ಕರ್ನಾಟಕ ವಿಧಾನಸಭೆ ಚುನಾವಣೆ (karnataka election 2023) ಗರಿಗೆದರಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಕ್ಷಣ ಕ್ಷಣ ಸುದ್ದಿಗೆ (Karnataka Election Live Updates) ವಿಸ್ತಾರ ನ್ಯೂಸ್ ಲೈವ್ ಅಪ್‌ಡೇಟ್ ನೋಡ್ತಾ ಇರಿ.
ಮುನಿಸು ಮರೆತ ಭವಾನಿ ರೇವಣ್ಣ
ಹಾಸನದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಸ್ವರೂಪ್ ಪರವಾಗಿ ಭವಾನಿ ರೇವಣ್ಣ ಮಾತನಾಡಿದ್ದಾರೆ.
ಭವಾನಿ ರೇವಣ್ಣ ಭಾಷಣ ವೇಳೆ ಸ್ವರೂಪ್ ರನ್ನ ಪಕ್ಕದಲ್ಲೇ ನಿಲ್ಲಿಸಿಕೊಂಡು ಭಾಷಣ ಮಾಡಿದ್ದಾರೆ.ʻʻ ಸ್ವರೂಪ್ ಬೇರೆ ಅಲ್ಲ ನನ್ನ ಮಕ್ಕಳು ಬೇರೆ ಅಲ್ಲ. ಹಿಂದೆ ಇದ್ದ ಎಲ್ಲಾ ವಿಚಾರಗಳನ್ನ ಎಲ್ಲರೂ ಮರೆಯಬೇಕುʼʼ ಎಂದು ಹೇಳಿದ್ದಾರೆ.
ಆಯನೂರು ಮಂಜುನಾಥ್ ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ
ಬಿಜೆಪಿಯ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದು, ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿಯಿಂದ ಬಿಫಾರಂ ಪಡೆದಿರುವ ಅವರು, ಇಂದೇ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ.
ಮುಖಾಮುಖಿಯಾದ ಶೆಟ್ಟರ್-ಟೆಂಗಿನಕಾಯಿ
ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಕೂಡ ನಾಮ ಪತ್ರ ಸಲ್ಲಿಸಲು ಆಗಮಿಸಿದ್ದು, ಇಬ್ಬರೂ ಮುಖಾಮುಖಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಹೇಶ್ ಟೆಂಗಿನಕಾಯಿ ಶೆಟ್ಟರ್ ಕಾಲಿಗೆ ನಮಸ್ಕರಿಸಿ, ಅವರ ಆಶೀರ್ವಾದ ಕೋರಿದರು.
ಶೆಟ್ಟರ್ ನಾಮ ಪತ್ರ ಸಲ್ಲಿಸುವುದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಶೆಟ್ಟರ್ ಅವರ ಪತ್ನಿ ಶಿಲ್ಪಾ, ಮಾಜಿ ಸಚಿವರಾದ ಎಮ್.ಬಿ. ಪಾಟೀಲ್, ಆರ್.ವಿ. ದೇಶಪಾಂಡೆ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದರು.
ಅಶೋಕ್ ವಿರುದ್ಧ ಸುರೇಶ್ ಸ್ಪರ್ಧೆ ಅನುಮಾನ
ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿ ರಘುನಾಥ್ ನಾಯ್ಡು ಬಿ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಸದ್ಯ ಅವರೇ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ.
ನಾಳೆ ಮಧ್ಯಾಹ್ನ ಎರಡುವರೆ ಒಳಗೆ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಅವರು ಸ್ಪರ್ಧೆ ಮಾಡಿದರೆ ತಾವು ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ರಘುನಾಥ್ ನಾಯ್ಡು ಹೇಳಿದ್ದಾರೆ.
ಶಿಗ್ಗಾಂವಿಯಲ್ಲಿ ಸುದೀಪ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸುತ್ತಿದ್ದು, ಅವರಿಗೆ ಖ್ಯಾತ ನಟ ಸುದೀಪ್ ಜತೆಯಾಗಿದ್ದಾರೆ. ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದಾರೆ.
ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಉಪಸ್ಥಿತರಿರಲಿದ್ದಾರೆ.