ಮೈಸೂರು: ಬಾದಾಮಿ ಕ್ಷೇತ್ರದಲ್ಲಿ ಕಳೆದ ೬೦ ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯವು ಈ ೫ ವರ್ಷಗಳಲ್ಲಿ ಆಗಿದೆ. ಈ ಕಾರಣದಿಂದಾಗಿಯೇ ಆ ಕ್ಷೇತ್ರದ ಜನರು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂಬರುವ ಚುನಾವಣೆಯಲ್ಲಿ (Karnataka Election) ಬಾದಾಮಿಯಲ್ಲೇ ಸ್ಪರ್ಧೆ ಮಾಡಬೇಕೆಂದು ಬಯಸುತ್ತಿದ್ದಾರೆ. ಇದಕ್ಕಾಗಿ ಜನರೇ ಸೇರಿ ಸಿದ್ದರಾಮಯ್ಯ ಅವರಿಗೆ ಹೆಲಿಕಾಪ್ಟರ್ ಅನ್ನು ಉಡುಗೊರೆಯಾಗಿ ಕೊಡುತ್ತಿದ್ದಾರೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾದವರು 15 ದಿನಕ್ಕೊಮ್ಮೆಯಾದರೂ ಕ್ಷೇತ್ರಕ್ಕೆ ಬರಬೇಕು. ಆದರೆ, ತಮಗೆ ಬರಲು ಕಷ್ಟವಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದರಿಂದಾಗಿ ಕ್ಷೇತ್ರದ ಜನರೇ ಒಟ್ಟಾಗಿ ಸಿದ್ದರಾಮಯ್ಯ ಅವರಿಗೆ ಹೆಲಿಕಾಪ್ಟರ್ ಕೊಡಿಸಲು ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು.
ಹೆಲಿಕಾಪ್ಟರ್‌ಗೆ 25 ಕೋಟಿ ರೂಪಾಯಿ ಆದರೂ ಜನರೇ ದುಡ್ಡು ಹಾಕಿ ಹೆಲಿಕಾಪ್ಟರ್ ಕೊಡಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಬಾದಾಮಿ ತಾಲೂಕಿನ ಜನ ಚಂದಾ ವಸೂಲಿ ಮಾಡುತ್ತಿದ್ದಾರೆ ಎಂದು ಜಮೀರ್ ಹೇಳಿದ್ದಾರೆ.
ಇದನ್ನೂ ಓದಿ | ಗರ್ಭಿಣಿ ನೀನು, ಚೆನ್ನಾಗಿರಬೇಕು ಎನ್ನುತ್ತ ಪತ್ನಿಗೆ ಎಚ್ಐವಿ ಸೋಂಕಿನ ರಕ್ತ ಇಂಜೆಕ್ಟ್ ಮಾಡಿಸಿದ ಪತಿ; ನಂಬಿ ಮೋಸ ಹೋದ ಹೆಂಡತಿ