ಕರ್ನಾಟಕ ವಿಧಾನಸಭೆ ಚುನಾವಣೆ (karnataka election 2023) ಗರಿಗೆದರಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಕ್ಷಣ ಕ್ಷಣ ಸುದ್ದಿಗೆ (Karnataka Election Live Updates) ವಿಸ್ತಾರ ನ್ಯೂಸ್ ಲೈವ್ ಅಪ್‌ಡೇಟ್ ನೋಡ್ತಾ ಇರಿ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 19ರಂದು ವರುಣ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಸಿದ್ದರಾಮಯ್ಯ ಅವರು ಕೋಲಾರದಲ್ಲೂ ಕಣಕ್ಕಿಳಿಯಲು ಬಯಸಿದ್ದರು. ಆದರೆ, ಪಕ್ಷ ಅದಕ್ಕೆ ಅವಕಾಶ ನೀಡಿಲ್ಲ. ವರುಣದಲ್ಲಿ ಅವರು ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಎದುರಿಸಬೇಕಾಗಿದೆ. ಸೋಮಣ್ಣ ಅವರು ಇಲ್ಲಿ ಬಿಜೆಪಿ ಅಭ್ಯರ್ಥಿ. ಮಾಜಿ ಬಿಜೆಪಿಗ ಭಾರತಿಶಂಕರ್ ಜೆಡಿಎಸ್‌ನಿಂದ ಸ್ಪರ್ಧಿಸಿದ್ದಾರೆ.
ಬಿಜೆಪಿಯು ಒಟ್ಟು 10 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಇನ್ನೂ ಎರಡು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಕೊಪ್ಪಳ ಮತ್ತು ಮಹದೇವಪುರ ಕ್ಷೇತ್ರಗಳಲ್ಲಿ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ. ಅತ್ತ ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ರಾಮದಾಸ್‌ಗೆ ಟಿಕೆಟ್ ನಿರಾಕರಿಸಲಾಗಿದೆ. ಹೊಸಬರಿಗೆ ಟಿಕೆಟ್ ನೀಡಲಾಗಿದೆ. ಮೂರನೇ ಪಟ್ಟಿಯಲ್ಲೂ ಅಚ್ಚರಿಯ ಹೆಸರು ಕಾಣಿಸಿಕೊಂಡಿವೆ. ಶಿವಮೊಗ್ಗ ನಗರ ಮತ್ತು ಮಾನ್ವಿ ಕ್ಷೇತ್ರಗಳಿಗೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ.
ಕೊಪ್ಪಳ ಜಿಲ್ಲೆಯಲ್ಲಿ ಮುಂದುವರಿದ ಬಿಜೆಪಿ ಬಂಡಾಯ. ಕೊಪ್ಪಳ ಕ್ಷೇತ್ರದ ಬಿಜೆಪಿ ಟಿಕೇಟ್ ಪ್ರಬಲ ಆಕಾಂಕ್ಷಿಯಾಗಿದ್ದ ಸಿ.ವಿ. ಚಂದ್ರಶೇಖರ್ ಅವರಿಗೆ ನಿರಾಸೆ. ಸಂಸದ ಕರಡಿ ಸಂಗಣ್ಣ ಅವರ ಸೊಸೆ ಮಂಜುಳಾ ಅಮರೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಾಜಿ ಸಿಎಂ, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಟಿಕೆಟ್ ಬಯಸಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಅವರಿಗೆ ಸ್ಪಷ್ಟವಾಗಿ ಟಿಕೆಟ್ ನಿರಾಕರಿಸಿತ್ತು. ಇದರಿಂದ ಬಂಡಾಯವೆದ್ದ ಶೆಟ್ಟರ್, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಪಕ್ಷ ಸೇರಿ, ಟಿಕೆಟ್ ಪಡೆದುಕೊಂಡಿದ್ದಾರೆ.
ಮೂರನೇ ಪಟ್ಟಿ ಪ್ರಕಟಿಸಿದ ಬಿಜೆಪಿ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಹೇಶ್ ಟೆಂಗಿನಕಾಯಿ ಅವರಿಗೆ ಟಿಕೆಟ್ ಘೋಷಿಸಿದ ಬಿಜೆಪಿ.