Site icon Vistara News

Karnataka Election: ಬೊಮ್ಮಾಯಿಯವರೂ ನಿವೃತ್ತಿ ಘೋಷಿಸಿದರೆ ಆಶ್ಚರ್ಯವಿಲ್ಲ ಎಂದ ಕಾಂಗ್ರೆಸ್‌

BJP Ticket karnataka election congress critics bjp over handling senior leaders

#image_title

ಬೆಂಗಳೂರು: ಚುನಾವಣೆ ಸಮಯದಲ್ಲಿ ಬಿಜೆಪಿ ಹಿರಿಯ ರಾಜಕಾರಣಿಗಳು ನಿವೃತ್ತಿ ಘೋಷಣೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆ ಮೂಲಕ ಟೀಕೆ ಮಾಡಿದೆ.

“ಯಡಿಯೂರಪ್ಪನವರನ್ನು ಕಣ್ಣೀರು ಹಾಕಿಸಿ ಪದಚ್ಯುತಿ ಮಾಡಲಾಯ್ತು. ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈಶ್ವರಪ್ಪನವರ ರಾಜಕೀಯವನ್ನೇ ಮುಗಿಸಿಯಾಯ್ತು. ಜಗದೀಶ್ ಶೆಟ್ಟರ್ ಕಾಲವೂ ಸನ್ನಿಹಿತ. ಅಲ್ಲಿಗೆ ಬಿಜೆಪಿಯಲ್ಲಿ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕತ್ವವನ್ನು ಕಿತ್ತು ನಾಗಪುರದ ನೌಕರರಾದ ಜೋಶಿ ಹಾಗೂ ಸಂತೋಷ ಕೂಟ ಆಪೋಷನ ತೆಗೆದುಕೊಂಡಾಯ್ತು!”

“ಮೊ-ಶಾ ಜೋಡಿಯ ಮಸಲತ್ತು ನೋಡಿದರೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ! ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ RSSಗೆ ಅಪಥ್ಯವೇ.. ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ.”

“ಯಡಿಯೂರಪ್ಪ – ಔಟ್ ಹಾಲಾಡಿ ಶ್ರೀನಿವಾಸ ಶೆಟ್ಟಿ – ಔಟ್ ಈಶ್ವರಪ್ಪ – ಔಟ್ ಜಗದೀಶ್ ಶೆಟ್ಟರ್ – ಔಟ್? ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ್ ಜೋಷಿ, ಬಿ ಎಲ್ ಸಂತೋಷರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ತಯಾರಾಗಿದ್ದಾರೆ. ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ಹೊರನಡೆಯುತ್ತಿದ್ದಾರೆ.”

“BSY, ಈಶ್ವರಪ್ಪ, ಜಗದೀಶ್ ಶೆಟ್ಟರ್.. ಬಿಜೆಪಿ ಎಂಬ ಕಳೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ ನಾಯಕರನ್ನು ಅಗೌರವದ ನಿರ್ಗಮನ ದಾರಿ ತೋರಿಸಿದೆ ಬಿಜೆಪಿ. “ನಾವೇ ಎಲ್ಲ” ಎನ್ನುತ್ತಿದ್ದವರಿಗೆ “ನೀವೇನೂ ಅಲ್ಲ” ಎನ್ನುತ್ತಿದೆ ಮೊ-ಶಾ ಜೋಡಿ. ಗೊಡ್ಡು ಹಸುಗಳನ್ನು ಗೋಶಾಲೆಗಾದರೂ ಬಿಡಬಹುದಿತ್ತು, ಆದರೆ ನೇರ ಕಸಾಯಿಖಾನೆಗೇ ಕಳಿಸುತ್ತಿರುವುದು ದುರಂತ!”

“ಸಂತೋಷ್ ಆಟಕ್ಕೆ ಯಡಿಯೂರಪ್ಪ ಬಲಿ. ಪ್ರಹ್ಲಾದ್ ಜೋಷಿ ಆಟಕ್ಕೆ ಜಗದೀಶ್ ಶೆಟ್ಟರ್ ಬಲಿ. ನಾಗಪುರದ ಕರುಳುಬಳ್ಳಿಯ ಸಂಬಂಧವನ್ನೇ ಬಳಸಿ ಬಿಜೆಪಿಯಲ್ಲಿ ಪ್ರಾಭಲ್ಯ ಸಾಧಿಸಿರುವ ಪ್ರಹ್ಲಾದ್ ಜೋಶಿ ಲಿಂಗಾಯತ ನಾಯಕರನ್ನು ಹೊಂಡಕ್ಕೆ ಕೆಡವುದರಲ್ಲಿ ಯಶಸ್ವಿಯಾಗಿದ್ದಾರೆ. ಮಾಜಿ ಸಿಎಂ ಒಬ್ಬರಿಗೆ ಟಿಕೆಟ್ ನಿರಾಕರಿಸುವಂತಹ ಅವಮಾನ ಇನ್ನೊಂದಿಲ್ಲ.” ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

Exit mobile version