind Congress Manifesto
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻʻಪಿಎಫ್‍ಐ ಒತ್ತಡದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election) ಕಾಂಗ್ರೆಸ್‍ನ ಪ್ರಣಾಳಿಕೆ (Congress Manifesto) ಸಿದ್ಧಗೊಂಡಿದೆʼʼ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himant Biswa sharma) ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ʻʻಬಜರಂಗ ದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿರುವ ಕಾಂಗ್ರೆಸ್, ಪಿಎಫ್‍ಐ ಅನ್ನು ಏಕೆ ನಿಷೇಧಿಸಿರಲಿಲ್ಲ;; ಎಂದು ಪ್ರಶ್ನಿಸಿದ ಬಿಸ್ವಾಸ್ ಅವರು, ಕಾಂಗ್ರೆಸ್ ಇಂಡಿಯನ್ ಮುಸ್ಲಿಂ ಲೀಗ್‍ನೊಂದಿಗೆ ಮೈತ್ರಿ ಹೊಂದಿದೆ ಎಂದು ಹೇಳಿದರು.

ʻʻಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಪಿಎಫ್‍ಐ ಮತ್ತು ಮೂಲಭೂತವಾದಿ ಸಂಘಟನೆಗಳ ಪ್ರಣಾಳಿಕೆಯಂತಿದೆ. ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದ್ದ ಪಿಎಫ್‍ಐ ಮೇಲಿನ ಪ್ರಕರಣಗಳನ್ನು ಹಿಂಪಡೆದು, ಆ ಸಂಘಟನೆಯ 1,700 ಕಾರ್ಯಕರ್ತರನ್ನು ಬಿಡುಗಡೆ ಮಾಡಿತ್ತು ಎಂದು ಅವರು ಟೀಕಿಸಿದರು.

ʻʻಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಕರ್ನಾಟಕ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವುದು ಐತಿಹಾಸಿಕ ನಿರ್ಧಾರವಾಗಿದೆ. ಇದು, ದೇಶಾದ್ಯಂತ ಏಕರೂಪ ನೀತಿ ಜಾರಿಗೊಳ್ಳಲು ರಾಷ್ಟ್ರವ್ಯಾಪಿ ಒತ್ತಡಕ್ಕೆ ಹಾದಿ ಮಾಡಿಕೊಡಲಿದೆ. ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‍ಆರ್‌ಸಿ) ಸಹ ಇಂದಿನ ತುರ್ತು ಅಗತ್ಯವಾಗಿದೆʼʼ ಎಂದು ತಿಳಿಸಿದರು.

ʻʻಆಧಾರ್‌ನಿಂದ ಪೌರತ್ವ ದೃಢೀಕರಣವಾಗುವುದಿಲ್ಲ. ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ದೇಶದಲ್ಲಿ ಎನ್‍ಆರ್‍ಸಿ ಜಾರಿಯಾಗಿಲ್ಲ. ಸುದೀರ್ಘ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್ ಇಂದಿನವರೆಗೆ ಈ ಬಗ್ಗೆ ಚಕಾರವೆತ್ತಿಲ್ಲ. ಎನ್‍ಆರ್‍ಸಿ ಜಾರಿಗೆ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ತೆಗೆದುಕೊಂಡ ಕ್ರಮವು, ರಾಷ್ಟ್ರವ್ಯಾಪಿ ಎನ್‍ಆರ್‍ಸಿ ಜಾರಿಗೊಳ್ಳಲು ರಾಷ್ಟ್ರವ್ಯಾಪಿ ಒತ್ತಡಕ್ಕೆ ಹಾದಿ ಮಾಡಿಕೊಡಲಿದೆʼʼ ಎಂದು ಹಿಮಂತ್‌ ಬಿಸ್ವಾ ಶರ್ಮಾ ಹೇಳಿದರು.

ʻʻ40 ಪರ್ಸೆಂಟ್ ಕಮಿಷನ್‌ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಆದರೆ, ಬೋಫೋರ್ಸ್ ಎಷ್ಟು ದೊಡ್ಡ ಹಗರಣ ಎಂಬುದನ್ನು ಕಾಂಗ್ರೆಸ್ ಅವಲೋಕಿಸಬೇಕು ಎಂದು ಹೇಳಿದರು ಹಿಮಂತ್‌ ಬಿಸ್ವಾ ಶರ್ಮ.

ರಾಹುಲ್‌ ಗಾಂಧಿಗೇ ಗ್ಯಾರಂಟಿ ಇಲ್ಲ

ʻʻಗ್ಯಾರಂಟಿ ನೀಡಲು ರಾಹುಲ್ ಗಾಂಧಿ ಯಾರುʼʼ ಎಂದು ಪ್ರಶ್ನಿಸಿದ ಬಿಸ್ವಾಸ್ ಅವರು, ʻʻರಾಹುಲ್ ಗಾಂಧಿ ಸಂಸದರೂ ಅಲ್ಲ. ಅವರ ಬಗ್ಗೆ ಅವರಿಗೇ ಗ್ಯಾರಂಟಿ ಇಲ್ಲ. ಅವರು ಗ್ಯಾರಂಟಿ ನಿಜವಾಗಿದ್ದರೆ, ಅಮೇಥಿ ಅಭಿವೃದ್ಧಿಯಾಗಬೇಕಿತ್ತು. ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲಸಬೇಕಿತ್ತು. ರಾಮ ಮಂದಿರ- ಬಾಬರಿ ಮಸೀದಿ ವಿವಾದ ಇತ್ಯರ್ಥವಾಗಬೇಕಿತ್ತು. ಕರ್ನಾಟಕ ಜನರ ಪ್ರತಿಭೆ, ಪರಿಶ್ರಮದಿಂದ ರಾಜ್ಯ ಮುಂಚೂಣಿಯಲ್ಲಿದೆ. ರಾಹುಲ್ ಗಾಂಧಿ ಗ್ಯಾರಂಟಿಗಳಿಂದಲ್ಲʼʼ ಎಂದು ಆಕ್ಷೇಪಿಸಿದರು ಹಿಮಂತ್‌ ಬಿಸ್ವಾ ಶರ್ಮ.

ʻʻಕರ್ನಾಟಕ ನಂ.1 ರಾಜ್ಯವಾಗಲು ಬಿಜೆಪಿಗೆ, ನರೇಂದ್ರ ಮೋದಿಯವರಿಗೆ, ಭಾರತಕ್ಕೆ, ಕರ್ನಾಟಕಕ್ಕೆ ಮತ ನೀಡಬೇಕು. ಈ ಬಾರಿ ಬಿಜೆಪಿ 150 ಸ್ಥಾನ ಗೆಲ್ಲುತ್ತದೆʼʼ ಎಂದು ಹಿಮಂತ್‌ ಬಿಸ್ವಾ ಶರ್ಮಾ ವಿಶ್ವಾಸ ವ್ಯಕ್ತಪಡಿಸಿದರು.

ಮುಸ್ಲಿಮರ ಮೀಸಲಾತಿ ರದ್ದು ಐತಿಹಾಸಿಕ ನಿರ್ಧಾರ

ʻʻಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ತೆಗೆದುಹಾಕಿ ಹಿಂದುಳಿದ ವರ್ಗಗಳಿಗೆ ಹಂಚುವ ಕರ್ನಾಟಕ ಸರ್ಕಾರದ ಕ್ರಮವೂ ಐತಿಹಾಸಿಕ. ಸಂವಿಧಾನದಲ್ಲಿ ಧಾರ್ಮಿಕ ಆಧಾರದಡಿ ಮೀಸಲಾತಿಗೆ ಅವಕಾಶವಿಲ್ಲ. ಡಾ.ಅಂಬೇಡ್ಕರ್ ಅವರು ಇದಕ್ಕೆ ವಿರುದ್ಧವಾಗಿದ್ದರು. ಮುಸ್ಲೀಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಮೀಸಲಾತಿಯ ಮೂಲ ಸ್ವರೂಪವನ್ನು ಮತ್ತು ಸಂವಿಧಾನದ ಪ್ರಮುಖ ತತ್ವವನ್ನು ಕೊಲ್ಲಲು ಪ್ರಯತ್ನಿಸಿದೆ ಎಂದು ಅವರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಚುನಾವಣಾ ನಿರ್ವಹಣಾ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಮಾಧ್ಯಮ ಸಹ ಸಂಚಾಲಕ ಸಂಜಯ್ ಮಯೂಕ್, ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಉಪಸ್ಥಿತರಿದ್ದರು.

ಇದನ್ನೂ ಓದಿ : Karnataka Election : ಬಿಜೆಪಿ ಕೈಗೆ ಸಿಕ್ತು ಬಜರಂಗದಳ ಅಸ್ತ್ರ; ನಿಷೇಧ ಪ್ರಸ್ತಾಪ ವಿರುದ್ಧ ಕೆಂಡಾಮಂಡಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಬೆಂಗಳೂರು

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

KEA : ಕನ್ನಡ ಕಡ್ಡಾಯ ಪರೀಕ್ಷೆ ಅ.26ಕ್ಕೆ, ಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯು ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ನಡೆಯಲಿದೆ.

VISTARANEWS.COM


on

By

kea
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ವಯೋಮಿತಿ ಸಡಿಲಿಕೆ ನಂತರ ಅರ್ಜಿ ಸಲ್ಲಿಸಿದ ಸುಮಾರು 63 ಸಾವಿರ ಮಂದಿಗೆ ಕನ್ನಡ ಕಡ್ಡಾಯ ಪರೀಕ್ಷೆ, ಅ.26ಕ್ಕೆ ರಾಜ್ಯದ 153 ಕೇಂದ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಜಿಟಿಟಿಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ 2,300 ಮಂದಿಯೂ ಸೇರಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ತಿಳಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆ ಅ.27ರಂದು ನಡೆಯಲಿದ್ದು, ಅದನ್ನು ಬರೆಯಲು 4.8 ಲಕ್ಷ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಈ ಸಲುವಾಗಿ 1,173 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದರು. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ವಸ್ತ್ರ ಸಂಹಿತೆ ಕೂಡ ಇದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

ಓಎಂಆರ್ ನೋಂದಣಿ ಎಚ್ಚರ

ಸೆ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಓಎಂಆರ್ ಶೀಟ್ ನಲ್ಲಿ ನೋಂದಣಿ ಸಂಖ್ಯೆ‌ ಮತ್ತು ವರ್ಶನ್ ಕೋಡ್ ನಮೂದಿಸುವಾಗ ಸುಮಾರು ಒಂಬತ್ತು ಸಾವಿರ ಮಂದಿ ತಪ್ಪು ಮಾಡಿದ್ದು ಪುನಃ ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ಅಭ್ಯಾಸ ಸಲುವಾಗಿ ಈ ಬಾರಿ ಮಾದರಿ ಓಎಂಆರ್ ಶೀಟ್ ನೀಡಲಾಗಿತ್ತು. ಸರಿಯಾಗಿ ಅಭ್ಯಾಸ ಮಾಡಿಕೊಂಡು ಬನ್ನಿ. ಪುನಃ ತಪ್ಪು ಗಳಾದರೆ ಅದಕ್ಕೆ ಪ್ರಾಧಿಕಾರ ಜವಾಬ್ದಾರಿಯಲ್ಲ.‌ ಮಾದರಿ ಓಎಂಆರ್ ಶೀಟ್ ಅನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಬೇಡ ಎಂದೂ‌ ಅವರು ಸಲಹೆ ನೀಡಿದ್ದಾರೆ.

Continue Reading

ಕೊಡಗು

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

Assault case: ಕರ್ತವ್ಯ ನಿರತ ಸಂಚಾರಿ ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ಕಾರು ಚಾಲಕನನ್ನು ಕೊಡಗು ಪೊಲೀಸರು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ.

VISTARANEWS.COM


on

By

assault Case
Koo

ಕೊಡಗು: ಮಡಿಕೇರಿ ಸಮೀಪ ಎರಡು ಶಿಫ್ಟ್‌ ಕಾರುಗಳ ನಡುವೆ ಅಪಘಾತ (Road Accident) ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ‌ ಸಂಜು ಅವರು ಸ್ಥಳಕಾಗಮಿಸಿ ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಮತ್ತೊಂದು ಶಿಫ್ಟ್‌ ಕಾರನ್ನು ಬದಿಗೆ ಸರಿಸುವಂತೆ ಸೂಚಿಸುವ ಸಂದರ್ಭದಲ್ಲಿ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್‌ ಮೇಲೆ ವಾಹನ ಹರಿಸಿ (Assault case) ತಪ್ಪಿಸಿಕೊಂಡಿದ್ದ.

ಸಂಚಾರಿ ಪೊಲೀಸ್ ಸಿಬ್ಬಂದಿ ಸಂಜು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ದೃಶ್ಯ ‌ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು ಆತನ ಬೆನ್ನಟ್ಟಿದಾಗ ಪೊಲೀಸರ ಕಣ್ಣು ತಪ್ಪಿಸಿ ಕಾರು ಚಾಲಕ ಪರಾರಿ ಆಗಿದ್ದ.

ಪೊಲೀಸ್ ಸಿಬ್ಬಂದಿ ಮೇಲೆ ಕಾರು ಹರಿಸಿದ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿ, ಪರಾರಿಯಾಗಿದ್ದ ಕಾರು ಚಾಲಕ ಬಂಟ್ವಾಳ ಮೂಲದ ನಜೀರ್ ಎಂಬಾತನನ್ನು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ. ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ನಿರ್ದೇಶನದ ಮೇರೆಗೆ, ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಧರ್ ನೇತೃತ್ವದಲ್ಲಿ ತಂಡ ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರ ಈ ಮಿಂಚಿನ ಕಾರ್ಯಾಚರಣೆಗೆ ಕೊಡಗು ಎಸ್ಪಿ ಕೂಡ ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ‌.

Continue Reading

ಪ್ರಮುಖ ಸುದ್ದಿ

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Actor Darshan : ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್​ಗಳಲ್ಲಿ ಸೌಂಡ್ ಮಾಡುತ್ತಿವೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು. ಇದೀಗ ನವಗ್ರಹ ಸಿನಿಮಾ ರೀ ರಿಲೀಸ್‌ಗೆ ಡೇಟ್‌ ಫಿಕ್ಸ್‌ ಆಗಿದೆ.

VISTARANEWS.COM


on

By

actor darshan
Koo

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಬೆನ್ನು ನೋವಿನಿಂದ ಒದ್ದಾಡುತ್ತಿರುವುದನ್ನು ಕಂಡು ಬೇಸರದಲ್ಲಿರುವ ಅಭಿಮಾನಿಗಳಿಗೆ ಕೊನೆಗೂ ಗುಡ್‌ ನ್ಯೂಸ್‌ ಸಿಕ್ಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟರಲ್ಲೇ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ರಿಲೀಸ್ ಆಗ್ಬೇಕಿತ್ತು. ಆದರೆ ಇದೀಗ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಬಂಧಿಯಾಗಿದ್ದಾರೆ.

ದಾಸನ ಸಿನಿಮಾ ರೀ-ರಿಲೀಸ್, ಡೇಟ್ ಅನೌನ್ಸ್

ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್​ಗಳಲ್ಲಿ ಸೌಂಡ್ ಮಾಡುತ್ತಿವೆ. ಈ ವರ್ಷ ‘DEVIL THE HERO’ ಸಿನಿಮಾವನ್ನು ನೋಡಬೇಕು ಎಂಬುದು ದರ್ಶನ್ ಅಭಿಮಾನಿಗಳ ಆಸೆ ಆಗಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಜೈಲು ಸೇರಿದ ಬಳಿಕ ಆ ಸಿನಿಮಾದ ಕೆಲಸಕ್ಕೆ ಬ್ರೇಕ್​ ಬಿತ್ತು. ಹಾಗಾಗಿ ದೊಡ್ಡ ಪರದೆ ಮೇಲೆ ದರ್ಶನ್ ಹೊಸ ಸಿನಿಮಾ ತೆರೆಕಾಣಲಿಲ್ಲ. ಈ ಸಂದರ್ಭದಲ್ಲಿ ಅಭಿಮಾನಿಗಳು ದರ್ಶನ್​ ಅವರನ್ನು ಬಹಳ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಅವರ ಈ ಹಿಂದಿನ ಹಿಟ್ ಸಿನಿಮಾಗಳನ್ನು ಮತ್ತೆ ತೆರೆಗೆ ತರಲಾಗುತ್ತಿದೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು.

Actor darshan
Actor darshan

‘ನವಗ್ರಹ’ ಸಿನಿಮಾ ಹಿಟ್‌ ಆದ ನಂತರ ಸಿನಿಮಾದ ಸೀಕ್ವೆಲ್‌ ಬರಲಿದೆ ಅಂತ ಹೇಳಲಾಗಿತ್ತಾದರೂ ಕೊನೆವರೆಗೂ ಈ ಸಿನಿಮಾದ ಸೀಕ್ವೆಲ್‌ ಬರಲೇ ಇಲ್ಲ. ಇದೊಂದು ವಿಷಯ ಡಿ ಬಾಸ್‌ ಫ್ಯಾನ್ಸ್‌ ಅಲ್ಲಿ ನಿರಾಶೆ ಉಂಟು ಮಾಡಿತ್ತು. ಕೆಲವು ದಿನಗಳ ಹಿಂದೆ, ‘ನವಗ್ರಹ’ ಸಿನಿಮಾ ರೀ ರಿಲೀಸ್‌ ಮಾಡಬೇಕೆಂದು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಅಭಿಯಾನವನ್ನು ಸ್ಟಾರ್ಟ್‌ ಮಾಡಿದ್ದರು. #WeWantNavagrahaReRelease ಎಂಬ ಹ್ಯಾಶ್‌ಟ್ಯಾಗ್‌ ಬಳಸುವ ಮೂಲಕ ಈ ಟ್ರೆಂಡ್‌ ಅನ್ನು ವೈರಲ್‌ ಆಗಿತ್ತು. ಇದೀಗ ಮತ್ತೆ ಈ ಸಿನಿಮಾ ನೋಡೋ ಆಸೆಯಿಂದ ಅಭಿಮಾನಿಗಳು ಚಿತ್ರದ ರೀ ರಿಲೀಸ್‌ಗಾಗಿ ಪಟ್ಟು ಹಿಡಿದಿದ್ದಾರೆ.

ಕುತೂಹಲ ಮೂಡಿಸಿದ ದಿನಕರ್​ ಪೋಸ್ಟ್

‘ನವಗ್ರಹ’ ಕನ್ನಡ ಚಿತ್ರರಂಗದ ಸೂಪರ್ ಹಿಟ್​ ಸಿನಿಮಾ. 2008ರಲ್ಲಿ ತೆರೆಕಂಡ ನಟ ದರ್ಶನ್​​ ಮುಖ್ಯಭೂಮಿಕೆಯ ಈ ಚಿತ್ರ ಸೂಪರ್ ಹಿಟ್​ ಆಗಿತ್ತು. ಬಹುತಾರಾಗಣದ ಈ ಚಿತ್ರ ‘ಅಂಬಾರಿ’ ಕಳ್ಳತನಕ್ಕೆ ಪ್ರಯತ್ನಿಸುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾ ರೀ-ರಿಲೀಸ್​ ಆಗುತ್ತಿರುವ ಹಿನ್ನೆಲೆಯಲ್ಲಿ ನಿರ್ದೇಶಕ ದಿನಕರ್ ತೂಗುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ‘ನನ್ನ ನಿರ್ದೇಶನದ 2ನೇ ಸಿನಿಮಾ ನವಗ್ರಹ. ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕರ ಮಕ್ಕಳನ್ನು ಒಟ್ಟಿಗೆ ಬೆಳ್ಳಿ ತೆರೆಯ ಮೇಲೆ ತಂದ ಒಂದು ಪ್ರಾಮಾಣಿಕ ಪ್ರಯತ್ನ. 16 ವರ್ಷಗಳ ಹಿಂದೆ ಬಿಡುಗಡೆಯಾಗಿ ನಿಮ್ಮೆಲ್ಲರ ಪ್ರೀತಿ-ಪ್ರೋತ್ಸಾಹದಿಂದ ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರ ಒತ್ತಾಯದ ಫಲವಾಗಿ ಇದೇ ನವೆಂಬರ್ 8ರಂದು ಮರುಬಿಡುಗಡೆಗೆ ಸಿದ್ಧವಾಗಿದೆ. ಮತ್ತೊಮ್ಮೆ ಬೆಳ್ಳಿಪರದೆಯ ಮೇಲೆ ನೋಡಿ ಆನಂದಿಸಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ನವಗ್ರಹ’ ಸಿನಿಮಾಗೆ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶನ ಮಾಡಿದ್ದಾರೆ. ದರ್ಶನ್ ಜೊತೆ ತರುಣ್ ಸುಧೀರ್​, ಧರ್ಮ ಕೀರ್ತಿರಾಜ್, ವಿನೋದ್ ಪ್ರಭಾಕರ್​, ಸೃಜನ್ ಲೋಕೇಶ್, ಗಿರಿ ದಿನೇಶ್, ನಾಗೇಂದ್ರ ಅರಸ್​, ವರ್ಷಾ, ಶರ್ಮಿಳಾ ಮಾಂಡ್ರೆ, ಕುರಿ ಪ್ರತಾಪ್, ಡೇರಿಂಗ್ ಸ್ಟಾರ್ ಧರ್ಮ ಸೇರಿದಂತೆ ಅನೇಕರು ನಟಿಸಿದ್ದಾರೆ. ಎ.ವಿ ಕೃಷ್ಣಕುಮಾರ್​ ಕ್ಯಾಮರಾ ಕೈಳಚಕವಿರುವ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಒದಗಿಸಿದ್ದರು. ಟಿ ಶಶಿಕುಮಾರ್​ ಸಂಕಲನದ ಹೊಣೆ ಹೊತ್ತಿದ್ದರು. ತೂಗುದೀಪ ಪ್ರೊಡಕ್ಷನ್ಸ್ ಅಡಿ ನಿರ್ಮಾಣಗೊಂಡ ಈ ಚಿತ್ರ 2008ರ ನವೆಂಬರ್​​ 7ರಂದು ಚಿತ್ರಮಂದಿರ ಪ್ರವೇಶಿಸಿ ಯಶಸ್ವಿಯಾಗಿತ್ತು. ಇದೀಗ ಅದೇ ದಿದಂದೇ ಮರು ಬಿಡುಗಡೆಗೆ ಸನ್ನದ್ಧವಾಗಿದೆ.

Continue Reading
Advertisement
karnataka Weather Forecast
ಮಳೆ1 ಗಂಟೆ ago

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

dina bhavishya
ಭವಿಷ್ಯ1 ಗಂಟೆ ago

Dina Bhavishya: ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳಬೇಡಿ

kea
ಬೆಂಗಳೂರು15 ಗಂಟೆಗಳು ago

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

assault Case
ಕೊಡಗು17 ಗಂಟೆಗಳು ago

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

actor darshan
ಪ್ರಮುಖ ಸುದ್ದಿ18 ಗಂಟೆಗಳು ago

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Bengaluru News
ಬೆಂಗಳೂರು19 ಗಂಟೆಗಳು ago

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Dina Bhavishya
ಭವಿಷ್ಯ20 ಗಂಟೆಗಳು ago

Dina Bhavishya : ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಈ ದಿನ ಹೂಡಿಕೆ ವ್ಯವಹಾರದಿಂದ ದೂರವಿರಿ

Dina bhavishya
ಭವಿಷ್ಯ3 ದಿನಗಳು ago

Dina Bhavishya: ಈ ರಾಶಿಯವರಿಗೆ ಉತ್ಸಾಹದ ವಾತಾವರಣ; ಆಪ್ತರೊಂದಿಗೆ ಪ್ರಯಾಣ ಸಾಧ್ಯತೆ

namma Metro
ಬೆಂಗಳೂರು4 ದಿನಗಳು ago

Namma Metro : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಲಭ್ಯ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌