ಕರ್ನಾಟಕ ವಿಧಾನಸಭೆ ಚುನಾವಣೆ (karnataka election 2023) ಗರಿಗೆದರಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಕ್ಷಣ ಕ್ಷಣ ಸುದ್ದಿಗೆ (Karnataka Election Live Updates) ವಿಸ್ತಾರ ನ್ಯೂಸ್ ಲೈವ್ ಅಪ್ಡೇಟ್ ನೋಡ್ತಾ ಇರಿ.
ಜಗದೀಶ್ ಶೆಟ್ಟರ್ ನಿವಾಸಕ್ಕೆ ರಣದೀಪ್ ಸುರ್ಜೇವಾಲಾ ಭೇಟಿ
ಚುನಾವಣೆಯಲ್ಲಿ ಗೆಲುವು ಸಾಧಿಸಲು ರಣತಂತ್ರ
ಶೆಟ್ಟರ್ ನಿವಾಸದಲ್ಲಿಯೇ ಚಹಾ ಸವಿದ ರಾಜ್ಯ ಉಸ್ತುವಾರಿ
ಕಾಂಗ್ರೆಸ್ ಪ್ರಚಾರಕರ ಪಟ್ಟಿಯಲ್ಲಿ ತುಕಡೇ ತುಕಡೇ ಗ್ಯಾಂಗ್
ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತುಕಡೇ ತುಕಡೇ ಗ್ಯಾಂಗ್ನವರಿದ್ದಾರೆ ಎಂದು ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ 10 ಜನರು ಇಂತವರಿದ್ದಾರೆ. ದೇಶ ದ್ರೋಹ ಕೇಸ್, ಮಹಿಳೆಯರಿಗೆ ಅಪಮಾನ ಮಾಡಿದವರಿದ್ದಾರೆ. ಗಲಭೆಕೋರರ ಜೊತೆ ಕೈ ಜೋಡಿಸಿದವರು ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ; ಶೆಟ್ಟರ್ ಆರೋಪ
ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಜನರೇ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕಿಮ್ಸ್ನಲ್ಲಿ ಹಣ ಕೊಡದ ಕಾರಣ ವೈದ್ಯರ ನೇಮಕಾತಿ ಆಗಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಏ.23 ಕ್ಕೆ ರಾಜ್ಯಕ್ಕೆ ರಾಹುಲ್ ಗಾಂಧಿ
ವಿಧಾನಸಭಾ ಚುನಾವಣೆಯ ಪ್ರಚಾರ ನಡೆಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ. 23ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ.
ಪ್ರಚಾರಕರ ಪಟ್ಟಿಯಲ್ಲಿ ತೇಜಸ್ವಿ ಸೂರ್ಯ ಏಕಿಲ್ಲ
ಬಿಜೆಪಿ ಪ್ರಕಟಿಸಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಾಜ್ಯದ ಸಂಸದ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯರ ಹೆಸರು ಏಕೆ ಇಲ್ಲ ಎಂದು ಎಐಸಿಸಿ ವಕ್ತಾರಾ ಗೌರವ್ ವಲ್ಲಭ್ ಪ್ರಶ್ನಿಸಿದ್ದಾರೆ.
ಬಿಜೆಪಿ ಉತ್ತರ ಪ್ರದೇಶದ ಸಚಿವ ನಂದಗೋಪಾಲ ಗುಪ್ತ ಜೊತೆಗೆ ಅತೀಕ್ ಇದ್ದ ಫೋಟೋ ಪ್ರದರ್ಶನ ಮಾಡಿದ ಅವರು ಇವರ ಜೊತೆಗೆ ಏನು ಸಂಬಂಧ ಅತೀಕ್ ಗೆ ಎಂದು ಪ್ರಶ್ನಿಸುವ ಮೂಲಕ ಇಂದು ಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ತಿರುಗೇಟು ನೀಡಿದ್ದಾರೆ.