karnataka election laxman savadi reaction to cm basavaraja bommai commentKarnataka Election: ಪಕ್ಷ ಬಿಟ್ಟಿದ್ದು ದುಃಖವಾಗಿದೆ ಎಂದ ಸಿಎಂ ಬೊಮ್ಮಾಯಿ; ನಾನೇನು ಕಣ್ಣೀರು ಒರೆಸಲೇ ಎಂದ ಲಕ್ಷ್ಮಣ ಸವದಿ - Vistara News

ಕರ್ನಾಟಕ

Karnataka Election: ಪಕ್ಷ ಬಿಟ್ಟಿದ್ದು ದುಃಖವಾಗಿದೆ ಎಂದ ಸಿಎಂ ಬೊಮ್ಮಾಯಿ; ನಾನೇನು ಕಣ್ಣೀರು ಒರೆಸಲೇ ಎಂದ ಲಕ್ಷ್ಮಣ ಸವದಿ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಲಕ್ಷ್ಮಣ ಸವದಿ ಅವರನ್ನು ವಿಧಾನ ಪರಿಷತ್‌ ಸದಸ್ಯರಾಗಿಸಿ ಡಿಸಿಎಂ ಆಗಿ ನೇಮಿಸಲಾಗಿತ್ತು.

VISTARANEWS.COM


on

ಲಕ್ಷ್ಮಣ ಸವದಿ karnataka election laxman savadi reaction to cm basavaraja bommai comment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದು ದುಃಖ ತಂದಿದೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಮಾತಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸವದಿ, ನಾನೇನು ಅವರ ಕಣ್ಣೀರು ಒರೆಸಲು ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ತಮ್ಮ ನಿವಾಸದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ಗೆ ಹೋಗ್ತಿರೋದು ದುಃಖ ತರಿಸಿದೆ. ನಮ್ಮ ಜತೆಗೆ ಹೆಚ್ಚಿನ ಒಡನಾಟ ಇರುವವರು. ರಾಜಕೀಯ ಸನ್ನಿವೇಶದಲ್ಲಿ ಹೀಗೆ ಆಗುತ್ತದೆ. ಅವರಿಗೆ ತಮ್ಮ ರಾಜಕೀಯ ಭವಿಷ್ಯ ಕಂಡಿದೆ, ಹೋಗುತ್ತಿದ್ದಾರೆ.

ಕಾಂಗ್ರೆಸ್‌ಗೆ ಹೆಚ್ಚು ಜನರು ಹೋಗುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ಕಾಂಗ್ರೆಸ್‌ನಲ್ಲಿ 60 ಸ್ಥಾನಗಳಿಗೆ ಅಭ್ಯರ್ಥಿಗಳಿಲ್ಲ, ಅದಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಏನೂ ಬದಲಾವಣೆ ಆಗುವುದಿಲ್ಲ ಎಂದರು. ಬಿಜೆಪಿಯಲ್ಲಿನ ಭಿನ್ನಮತದ ಬಗ್ಗೆ ಮಾತನಾಡಿ, ಸಹಜವಾಗಿ ಆಡಳಿತ ಪಕ್ಷದಲ್ಲಿ ಡಿಮ್ಯಾಂಡ್‌ ಇರುತ್ತದೆ, ಕೆಲವರು ನಾಯಕರು ಮಹತ್ವಾಕಾಂಕ್ಷೆಯಿಂದ ಹೋಗುತ್ತಿದ್ದಾರೆ. ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಬದ್ಧವಾಗಿದ್ದಾರೆ ಎಂದರು.

ಕಾಂಗ್ರೆಸ್‌ ನಾಯಕರೊಂದಿಗೆ ಸಭೆಯ ನಂತರ ತಮ್ಮ ಮನೆಯಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, ಕಾಂಗ್ರೆಸ್‌ ಸೇರಲು ಯಾವುದೇ ಕಂಡೀಷನ್‌ ಹಾಕಿಲ್ಲ. ಅಥಣಿಯಿಂದ ಸ್ಪರ್ಧೆ ಮಾಡುತ್ತೇನೆ, ಮುಂದೆ ಸರ್ಕಾರ ಬಂದಾಗ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಬೇಕು, ನೀರಾವರಿ ಯೋಜನೆಗಳನ್ನು ಮುಗಿಸಿಕೊಡಬೇಕು ಎಂದು ಕೇಳಿದ್ದೇನೆ. ನನ್ನ ಮಗನಿಗೂ ಟಿಕೆಟ್‌ ಕೇಳಿಲ್ಲ, ಹೆಂಡತಿಗೂ ಕೇಳಿಲ್ಲ, ಅಣ್ಣನಿಗೂ ಕೇಳಿಲ್ಲ ಎಂದರು.

ನಿಮ್ಮ ಸೇರ್ಪಡೆ ಕುರಿತು ಸತೀಶ್‌ ಜಾರಕಿಹೊಳಿ ಅವರಿಗೆ ಗೊತ್ತೆ ಎಂಬ ಪ್ರಶ್ನೆಗೆ, ಅವರಿಗೆ ಗೊತ್ತಿದೆ, ಅವರ ಜತೆ ಮಾತನಾಡಿದ್ದೇನೆ ಎಂದರು.

ತಾವು ಪಕ್ಷ ಬಿಡುತ್ತಿರುವುದಕ್ಕೆ ಬೇಸರವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂಬ ಪ್ರಶ್ನೆಗೆ, ಅದಕ್ಕೆ ನಾನೇನು ಮಾಡೋಕೆ ಆಗುತ್ತದೆ? ನಾನೇನು ಅವರ ದುಃಖ ಒರೆಸೋಕೆ ಆಗುತ್ತ? ಎಂದರು.

ಇದನ್ನೂ ಓದಿ: Karnataka Congress: ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರ್ಪಡೆಗೆ ಸಮಯ ನಿಗದಿ: ಅಥಣಿಯಿಂದ ಸ್ಪರ್ಧೆ ಖಚಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ; ಅರ್ಜಿ ವಿಚಾರಣೆ ಜು.29ಕ್ಕೆ ಮುಂದೂಡಿಕೆ

Actor Darshan: ವಿಚಾರಣಾಧೀನ ಕೈದಿಗಳಿಗೆ ಮನೆಯ ಊಟ ನೀಡುವ ಅವಕಾಶವಿದೆ. ಇದಕ್ಕೆ ಕೋರ್ಟ್‌ ಅವಕಾಶ ನೀಡಬೇಕು ಎಂದು ದರ್ಶನ್ ಪರ ವಕೀಲ ಕೋರಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್‌ಗೆ ಮತ್ತೆ ಜೈಲೂಟವೇ ಗತಿಯಾಗಿದೆ. ಯಾಕೆಂದರೆ, ಮನೆ ಊಟಕ್ಕೆ ಅವಕಾಶ ಕೋರಿ ದರ್ಶನ್ ಸಲ್ಲಿಸಿದ್ದ ರಿಟ್ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ಮನೆ ಊಟಕ್ಕೆ ಅವಕಾಶ ಕಲ್ಪಿಸಲು ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು ಎಂದು ದರ್ಶನ್‌ (Actor Darshan) ಕೋರಿದ್ದ ಅರ್ಜಿ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಲಾಗಿದೆ.

ದರ್ಶನ್ ಪರ ವಕೀಲ ಫಣೀಂದ್ರ ವಾದ ಮಂಡಿಸಿ, ವಿಚಾರಣಾಧೀನ ಕೈದಿಗಳಿಗೆ ಖಾಸಗಿ ಸೋರ್ಸ್‌ನಿಂದ ಅಗತ್ಯ ವಸ್ತುಗಳನ್ನು ಪಡೆಯಲು ಅವಕಾಶವಿದೆ. ಕಾರಗೃಹ ಕಾಯ್ದೆಯಲ್ಲಿ ಅದಕ್ಕೆ ಅವಕಾಶ ಇದೆ. ವಿಚಾರಣಾಧಿನ ಕೈದಿ, ಶಿಕ್ಷೆಗೆ ಗುರಿಯಾಗದ ಕೈದಿಗೂ ಮನೆಯ ಊಟ, ಹಾಸಿಗೆ ನೀಡಲು ಜೈಲು ಮ್ಯಾನ್ಯುಯಲ್‌ನಲ್ಲಿ ಅವಕಾಶ ಇದೆ ಎಂದು ಹೇಳಿದರು.

ಊಟವನ್ನು ಸ್ನೇಹಿತರು, ಕುಟುಂಬಸ್ಥರ ಬಳಿ ಪಡೆಯಲು ಜೈಲ್ ಎಸ್ಪಿ, ಐಜಿಪಿ ಚೆಕ್ ಮಾಡಬೇಕು ಅಂತ ನಿಯಮ ಇದೆ. ಅದಲ್ಲದೇ ಆ ಆಹಾರದಿಂದ ತೊಂದರೆಯಾದರೆ ಅದಕ್ಕೆ ಅವರೇ ಕಾರಣ ಇರುತ್ತಾರೆ ಎಂದು ಬಾಂಬೆ ಹೈಕೋರ್ಟ್‌ನ ಅಸ್ಕರ್ ಯೂಸಫ್ ಪ್ರಕರಣದ ಆದೇಶವನ್ನು ಉಲ್ಲೇಖಿಸಿದರು. ನಿಗದಿತ ಸಮಯದಲ್ಲಿ ಕೈದಿ, ತನ್ನ ಖರ್ಚಿನಲ್ಲಿ ಊಟ ಹೊರಗಿನಿಂದ ಪಡೆಯಬಹುದು ಎಂದರು.

ಈ ವೇಳೆ ಪ್ರತಿಕ್ರಿಯಿಸಿದ ಜಡ್ಜ್‌ ಎಸ್.ಆರ್. ಕೃಷ್ಣಕುಮಾರ್, ನೀವು ಆಹಾರ, ಹಾಸಿಗೆ ಮೂಲಭೂತ ಹಕ್ಕು ಎನ್ನುತ್ತಿದ್ದೀರಿ. ಆದರೆ ನಾನು ಈಗ ಮಧ್ಯಂತರ ಆದೇಶ ಮಾಡಲು ಸಾಧ್ಯವಿಲ್ಲ. ಸಂಪೂರ್ಣ ಪ್ರಕರಣದ ವಿಚಾರಣೆ ಮಾಡಬೇಕು. ವಿಚಾರಣಾಧೀನ ಕೈದಿ ಇದ್ದಾಗ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅಧಿಕಾರ ಇದೆ. ಅಲ್ಲಿ ಮೊದಲು ಅರ್ಜಿ ಸಲ್ಲಿಸಿ ಅವಕಾಶ ಕೋರಬೇಕು. ಅಲ್ಲಿ ನಿರಾಕರಣೆಯಾದರೆ, ಮುಂದೆ ನೋಡೋಣ ಎಂದು ಹೇಳಿ, ಮುಂದಿನ ವಿಚಾರಣೆ 29ಕ್ಕೆ ಮುಂದೂಡಿದರು.

ಜೈಲೂಟದಿಂದಾಗಿ ಫುಡ್‌ ಪಾಯಿಸನಿಂಗ್‌ ಹಾಗೂ ಅತಿಸಾರ ಆಗುತ್ತಿದೆ. ಹೀಗಾಗಿ ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ದರ್ಶನ್‌ ಮನವಿ ಮಾಡಿದ್ದರು. ಜೈಲಿನ ಆಹಾರ ದರ್ಶನ್‌ಗೆ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಹೇಳಿದ್ದರು. ಅತಿಸಾರದಿಂದಾಗಿ ದರ್ಶನ್ ತೂಕ ತುಂಬಾ ಕಡಿಮೆಯಾಗಿದೆ. ಹಲವು ಕೆಜಿಗಳಷ್ಟು ತೂಕವನ್ನು ದರ್ಶನ್ ಕಳೆದುಕೊಂಡಿದ್ದಾರೆ. ದರ್ಶನ್ ಜಾಮೀನಿಗಾಗಿ ವಕೀಲರು ಬೇಕಾದ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಇನ್ನು ಕೆಲವಷ್ಟು ದಿನ ದರ್ಶನ್ ಜೈಲಿನಲ್ಲೆ ಇರಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಮನೆ ಊಟಕ್ಕೆ ಅನುಮತಿ ನೀಡುವಂತೆ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.

ದರ್ಶನ್‌ & ಗ್ಯಾಂಗ್‌ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಆಗಸ್ಟ್ 1 ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಶ್ವನಾಥ‌ ಸಿ ಗೌಡರ್ ಗುರುವಾರ ಆದೇಶ ನೀಡಿದ್ದರು.

Continue Reading

ಮಳೆ

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಶನಿವಾರ ಹಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast ) ಮುನ್ಸೂಚನೆಯನ್ನು ನೀಡಿದೆ. ಮಳೆಯೊಂದಿಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಶನಿವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.

ಇನ್ನೂ ಹಾಸನ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇನ್ನೂ ಭಾನುವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯ ವೇಗವು (30-40 ಕಿಮೀ) ವಿಪರೀತ ಮಳೆಯಾಗಲಿದೆ. ಒಳನಾಡಿನ ಬೆಳಗಾವಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು 35-45 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 20 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

ಶನಿವಾರ ಹಾಸನದ ಕೆಲವುಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಆರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ. ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಎಚ್ ಕೆ ಪಾಂಡು ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

Bengaluru Power Cut: ಬೆಂಗಳೂರು ನಗರದ ʼಸರ್ ಎಂ.ವಿ. 220/66/11ಕೆ.ವಿ ಜಿ.ಐ.ಎಸ್ ಇಡಿಸಿʼ ಸ್ಟೇಷನ್‌ನಲ್ಲಿ ಹಾಗೂ ಬೆಂಗಳೂರು ನಗರದ 66/11ಕೆ.ವಿ ಬಾಗಮನೆ ಟೆಕ್‌ಪಾರ್ಕ್ ಸ್ಟೇಷನ್‌ ಮತ್ತು ಬೆಂಗಳೂರು ನಗರದ 66/11 ಕೆ.ವಿ. ಶೋಭಾ ಸಿಟಿ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಜು.20 ರಂದು ಶನಿವಾರ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

VISTARANEWS.COM


on

Bengaluru power cut July 20th power outage in many parts of Bengaluru
Koo

ಬೆಂಗಳೂರು: ನಗರದ ʼಸರ್ ಎಂ.ವಿ. 220/66/11 ಕೆ.ವಿ. ಜಿ.ಐ.ಎಸ್ ಇಡಿಸಿʼ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಜು.20ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ರೆಸಿಡೆನ್ಸಿ ರಸ್ತೆ, ಹೊಂಡೈ ಆರ್.ಎಂ.ಯು, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ಚರ್ಚ್‌ ಸ್ಟ್ರೀಟ್, ಕಸ್ತೂರ್ಬಾ ರಸ್ತೆ, ಸೇಂಟ್ ಮಾರ್ಕ್ಸ್‌ ರಸ್ತೆ, ಕ್ವೀನ್ಸ್ ವೃತ್ತ, ರೆಸಿಡೆನ್ಸಿ ರಸ್ತೆ ಕ್ರಾಸ್, ಐ.ಟಿ.ಸಿ ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

66/11ಕೆ.ವಿ ಬಾಗಮನೆ ಟೆಕ್‌ಪಾರ್ಕ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ; ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66/11ಕೆ.ವಿ ಬಾಗಮನೆ ಟೆಕ್‌ಪಾರ್ಕ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಜು.20 ರಂದು ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಟಿ.ಟಿ.ಕೆ. ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌, ಬೈರಸಂದ್ರ, ಗುಂಡಪ್ಪ ಲೇಔಟ್, ಓಂ ಶಕ್ತಿ ದೇವಸ್ಥಾನ, ಕಗ್ಗದಾಸಪುರ 1ನೇ ಅಡ್ಡ ರಸ್ತೆಯಿಂದ 19ನೇ ಅಡ್ಡರಸ್ತೆ, ಭುವನೇಶ್ವರಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

66/11 ಕೆ.ವಿ. ಶೋಭಾ ಸಿಟಿ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ; ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66/11 ಕೆ.ವಿ. ಶೋಭಾ ಸಿಟಿ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಜು.20ರಂದು ಶನಿವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಶೋಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೊಲೀಸ್ ಕ್ವಾಟ್‌ರ್ಸ್, ಆರ್.ಕೆ. ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಯು, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್‌, ಎಸ್ತರ್ ಹರ‍್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬೋರ್ಡ್‌ ಮತ್ತು ಬೆಂಚ್ ರಾಯಲ್‌ವುಡ್, ರ‍್ಕಾವತಿ ಲೇಔಟ್, ಥಣಿಸಂದ್ರ, ಆರ್ ಕೆ ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ಕರ್ನಾಟಕ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Pralhad Joshi: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ನಿಜವಾಗಿ ಬಡವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲ. ಚುನಾವಣೆ ವೇಳೆ ಮಾತ್ರ ಅವರನ್ನು ಓಲೈಸಿಕೊಳ್ಳಲು ಬಣ್ಣ ಬಣ್ಣದ ಕಥೆ ಕಟ್ಟಿ ರಾಜಕಾರಣ ಮಾಡುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Congress creates colorful stories only during elections Minister Pralhad Joshi alleges
Koo

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಮಾತ್ರ ಬಡವರ ಪರ, ಪರಿಶಿಷ್ಟರ ಪರ ಎನ್ನುತ್ತ ಬಣ್ಣ ಬಣ್ಣದ ಕತೆ ಕಟ್ಟುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಟೀಕಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ನಿಜವಾಗಿ ಬಡವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲ. ಚುನಾವಣೆ ವೇಳೆ ಮಾತ್ರ ಅವರನ್ನು ಓಲೈಸಿಕೊಳ್ಳಲು ಬಣ್ಣ ಬಣ್ಣದ ಕಥೆ ಕಟ್ಟಿ ರಾಜಕಾರಣ ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

ಇಂದಿರಾ ಕ್ಯಾಂಟಿನ್ ತಾನೇ ಮುಚ್ಚುತ್ತಿದೆ ಕಾಂಗ್ರೆಸ್ ಸರ್ಕಾರ

ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಬಿಜೆಪಿ ಅಲ್ಲ, ಈಗ ಕಾಂಗ್ರೆಸ್ ಸರ್ಕಾರವೇ ಮುಚ್ಚುತ್ತಿದೆ. ಬಡವರು ಮತ್ತು ಶ್ರಮಿಕ ವರ್ಗದವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಮುಚ್ಚಿಸಲು ಹೊರಟಿದ್ದೇವೆಂದು ಆಗ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿತ್ತು. ಆದರೆ, ಈಗ ಕಾಂಗ್ರೆಸ್ ಸರ್ಕಾರವೇ ಮುಚ್ಚಲು ಹೊರಟಿದೆ ಎಂದು ಜೋಶಿ ಆರೋಪಿಸಿದ್ದಾರೆ.

ಗ್ಯಾರಂಟಿ ಯೋಜನೆ ನಿಭಾಯಿಸಲಾಗದೆ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿದ್ದ ಧನಕ್ಕೆ ಕೈ ಹಾಕಿದ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟಿನ್‌ಗಳಿಗೆ ಬೀಗ ಹಾಕುತ್ತಿದೆ ಎಂದಿದ್ದಾರೆ.

ಇಂದಿರಾ ಕ್ಯಾಂಟಿನ್‌ಗಳಿಗೆ ಕಳೆದೊಂದು ವರ್ಷದಿಂದ ಆಹಾರ ಪೂರೈಸುತ್ತಿದ್ದ ಗುತ್ತಿಗೆದಾರರಿಗೆ ಬರೋಬ್ಬರಿ 47 ಕೋಟಿ ರೂ. ಬಿಲ್ ಪಾವತಿಸಲಾಗದೆ ಬಾಗಿಲು ಮುಚ್ಚಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕಾಂಗ್ರೆಸ್ ನಾಯಕರು ತಾವು ಬಡವರ ಪರ ಎನ್ನುತ್ತಾರೆ ಹೊರತು ಮಾತಲ್ಲಿ ಹೇಳಿದ್ದನ್ನು ಕಾರ್ಯರೂಪಕ್ಕೆ ತರುವುದಿಲ್ಲ. ಆ ಇಚ್ಛಾಸಕ್ತಿ ಮುಖ್ಯಮಂತ್ರಿ ಅವರಿಗಿಲ್ಲ ಎಂದು ಆರೋಪಿಸಿ ಪ್ರಲ್ಹಾದ್‌ ಜೋಶಿ ಟ್ವೀಟ್ ಮಾಡಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್4 mins ago

Viral Video: ಜಿಮ್‌ ಸಾಧನದಲ್ಲೇ ಯುವಕನ ತಲೆಗೆ ಹೊಡೆದ ಟ್ರೈನರ್‌; ಭೀಕರ ದೃಶ್ಯ ಫುಲ್‌ ವೈರಲ್‌

Sexual Abuse
Latest22 mins ago

Sexual Abuse: ಬಾಲಕಿ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ; ವಿಡಿಯೊ ಮನೆಗೇ ಕಳಿಸಿದ ದುಷ್ಟರು

Actor Darshan
ಕರ್ನಾಟಕ1 hour ago

Actor Darshan: ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ; ಅರ್ಜಿ ವಿಚಾರಣೆ ಜು.29ಕ್ಕೆ ಮುಂದೂಡಿಕೆ

Keshav Prasad Maurya
ದೇಶ1 hour ago

Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

karnataka Weather Forecast
ಮಳೆ1 hour ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Salman Khan-Akshay Kumar
Latest1 hour ago

Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

Bengaluru power cut July 20th power outage in many parts of Bengaluru
ಬೆಂಗಳೂರು1 hour ago

Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

Congress creates colorful stories only during elections Minister Pralhad Joshi alleges
ಕರ್ನಾಟಕ1 hour ago

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Natasha ponawala jeweled kurta
ಫ್ಯಾಷನ್2 hours ago

Natasha ponawala jewelled kurta: ರಿಯಲ್‌ ಜ್ಯುವೆಲ್ಡ್ ಕುರ್ತಾ ಧರಿಸಿದ್ದ ಏಕೈಕ ಫ್ಯಾಷನ್‌ ಐಕಾನ್‌ ನತಾಶಾರ ‘ಮೊಗಲ್‌ ರಾಣಿ’ ಲುಕ್‌!

Kubusa Kannada film release on 26th July
ಕರ್ನಾಟಕ2 hours ago

Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ7 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌