karnataka-election: BJP and hindu activists are up in arms against Congress manifesto of banning Bajarangadal Karnataka Election : ಬಿಜೆಪಿ ಕೈಗೆ ಸಿಕ್ತು ಬಜರಂಗದಳ ಅಸ್ತ್ರ; ನಿಷೇಧ ಪ್ರಸ್ತಾಪ ವಿರುದ್ಧ ಕೆಂಡಾಮಂಡಲ - Vistara News

ಕರ್ನಾಟಕ

Karnataka Election : ಬಿಜೆಪಿ ಕೈಗೆ ಸಿಕ್ತು ಬಜರಂಗದಳ ಅಸ್ತ್ರ; ನಿಷೇಧ ಪ್ರಸ್ತಾಪ ವಿರುದ್ಧ ಕೆಂಡಾಮಂಡಲ

Congress Manifesto: ಕಾಂಗ್ರೆಸ್‌ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧದ ಪ್ರಸ್ತಾಪ ಇರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಹಿಂದು ಸಂಘಟನೆಗಳು ಸಿಡಿದೆದ್ದಿವೆ.

VISTARANEWS.COM


on

karnataka-election: BJP and hindu activists are up in arms against Congress manifesto of banning Bajarangadal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭಾ ಚುನಾವಣೆಗಾಗಿ (Karnataka Election) ಕಾಂಗ್ರೆಸ್‌ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿರುವ ಒಂದು ಅಂಶ ಈ ಭಾರಿ ಚರ್ಚೆಗೆ ಕಾರಣವಾಗಿದೆ. ವಿಶ್ವ ಹಿಂದು ಪರಿಷತ್‌ ಅಧೀನದಲ್ಲಿರುವ ಬಜರಂಗ ದಳ ಸಂಘಟನೆಯನ್ನು ನಿಷೇಧಿಸುವುದಾಗಿ (Bajarang dal Ban) ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವುದರ ವಿರುದ್ಧ ಹಿಂದು ಸಂಘಟನೆಗಳು, ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ತಾಕತ್ತಿದ್ದರೆ ಬಜರಂಗದಳವನ್ನು ಬ್ಯಾನ್‌ ಮಾಡಿ ಎಂದು ಸವಾಲು ಎಸೆದಿದ್ದಾರೆ.

ಬಜರಂಗ ದಳ ನಿಷೇಧ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್‌ ಬಿಜೆಪಿ ಕೈಗೆ ಚುನಾವಣೆಯ ಸಂದರ್ಭದಲ್ಲಿ ಅಸ್ತ್ರ ಕೊಟ್ಟಂತಾಗಿದೆ ಎಂದು ವಿಶ್ಲೇಷಿಸಲಾಗಿದೆ. ಬಿಜೆಪಿ ಕೂಡಾ ಇಂಥದೊಂದು ಹಿಂದುತ್ವದ ಅಸ್ತ್ರಕ್ಕಾಗಿ ಕಾಯುತ್ತಿತ್ತು. ಹೀಗಾಗಿ ಈಗ ಸಿಕ್ಕಿರುವ ಅಸ್ತ್ರವನ್ನು ಚೆನ್ನಾಗಿ ಬಳಸಿಕೊಳ್ಳುವ ಸೂಚನೆಯನ್ನು ಈಗಾಗಲೇ ಅದು ನೀಡಿದೆ. ಬಿಜೆಪಿ ನಾಯಕರು ಮತ್ತು ಹಿಂದು ಸಂಘಟನೆಗಳ ಮುಖಂಡರು ಆಗಲೇ ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದಿದ್ದಾರೆ.

ಪಿಎಫ್‌ಐ ನಿಷೇಧಕ್ಕೆ ಪ್ರತಿಕಾರವೇ ಎಂದು ಕೇಳಿದ ಸುನಿಲ್‌ ಕುಮಾರ್‌

ಬಜರಂಗ ದಳ ನಿಷೇಧ ಪ್ರಸ್ತಾಪವನ್ನು ಖಂಡಿಸಿ ಟ್ವೀಟ್‌ ಮಾಡಿರುವ ಇಂಧನ ಸಚಿವ ಸುನಿಲ್‌ ಕುಮಾರ್‌ ಅವರು, ಇದು ಪಿಎಫ್‌ಐ ನಿಷೇಧಕ್ಕೆ ಪ್ರತಿಕಾರವೇ ಎಂದು ಪ್ರಶ್ನಿಸಿದ್ದಾರೆ.

ʻʻಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ. ಬಜರಂಗದಳ ನಿಷೇಧಿಸುವುದು ಸೇರಿದಂತೆ ಕಾನೂನು ಕ್ರಮ ತೆಗೆದುಕೊಳ್ಳುವ ವಿಚಾರ ಕಾಂಗ್ರೆಸ್ ಪ್ರಸ್ತಾಪಿಸಿದೆ. ಡಿಕೆಶಿ, ಸಿದ್ದರಾಮಯ್ಯನವರೇ, ನಾವು ಪಿಎಫ್ ಐ ನಿಷೇಧ ಮಾಡಿದ್ದೇವೆ‌. ಅದೇ ಸಂಕಟ ಹಾಗೂ ದ್ವೇಷವನ್ನು ಭಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ? ನಿಮ್ಮ ಹಿಂದು ವಿರೋಧಿ ನಿಲುವಿಗೆ ಧಿಕ್ಕಾರʼʼ ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ʻʻಭಜರಂಗದಳ ಎನ್ನುವುದು ಸಮಾಜ ವಿರೋಧಿ ಸಂಘಟನೆಯಲ್ಲ. ಹಿಂದೂಗಳ ರಕ್ಷಣೆಗೆ, ಗೋಮಾತೆಯ ಹಿತಕ್ಕೆ, ಹಿಂದು ಸೋದರಿಯರ ಮಾನ ಸಂರಕ್ಷಣೆಗೆ ಸಿದ್ಧವಾಗಿರುವ ಕಾರ್ಯಕರ್ತರ ಪಡೆ. ಮುಸ್ಲಿಂ‌ ಓಲೈಕೆಗಾಗಿ ಭಜರಂಗದಳ ನಿಷೇಧಿಸುತ್ತೇವೆಂಬ ದಾರ್ಷ್ಟ್ಯವೇʼʼ ಎಂದು ಪ್ರಶ್ನಿಸಿದ್ದಾರೆ ಸುನಿಲ್‌ ಕುಮಾರ್‌.

ʻʻಭಜರಂಗ ದಳ ಹಾಗೂ ಪಿಎಫ್ ಐನ್ನು ಒಂದೇ ತಕ್ಕಡಿಯಲ್ಲಿ ಅಳತೆ ಮಾಡುವ ಕಾಂಗ್ರೆಸಿಗರ ಮನಸು ರೋಗಗ್ರಸ್ಥವಾಗಿದೆ. ಪಿಎಫ್ಐ ಒಂದು ಭಯೋತ್ಪಾದಕ ಸಂಘಟನೆ ಎಂಬ ಕಾರಣಕ್ಕೆ ನಿಷೇಧ ಮಾಡಿದ್ದೇವೆ. ಭಜರಂಗದಳ ಹಿಂದು ಸಮಾಜ ಮತ್ತು ದೇಶ ಹಿತದ ಸಂಘಟನೆ. ದೇಶಪ್ರೇಮವನ್ನು ಕಾಂಗ್ರೆಸ್ ನಿಷೇಧಿಸುತ್ತದೆಯೇ?ʼʼ ಎಂದು ಸುನಿಲ್‌ ಕುಮಾರ್‌ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್‌ಗೆ ಸವಾಲು ಹಾಕಿದ ಸಂಸದ ಮುನಿಸ್ವಾಮಿ

ʻʻಕಾಂಗ್ರೆಸ್‌ನವರಿಗೆ ತಾಕತ್ ಇದ್ರೆ ಬಜರಂಗ ದಳ ಬ್ಯಾನ್ ಮಾಡಲಿ. ಅವರಿಗೆ ತಾಕತ್ ಇದ್ರೆ ರಿಸರ್ವೇಷನ್ ಮುಟ್ಟಿ ನೋಡಲಿ.ʼʼ ಎಂದು ಕಾಂಗ್ರೆಸ್‌ ನಾಯಕರಿಗೆ ಸವಾಲ್ ಹಾಕಿದ್ದಾರೆ ಕೋಲಾರ ಸಂಸದ ಮುನಿಸ್ವಾಮಿ.

ಬಜರಂಗ ದಳ ದೇವರು ನಿರ್ಮಿಸಿದ ಸಂಘಟನೆ ಎಂದ ರಘು ಸಕಲೇಶಪುರ

ʻʻಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ನಿಷೇಧಿಸುತ್ತೇನೆ ಎಂದು ಘೋಷಿಸಿರುವುದು ಹಾಸ್ಯಾಸ್ಪದ. ಈ ವಿಚಾರದಲ್ಲಿ ಕಾಂಗ್ರೆಸ್ ಬಹಳ ಗಂಭೀರ ಹಾಗೂ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಭಜರಂಗದಳ ಸಂಘಟನೆ ದೇವರು ನಿರ್ಮಾಣ ಮಾಡಿರೋ ಸಂಘಟನೆ. ಇದೊಂದು ದೇಶಭಕ್ತ ಸಂಘಟನೆಯಾಗಿದೆʼʼ ಎಂದು ಬಜರಂಗ ದಳ ಸಂಘಟನೆ ಮುಖಂಡ ರಘು ಸಕಲೇಶಪುರ ಆಕ್ರೋಶ ಹೇಳಿದ್ದಾರೆ.

ʻʻದೇಶಕ್ಕೆ ಏನಾದರೂ ಆಪತ್ತು ಬರುತ್ತದೆ ಅಂದರೆ ಬಜರಂಗ ದಳದ ಕಾರ್ಯಕರ್ತರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧರಾಗಿದ್ದಾರೆ. ಇಂತಹ ದೇಶಭಕ್ತ ಸಂಘಟನೆಯನ್ನು ಕಾಂಗ್ರೆಸ್ ಮಾತ್ರವಲ್ಲ ಯಾವುದೇ ಪಕ್ಷ ಬಂದರೂ, ಹತ್ತಾರು ಪಕ್ಷಗಳು ಒಗ್ಗೂಡಿದರೂ ನಿಷೇಧ ಮಾಡೋದಕ್ಕೆ ಸಾಧ್ಯವಿಲ್ಲʼʼ ಎಂದು ಹೇಳಿದರು.

ʻʻಲೋಕಸಭೆಯಲ್ಲಿ 430ಕ್ಕೂ ಅಧಿಕ ಸ್ಥಾನವಿದ್ದಾಗಲೇ ಆರೆಸ್ಸೆಸ್‌ನ್ನು ಬ್ಯಾನ್ ಮಾಡ್ತೀವಿ ಅಂತಾ ಹೋಗಿದ್ದರು. ಆಗಲೇ ಬ್ಯಾನ್ ಮಾಡೋದಕ್ಕೆ ಆಗಿರಲಿಲ್ಲ. ಈಶ್ವರ ಕಾರ್ಯವನ್ನು ಮಾಡುತ್ತಿರುವಂಥ ಈ ಸಂಘನೆಗಳ ಬಗ್ಗೆ, ಆಂಜನೇಯನ ಶಕ್ತಿ ಇರುವ ಬಜರಂಗ ದಳದಂತಹ ಸಂಘಟನೆಯನ್ನು ನಿಷೇಧ ಮಾಡುವ ಮಾತಾಡಿರುವಂತಹ ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದೆ. ಈಗಾಗಲೇ ಕಾಂಗ್ರೆಸ್ ಕಟ್ಟಕಡೆಯ ದಿನಗಳನ್ನು ಎಣಿಸುತ್ತಿದೆ. ಇದೀಗ ಇಂಥ ಹೇಳಿಕೆಗಳ ಮೂಲಕ ಹಿಂದೂ ಸಮಾಜ ಹಾಗೂ ಹಿಂದೂ ಸಂಘಟನೆಗಳ ಭಾವನೆಗೆ ಧಕ್ಕೆ ತಂದಿದೆ. ಇದರ ವಿರುದ್ಧ ಬಜರಂಗ ದಳ ಸಂಘಟನೆ ಹೋರಾಡುತ್ತದೆʼ ಎಂದಿರುವ ರಘು ಸಕಲೇಶಪುರ ಅವರು, ಇನ್ನು 30 ವರ್ಷ ಕಳೆದರೂ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ ಎಂದು ಭವಿಷ್ಯ ನುಡಿದರು.

ಹಿಂದೂ ವಿರೋಧಿ ಮಾನಸಿಕತೆ ಎಂದ ಮೋಹನ್‌ ಗೌಡ

ಬೆಂಗಳೂರಿನಲ್ಲಿ ಮಾತನಾಡಿದ ಹಿಂದು ಜಾಗೃತಿ ಸಮಿತಿ ಮುಖಂಡ ಮೋಹನ್ ಗೌಡ ಅವರು, ಕಾಂಗ್ರೆಸ್ ಪ್ರಣಾಳಿಕೆ ಖಂಡನೀಯ. ಹಿಂದೂ ಧರ್ಮ, ದೇವಸ್ಥಾನ, ಹಿಂದೂ ಯುವತಿಯರನ್ನು ರಕ್ಷಣೆ ಮಾಡುವ ಹಿಂದುತ್ವವಾದಿ ಸಂಘಟನೆ ಬಜರಂಗದಳ. ಇದು ಕಾನೂನು ಚೌಕಟ್ಟಿನಲ್ಲಿ ರಚನೆ ಆಗಿರುವ ಸಂಘಟನೆ. ಇದನ್ನು ನಿಷೇಧಿಸುವ ಮಾತನಾಡಿರುವ ಕಾಂಗ್ರೆಸ್‌ನ ಹಿಂದೂ ವಿರೋಧಿ ಮಾನಸಿಕತೆ ಇಲ್ಲಿ ಎದ್ದು ಕಾಣುತ್ತಿದೆʼʼ ಎಂದು ಹೇಳಿದರು.

ʻʻಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರ ಬರ್ಬರ ಹತ್ಯೆ, ದಂಗೆ, ಭಯೋತ್ಪಾದಕ ಚಟುವಟಿಕೆಗಳನ್ನು ಮಾಡಿದ್ದ ಪಿಎಫ್ಐ, ಎಸ್ ಡಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡುವ ಪ್ರಸ್ತಾವನೆಯನ್ನು ಕಾಂಗ್ರೆಸ್‌ ಹೊಂದಿತ್ತಾʼʼ ಎಂದು ಕೇಳಿದ ಅವರು, ʻʻಮುಸ್ಲಿಂ ಒಲೈಕೆಗಾಗಿ ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ನೀತಿ ಅನುಸರಿಸ್ತಾ ಇದೆ. ಇಂತಹ ಹಿಂದೂ ವಿರೋಧಿ, ರಾಷ್ಟ್ರ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕುʼʼ ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಕುಟಿಲ ನೀತಿ ಮನೆ ಮನೆಗೆ ತಲುಪಿಸಿ ಎಂದ ಶರಣ್‌ ಪಂಪ್‌ವೆಲ್‌

ʻʻಇದು ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯನ್ನು ತೋರಿಸುತ್ತದೆ. ನಮ್ಮ ಕಾರ್ಯಕರ್ತರು ಮನೆ ಮನೆಗೆ ಹೋಗಿ ಕಾಂಗ್ರೆಸ್‌ನ ಈ ಕುಟಿಲ ನೀತಿಯನ್ನು ತಿಳಿಸಬೇಕು. ಕಾಂಗ್ರೆಸನ್ನು ಸೋಲಿಸಲು ಎಲ್ಲರೂ ಶ್ರಮ ಹಾಕಬೇಕುʼʼ ಎಂದು ಮಂಗಳೂರಿನ ವಿಶ್ವ ಹಿಂದು ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌ ಹೇಳಿದರು.

ʻʻಬಜರಂಗ ದಳ ರಾಷ್ಟ್ರೀಯ ಸಂಘಟನೆಯಾಗಿದೆ. ದೇಶದ 60 ಸಾವಿರ ಹಳ್ಳಿಗಳಲ್ಲಿ ಬಜರಂಗದಳ ಇದೆ. ಬಜರಂಗ ದಳ ಎಂದೂ ರಾಷ್ಟ್ರ ವಿರೋಧಿ ಕಾರ್ಯ ಮಾಡಿಲ್ಲ. ಹಿಂದು ಹೆಣ್ಣುಮಕ್ಕಳು, ಗೋವು ವಿಚಾರದಲ್ಲಿ ಹೋರಾಟ ಮಾಡಿದ್ದೇವೆ. ಪಿಎಫ್ ಐ ಮತೀಯ ಸಂಘಟನೆ, ರಾಷ್ಟ್ರ ದ್ರೋಹಿ ಸಂಘಟನೆ. ಬಜರಂಗ ದಳವನ್ನು ಪಿಎಫ್ಐ ಜೊತೆ ಹೋಲಿಸೋದು ಸರಿಯಲ್ಲʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʻʻಕಾಂಗ್ರೆಸ್‌ನಲ್ಲಿರುವ ಹಿಂದುಗಳು ಎಚ್ಚೆತ್ತುಕೊಳ್ಳಬೇಕು. ಬಜರಂಗ ದಳವನ್ನು ನಿಷೇಧ ಮಾಡುವ ಷಡ್ಯಂತ್ರವನ್ನು ಕಾಂಗ್ರೆಸ್ ನಲ್ಲಿರುವ ಹಿಂದೂಗಳು ಅರಿಯಬೇಕುʼʼ ಎಂದು ಹೇಳಿದ್ದಾರೆ.

ತಾಕತ್ತು ಇದ್ದರೆ ಬ್ಯಾನ್‌ ಮಾಡಿ ಎಂದ ಶೋಭಾ ಕರಂದ್ಲಾಜೆ

ʻʻನಿಮ್ಮ ಅಜ್ಜಿ, ತಾತನ ಕಾಲದಲ್ಲಿ ಆರ್‌ಎಸ್‌ಎಸ್‌ (RSS) ಅನ್ನು ಬ್ಯಾನ್ ಮಾಡಿದ್ದಿರಿ. ಆದರೆ, ಏನೂ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈಗ ನಾವು ವಿಶ್ವದ, ದೇಶದ ಅತಿ ದೊಡ್ಡ ಸಂಘಟನೆಯಾಗಿ ಬೆಳೆದಿದ್ದೇವೆ. ನಾನು ನಿಮಗೆ ಬಹಿರಂಗ ಸವಾಲನ್ನು ಹಾಕುತ್ತಿದ್ದೇನೆ. ನಿಮಗೆ ತಾಕತ್ತು ಇದ್ದರೆ ಬಜರಂಗದಳವನ್ನು ಬ್ಯಾನ್‌ ಮಾಡಿ. ನನ್ನನ್ನು ಬಂಧಿಸಿʼʼ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಈ ಹಿಂದೆ ಮೂರು ಬಾರಿ ಆರ್‌ಎಸ್‌ಎಸ್‌ ಅನ್ನು ಬ್ಯಾನ್ ಮಾಡಿತ್ತು. ಆದರೆ, ಇವತ್ತು ಜಗತ್ತಿನ ಅತಿ ದೊಡ್ಡ ಸಂಘಟನೆ ಆರ್‌ಎಸ್‌ಎಸ್‌ ಆಗಿದೆ. ಆರ್‌ಎಸ್‌ಎಸ್‌ ವಿವಿಧ ವಿಭಾಗ ಕೆಲಸ ಮಾಡುತ್ತಿದೆ. ನಿಮ್ಮ ಅಜೆಂಡಾ ಹಿಂದುಗಳ ಹತ್ಯೆ, ಬಾಂಬ್ ಬ್ಲಾಸ್ಟ್, ಹಿಂದು ಯುವತಿಯರನ್ನು ಲವ್ ಜಿಹಾದ್ ಮಾಡುವುದಾಗಿದೆ. ಈ ರೀತಿ ಮಾಡುವವರನ್ನು ಬ್ಯಾನ್‌ ಮಾಡಲು ನಿಮಗೆ ಆಗುವುದಿಲ್ಲ. ನಿಮಗೆ ತಾಕತ್ತು ಇದ್ದರೆ ಬಜರಂಗದಳವನ್ನು ಬ್ಯಾನ್ ಮಾಡಿ ತೋರಿಸಿ ಎಂದು ಶೋಭಾ ಕರಂದ್ಲಾಜೆ ಸವಾಲು ಹಾಕಿದರು.

ಇದನ್ನೂ ಓದಿ : Congress Manifesto : ದ್ವೇಷ ಬಿತ್ತಿದರೆ ಬಜರಂಗ ದಳ ನಿಷೇಧ; ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಎಚ್ಚರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

Prajwal Revanna Case: ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ಭವಾನಿ ರೇವಣ್ಣ ಅವರು ಅರ್ಜಿ ಸಲ್ಲಿಸಿದ್ದಾರೆ. ಸಂತ್ರಸ್ತೆ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಆರೋಪ ಇವರ ಮೇಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ, ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೊ ಮಾಡಿ ಹರಿಬಿಟ್ಟ ಬೆನ್ನಲ್ಲೇ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ಅವರು ಅರ್ಜಿ ಸಲ್ಲಿಸಿದ್ದಾರೆ.

ಕೆ.ಆರ್‌.ನಗರದ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹಾಗೂ ಭವಾನಿ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್‌ ಕೇಸ್‌ನಲ್ಲಿ ಈಗಾಗಲೇ ಮಾಜಿ ಸಚಿವ ರೇವಣ್ಣ ಅವರಿಗೆ ಬೇಲ್‌ ಸಿಕ್ಕಿದೆ. ಈ ನಡುವೆ ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಪ್ರಜ್ವಲ್‌ ರೇವಣ್ಣ ಅವರು ವಿದೇಶದಿಂದ ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಚಾಮರಾಜನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಮೇ 20ರಂದು ಜಾಮೀನು (Bail) ಮಂಜೂರಾಗಿತ್ತು. ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೂ ನೋಟಿಸ್‌ ನೀಡಲಾಗಿತ್ತು.

ಇದನ್ನೂ ಓದಿ | Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಮೊದಲ ನೋಟಿಸ್‌ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇತ್ತೀಚೆಗೆ ಎರಡನೇ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಭವಾನಿ ಅವರು ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದರು. ಇದೀಗ ಮಗ ಪ್ರಜ್ವಲ್‌ ಪ್ರಜ್ವಲ್‌ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಯಾವ ನಿಯಮದಡಿ ನೋಟಿಸ್ ನೀಡಿದ್ದಾರೆಂದು ಎಸ್ಐಟಿ ತಿಳಿಸಿಲ್ಲ. ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲು ವಕೀಲರು ಮನವಿ ಮಾಡಿದ್ದಾರೆ. ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿ ಪೊಲೀಸರಿಗೆ ಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ. ನಾಳೆಗೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ ಎಂದು ತಿಳಿದುಬಂದಿದೆ.

ಮೇ 31ಕ್ಕೆ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ವಿಚಾರಣೆ ಆಗಮನ

Prajwal revanna Case

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Video) ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಜ್ವಲ್‌ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟಾದರೂ, ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರದ ಕಾರಣ ಅವರ ತಾತ ಎಚ್‌.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದರು. ನನ್ನ ಮೇಲೆ ಗೌರವ ಇದ್ದರೆ ವಾಪಸ್‌ ಬಾ ಎಂದಿದ್ದರು.

Continue Reading

ಕರ್ನಾಟಕ

Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

Prajwal Revanna Case: ವಿದೇಶದದಲ್ಲಿರುವ ಪ್ರಜ್ವಲ್‌ ರೇವಣ್ಣನನ್ನು ಕರೆತರಲು ಹಲವು ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. ಈ ನಡುವೆ ಅವರೇ ವಿಚಾರಣೆಗೆ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಹೇಳಿರುವುದು ಸ್ವಾಗತಾರ್ಹ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

VISTARANEWS.COM


on

Prajwal Revanna Case
Koo

ತುಮಕೂರು: ಪ್ರಜ್ವಲ್ ರೇವಣ್ಣ (Prajwal Revanna Case) ವಿಡಿಯೊ ಮೂಲಕ ಮಾತನಾಡಿದ್ದಾರೆ. ಇದೇ ತಿಂಗಳ 31 ರಂದು ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ವಿಚಾರಣೆಗೆ ಬರುತ್ತೇನೆ ಎಂದು ಹೇಳಿದ್ದಾರೆ. ತನಿಖೆಗೆ ಸಹಕಾರ ಕೊಡುತ್ತೀನಿ ಎಂದು ಹೇಳ್ತಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೊ ಮಾಡಿ ಹರಿಬಿಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಕರ್ನಾಟಕದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಈ ಬಗ್ಗೆ ಇಡೀ ಜಗತ್ತೇ ಮಾತನಾಡುವ ಸಂದರ್ಭದಲ್ಲಿ ಅವರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿತ್ತು. ಪ್ರಧಾನಮಂತ್ರಿಗಳಿಗೆ ಮುಖ್ಯಮಂತ್ರಿಗಳು ಎರಡು ಬಾರಿ ಪತ್ರ ಬರೆದರು. ಸಿಬಿಐ, ಇಂಟರ್ ಪೋಲ್‌ಗೆ ಮನವಿ ಮಾಡಿದ್ದೆವು. ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಿದ್ದರು ಎಂದು ತಿಳಿಸಿದ್ದಾರೆ.

ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್ ಪೊರ್ಟ್ ರದ್ದು ಮಾಡಿ ಅವರನ್ನು ಕರೆತರಲು ಕೇಂದ್ರ ಸರ್ಕಾರ ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದೆವು. ಪಾಸ್ ಪೊರ್ಟ್ ರದ್ದು ಪ್ರಕ್ರಿಯೆ ಪ್ರಾರಂಭ ಮಾಡಿದ್ದೀವಿ‌ ಅಂತ ಅವರು ತಿಳಿಸಿದ್ದರು. ಈ ಮಧ್ಯೆ ಅವರೇ ವಿಚಾರಣೆಗೆ ಬರುತ್ತೇನೆ ಎಂದು ಹೇಳಿರುವುದನ್ನು ನಾವು ಸ್ವಾಗತ ಮಾಡುತ್ತೇವೆ. ಎಸ್ಐಟಿ ಬಳಿ ಏನು ಸಾಕ್ಷ್ಯಗಳಿವೆಯೋ, ಅವುಗಳ ಆಧಾರದ ಮೇಲೆ ತನಿಖೆ ಮುಂದುವರಿಯುತ್ತದ ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

ಇದನ್ನೂ ಓದಿ | DK Shivakumar: ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ಮೇಲೆ ಕಠಿಣ ಕ್ರಮ; ಡಿ.ಕೆ.ಶಿವಕುಮಾರ್

ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಗೃಹ ಸಚಿವ

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಸರ್ಕಾರ ನಮಗೆ ಸಹಕಾರ ಕೊಡಲಿಲ್ಲ. ಡಿಪ್ಲೊಮ್ಯಾಟಿಕ್ ಪಾಸ್ ಪೊರ್ಟ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಹೇಳಿದರು. ನಮ್ಮ ಪತ್ರಗಳಿಗೆ ಇನ್ನು ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ಅವರು ಏನೂ ಮಾಡಿಲ್ಲ ಎಂದು ಅರ್ಥ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ.

ನಾನು ಪ್ರಜ್ವಲ್ ವಿಡಿಯೊ ನೋಡಿರಲಿಲ್ಲ‌, ನನಗೆ ಎರಡು ಗಂಟೆ ಮುಂಚೆ ಸುದ್ದಿ ಬಂತು. ಈ ರೀತಿಯಾಗಿ ಅವರು ಹೇಳಿಕೆ ಕೊಟ್ಟಿದ್ದಾರೆ ಅಂತ, ನಾನು ಬೇರೊಂದು ಕೆಲಸಕ್ಕೆ ಬಂದಿದ್ದೆ. ಹಾಗಾಗಿ ವಿಡಿಯೊ ನೋಡಿರಲಿಲ್ಲ, ಇವಾಗ ವಿಡಿಯೊ ನೋಡಿದಾಗ ಕನ್ಫರ್ಮ್ ಆಯ್ತು. ಅವರು ಏನಾದರೂ ಹೇಳಿಕೊಳ್ಳಲಿ, ಅವರು ಹೇಳಿದಕ್ಕೆ ನಾನು ಉತ್ತರ ಕೊಡಲಿಕ್ಕೆ ಹೋಗಲ್ಲ‌ ಎಂದು ಹೇಳಿದ್ದಾರೆ.

ಅಜ್ಞಾತ ಸ್ಥಳದಿಂದ ವಿಡಿಯೊ ಮಾಡಿದ ಬಗ್ಗೆ ಪ್ರತಿಕ್ರಿಯಿಸಿ, ಅವರನ್ನು ಯಾವ ರೀತಿ ಕಸ್ಟಡಿಗೆ ತಗೋಬೇಕು ಎಂಬುವುದು ಎಸ್‌ಐಡಿ ಅವರಿಗೆ ಗೊತ್ತಿರುತ್ತದೆ. ಯಾವ ರೀತಿಯಾಗಿ ಕಾನೂನಿನ ಚೌಕಟ್ಟಿಗೆ ತರಬೇಕು ಅಂತ ಡಿಸೈಡ್ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Prajwal Revanna Video: ನಾನು ‘ಅಮಾಯಕ’ ಎನ್ನುವ ಪ್ರಜ್ವಲ್‌ಗೆ ‘ವಿಸ್ತಾರ ನ್ಯೂಸ್‌’ 10 ಪ್ರಶ್ನೆಗಳು

ಪ್ರಜ್ವಲ್ ರೇವಣ್ಣ ಮಾಜಿ ಕಾರು ಡ್ರೈವರ್ ಕಾರ್ತಿಕ್ ಬಂಧನ ವಿಚಾರ‌ ಪ್ರತಿಕ್ರಿಯಿಸಿ, ಅವರು ಕೊರ್ಟ್‌ಗೆ ಹೋಗಿದ್ದಾರೆ. ಇದೇ ವೇಳೆ ಪ್ರಜ್ವಲ್ ರೇವಣ್ಣ ನನ್ನದೇನು ತಪ್ಪಿಲ್ಲ ಎಂಬ ಹೇಳಿಕೆ ವಿಚಾರಕ್ಕೆ ಸ್ಪಂದಿಸಿ, ಎಲ್ಲರೂ ಹಾಗೆಯೇ ಹೇಳುತ್ತಾರೆ, ತಪ್ಪಿಲ್ಲ ಅಂದ್ರೆ ಮಾಡಿದವರು ಯಾರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಎಸ್‌ಐಟಿಯವರು ಎಲ್ಲಾ ಮಾಹಿತಿ ಕಲೆಹಾಕಿ ಹೇಳುತ್ತಾರೆ. ಮೇ 31ಕ್ಕೂ ಪ್ರಜ್ವಲ್‌ ಬರದಿದ್ದರೆ ಮುಂದೆ ಏನಾಗುತ್ತೆ ನೋಡೋಣ ಎಂದು ಹೇಳಿದ್ದಾರೆ.

Continue Reading

ಮಳೆ

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Weather Forecast : ರಾಜ್ಯದ ಹಲವೆಡೆ ಮಳೆಗೆ (Rain News) ಅವಾಂತರಗಳೇ ಸೃಷ್ಟಿಯಾಗಿವೆ. ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತಗೊಂಡರೆ, ಯಾದಗಿರಿಯಲ್ಲಿ ಮನೆ ಚಾವಣಿ ಕುಸಿದಿದೆ. ವಿಜಯನಗರದ ರೈಲ್ವೆ ನಿಲ್ದಾಣದಲ್ಲಿ ಚಾವಣಿಯಿಂದ ನೀರು ಸೋರಿಕೆ ಆಗುತ್ತಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯೊಂದಿಗೆ ಗುಡುಗು ಇರಲಿದೆ.

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಸೇರಿದಂತೆ ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ: Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

ಕಡಲತೀರಕ್ಕೆ ಇಳಿಯದಂತೆ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ಎಫೆಕ್ಟ್ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ಅಲೆಗಳ ಅಬ್ಬರ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗಿಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕಡಲತೀರದಲ್ಲಿ ಲೈಫ್‌ಗಾರ್ಡ್‌ಗಳು ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಘಟ್ಟದ ಮೇಲಿನ ಕೆಲ ತಾಲೂಕುಗಳಲ್ಲಿ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಕರಾವಳಿ ತಾಲೂಕುಗಳಲ್ಲಿ ಬಿಸಿಲಿನ ವಾತಾವರಣ ಇತ್ತು.

ರೈಲ್ವೆ ನಿಲ್ದಾಣದಲ್ಲಿ ನೀರು ಸೋರಿಕೆ

ಮಳೆಯಿಂದಾಗಿ ರೈಲ್ವೆ ನಿಲ್ದಾಣದ ಚಾವಣಿಯು ಸೋರಿಕೆ ಆಗುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿಜಯನಗರದ ಹೊಸಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಭಾರಿ ಮಳೆಯಿಂದ ಅವಾಂತರವೇ ಸೃಷ್ಟಿಸಿಯಾಗಿದೆ. ರೈಲು ನಿಲ್ದಾಣದ ಒಳಗೆ ಮಳೆ ನೀರು ನುಗ್ಗಿದ್ದು, ಹೊಸಪೇಟೆ ರೈಲ್ವೆ ನಿಲ್ದಾಣದ ಒಂದನೇ ಪ್ಲಾಟ್ ಫಾರಂನಲ್ಲಿ ಮಳೆ ನೀರು ಸೋರುತ್ತಿದೆ. ಒಂದು ವರ್ಷದ ಹಿಂದೆ ಕೇಂದ್ರ ಸರ್ಕಾರವು ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿತ್ತು.

ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತ

ರಾಯಚೂರಲ್ಲಿ ಅಬ್ಬರದ ಮಳೆ ಮುಂದುವರಿದಿದ್ದು, ಹಲವು ಗ್ರಾಮಗಳ ಸೇತುವೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿದೆ. ರಾಯಚೂರು ತಾಲೂಕಿನ ಫತ್ತೇಪೂರ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಅಪಾಯದಲ್ಲೇ ಸೇತುವೆ ದಾಟಲು ಜನರು ಮುಂದಾಗುತ್ತಿದ್ದಾರೆ. ಸ್ವಲ್ಪ ಯಾಮಾರಿದರೂ ನೀರಲ್ಲಿ‌ ಕೊಚ್ಚಿ ಹೋಗುವ ಸಾಧ್ಯತೆ ಇದೆ.

ಯಾದಗಿರಿಯಲ್ಲಿ ಮಳೆಗೆ ಚಾವಣಿ ಕುಸಿತ

ಯಾದಗಿರಿಯಲ್ಲಿ ಸುರಿದ ಭಾರಿ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಇಡೀ ಮನೆಯ ಚಾವಣಿ ಕುಸಿದಿದ್ದು, ಪವಾಡ ಸದೃಶ್ಯ ಎಂಬಂತೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ತೆಗ್ಗೆಳ್ಳಿ ಗ್ರಾಮದ ಭೀರಪ್ಪ ಪೂಜಾರಿ ಹಾಗೂ ಸುರೇಶ್ ಕಲ್ಮನಿ ಎಂಬುವರಿಗೆ ಸೇರಿದ ಮನೆಯು ವಿಪರೀತ ಗಾಳಿ ಮಳೆಯಿಂದ ಚಾವಣಿ ಕುಸಿದಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು ಸಂಪೂರ್ಣ ಹಾಳಾಗಿವೆ.

ರಾಯಚೂರಲ್ಲಿ ಗಾಳಿಗೆ ಮಳೆಗೆ ಹಾರಿಹೋದ ಜೋಪಡಿಗಳು

ರಾಯಚೂರು ಜಿಲ್ಲೆಯಲ್ಲಿ ತಡರಾತ್ರಿ ಗಾಳಿ ಸಹಿತ ಭಾರಿ ಮಳೆಗೆ ಲಿಂಗಸಗೂರಿನಲ್ಲಿ ಜೋಪಡಿಗಳು ಹಾರಿಹೋಗಿದೆ. ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಜನರು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿದ್ದ 50 ಕ್ಕೂ ಹೆಚ್ಚು ಜೋಪಡಿಗಳಿಗೆ ಹಾನಿಯಾಗಿದೆ. ಸೂರುಯಿಲ್ಲದೆ ಬುಡ್ಗ ಜಂಗಮ ಸಮುದಾಯದವರು ಕಂಗಲಾಗಿದ್ದಾರೆ. ಜೋಪಡಿಗಳಿಗೆ ಹಾನಿಯಾದರೂ,ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಬುಡ್ಗ ಜಂಗಮ ಸಮುದಾಯದವರ ಆಕ್ರೋಶ ಹೊರಹಾಕಿದ್ದಾರೆ.

ಧಾರವಾಡದಲ್ಲಿ ಬಿತ್ತನೆ ಕಾರ್ಯ ಚುರುಕು

ಮುಂಗಾರು ಪೂರ್ವ ಮಳೆ ಉತ್ತಮವಾಗಿರುವ ಹಿನ್ನೆಲೆಯಲ್ಲಿ ಮುಂಗಾರಿನ ಬೆಳೆಗಳನ್ನು ಬಿತ್ತುವ ಕಾರ್ಯ ಆರಂಭವಾಗಿದೆ. ಧಾರವಾಡ ಗ್ರಾಮೀಣ ಹಾಗೂ ಜಿಲ್ಲೆಯಾದ್ಯಂತ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಮುಂಗಾರು ಬೆಳೆಗಳಾದ ಹೆಸರು, ಕಡಲೆ, ಶೇಂಗಾ ಇತ್ಯಾದಿ ಬೆಳೆಗಳನ್ನು ರೈತರು ಬಿತ್ತುತ್ತಿದ್ದಾರೆ. ನಿರಂತರ ಮಳೆಯಿಂದಾಗಿ ಬಿತ್ತನೆ ಕಾರ್ಯ ಚುರುಕು ಪಡೆದಿದೆ. ಕಳೆದ ವರ್ಷ ಬರ ಹಿನ್ನೆಲೆ ಈ ಮುಂಗಾರು ಪೂರ್ವವೇ ಬಿತ್ತನೆಗೆ ಸಿದ್ಧತೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

Lok Sabha Election 2024: ಲೋಕಸಭಾ ಚುನಾವಣೆ ಫಲಿತಾಂಶ ಬಿಡುಗಡೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್‌ 4ರಂದು ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ (Lok Sabha Election 2024) ಹಿನ್ನೆಲೆಯಲ್ಲಿ ಜೂನ್‌ 4ರಂದು ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (Prohibitory order) ಜಾರಿ ಮಾಡಿ ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏ. 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿತ್ತು. ಹೀಗಾಗಿ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಗಳು ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | DK Shivakumar: ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ಮೇಲೆ ಕಠಿಣ ಕ್ರಮ; ಡಿ.ಕೆ.ಶಿವಕುಮಾರ್

ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ; ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್

Lockup Death

ದಾವಣಗೆರೆ: ಚನ್ನಗಿರಿ ಯುವಕನ ಲಾಕಪ್‌ ಡೆತ್‌ ಪ್ರಕರಣ (Lockup Death) ಸಂಬಂಧ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್‌ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅಮಾನತುಗೊಂಡಿದ್ದಾರೆ. ಮೂವರು ಅಧಿಕಾರಿಗಳನ್ನ ಸೇವೆಯಿಂದ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಆದೇಶ ಹೊರಡಿಸಿದ್ದಾರೆ.

ಮೇ 24 ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯಲ್ಲಿದ್ದ ಆದಿಲ್ ಎಂಬ ಯುವಕ ಮೃತಪಟ್ಟಿದ್ದರಿಂದ ಕುಟುಂಬಸ್ಥರು ಲಾಕಪ್ ಡೆತ್ ಆರೋಪ ಮಾಡಿ, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಹೇಳಿದ್ದರು. ನಂತರ ಸಂಬಂಧಿಕರು, ಸ್ಥಳೀಯರು ಚನ್ನಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ | Self Harming: ಮೇಲಧಿಕಾರಿಗಳ ಕಿರುಕುಳ, ಹಗರಣದ ಕರಿನೆರಳು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. ಹೀಗಾಗಿ ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

Continue Reading
Advertisement
Prajwal Revanna Case
ಪ್ರಮುಖ ಸುದ್ದಿ17 mins ago

Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

Hemchand Manjhi
ದೇಶ34 mins ago

Hemchand Manjhi: ಕಳೆದ ತಿಂಗಳು ಪಡೆದಿದ್ದ ಪದ್ಮಶ್ರೀ ಪ್ರಶಸ್ತಿ ವಾಪಸ್‌ ನೀಡಿದ ಹೇಮಚಂದ್‌ ಮಾಂಝಿ; ಏಕೆ?

Prajwal Revanna Case
ಕರ್ನಾಟಕ1 hour ago

Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

Rahul Gandhi
ದೇಶ1 hour ago

Rahul Gandhi: ರಾಹುಲ್‌ ಗಾಂಧಿ ಜಿಂದಾಬಾದ್‌ ಎನ್ನುತ್ತಲೇ ಕುಸಿದ ವೇದಿಕೆ; ತಬ್ಬಿಬ್ಬಾದ ಕಾಂಗ್ರೆಸ್‌ ನಾಯಕ, ವಿಡಿಯೊ ಇಲ್ಲಿದೆ

Karnataka Weather Forecast
ಮಳೆ1 hour ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

HairStyle Craze
ಫ್ಯಾಷನ್2 hours ago

Hairstyle Craze: ಸೋಷಿಯಲ್‌ ಮೀಡಿಯಾದಲ್ಲಿ ರಂಗೇರಿದ ಹೇರ್‌ ಸ್ಟೈಲ್ಸ್

Lok Sabha Election 2024
ಕರ್ನಾಟಕ2 hours ago

Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

Prajwal Revanna Video
ಕರ್ನಾಟಕ2 hours ago

Prajwal Revanna Video: ಪ್ರಜ್ವಲ್‌ ಪ್ರತ್ಯಕ್ಷನಾಗಿದ್ದಕ್ಕೆ ಸಮಾಧಾನ ಆಯ್ತು ಎಂದ ಎಚ್‌ಡಿಕೆ; ಫಸ್ಟ್‌ ರಿಯಾಕ್ಷನ್‌ ಹೀಗಿದೆ

Mouthwashes
ಆರೋಗ್ಯ2 hours ago

Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

Surya Prakash Maayi director dies
ಕಾಲಿವುಡ್2 hours ago

Surya Prakash: ʻಮಾಯಿʼ ಸಿನಿಮಾ ಖ್ಯಾತಿಯ ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ ಇನ್ನಿಲ್ಲ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌