Site icon Vistara News

Karnataka Election Live Updates : ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ, ಪದ್ಮನಾಭನಗರದಿಂದ ಡಿಕೆಸು ಸ್ಪರ್ಧೆ ಇಲ್ಲ ; ವಿಧಾನಸಭೆ ಚುನಾವಣೆಯ ಕ್ಷಣಕ್ಷಣದ ಸುದ್ದಿಗಳು ಇಲ್ಲಿವೆ

Karnataka Election 2023 live

ರ್ನಾಟಕ ವಿಧಾನಸಭೆ ಚುನಾವಣೆ (karnataka election 2023) ಗರಿಗೆದರಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಕ್ಷಣ ಕ್ಷಣ ಸುದ್ದಿಗೆ (Karnataka Election Live Updates) ವಿಸ್ತಾರ ನ್ಯೂಸ್ ಲೈವ್ ಅಪ್‌ಡೇಟ್ ನೋಡ್ತಾ ಇರಿ.

Ramaswamy Hulakodu

ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಅವಧಿ ಮುಕ್ತಾಯವಾಗಿದೆ.

ಚುನಾವಣಾ ಆಯೋಗ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಿತ್ತು.

ಕುತೂಹಲಕ್ಕೆ ಕಾರಣವಾಗಿದ್ದ ಪದ್ಮನಾಭನಗರದಿಂದ ಸಂಸದ ಡಿ.ಕೆ. ಸುರೇಶ್‌ ನಾಮಪತ್ರ ಸಲ್ಲಿಸಿಲ್ಲ. ಅಂತೆಯೇ ಹೊಳೆನರಸೀಪುರದಿಂದ ಬಿಜೆಪಿಯ ಪ್ರೀತಂಗೌಡ ಕೂಡ ಕಣಕ್ಕಿಳಿದಿಲ್ಲ.

Ramaswamy Hulakodu

ಕನಕಪುರದಿಂದ ಕಣಕ್ಕಿಳಿದ ಡಿ.ಕೆ.ಸುರೇಶ್‌!

ಕನಕಪುರದಲ್ಲಿ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಕೊನೆಯ ಕ್ಷಣದಲ್ಲಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಡಿ ಕೆ ಶಿವಕುಮಾರ್ ನಾಮಪತ್ರ ತಿರಸ್ಕರಿಸಿದರೆ ಇರಲಿ ಎಂದು ಮುಂಜಾಗ್ರತೆಯಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Ramaswamy Hulakodu

ಜೆಡಿಎಸ್‌ ನಾಲ್ಕನೇ ಪಟ್ಟಿ ಪ್ರಕಟ

ಜೆಡಿಎಸ್‌ ಅಧಿಕೃತ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟಿಸಿದೆ. ಇದರಲ್ಲಿಯೂ ಮಂಡ್ಯದಿಂದ ಕಣಕ್ಕಿಳಿಯುವ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಾಗಿಲ್ಲ.

ಸಿಎಂ ಬೊಮ್ಮಾಯಿ ವಿರುದ್ಧ ಶಶಿಧರ್‌ ಚನ್ನಬಸಪ್ಪ ಯಲಿಗಾರ್‌ ಅವರನ್ನು ಕಣಕ್ಕಿಳಿಸಲಾಗಿದೆ.

ಮಂಗಳೂರು ನಗರ ಉತ್ತರ ಕ್ಷೇತ್ರದಿಂದ ಮಾಜಿ ಸಚಿವ ಮೋಹಿನುದ್ದೀನ್‌ ಬಾವ ಆವರಿಗೆ ಟಿಕೆಟ್‌ ನೀಡಲಾಗಿದೆ.

Ramaswamy Hulakodu

ಕಾಂಗ್ರೆಸ್‌ ಅಭ್ಯರ್ಥಿ ಬದಲು

ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಮಾಡಲಾಗಿದೆ. ಬುಧಾವಾರ ಗಂಗಾಧರಪ್ಪಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್‌ ಘೋಷಿಸಿತ್ತು. ಇಂದು ನಿರ್ಧಾರ ಬದಲಾಯಿಸಲಾಗಿದ್ದು, ಸ್ಥಳೀಯ ಕಾಂಗ್ರೆಸ್‌ ನಾಯಕ ಅಧಿನಾರಯಣಪ್ಪಗೆ ಟಿಕೆಟ್‌ ನೀಡಲಾಗಿದೆ.

ಗಂಗಾಧರಪ್ಪಗೆ ಟಿಕೆಟ್‌ ನೀಡಿದ್ದನ್ನು ಸ್ಥಳೀಯ ನಾಯಕರು ತೀವ್ರವಾಗಿ ವಿರೋಧಿಸಿದ್ದರು.

Ramaswamy Hulakodu

ಶಿವಮೊಗ್ಗದಲ್ಲಿ ತ್ರಿಕೋನ ಸ್ಪರ್ಧೆ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ, ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ್‌ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದಾಗಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ.

ಚೆನ್ನಿ ಎಂದೇ ಪ್ರಸಿದ್ಧರಾಗಿರುವ ಚನ್ನಬಸಪ್ಪ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ ಉಪಸ್ಥಿತರಿದ್ದು, ಚೆನ್ನಿ 60 ಸಾವಿರ ಮತಗಳಿಂದ ಗೆಲ್ಲಲಿದ್ದಾರೆ ಎಂದಿದ್ದಾರೆ.

Exit mobile version