Karnataka Election | ಬಿಜೆಪಿಯವರೇ ನಳಿನ್‌ ಅವರನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಟ್ಟಿದ್ದಾರೆ ಎಂದ ಬಿ.ಕೆ. ಹರಿಪ್ರಸಾದ್‌ Vistara News

ಕರ್ನಾಟಕ

Karnataka Election | ಬಿಜೆಪಿಯವರೇ ನಳಿನ್‌ ಅವರನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಟ್ಟಿದ್ದಾರೆ ಎಂದ ಬಿ.ಕೆ. ಹರಿಪ್ರಸಾದ್‌

ನಳಿನ್‌ ಕುಮಾರ್‌ ಕಟೀಲ್‌ ಅವರ ಚಪ್ಪಲಿ ಸ್ಟೋರಿ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ನಳಿನ್‌ ಅವರನ್ನು ಬಿಜೆಪಿಯವರೇ ಚಪ್ಪಲಿ ಜಾಗದಲ್ಲಿ ಬಿಟ್ಟಿದ್ದಾರೆ (Karnataka Election) ಎಂದಿದ್ದಾರೆ ಬಿ.ಕೆ. ಹರಿಪ್ರಸಾದ್‌.

VISTARANEWS.COM


on

BK Hariprasad attacks on bjp in uttara kannada sirsi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಳಿನ್‌ ಕುಮಾರ್‌ ಕಟೀಲ್‌ ಅವರು ನಮ್ಮ ಬಗ್ಗೆ ಏನು ಹೇಳೋದು.. ಅವರನ್ನೇ ಅವರ ಪಕ್ಷದವರು ಚಪ್ಪಲಿ ಬಿಡುವ ಜಾಗದಲ್ಲಿ ಬಿಟ್ಟಿದ್ದಾರೆ: ಹೀಗೆಂದು (Karnataka Election) ಗೇಲಿ ಮಾಡಿದ್ದಾರೆ ಕಾಂಗ್ರೆಸ್‌ ನಾಯಕ, ಮೇಲ್ಮನೆ ಸದಸ್ಯ ಬಿ.ಕೆ. ಹರಿಪ್ರಸಾದ್‌.

ಕಾಂಗ್ರೆಸ್‌ನವರು ಸಭೆ ಮಾಡಿದ್ರೆ ಜನರ ಕಾಲಲ್ಲಿರುವ ಚಪ್ಪಲಿ ಕೈಗೆ ಬರುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಹೇಳಿಕೆಗೆ ಕೆಪಿಸಿಸಿ ಕಚೇರಿ ಮುಂದೆ ಶನಿವಾರ ಬೆಳಗ್ಗೆ ಪ್ರತಿಕ್ರಿಯೆ ನೀಡಿದ ಅವರು, ʻʻಭಾರತೀಯ ಜನತಾ ಪಕ್ಷದವರು ಸಭೆ ಮಾಡಿದ್ರೆ ಕೈಗೆ ಏನೇನು ಬರುತ್ತೆ ಅಂತ ಬೆಂಗಳೂರಿನ ಜನ ನೋಡಿದ್ದಾರೆ. ಟೂಬ್ ಲೈಟ್ ತಗೊಂಡು ಹೊಡೆದಾಡಿದ್ದು ಜನ ಮರೆತಿಲ್ಲ. ಭಾರತೀಯ ಜನತಾ ಪಕ್ಷದ ನಾಯಕರು ಕಟೀಲ್ ಅವರನ್ನು ಚಪ್ಪಲಿ ಬಿಡುವ ಸ್ಥಳದಲ್ಲಿ ಬಿಟ್ಟಿದ್ದಾರೆ. ಹೀಗಾಗಿ ಅವರು ಅದನ್ನು ಹೇಳಿದ್ದಾರೆ. ಅವರ ನಾಯಕರೇ ಅವರನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಟ್ಟಿದ್ದಾರೆ. ನನ್ನ ಸರಿಯಾದ ಜಾಗದಲ್ಲಿ ಬಿಡಿ ಅಂತ ಅವರ ನಾಯಕರಿಗೆ ಹೇಳಿದ್ದಾರೆʼʼ ಎಂದು ಹೇಳಿದರು.

ʻʻಅದು ಭಾರತೀಯ ಜನತಾ ಪಕ್ಷದ ಸಂಸ್ಕೃತಿ, ಕಾಂಗ್ರೆಸ್ ಪಕ್ಷದಲ್ಲಿ ಆ ಸಂಸ್ಕೃತಿ ಅಲ್ಲʼʼ ಎಂದು ಬಿ.ಕೆ. ಹರಿಪ್ರಸಾದ್‌ ಹೇಳಿದರು.

ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದೇನು?
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಕಟೀಲ್‌, ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಟೀಕಿಸುತ್ತಾ ಅಪ್ಪ ಮಕ್ಕಳ ಪಾರ್ಟಿಯಲ್ಲಿ ಅಣ್ಣ ದೊಡ್ಡವನೋ ತಮ್ಮ ದೊಡ್ಡವನೋ ಎಂದು ಕಿತ್ತಾಟ ಶುರುವಾಗಿದೆ. ಇನ್ನೊಂದು ರಾಷ್ಟ್ರೀಯ ಪಾರ್ಟಿಯಲ್ಲಿ ಮುಖ್ಯಮಂತ್ರಿ ಯಾರೆಂಬ ಕಿತ್ತಾಟ ಆರಂಭವಾಗಿದೆ. ಈ ಚುನಾವಣೆಯಲ್ಲಿ ಬೇರೆಬೇರೆ ಪಾರ್ಟಿಯವರು ಶರ್ಟ್ ಹೊಲಿಸಿ ಕಾಯುತ್ತಿದ್ದಾರೆ. ಕೆಲವರು ಕೋಟ್ ಹೊಲಿಸಲು ಅಂಗಡಿಗೆ ಕೊಟ್ಟಿದ್ದಾರೆ. ಇನ್ನೂ ಕೆಲವರು ಹೊಸ ಪ್ಯಾಂಟ್ ಶರ್ಟ್ ಖರೀದಿಸಿದ್ದಾರೆ. ಇನ್ನೂ ಕೆಲವರು ಅವರೊಳಗೇ ಪ್ಯಾಂಟ್, ಶರ್ಟ್ ಹರಿಯಲು ಶುರು ಮಾಡಿದ್ದಾರೆ. ನೋಡಿ 3 ಪಾರ್ಟಿಯಲ್ಲಿ ಮೂರು ವಿಭಿನ್ನತೆ. ರಾಷ್ಟ್ರೀಯ ಪಾರ್ಟಿ ಇನ್ನೊಂದಿದೆ. ಅವರ ಸಭೆ ಆದಾಗ ಚಪ್ಪಲಿಗಳು ಕೈಯಲ್ಲಿ ಇರುತ್ತದೆ ಎಂದಿದ್ದರು.

ಇನ್ನೊಂದು ಕುಟುಂಬದ ಪಕ್ಷವಿದೆ. ಅಪ್ಪ ಮಕ್ಕಳ ಪಾರ್ಟಿ ಅದು. ಅವರ ಪಾರ್ಟಿಯ ಮೀಟಿಂಗ್ ಆದಾಗ ಒಬ್ಬನ ಚಪ್ಪಲಿ ಇನ್ನೊಬ್ಬನ ದೇಹದೊಳಗೆ ಇರುತ್ತದೆ. ಬಿಜೆಪಿಯಲ್ಲಿ ಮಾತ್ರ ಚಪ್ಪಲಿ ನಮ್ಮಲ್ಲೇ ಇರುತ್ತದೆ. ಶಾಂತವಾಗಿ ಸಭೆ ನಡೆಯುತ್ತದೆ ಎಂದಿದ್ದರು.

ಇದನ್ನೂ ಓದಿ | BJP Karnataka : ಕಾಂಗ್ರೆಸ್‌-ಜೆಡಿಎಸ್‌ ಸಭೆ ಮಾಡಿದರೆ ಚಪ್ಪಲಿಗಳು ಕೈಯಲ್ಲಿರುತ್ತವೆ: ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Session : ಭೂಮಿ ಬೆಲೆ ಹೆಚ್ಚಿಸಿದ್ದ ಸರ್ಕಾರದಿಂದ ಮುದ್ರಾಂಕ ಶುಲ್ಕವೂ ಹೆಚ್ಚಳ

Assembly Session: ಆರ್ಥಿಕ ಸಂಪನ್ಮೂಲಗಳ ಕ್ರೋಡೀಕರಣ ಮಾಡುವ ಉದ್ದೇಶದಿಂದ ಮುದ್ರಾಂಕ ಶುಲ್ಕವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ.

VISTARANEWS.COM


on

Stamp duty
Koo

ಬೆಳಗಾವಿ : ಆರ್ಥಿಕ ಸಂಪನ್ಮೂಲಗಳನ್ನು ಹೆಚ್ಚಿಸುವ ಉದ್ದೇಶದೊಂದಿಗೆ ರಾಜ್ಯ ಸರ್ಕಾರ (Karnataka Government) ಮುದ್ರಾಂಕ ಶುಲ್ಕವನ್ನು (Stamp Duty) ಹೆಚ್ಚಿಸುವ ವಿಧೇಯಕವನ್ನು ಗುರುವಾರ ವಿಧಾನಸಭೆಯ ಅಧಿವೇಶನದ ವೇಳೆ (Assembly Session)ಮಂಡಿಸಿದೆ. ಪವರ್ ಆಫ್ ಅಟಾರ್ನಿ, ಡೀಡ್ಸ್​​ ಆ್ಯಂಡ್ ಅಫಿಡವಿಟ್‌ ಹಾಗೂ ಇತರ ಕಾನೂನು ದಾಖಲೆಗಳಿಗೆ ಸಂಬಂಧಿಸಿದ ಮುದ್ರಾಂಕ ಶುಲ್ಕ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ. ಗ್ಯಾರಂಟಿಗಳ ಘೋಷಣೆ ಬಳಿಕ ಉಂಟಾಗುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಸರ್ಕಾರ ಮಾರ್ಗಸೂಚಿ ದರವನ್ನು ಹೆಚ್ಚಳ ಮಾಡಿತ್ತು. ಇದೀಗ ಮುದ್ರಾಂಕ ಶುಲ್ಕವನ್ನೂ ಏರಿಕೆ ಮಾಡಿದೆ. ಕರ್ನಾಟಕ ಮುದ್ರಾಂಕ (ತಿದ್ದುಪಡಿ) ವಿಧೇಯಕ ಮೂಲಕ ಎಲ್ಲಾ ಮುದ್ರಾಂಕ ಶುಲ್ಕಗಳನ್ನು ಹೆಚ್ಚಿಸಲು ಮತ್ತು ಕೆಲವು ಮುದ್ರಾಂಕ ಶುಲ್ಕಗಳನ್ನು ದುಪ್ಪಟ್ಟು ಮಾಡುವುದು ಸರ್ಕಾರದ ಯೋಜನೆಯಾಗಿದೆ.

ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳು ರಾಜ್ಯ ಸರ್ಕಾರಕ್ಕೆ ದೊಡ್ಡ ಮಟ್ಟಿನ ಆದಾಯ ತಂದುಕೊಡುತ್ತದೆ. ಅಬಕಾರಿ ಆದಾಯವನ್ನು ಮೀರಿ ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ನೆರವಾಗುತ್ತದೆ. ಹೀಗಾಗಿ ಹಾಲಿ ಹಣಕಾಸು ವರ್ಷದಲ್ಲಿ 25,000 ರೂ. ಕೋಟಿ ಸಂಗ್ರಹಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ತಿದ್ದುಪಡಿ ವಿಧೇಯಕ ಮಂಡನೆ ಮಾಡಿದೆ. ಕಂದಾಯ ಸಚಿವರ ಪರವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ವಿಧೇಯ ಮಂಡಿಸಿದ್ದಾರೆ.

ಇದನ್ನೂ ಓದಿ : Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

ಬಾಡಿಗೆ ಒಪ್ಪಂದ, ಭೂಮಿ ಶುದ್ಧ ಕ್ರಯಪತ್ರ, ಸಾಲದ ಒಪ್ಪಂದ, ಬ್ಯಾಂಕ್ ಗ್ಯಾರಂಟಿ ದಾಖಲೆಗಳ ನೋಂದಣಿ ಹಾಗು ಮನೆಗಳ ಬಾಡಿಗೆ ಕರಾರು, ಗುತ್ತಿಗೆ ಕರಾರು ಬ್ಯಾಂಕ್​ ಸಾಲದ ದಾಖಲೆಗಳು, ಪವರ್​ ಆಫ್​​ ಅಟಾರ್ನಗಳ ಮುದ್ರಾಂಕ ಶುಲ್ಕ ಏರಿಕೆಯಾಗಲಿದೆ.

ಎಷ್ಟು ಏರಿಕೆ?

ಹೊಸ ವಿಧೇಯಕ ಪ್ರಕಾರ ದತ್ತು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕ 500 ರಿಂದ 1,000 ರೂ.ಗೆ ಏರಿಕೆಯಾಗಲಿದೆ. ಸದ್ಯ 20 ರೂಪಾಯಿಗಳ ಮುದ್ರಾಂಕ ಶುಲ್ಕವನ್ನು ಹೊಂದಿರುವ ಅಫಿಡವಿಟ್​​ಗಳಿಗೆ ಮುಂದೆ ಐದು ಪಟ್ಟು ಹೆಚ್ಚಳ ಅಂದರೆ 100 ರೂಪಾಯಿ ವರೆಗೆ ಏರಿಕೆಯಾಗಲಿದೆ.

ಪವರ್ ಆಫ್ ಅಟಾರ್ನಿ ಮೇಲಿನ ಮುದ್ರಾಂಕ ಶುಲ್ಕವನ್ನು 100 ರೂ.ನಿಂದ 500 ರೂ.ಗೆ ಅಧಿಕಗೊಳಿಸಲಾಗಿದೆ. ಐದಕ್ಕಿಂತ ಹೆಚ್ಚು ಮಂದಿ, ಆದರೆ 10 ಕ್ಕಿಂತ ಕಡಿಮೆ ವ್ಯಕ್ತಿಗಳು ಜಂಟಿಯಾಗಿ ಪವರ್ ಆಫ್ ಅಟಾರ್ನಿ ನೀಡುವುದಾದರೆ ಅದರ ಮೇಲಿನ ಮುದ್ರಾಂಕ ಶುಲ್ಕ ಪ್ರಸ್ತುತ ಇರುವ 200 ರೂ.ನಿಂದ 1,000 ರೂ.ಗೆ ಹೆಚ್ಚಳವಾಗಲಿದೆ.

ನಗರ ಪ್ರದೇಶಗಳಲ್ಲಿರುವ ಆಸ್ತಿ ವಿಭಜನಾ ಪತ್ರಗಳಿಗೆ ಮುದ್ರಾಂಕ ಶುಲ್ಕವನ್ನು ಪ್ರತಿ ಷೇರಿಗೆ 1,000 ರೂ.ನಿಂದ 5,000 ರೂ.ಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ನಗರ ಮಿತಿಯಿಂದ ಹೊರಗಿರುವ ಆಸ್ತಿಗಳಿಗೆ, ಪ್ರಸ್ತುತ 500 ರೂ. ಬದಲಾಗಿ ಪ್ರತಿ ಷೇರಿಗೆ 3,000 ರೂ. ಮಾಡಲು ಪ್ರಸ್ತಾವಿಸಲಾಗಿದೆ. ಕೃಷಿ ಆಸ್ತಿಗಳನ್ನು ವಿಭಜಿಸಲು ಪ್ರತಿ ಷೇರಿಗೆ 250 ರೂ. ಬದಲಾಗಿ 1,000 ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ವಿಚ್ಛೇದನ ಪತ್ರಗಳ ಮೇಲಿನ ಸ್ಟ್ಯಾಂಪ್ ಡ್ಯೂಟಿ ಕೂಡ 100 ರಿಂದ 500 ರೂ.ಗೆ ಹೆಚ್ಚಾಗಲಿದೆ. ಪ್ರಮಾಣೀಕೃತ ಪ್ರತಿಗಳಿಗೆ, ಸ್ಟ್ಯಾಂಪ್ ಸುಂಕವನ್ನು 5 ರಿಂದ 20 ಕ್ಕೆ ಹೆಚ್ಚಿಸಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಸರ್ಕಾರವು ಮುದ್ರಾಂಕ ಶುಲ್ಕಗಳನ್ನು ಹೆಚ್ಚಿಸಲು ಮುಂದಾಗಿರುವುದರಿಂದ ಟ್ರಸ್ಟ್‌ಗಳನ್ನು ನೋಂದಾಯಿಸುವುದು ಸಹ ದುಬಾರಿಯಾಗಲಿದೆ. ಕಂಪನಿಗಳ ವಿಲೀನ ಮತ್ತಿತರ ಪ್ರಕ್ರಿಯೆಗಳೂ ದುಬಾರಿಯಾಗಲಿವೆ.

Continue Reading

ಆರೋಗ್ಯ

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

ರಾಜ್ಯದಲ್ಲಿ ಡೆಂಗ್ಯು ಜ್ವರ (Dengue fever) ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಸೊಳ್ಳೆಗಳಿಂದ ದೂರವಿರುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

VISTARANEWS.COM


on

dengue flue
Koo

ಬೆಂಗಳೂರು: ಬದಲಾದ ವಾತಾವರಣದ ಪರಿಣಾಮ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಾಗಿ ವರದಿಯಾಗುತ್ತಿದೆ. 15 ಸಾವಿರದ ಗಡಿಯತ್ತ ಸಾಗುತ್ತಿದ್ದು, ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆ (Health department) ಈ ವಿಚಾರದಲ್ಲಿ ಅಲರ್ಟ್‌ ಆಗಿದೆ.

ರಾಜ್ಯದಲ್ಲಿ ಡೆಂಗ್ಯೂ 14,955 ಪ್ರಕರಣಗಳು ದಾಖಲಾಗಿವೆ. ಒಂದು ತಿಂಗಳ ಅವಧಿಯಲ್ಲಿ 1,829 ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ರಾಜ್ಯದ 31 ಜಿಲ್ಲೆಗಳಿಂದ 7,282 ಪ್ರಕರಣಗಳು ದೃಢಪಟ್ಟಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 7,673 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಈಗಾಗಲೇ ಎರಡು ಲಕ್ಷಕ್ಕೂ ಅಧಿಕ ಡೆಂಗ್ಯೂ ಜ್ವರ ಶಂಕಿತರ ತಪಾಸಣೆ ಮಾಡಲಾಗಿದೆ. ಕಳೆದ ವರ್ಷ ರಾಜ್ಯದಲ್ಲಿ 9,620 ಮಂದಿ ಡೆಂಗ್ಯೂ ಜ್ವರದಿಂದ ಬಳಲಿದ್ದರು. ಕಳೆದ ವರ್ಷ ಡೆಂಗ್ಯೂನಿಂದ 9 ಮಂದಿ ಬಲಿಯಾಗಿದ್ದರು ಕೂಡ. ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಲ್ಕು ಸೇರಿ ಒಟ್ಟು ಒಂಬತ್ತು ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 52,721 ಡೆಂಗ್ಯು ಶಂಕಿತರನ್ನು ತಪಾಸಣೆ ಮಾಡಲಾಗಿದೆ. ಅವರಲ್ಲಿ 33,326 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಕಳೆದ ಒಂದು ತಿಂಗಳಲ್ಲಿ 839 ಮಂದಿಯಲ್ಲಿ ಡೆಂಗ್ಯು ದೃಢಪಟ್ಟಿದೆ. ಡೆಂಗ್ಯೂ ಜೊತೆಗೆ 28 ಜಿಲ್ಲೆಗಳಲ್ಲಿ ಚಿಕೂನ್‌ ಗುನ್ಯಾ ಪ್ರಕರಣಗಳೂ ಪತ್ತೆಯಾಗಿದ್ದು, ತಲೆನೋವು ಮೂಡಿಸಿದೆ. 60 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ ಗುನ್ಯಾ ಶಂಕಿತರ ತಪಾಸಣೆ ಮಾಡಲಾಗಿದೆ.

ಸೊಳ್ಳೆಗಳನ್ನು ಆದಷ್ಟು ತಡೆಗಟ್ಟಲು ಸೂಚಿಸಲಾಗಿದೆ. ತೆರೆದ ಪ್ರದೇಶಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಹುಟ್ಟುತ್ತಿವೆ. ಇವುಗಳನ್ನು ನಿವಾರಿಸಬೇಕು. ಮನೆಗೆ ಹಾಗೂ ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸುವುದು, ಮಾಸ್ಕಿಟೋ ರಿಪೆಲ್ಲೆಂಟ್‌ಗಳನ್ನು ಬಳಸಲು ಸೂಚಿಸಲಾಗಿದೆ.

ಜಿಲ್ಲೆ- ಪ್ರಕರಣಗಳು
ಕಲಬುರಗಿ- 662
ಮೈಸೂರು – 646
ಉಡುಪಿ – 635
ದಕ್ಷಿಣ ಕನ್ನಡ – 492
ಶಿವಮೊಗ್ಗ – 404
ತುಮಕೂರು – 315
ಚಿತ್ರದುರ್ಗ – 300

ಚಿಕೂನ್ ಗುನ್ಯಾ ಪ್ರಕರಣಗಳು
ಮೈಸೂರು – 196
ವಿಜಯಪುರ – 163
ಕಲಬುರಗಿ – 132
ಶಿವಮೊಗ್ಗದಲ್ಲಿ 125
ಒಟ್ಟು 1,481 ಮಂದಿ

Continue Reading

ಕರ್ನಾಟಕ

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ (Karnataka Cabinet meeting) ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Vistara Editorial, Government should conduct exam without any lapse
Koo

ಬೆಂಗಳೂರು: ಬಿಜೆಪಿ ಸರ್ಕಾರ ಸಮಯದಲ್ಲಿ ಜಾರಿಗೆ ತರಲಾಗಿದ್ದ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ (Karnataka Cabinet meeting) ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಮೊದಲು ಕೃಷಿ ಭೂಮಿ‌ ಹೊಂದಿದವರು ಮಾತ್ರ ಕೃಷಿ ಭೂಮಿ ಖರೀದಿಗೆ ಅವಕಾಶ ಇತ್ತು. 2022ರಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ತಂದು, ಆ ಮೂಲಕ ಯಾರು ಬೇಕಾದರೂ ಭೂಮಿ ಖರೀದಿಗೆ ಅವಕಾಶ ಮಾಡಿ ಕೊಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯ ಈ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೆಲವೊಂದು ಹೊಸ ತಿದ್ದುಪಡಿಗಳೊಂದಿಗೆ ನೂತನ ವಿಧೇಯಕವನ್ನು ಈ ಬಾರಿಯ ಅಧೀವೇಶನದಲ್ಲೇ ಮಂಡಿಸಲು ತೀರ್ಮಾನಿಸಲಾಗಿದೆ.

ಕೃಷಿ ಭೂಮಿಯನ್ನು ಯಾರು ಬೇಕಾದರೂ ಖರೀದಿ ಮಾಡಬಹುದೆನ್ನುವ ಕಾನೂನು ಈ ಮೂಲಕ ರದ್ದಾಗಲಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದ ಈ ಕಾನೂನಿಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೋರಾಟಕ್ಕೆ ಬಿಜೆಪಿ ಸರ್ಕಾರ ಮಣಿಯದೆ ಕಾಯ್ದೆ ಜಾರಿ‌ ಮಾಡಿತ್ತು. ಈ ಮೂಲಕ ನಗರವಾಸಿ ಶ್ರೀಮಂತರು ರೈತರಿಂದ ಕೃಷಿ ಭೂಮಿ ಖರೀದಿ ಮಾಡುವುದು ಸುಲಭವಾಗಿತ್ತು. ಇದನ್ನು ತಡೆಗಟ್ಟಲು ಹೊಸ ವಿಧೇಯಕ ತರಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷ ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೆಲವು ಕಾನೂನುಗಳನ್ನು ರದ್ದುಗೊಳಿಸುವ ತೀರ್ಮಾನಗಳನ್ನು ಹಾಲಿ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಈಗಾಗಲೇ ಕೈಗೊಂಡಿದೆ. ಇದನ್ನು ಬಿಜೆಪಿ ವಿರೋಧಿಸಿದೆ.

ಇದನ್ನೂ ಓದಿ: Cabinet Meeting: ಸಮವಸ್ತ್ರ ಪೂರೈಕೆಗೆ ತಡೆಹಿಡಿದಿದ್ದ ಹಣ ಬಿಡುಗಡೆಗೆ ಸಚಿವ ಸಂಪುಟ ಸಮ್ಮತಿ

Continue Reading

ಉಡುಪಿ

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

karnataka Weather Forecast : ಎರಡು ದಿನಗಳ ಕಾಲ ಬ್ರೇಕ್‌ ಕೊಟ್ಟಿದ್ದ ಮಳೆರಾಯ (Rain News) ಮತ್ತೆ ಸಕ್ರಿಯಗೊಂಡಿದ್ದಾನೆ. ದಕ್ಷಿಣ ಒಳನಾಡಲ್ಲಿ ಭಾರಿ ಮಳೆ ಸೂಚನೆ ಇದ್ದು, ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

VISTARANEWS.COM


on

By

Heavy Rain warning In karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿ.8ರ ಶುಕ್ರವಾರ ಸಂಜೆಯಿಂದಲೇ ಹಲವೆಡೆ ಮಳೆಯಾಗುವ ಸೂಚನೆ (Karnataka Weather Forecast) ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ (Dry weather) ಮೇಲುಗೈ ಸಾಧಿಸಲಿದೆ.

ರಾಮನಗರ-ಮಂಡ್ಯದಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಉಳಿದಂತೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಮೋಡ ಕವಿದ ವಾತಾವರಣವಿರಲಿದೆ.

ಇನ್ನು ಉತ್ತರ ಒಳನಾಡಿನ ಕೊಪ್ಪಳ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಜತೆಗೆ ಮಲೆನಾಡಿನ ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ ಇದ್ದು, ಗುಡುಗು ಸಾಥ್‌ ನೀಡಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 30 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
plants
ಲೈಫ್‌ಸ್ಟೈಲ್8 mins ago

Vastu Tips: ವಾಸ್ತು ಪ್ರಕಾರ ಈ ಗಿಡಗಳನ್ನು ಮನೆಯೊಳಗೆ ಇಡಲೇಬಾರದು!

Junior Mehmood
ಬಾಲಿವುಡ್13 mins ago

Junior Mehmood: ‘ಮೇರಾ ನಾಮ್ ಜೋಕರ್’ ಖ್ಯಾತಿಯ ನಟ ಜೂನಿಯರ್ ಮೆಹಮೂದ್ ಇನ್ನಿಲ್ಲ

cm k chandrashekar rao
ದೇಶ17 mins ago

K Chandrasekhar Rao: ರೇವಂತ್‌ ರೆಡ್ಡಿ ಸಿಎಂ ಆದ ದಿನವೇ ಜಾರಿ ಬಿದ್ದು ಸೊಂಟ ಮುರಿದುಕೊಂಡ ಕೆಸಿಆರ್‌

Jasprit bumarh
ಕ್ರಿಕೆಟ್21 mins ago

Jasprit Bumrah : ಬುಮ್ರಾ ಚಿತ್ರ ಹಾಕಿ ಎಲ್ಲರಿಗೂ ಸಂದೇಶ ರವಾನಿಸಿದ ಮುಂಬಯಿ ಇಂಡಿಯನ್ಸ್​​​

Karthik threw the sandal to vinay Ugly Fight
ಬಿಗ್ ಬಾಸ್38 mins ago

BBK SEASON 10: ಚಪ್ಪಲಿ ಎಸೆದೆ ಕಾರ್ತಿಕ್‌; ನನಗೆ ಮರ್ಯಾದೆ ಇಲ್ವಾ? ಆಚೆ ಹೋಗ್ಬೇಕು ಎಂದ ವಿನಯ್‌!

RBI governor Shaktikanta Das
ದೇಶ1 hour ago

RBI monetary policy: ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರ ಇಂದು; ಬಡ್ಡಿ ದರ ಏರುತ್ತಾ?

Stamp duty
ಕರ್ನಾಟಕ1 hour ago

Assembly Session : ಭೂಮಿ ಬೆಲೆ ಹೆಚ್ಚಿಸಿದ್ದ ಸರ್ಕಾರದಿಂದ ಮುದ್ರಾಂಕ ಶುಲ್ಕವೂ ಹೆಚ್ಚಳ

dengue flue
ಆರೋಗ್ಯ2 hours ago

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

Vistara Editorial, Government should conduct exam without any lapse
ಕರ್ನಾಟಕ2 hours ago

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

Raja Marga Father and Daughter
ಅಂಕಣ2 hours ago

Raja Marga Column : 13 ವರ್ಷದ ನನ್ನ ಮಗಳು ಒಮ್ಮಿಂದೊಮ್ಮೆಗೆ ಮಂಕಾಗಿದ್ದು ಯಾಕೆ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ15 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ16 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ21 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ2 days ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌