Site icon Vistara News

Karnataka Election Live Updates : ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ, ಪದ್ಮನಾಭನಗರದಿಂದ ಡಿಕೆಸು ಸ್ಪರ್ಧೆ ಇಲ್ಲ ; ವಿಧಾನಸಭೆ ಚುನಾವಣೆಯ ಕ್ಷಣಕ್ಷಣದ ಸುದ್ದಿಗಳು ಇಲ್ಲಿವೆ

Karnataka Election 2023 live

ರ್ನಾಟಕ ವಿಧಾನಸಭೆ ಚುನಾವಣೆ (karnataka election 2023) ಗರಿಗೆದರಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಕ್ಷಣ ಕ್ಷಣ ಸುದ್ದಿಗೆ (Karnataka Election Live Updates) ವಿಸ್ತಾರ ನ್ಯೂಸ್ ಲೈವ್ ಅಪ್‌ಡೇಟ್ ನೋಡ್ತಾ ಇರಿ.

Ramaswamy Hulakodu

ಸಿಎಂ ವಿರುದ್ಧ ಸ್ಪರ್ಧೆ; ಪಠಾಣ್‌ ನಾಮಪತ್ರ ಸಲ್ಲಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸುತ್ತಿರುವ ಯಾಸೀರ್ ಖಾನ್ ಪಠಾಣ್ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಪಠಾಣ್‌ಗೆ ಮಾಜಿ ಸಂಸದ ಮಂಜುನಾಥ ಕುನ್ನೂರ, ಮಾಜಿ ಎಂಎಲ್ ಸಿ.ಸೋಮಣ್ಣ ಬೇವಿನಮರದ ಜತೆಯಾಗಿದ್ದರು. ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಉಪಸ್ಥಿತರಿರಲಿಲ್ಲ.

Ramaswamy Hulakodu

ಸಿದ್ದರಾಮಯ್ಯ ಅಭಿಮಾನಿ ಕಾಂಗ್ರೆಸ್‌ನಿಂದ ಉಚ್ಚಾಟನೆ

ಸಿದ್ದರಾಮಯ್ಯ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಗಿರೀಶ್ ಗದಿಗೆಪ್ಪಗೌಡರ್ ಅವರನ್ನು ಕಾಂಗ್ರೆಸ್‌ ಉಚ್ಚಾಟಿಸಿದೆ.

ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಅವರನ್ನು ಆರು ವರ್ಷ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರಿಂದ ಆದೇಶ ಹೊರಬಿದ್ದಿದೆ. ಗಿರೀಶ್ ಗದಿಗೆಪ್ಪಗೌಡರ್ ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

Ramaswamy Hulakodu

ಟೆಂಗಿನಕಾಯಿ ಶಕ್ತಿ ಪ್ರದರ್ಶನ

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಹೇಶ್‌ ಟೆಂಗಿನಕಾಯಿ ಭರ್ಜರಿ ರೋಡ್‌ ಶೋ ನಡೆಸಿದ್ದಾರೆ.

Ramaswamy Hulakodu

ಹೊಳೆನರಸೀಪುರಕ್ಕೆ ಪ್ರೀತಂ ಬಂದರೆ ಸ್ವಾಗತಿಸುವೆ

ಹೊಳೆನರಸೀಪುರಕ್ಕೆ ಪ್ರೀತಂ ಗೌಡ ಬಿಜೆಪಿ ಅಭ್ಯರ್ಥಿಯಾಗಿ ಬಂದರೆ ಸ್ವಾಗತಿಸುವೆ ಎಂದು ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಹೇಳಿದ್ದಾರೆ.

ಪಕ್ಷದ ಹೈಕಮಾಂಡ್‌ ಸೂಚಿಸಿದಂತೆ ನಡೆದುಕೊಳ್ಳುತ್ತೇನೆ. ಪಕ್ಷ ಹೇಳಿದರೆ ನಾನು ಕಣದಿಂದ ಹಿಂದೆ ಸರಿಯುತ್ತೇನೆ ಎಂದು ದೇವರಾಜೇಗೌಡ ಹೇಳಿದ್ದಾರೆ.

Ramaswamy Hulakodu

ನಾಳೆ ಪ್ರಚಾರಕ್ಕೆ ಅಮಿತ್‌ ಶಾ

ಶುಕ್ರವಾರ ಚುನಾವಣಾ ಪ್ರಚಾರಕ್ಕೆ ಬಿಜೆಪಿ ವರಿಷ್ಠ ಅಮಿತ್‌ ಶಾ ಆಗಮಿಸಲಿದ್ದಾರೆ. ಅವರು ದೇವನಹಳ್ಳಿಯಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ನಂತರ ಬಿಜೆಪಿ ನಾಯಕರೊಂದಿಗೆ ಸರಣಿ ಸಭೆ ನಡೆಸಲಿದ್ದಾರೆ. ಪ್ರಚಾರದ ಕಾರ್ಯತಂತ್ರ ರೂಪಿಸಲಿದ್ದಾರೆ.

Exit mobile version