Site icon Vistara News

Karnataka Election Live Updates : ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ, ಪದ್ಮನಾಭನಗರದಿಂದ ಡಿಕೆಸು ಸ್ಪರ್ಧೆ ಇಲ್ಲ ; ವಿಧಾನಸಭೆ ಚುನಾವಣೆಯ ಕ್ಷಣಕ್ಷಣದ ಸುದ್ದಿಗಳು ಇಲ್ಲಿವೆ

Karnataka Election 2023 live

ರ್ನಾಟಕ ವಿಧಾನಸಭೆ ಚುನಾವಣೆ (karnataka election 2023) ಗರಿಗೆದರಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಕ್ಷಣ ಕ್ಷಣ ಸುದ್ದಿಗೆ (Karnataka Election Live Updates) ವಿಸ್ತಾರ ನ್ಯೂಸ್ ಲೈವ್ ಅಪ್‌ಡೇಟ್ ನೋಡ್ತಾ ಇರಿ.

Lakshmi Hegde

ಬಸವರಾಜ ಬೊಮ್ಮಾಯಿ ಪರ ಕಿಚ್ಚ ಸುದೀಪ್​ ಪ್ರಚಾರ ಇಂದಿನಿಂದ

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದಾರೆ. ಹಾಗೇ, ನಟ ಕಿಚ್ಚ ಸುದೀಪ್​ ಅವರು ಇಂದಿನಿಂದ ಶಿಗ್ಗಾವಿಯಲ್ಲಿ ಬೊಮ್ಮಾಯಿ ಪರ ಪ್ರಚಾರವನ್ನೂ ಶುರು ಮಾಡಲಿದ್ದಾರೆ. ಸುದೀಪ್​ ಅವರು ಎಚ್​ಎಎಲ್​ ಏರ್​ಪೋರ್ಟ್​​ನಿಂದ ಬೆಳಗ್ಗೆ 9ಕ್ಕೆ ಹುಬ್ಬಳ್ಳಿಗೆ ಹೊರಟು, ಅಲ್ಲಿಂದ ಸ್ಪೆಶಲ್ ಜೆಟ್ ಮುಖಾಂತರ ಶಿಗ್ಗಾವಿಗೆ ತಲುಪಲಿದ್ದಾರೆ.

Ramaswamy Hulakodu

ಕಾಂಗ್ರೆಸ್‌ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟ

ರಾಜ್ಯ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಬಾಕಿ ಇರುವ 15 ಕ್ಷೇತ್ರಗಳ ಪೈಕಿ ‌7 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

Ramaswamy Hulakodu

ಸಿಎಂ ಬೊಮ್ಮಾಯಿ ವಿರುದ್ಧ ಸಲೀಂ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸುತ್ತಿರುವ ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಣಕ್ಕಿಳಿಯುವ ಸಾಧ್ಯತೆ ಇದೆ.

ಮಂಗಳವಾರ ರಾತ್ರಿ ಕಾಂಗ್ರೆಸ್‌ನ ಅಂತಿಮ ಪಟ್ಟಿ ಪ್ರಕಟವಾಗಲಿದ್ದು, ಟಿಕೆಟ್ ಬೇಡ ಎಂದು ಮಾಜಿ‌‌ ಶಾಸಕ‌ ಅಜ್ಜಂಪೀರ್ ಖಾದ್ರಿ ತಿಳಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್‌ ಸಲೀಂ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

Ramaswamy Hulakodu

ಬಿಜೆಪಿ ತೊರೆಯಲ್ಲ ಎಂದ ರಾಮದಾಸ್‌

ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತ ಶಾಸಕ ಎಸ್‌.ಎ ರಾಮದಾಸ್‌ ಬಿಜೆಪಿ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ 10 ರಿಂದ 12 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ. ಆದರೆ ನನಗೆ ಮಹಾನ್ ನಾಯಕರು ನೀಡಿರುವ ಜವಾಬ್ದಾರಿಗಳಿವೆ. ಹಾಗಾಗಿ ಸ್ಪರ್ಧೆ ಮಾಡುತ್ತಿಲ್ಲ ಮತ್ತು ಪಕ್ಷ ತೊರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕ್ಷೇತ್ರದಿಂದ ಆರು ಬಾರಿ ಕಣಕ್ಕಿಳಿದಿದ್ದ ಅವರು ನಾಲ್ಕು ಬಾರಿ ಗೆದ್ದು ಶಾಸಕರಾಗಿದ್ದರು.

Ramaswamy Hulakodu

ಇಂದು ರಾತ್ರಿಯೊಳಗೆ ಬಿಜೆಪಿ ಅಂತಿಮಪಟ್ಟಿ

ಬಾಕಿ ಇರುವ ಶಿವಮೊಗ್ಗ ಮತ್ತು ಮಾನ್ವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಹೆಸರು ಇಂದು ರಾತ್ರಿಯೊಳಗೆ ಘೋಷಣೆಯಾಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

Exit mobile version