ಕರ್ನಾಟಕ ವಿಧಾನಸಭೆ ಚುನಾವಣೆ (karnataka election 2023) ಗರಿಗೆದರಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಕ್ಷಣ ಕ್ಷಣ ಸುದ್ದಿಗೆ (Karnataka Election Live Updates) ವಿಸ್ತಾರ ನ್ಯೂಸ್ ಲೈವ್ ಅಪ್‌ಡೇಟ್ ನೋಡ್ತಾ ಇರಿ.
ವರುಣದಲ್ಲಿ ಸಿದ್ದರಾಮಯ್ಯ ರೋಡ್‌ಶೋ
ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ರೋಡ್‌ಶೋ ನಡೆಸಿದ್ದಾರೆ . ಹುಟ್ಟೂರಲ್ಲಿ ಕಾರ್ಯಕರ್ತರೊಂದಿಗೆ ಮೆರವಣಿಗೆ ಕೂಡ ನಡೆಸಲಾಗಿದೆ. ಶ್ರೀ ಸಿದ್ದರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಅವರು ಮನೆ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.
ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಮೊಮ್ಮಗ ಧವನ್ ರಾಕೇಶ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯರೊಂದಿಗಿದ್ದಾರೆ.
ಅಶೋಕ್ ವಿರುದ್ಧ ಡಿ ಕೆ ಸುರೇಶ್?
ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ರಘುನಾಥ ನಾಯ್ಡು ಮತ್ತು ಸಂಸದ ಡಿ.ಕೆ. ಸುರೇಶ್ ಇಬ್ಬರೂ ಇಂದು ಕಾಂಗ್ರೆಸ್ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕ್ಷೇತ್ರದಲ್ಲಿ ಸಚಿವ ಆರ್. ಅಶೋಕ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ವರುಣದಲ್ಲಿ ಇಂದು ಸಿದ್ದರಾಮಯ್ಯ ನಾಮಿನೇಶನ್
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವರುಣಾದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಸ್ವರೂಪ್ ಪ್ರಕಾಶ್ ನಾಮಪತ್ರ ಸಲ್ಲಿಕೆ ಇಂದು
ಹಾಸನದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ಸಭೆ ನಡೆಯಲಿದ್ದು ಇದರಲ್ಲಿ ರೇವಣ್ಣ ಮತ್ತು ಭವಾನಿ ರೇವಣ್ಣ ಕೂಡ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂದಹಾಗೇ, ಭವಾನಿ ರೇವಣ್ಣ ಅವರು ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಜೆಡಿಎಸ್ ಸೇರಿದ ಅನಿಲ್ ಲಾಡ್
ಕಾಂಗ್ರೆಸ್ನಿಂದ ಬಳ್ಳಾರಿ ನಗರ ಟಿಕೆಟ್ ಬಯಸಿದ್ದ ಅನಿಲ್ ಲಾಡ್ ಅವರಿಗೆ ಈ ಸಲ ಟಿಕೆಟ್ ಸಿಕ್ಕಿಲ್ಲ. ಹೀಗಾಗಿ ಅವರು ಕಾಂಗ್ರೆಸ್ ತೊರೆದು ಏ.18ರ ರಾತ್ರಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
Bellary, Karnataka | Former MLA Anil Lad resigned from the Congress party. Anil Lad was an aspirant for the Bellary City MLA ticket.
— ANI (@ANI) April 19, 2023
Anil Lad met JD(S) leader HD Kumaraswamy late last night and joined JDS. Lad got 'B' form as JD(S) candidate of Bellary City. pic.twitter.com/dYFQhswd09