Karnataka Election: 20-22 ಸೀಟು ಗೆಲ್ಲುವ ಜೆಡಿಎಸ್‌ಗೆ ಅಧಿಕಾರ ಕೊಡಬೇಡಿ; ನಮ್ಮನ್ನು ಗೆಲ್ಲಿಸಿ: ಸಿದ್ದರಾಮಯ್ಯ - Vistara News

ಕರ್ನಾಟಕ

Karnataka Election: 20-22 ಸೀಟು ಗೆಲ್ಲುವ ಜೆಡಿಎಸ್‌ಗೆ ಅಧಿಕಾರ ಕೊಡಬೇಡಿ; ನಮ್ಮನ್ನು ಗೆಲ್ಲಿಸಿ: ಸಿದ್ದರಾಮಯ್ಯ

Karnataka Election: ಮಂಡ್ಯದಲ್ಲಿ ಶುಕ್ರವಾರ (ಜ.೨೭) ಕಾಂಗ್ರೆಸ್‌ ಪಕ್ಷ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹರಿಹಾಯ್ದರು.

VISTARANEWS.COM


on

Karnataka Election news Dont give power to JDS which wins 222 seats Make us win says Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಮಾತೆತ್ತಿದರೆ ನಾವು 123 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳುತ್ತಿದ್ದಾರೆ. ಜೆಡಿಎಸ್‌ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಸಾಧ್ಯವೇ ಇಲ್ಲ. ನಾವಿದ್ದಾಗಲೇ 59 ಸ್ಥಾನ ಗೆದ್ದಿತ್ತು, ನಾವು ಬಿಟ್ಟ ಮೇಲೆ 29 ಸ್ಥಾನ ಬಂದಿತ್ತು. ಈ ಬಾರಿಯ ಚುನಾವಣೆಯಲ್ಲಿ (Karnataka Election) 20 ರಿಂದ 22 ಜನ ಗೆದ್ದರೆ ಅದೇ ಹೆಚ್ಚು. ಇಂಥವರ ಕೈಗೆ ಅಧಿಕಾರ ಕೊಡುತ್ತೀರಾ? ಖಂಡಿತಾ ಕೊಡಬೇಡಿ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಡ್ಯದಲ್ಲಿ ಶುಕ್ರವಾರ (ಜ.೨೭) ಕಾಂಗ್ರೆಸ್‌ ಪಕ್ಷ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್‌ ಅನ್ನು ನಂಬಬೇಡಿ, ಇಲ್ಲಿ ನಮಗೆ ಮತ್ತು ಜೆಡಿಎಸ್‌ಗೆ ಹೋರಾಟ ಇದೆ. ನಾವು ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದೆವು. ಅವರಿಂದ ಶಾಸಕರನ್ನು ಸರಿಯಾಗಿ ನೋಡಿಕೊಳ್ಳಲು ಆಗದೆ ಹೋಗಿದ್ದಕ್ಕೆ 17 ಜನ ಬಿಜೆಪಿಗೆ ಹೋದರು. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರ ಬೀಳಲು ನಾನು ಕಾರಣ ಎಂದು ಹೇಳುತ್ತಿದ್ದಾರೆ, ನಮ್ಮ ಶಾಸಕರನ್ನು ನಾನು ಕಳಿಸಿದ್ದಾದರೆ, ಜೆಡಿಎಸ್‌ ಶಾಸಕರನ್ನು ಕಳಿಸಿದ್ದು ಯಾರಪ್ಪ? ನೀವೇ ಕಳಿಸಿದ್ರಾ? ನೀವು ವೆಸ್ಟೆಂಡ್‌ ಹೋಟೆಲ್‌ನಲ್ಲಿ ಉಳಿದುಕೊಂಡು ಅಧಿಕಾರ ಮಾಡಲು ಆಗುತ್ತಾ? ಜನರು, ಮಂತ್ರಿಗಳು, ಅಧಿಕಾರಿಗಳು, ಶಾಸಕರನ್ನು ಭೇಟಿ ಮಾಡಿದರೆ ಮಾತ್ರ ಒಳ್ಳೆ ಅಧಿಕಾರ ನೀಡಲು ಸಾಧ್ಯವಾಗುತ್ತದೆ. ಗಾಜಿನ ಮನೆಯಲ್ಲಿ ಕುಳಿತು ಅಧಿಕಾರ ನಡೆಸಲು ಹೊರಟಿದ್ದೆ ಕುಮಾರಸ್ವಾಮಿ ತಪ್ಪು ಎಂದು ಕಿಡಿಕಾರಿದರು.

Karnataka Election news Dont give power to JDS which wins 222 seats Make us win says Siddaramaiah

ನಮ್ಮ ಪಕ್ಷದಿಂದ 80 ಶಾಸಕರು ಆಯ್ಕೆಯಾಗಿದ್ದರೂ, 37 ಜನ ಶಾಸಕರು ಇದ್ದ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದೆವು, ಇದಕ್ಕೆ ಕಾರಣ ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬುದು. ಆದರೆ, ಕುಮಾರಸ್ವಾಮಿ ಕೈಲಿ ಅಧಿಕಾರ ಉಳಿಸಿಕೊಳ್ಳಲು ಆಗಲಿಲ್ಲ. ಕೊಟ್ಟ ಕುದುರೆ ಏರಲಾರದವ ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಅಲ್ಲಮಪ್ರಭುಗಳ ಮಾತುಗಳು ಅವರಿಗೆ ಹೊಂದಿಕೆಯಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Urfi Javed: ಐಸ್ ಕ್ರೀಮ್ ಕೋನ್ ಬ್ರ್ಯಾಲೆಟ್ ಧರಿಸಿ ಕ್ಯಾಮೆರಾಗೆ ಪೋಸ್‌ ನೀಡಿದ ಉರ್ಫಿ

ಮಂಡ್ಯದಲ್ಲಿ ರಾಜಕೀಯ ಬದಲಾವಣೆ ಆದರೆ ಇಡೀ ರಾಜ್ಯದಲ್ಲಿ ಬದಲಾವಣೆ ಆಗುತ್ತದೆ. ಕಳೆದ ಬಾರಿ 7 ಸ್ಥಾನಗಳಲ್ಲಿ ನಮಗೆ ಒಂದೂ ಸ್ಥಾನ ಸಿಗಲಿಲ್ಲ, ಈ ಬಾರಿ 7 ಸ್ಥಾನಗಳಲ್ಲಿ ಕನಿಷ್ಠ 5 ರಿಂದ 6 ಸ್ಥಾನಗಳನ್ನು ಗೆಲ್ಲಿಸಿಕೊಡುವ ಕೆಲಸ ಮಾಡಿ. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ನಾವು ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ, ಇದನ್ನು ನಾನು ನಾಡಿನ ಜನರ ನಾಡಿ ಮಿಡಿತವನ್ನು ನೋಡಿ ಹೇಳುತ್ತಿದ್ದೇನೆ. ನಾವು ಅಧಿಕಾರಕ್ಕೆ ಬಂದ ವೇಳೆ ಈ ಭಾಗದಿಂದಲೂ ಶಾಸಕರು ನಮ್ಮ ಜೊತೆ ಇರಬೇಕು, ನಿಮಗೆ ಯಾವುದೇ ಕಷ್ಟ ಬಂದರೂ ನಾವು ನಿಮ್ಮ ಜತೆ ಇರುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

Karnataka Election news Dont give power to JDS which wins 222 seats Make us win says Siddaramaiah

ಮುಖ್ಯಮಂತ್ರಿ ಬೊಮ್ಮಾಯಿ ಅವರು ಕಳೆದ ವರ್ಷ ಮೈಶುಗರ್‌ ಸಕ್ಕರೆ ಕಾರ್ಖಾನೆಗೆ 50 ಕೋಟಿ ರೂ. ಅನುದಾನ ನೀಡುವುದಾಗಿ ಹೇಳಿದ್ದರು. ಆದರೆ, ಈ ವರೆಗೆ ನೀಡಿರುವುದು ಕೇವಲ 30 ಕೋಟಿ ರೂ. ಮಾತ್ರ. ಉಳಿದ 20 ಕೋಟಿ ರೂ. ಕೊಡಿ ಎಂದು ಕೇಳಿದರೆ ಸಾಲ ತೆಗೆದುಕೊಳ್ಳಲು ಹೇಳಿದ್ದಾರಂತೆ. ಅವರೇ ಸಾಲ ಮಾಡುವುದಾದರೆ ಬೊಮ್ಮಾಯಿ ಯಾಕಿದ್ದಾರೆ? ನಾವು ಅಧಿಕಾರಕ್ಕೆ ಬಂದ ಮೇಲೆ ಈ ಕಾರ್ಖಾನೆಯನ್ನು ಆಧುನೀಕರಣಗೊಳಿಸಿ, ಈ ಭಾಗದ ಎಲ್ಲ ರೈತರ ಕಬ್ಬನ್ನು ಅರೆಯಲು ಎಷ್ಟೇ ಹಣ ಖರ್ಚಾದರೂ ನಾವು ಈ ಕೆಲಸ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ಮಂಡ್ಯದ ಸಕ್ಕರೆ ಕಾರ್ಖಾನೆಗೆ ನಾನು ಮುಖ್ಯಮಂತ್ರಿಯಾಗಿರುವಾಗ ಸರ್ಕಾರದಿಂದ ಹಣ ನೀಡಿ ಪ್ರತಿ ವರ್ಷ ಕಾರ್ಖಾನೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದೆ. ಕುಮಾರಸ್ವಾಮಿ ಬಂದ ಮೇಲೆ ಅನುದಾನ ನೀಡದೆ ನಿಂತುಹೋಗಿತ್ತು. ಈ ಬಿಜೆಪಿಯವರು ಅತ್ತುಕರೆದು ಈಗ ಆರಂಭ ಮಾಡಿದ್ದಾರೆ. ಆದರೆ, ಈವರೆಗೆ ಕಬ್ಬು ಅರೆದಿರುವುದು 9000 ಮೆಟ್ರಿಕ್‌ ಟನ್‌ ಮಾತ್ರ. ಈ ಭಾಗದಲ್ಲಿ ಮೂರೂವರೆ ಲಕ್ಷ ಮೆಟ್ರಿಕ್ ಟನ್‌ ಕಬ್ಬನ್ನು ಬೆಳೆಯುತ್ತಾರೆ. ಇಲ್ಲಿ ಕಬ್ಬು ಅರೆಯಲಾಗದೆ ಬೇರೆ ಕಡೆಗಳಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ಯಾವುದೇ ಕಾರಣಕ್ಕೂ ಮೈಶುಗರ್‌ ಸಕ್ಕರೆ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು. ಈ ಕಾರ್ಖಾನೆಯನ್ನು ಆಧುನೀಕರಣ ಮಾಡಿ ಇಲ್ಲಿನ ರೈತರ ಕಬ್ಬನ್ನು ಕೊಂಡು ಇಲ್ಲಿಯೇ ಅರೆಯುವ ಕೆಲಸ ಆಗಬೇಕು ಎಂದು‌ ಬೊಮ್ಮಾಯಿ ಅವರ ಬಳಿ ನಾವು ಒತ್ತಾಯ ಮಾಡಿದೆವು. ಅಲ್ಲದೆ, ರೈತ ಸಂಘಗಳು ಪ್ರತಿಭಟನೆ ಮಾಡಿವೆ. ಇಷ್ಟೆಲ್ಲ ಆದ ಮೇಲೆ ನಾವು ಈ ಕಾರ್ಖಾನೆಯನ್ನು ಮಾರುವುದಿಲ್ಲ ಎಂದು ಬೊಮ್ಮಾಯಿ ಹೇಳಿಕೆ ನೀಡಿದರು. ಮುರುಗೇಶ್‌ ನಿರಾಣಿ ಈ ಕಾರ್ಖಾನೆಯನ್ನು ಖರೀದಿ ಮಾಡಲು ಕಾಯುತ್ತಾ ಕುಳಿತಿದ್ದರು. ಸರಿಯಾದ ಕ್ರಮದಲ್ಲಿ ಈ ಕಾರ್ಖಾನೆಯನ್ನು ನಡೆಸಿದರೆ ಎಂದಿಗೂ ನಷ್ಟವಾಗುವುದಿಲ್ಲ. ಕೋ ಜನರೇಷನ್‌ ಮಾಡಬೇಕು, ಲಿಕ್ಕರ್‌ ಮತ್ತು ಎಥೆನಾಲ್‌ ತಯಾರು ಮಾಡಿದಾಗ ಮಾತ್ರ ಸಕ್ಕರೆ ಕಾರ್ಖಾನೆ ಲಾಭದಲ್ಲಿ ನಡೆಯಲು ಸಾಧ್ಯವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ನಾವು ಈ ಬಾರಿ ಕೂಡ ಪ್ರತಿ ಮನೆಗೆ 200 ಯುನಿಟ್‌ ವಿದ್ಯುತ್‌ ಅನ್ನು ಉಚಿತವಾಗಿ ನೀಡುತ್ತೇವೆ. ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂಪಾಯಿಯಂತೆ ವರ್ಷಕ್ಕೆ 24,000 ರೂ. ನೀಡುತ್ತೇವೆ ಎಂಬ ಭರವಸೆ ನೀಡಿದ್ದೇವೆ. ಮುಂದೆ ನಾವು ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಬಡವನಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. ಇವುಗಳ ಜತೆ ಇನ್ನೂ ಕೆಲವು ಭರವಸೆಗಳನ್ನು ನೀಡುತ್ತೇವೆ. ಜತೆಗೆ ಈಡೇರಿಸುವ ಕೆಲಸ ಮಾಡುತ್ತೇವೆ. ಮುಂದೆ ನಾವು ಅಧಿಕಾರಕ್ಕೆ ಬಂದ ಮೊದಲ ದಿನವೇ, ಸಂಪುಟ ಸಭೆ ಮಾಡಿ ಈಗ ನೀಡಿರುವ ಮೂರೂ ಭರವಸೆಗಳನ್ನು ಈಡೇರಿಸುತ್ತೇವೆ. ಇಲ್ಲದಿದ್ದರೆ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುತ್ತೇವೆ. ರಾಜಕಾರಣ ಮಾಡುವುದು ಜನರಿಗೆ ಟೋಪಿ ಹಾಕುವುದಕ್ಕಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Ola Cab Compensation: ಓಲಾ ಕ್ಯಾಬ್‌ನಲ್ಲಿ ಎಸಿ ಇಲ್ಲದ್ದಕ್ಕೆ ದೂರು, ಬೆಂಗಳೂರು ವ್ಯಕ್ತಿಗೆ 15 ಸಾವಿರ ರೂ. ಪರಿಹಾರ

ಮಂಡ್ಯದಲ್ಲಿ 4 ಲಕ್ಷದ 80 ಸಾವಿರ ಜಾನುವಾರುಗಳಿವೆ. ಚರ್ಮಗಂಟು ರೋಗದಿಂದ ಮಂಡ್ಯದಲ್ಲಿ ಸುಮಾರು 5000 ಜಾನುವಾರುಗಳು ನರಳುತ್ತಿವೆ. ವೈದ್ಯರು, ಔಷಧಿ, ಲಸಿಕೆ ಈ ಯಾವುದೂ ಇಲ್ಲದೆ ಹಾಲಿನ ಉತ್ಪಾದನೆಯ ಪ್ರಮಾಣ ಕಡಿಮೆಯಾಗಿದೆ. ಜೂನ್‌ನಲ್ಲಿ ರಾಜ್ಯದಲ್ಲಿ ನಿತ್ಯ ಉತ್ಪಾದನೆಯಾಗುತ್ತಿದ್ದ ಹಾಲು 94 ಲಕ್ಷ ಲೀಟರ್‌, ಈಗ ಅದು 76 ಲಕ್ಷ ಲೀಟರ್‌ಗೆ ಇಳಿಕೆ ಕಂಡಿದೆ. ಮಂಡ್ಯ ಜಿಲ್ಲೆಯೊಂದರಲ್ಲೇ ಒಂದು ಲಕ್ಷ ಲೀಟರ್‌ ಹಾಲಿನ ಉತ್ಪಾದನೆ ಕಡಿಮೆಯಾಗಿದೆ. ಬೊಮ್ಮಾಯಿ ಸರ್ಕಾರದ ಪಶುಸಂಗೋಪನಾ ಸಚಿವರಿಗೆ ಈ ಯಾವ ಲೆಕ್ಕವೂ ಗೊತ್ತಿಲ್ಲ. ಸದನದಲ್ಲಿ ಪ್ರಶ್ನೆ ಕೇಳಿದರೆ ಉತ್ತರ ಕೊಡದೆ ತಪ್ಪಿಸಿಕೊಂಡು ಓಡಿಹೋದರು. ಹಿಂದೆ ನಾವು ಅಧಿಕಾರದಲ್ಲಿದ್ದಾಗ ಒಂದು ಲೀಟರ್‌ ಹಾಲಿಗೆ 5 ರೂ. ಪ್ರೋತ್ಸಾಹ ಧನವನ್ನು ನೀಡುತ್ತಿದ್ದೆವು, ಕುಮಾರಸ್ವಾಮಿ ಬಂದ ಮೇಲೆ ಇದನ್ನು ಹೆಚ್ಚು ಮಾಡಿಲ್ಲ, ಮತ್ತೆ ನಾವು ಅಧಿಕಾರಕ್ಕೆ ಬಂದ ಮೇಲೆ 6 ರೂ. ಗೆ ಹೆಚ್ಚು ಮಾಡುತ್ತೇವೆ ಎಂದು ಹೇಳಿದರು.

Karnataka Election news Dont give power to JDS which wins 222 seats Make us win says Siddaramaiah

ಮಂಡ್ಯದಲ್ಲಿ ಏಳೂ ಕ್ಷೇತ್ರ ಗೆಲ್ಲಿಸಿ, ನನ್ನ ಕೈ ಬಲಪಡಿಸಿ: ಡಿಕೆಶಿ

ಮಂಡ್ಯ ಮತದಾರರೇ, ನೀವು ಜೆಡಿಎಸ್ ಪಕ್ಷವನ್ನು ಗೆಲ್ಲಿಸಿದರೆ ಯಾವುದೇ ಪ್ರಯೋಜನ ಇಲ್ಲ. ನಿಮ್ಮ‌ ಮನೆ ಮಗನಾದ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನೀವು ಏಳಕ್ಕೆ ಏಳೂ ಕ್ಷೇತ್ರವನ್ನು ಗೆಲ್ಲಿಸಿ, ನನ್ನ ಕೈಯನ್ನು ಬಲಪಡಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮನವಿ ಮಾಡಿದರು.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಯಾರು ಮಾಡಿದ್ದು? ಅದನ್ನು ಈಗ ಬಿಜೆಪಿಯವರು ಉದ್ಘಾಟನೆ ಮಾಡುತ್ತಾರಂತೆ. ಆದರೆ, ಇದು ಆಗಿದ್ದು ಕಾಂಗ್ರೆಸ್ ಕಾಲದಲ್ಲಿ ಎಂಬುದನ್ನು ಹೇಳುವುದಿಲ್ಲ. 14 ಸಾವಿರ ಕೋಟಿ ರೂಪಾಯಿ ಯೋಜನೆಯನ್ನು ಜಾರಿ ಮಾಡಿದ್ದು ನಾವಾಗಿದ್ದೇವೆ. ನೀವು ಜೆಡಿಎಸ್‌ ಗೆಲ್ಲಿಸಿದರೆ ಯಾವುದೇ ಪ್ರಯೋಜನ ಇಲ್ಲ. ನಮಗೆ ಅಧಿಕಾರ ಕೊಡಿ, ನನ್ನನ್ನು ಬಲಪಡಿಸಿ ಎಂದು ಡಿ.ಕೆ. ಶಿವಕುಮಾರ್‌ ಹೇಳುವ ಮೂಲಕ ಪರೋಕ್ಷವಾಗಿ ತಾವು ಮುಂದಿನ ಸಿಎಂ ಅಭ್ಯರ್ಥಿ ಎಂಬ ಸಂದೇಶವನ್ನು ರವಾನಿಸದ್ದಾರೆಂದೇ ವಿಶ್ಲೇಷಣೆ ಮಾಡಲಾಗುತ್ತಿದೆ. ಕೈ ಹಿಡಿದು ನಡೆಯೋಣ, ಕೈ ಹಿಡಿದು ಬೆಳೆಯೋಣ, ಕೈಗೆ ಕೈ ಜೋಡಿಸೋಣ ಎಂದು ಹೇಳುವ ಮೂಲಕ ಡಿಕೆಶಿ ತಮ್ಮ ಮಾತನ್ನು ಸಮಾಪ್ತಿಗೊಳಿಸಿದರು.

ಡಿಕೆನೂ ಬೇಡ, ಬಂಡೆಯೂ ಬೇಡ, ಏಳೂ ಕ್ಷೇತ್ರ ಗೆಲ್ಲಿಸಿಕೊಡಿ

ವೇದಿಕೆ ಮುಂಭಾಗದಲ್ಲಿದ್ದ ಡಿ.ಕೆ. ಶಿವಕುಮಾರ್‌ ಅಭಿಮಾನಿಗಳು, ಡಿಕೆ, ಡಿಕೆ, ಬಂಡೆ… ಬಂಡೆ ಎಂದು ಘೋಷಣೆ ಕೂಗಿದರು. ಆಗ ವೇದಿಕೆಯಲ್ಲಿದ್ದ ಕೆಪಿಸಿಸಿ ವಕ್ತಾರ ಚಲುವರಾಯಸ್ವಾಮಿ, ಘೋಷಣೆ ಕೂಗದಂತೆ ತಡೆಯಲು ಯತ್ನಿಸಿದರು. ಅದಕ್ಕೂ ಜನರು ಸುಮ್ಮನಾಗದಿದ್ದಾಗ ಸ್ವತಃ ಡಿ.ಕೆ. ಶಿವಕುಮಾರ್‌ ವೇದಿಕೆಗೆ ಬಂದು, “ನಿಮ್ಮೆಲ್ಲರ ಅಭಿಮಾನಕ್ಕೆ ನನ್ನ ಸಾಷ್ಟಾಂಗ ನಮಸ್ಕಾರಗಳು. ಗೂಳಿ ಕೊಟ್ಟಿ ಭತ್ತ ಕೊಡಿ ಸಾಕು. ಡಿಕೆನೂ ಬೇಡ, ಯಾವ ಬಂಡೆ ಅಂತಲೂ ಕೂಗುವುದು ಬೇಡ, ಏಳಕ್ಕೆ ಏಳೂ ಸ್ಥಾನಗಳನ್ನು ಗೆಲ್ಲಲು ಏನು ಬೇಕೋ ಅದನ್ನು ಮಾಡಿಕೊಳ್ಳಿ ಎಂದ ಡಿಕೆಶಿ ಮನವಿ ಮಾಡಿದರು.

ಇದನ್ನೂ ಓದಿ: KPSC Departmental Examination : ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಪ್ರಮಾಣ ಪತ್ರ ಬಿಡುಗಡೆ

ಸಮಾವೇಶದಲ್ಲಿ ಸಿದ್ದರಾಮಯ್ಯ ಬರುತ್ತಿದ್ದಂತೆ ಶಿಳ್ಳೆ, ಚಪ್ಪಾಳೆ ಹಾಕಿ ಅಭಿಮಾನಿಗಳು ಘೋಷಣೆ ಕೂಗಿದರು. ಹಲವು ನಿಮಿಷಗಳ ವರೆಗೆ ಜೈಕಾರ ಹಾಕಿದರು. ಆಗ ಸಿದ್ದರಾಮಯ್ಯ ಸಾಕು ನಿಲ್ಲಿಸ್ರಯ್ಯ ಎಂದರೂ ಕೇಳಲಿಲ್ಲ. ಭಾಷಣ ಮಧ್ಯೆ ಮಧ್ಯೆ ಹೌದು ಹುಲಿಯಾ ಎಂದು ಕಾರ್ಯಕರ್ತರು ಕೂಗಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

TCS World 10K Run : ಈ ದಿನದಂದು ಮೆಟ್ರೊ ರೈಲು ಸೇವೆ ಬೆಳಗ್ಗೆ 4.10ಕ್ಕೆ ಆರಂಭ

TCS World 10K Run : ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

VISTARANEWS.COM


on

Namma metro
Koo

ಬೆಂಗಳೂರು: ಏಪ್ರಿಲ್​ 28ರಂದು (ಭಾನುವಾರ) ಬೆಂಗಳೂರಿನ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್​ ಷಾ ಪರೇಡ್ ಮೈದಾನದಿಂದ ನಡೆಯಲಿರುವ TCS ವರ್ಲ್ಡ್ 10K ರನ್ (TCS World 10K Run ) ಪ್ರಯುಕ್ತ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆ ಯನ್ನು 07:00 ಗಂಟೆಗೆ ಬದಲಾಗಿ ಮುಂಜಾನೆ 03:35 ಕ್ಕೆ ಆರಂಭಗೊಳ್ಳಲಿದೆ ಎಂದು ಮೆಟ್ರೊ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಗ್ಗೆ 04.10 ಗಂಟೆಗೆ ಪ್ರಾರಂಭವಾಗಲಿದೆ. ನಂತರ 10 ನಿಮಿಷಗಳ ಅಂತರದಿಂದ ಬೆಳಿಗ್ಗೆ 5.00 ಗಂಟೆಯವರೆಗೆ ರೈಲುಗಳು ಸಂಚರಿಸಲಿದೆ. ಆ ನಂತರ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Namma Metro : ನಮ್ಮ ಮೆಟ್ರೊ ವಿಸ್ತೃತ ನೇರಳೆ ಮಾರ್ಗ ಲೋಕಾರ್ಪಣೆ ಮಾಡಿದ ಮೋದಿ; ಏನಿದರ ವಿಶೇಷತೆ?

10K ಓಟದಲ್ಲಿ ಭಾಗವಹಿಸಲು ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮೆಟ್ರೊ ಅಧಿಕಾರಿಗಳು ವಿನಿಂತಿ ಮಾಡಿದ್ದಾರೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಹೇಳಿದೆ.

ಮತದಾನದ ದಿನದಂದು ನಮ್ಮ ಮೆಟ್ರೋ ಸೇವೆ ಹೀಗಿದೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಮೆಟ್ರೊ ರೈಲಿನ ಸಂಚಾರ ಅವಧಿ ರಾತ್ರಿ 11.55ರ ಬದಲಿಗೆ 12.35ರವರೆಗೆ ವಿಸ್ತರಣೆಗೊಳ್ಳಲಿದೆ. ಮತದಾನಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೆಟ್ರೋ ಸೇವೆಯನ್ನು ವಿಸ್ತರಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.

ಏಪ್ರಿಲ್ 26, 2024 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ತನ್ನ ನಾಲ್ಕು ಪ್ರಮುಖ ನಿಲ್ದಾಣಗಳಾದ ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್, ಚಲ್ಲಘಟ್ಟ, ವೈಟ್ಫೀಲ್ಡ್ (ಕಾಡುಗೋಡು) ನಿಂದ ತನ್ನ ಕೊನೆಯ ರೈಲು ಸೇವೆಗಳನ್ನು 23.55 ಬದಲಿಗೆ (ರಾತ್ರಿ 11.55) 12.35ರವರೆಗೆ ವಿಸ್ತರಿಸುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಉದ್ಯೋಗ

Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Job Alert: ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ನಿಮ್ಮನ್ನು ಹುಡುಕಿಕೊಂಡು ಬಂದಿದೆ ಸುವರ್ಣಾವಕಾಶ. ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 3. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಇನ್ಯಾಕೆ ತಡ? ಈಗಲೇ ಅಪ್ಲೈ ಮಾಡಿ.

VISTARANEWS.COM


on

Job Alert
Koo

ಬೆಂಗಳೂರು: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ (Hutti Gold Mines Company Limited)ಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (HGML Recruitment 2024). ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟೆಂಟ್ ಫಾರ್‌ಮನ್‌ (ಗಣಿ)- 16 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಟಲರ್ಜಿ)- 7 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಲ್ಯಾಬ್ ಅಸಿಸ್ಟೆಂಟ್- 1 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಜಿಯಾಲಜಿ)- 3 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಡೈಮಂಡ್ ಡ್ರಿಲ್ಲಿಂಗ್ / ಅಂಡರ್ ಗ್ರೌಂಡ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಕ್ಯಾನಿಕಲ್)- 19 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಐಟಿಐ ಫಿಟ್ಟರ್ (ಗಣಿಗಾರಿಕೆ)- 56 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಫಿಟ್ಟರ್ (ಮೆಟಲ್)- 26 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಎಲೆಕ್ಟ್ರಿಕಲ್- 4 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಎಲೆಕ್ಟ್ರಿಕಲ್
ಅಸಿಸ್ಟೆಂಟ್ ಫಾರ್‌ಮನ್‌ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಎಲೆಕ್ಟ್ರಿಕಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೆಕ್ಯುರಿಟಿ ಇನ್ಸ್‌ಪೆಕ್ಟರ್‌- 6 ಹುದ್ದೆ, ವಿದ್ಯಾರ್ಹತೆ: ಪದವಿ
ಐಟಿಐ ಫಿಟ್ಟರ್ (ಸರ್ವೆ)- 2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಸೆಕ್ಯುರಿಟಿ ಗಾರ್ಡ್- 24 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಮತ್ತು ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕರು / ಪಿಡಬ್ಲ್ಯುಡಿ ಅಭ್ಯರ್ಥಿಗಳು 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 20,920 ರೂ. – 48,020 ರೂ. ಮಾಸಿಕ ವೇತನ ಸಿಗಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಉಳಿಕೆ ಮೂಲ / ಸ್ಥಳೀಯೇತರ ವೃಂದ).

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ).

ಅರ್ಜಿ ಸಲ್ಲಿಸಲು ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಫೋನ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • HGML Assistant Foreman, ITI Fitter Apply Online ಲಿಂಕ್‌ ಕ್ಲಿಕ್‌ ಮಾಡಿ
  • ಅಗತ್ಯ ಮಾಹಿತಿಗಳನ್ನು ಎಚ್ಚರಿಕೆಯಿಂದ ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲವೂ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಖಚಿತ ಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading

ವೈರಲ್ ನ್ಯೂಸ್

Viral Video: ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ; ಇದು ವರ್ಕ್‌ ಫ್ರಮ್‌ ಟ್ರಾಫಿಕ್‌ ಬ್ರೋ!

Viral Video: ಬೆಂಗಳೂರು ಟ್ರಾಫಿಕ್‌ ಎಂಬ ಹೆಸರು ಕೇಳಿದರೆ ಸಾಕು ಹಲವರ ಕುತೂಹಲ ಗರಿಗೆದರುತ್ತದೆ. ಯಾಕೆಂದರೆ ಬೆಂಗಳೂರು ಟ್ರಾಫಿಕ್‌ನಲ್ಲಿ ಹಲವು ಆಸಕ್ತಿದಾಯಕ ಸಂಗತಿಗಳು ಜರಗುತ್ತವೆ. ಒಂದಲ್ಲ ಒಂದು ವಿಶಿಷ್ಟ ಘಟನೆಗೆ ಬೆಂಗಳೂರು ಟ್ರಾಫಿಕ್‌ ಸಾಕ್ಷಿಯಾಗುತ್ತದೆ. ಇದೂ ಕೂಡ ಅಂತಹದ್ದೆ ಆಸಕ್ತಿದಾಯಕ ಘಟನೆ. ಟ್ರಾಫಿಕ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಸ್ಕೂಟರ್‌ ಸವಾರ ಮಹಿಳೆಯೊಬ್ಬರು ಆನ್‌ಲೈನ್‌ ಮೀಟಿಂಗ್‌ ಅಟೆಂಡ್‌ ಆಗುತ್ತಾರೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral Video
Koo

ಬೆಂಗಳೂರು: ಸಿಲಿಕಾನ್‌ ಸಿಟಿ, ಗಾರ್ಡನ್‌ ಸಿಟಿ, ಐಟಿ ಸಿಟಿ ಎಂದೆಲ್ಲ ಕರೆಯಿಸಿಕೊಳ್ಳುವ ಬೆಂಗಳೂರು ಬಹುತೇಕ ಎಲ್ಲರಿಗೂ ಪ್ರಿಯ. ಹೀಗೆ ಎಲ್ಲರ ನೆಚ್ಚಿನ ನಮ್ಮ ಬೆಂಗಳೂರು ಬಗ್ಗೆ ಹಲವರ ಆಕ್ಷೇಪ ಇರುವುದು ಟ್ರಾಫಿಕ್‌ ವಿಚಾರದಲ್ಲಿ. ಟ್ರಾಫಿಕ್‌ ಸಮಸ್ಯೆ ಬೆಂಗಳೂರಿಗರನ್ನು ಹೆಚ್ಚಿನ ಸಂದರ್ಭಗಳಲ್ಲಿ ಹೈರಾಣಾಗಿಸುತ್ತದೆ (Bengaluru Traffic). ಬೆಂಗಳೂರಿನ ಈ ಟ್ರಾಫಿಕ್‌ ಸಮಸ್ಯೆಗೆ ಪರಿಹಾರವೇ ಇಲ್ಲ ಎನ್ನುವಂತಾಗಿದೆ. ಬೆಂಗಳೂರು ಟ್ರಾಫಿಕ್‌ ಬಗ್ಗೆ ತಹೇವಾರಿ ಕಥೆ ಹುಟ್ಟಿಕೊಳ್ಳುತ್ತದೆ. ಟ್ರಾಫಿಕ್‌ಗೆ ಸಿಲುಕಿ ಅನೇಕ ವಿಶಿಷ್ಟ ಸಂಗತಿ ಜರಗುತ್ತವೆ. ಅದಕ್ಕೆ ತಕ್ಕ ಉದಾಹರಣೆ ಎನ್ನುವಂತಿದೆ ಈ ವೈರಲ್‌ ವಿಡಿಯೊ (Viral Video). ಅಷ್ಟಕ್ಕೂ ಈ ವಿಡಿಯೊದಲ್ಲಿ ಏನಿದೆ? ಇಲ್ಲಿದೆ ವಿವರ.

ಟ್ರಾಫಿಕ್‌ನಲ್ಲಿ ಸಿಕ್ಕಿಹಾಕಿಕೊಂಡ ಸ್ಕೂಟರ್‌ ಚಲಾಯಿಸುತ್ತಿದ್ದ ಮಹಿಳೆಯೊಬ್ಬರು ಅಲ್ಲೇ ಆನ್‌ಲೈನ್‌ ಮೀಟಿಂಗ್‌ನಲ್ಲಿ ಭಾಗಿಯಾಗುತ್ತಾರೆ. ʼವರ್ಕ್‌ ಫ್ರಮ್‌ ಟ್ರಾಫಿಕ್‌ʼ ಎನ್ನುವ ಶೀರ್ಷಿಕೆಯಡಿ ವಿಡಿಯೊವನ್ನು ಶೇರ್‌ ಮಾಡಲಾಗಿದೆ. ಬೆಂಗಳೂರಿನಲ್ಲಿ ಇದು ಸಾಮಾನ್ಯ ಎಂದೂ ಬರೆಯಲಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೊ ನೆಟ್ಟಿಗರ ಗಮನ ಸೆಳೆದಿದೆ.

ವಿಡಿಯೊದಲ್ಲಿ ಏನಿದೆ?

ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ಮಹಿಳೆ ಸ್ಕೂಟರ್‌ ಅನ್ನು ಒಂದು ಬದಿಗೆ ನಿಲ್ಲಿಸಿ ಆನ್‌ಲೈನ್‌ ಮೀಟಿಂಗ್‌ಗೆ ಹಾಜರಾಗುತ್ತಾರೆ. ಕ್ಯಾಮೆರಾವನ್ನು ಮಹಿಳೆಯ ಮೊಬೈಲ್‌ಗೆ ಝೂಮ್‌ ಮಾಡಿದಾಗ ಅವರು ಮೀಟಿಂಗ್‌ನಲ್ಲಿ ಭಾಗವಹಿಸಿರುವುದು ಸ್ಪಷ್ಟವಾಗುತ್ತದೆ. ಜತೆಗೆ ವಿಡಿಯೊ ಹಲವು ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್‌ ಜಾಮ್‌ ಆಗಿರುವುದನ್ನು ತೋರಿಸುತ್ತದೆ. ಮಹಿಳೆಗೆ ಕರ್ತವ್ಯ ಪ್ರಜ್ಞೆಗೆ ಹಲವರು ಶಬ್ಬಾಶ್‌ಗಿರಿ ತಿಳಿಸಿದ್ದಾರೆ.

ಆಧುನಿಕ ಯುಗದಲ್ಲಿ ವೈಯಕ್ತಿಕ ಬದುಕು ಮತ್ತು ಉದ್ಯೋಗವನ್ನು ಸಮತೋಲನಗೊಳಿಸಲೇಬೇಕಾದ ಅನಿವಾರ್ಯತೆಯನ್ನು ಇದು ಒತ್ತಿ ಹೇಳುತ್ತದೆ. ಜತೆಗೆ ಡಿಜಿಟಲ್‌ ಫ್ಲಾಟ್‌ಫಾರ್ಮ್‌ಗಳ ಮೇಲೆ ಹೆಚ್ಚುತ್ತಿರುವ ಅವಲಂಬನೆಯನ್ನೂ ಇದು ಪ್ರತಿನಿಧಿಸುತ್ತದೆ.

ಸ್ಕೂಟರ್‌ ರೈಡಿಂಗ್‌ ಮಾಡ್ತಾ ಲ್ಯಾಪ್‌ಟಾಪ್‌ನಲ್ಲಿ ವಿಡಿಯೊ ಕಾಲ್‌

ಈ ರೀತಿಯ ಘಟನೆ ಹಿಂದೆಯೂ ನಡೆದಿತ್ತು. ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಸ್ಕೂಟರ್‌ ಓಡಿಸುತ್ತ ಲ್ಯಾಪ್‌ಟಾಪ್‌ನಲ್ಲಿ ವಿಡಿಯೊ ಕಾಲ್‌ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು. ಟೆಕ್ಕಿಯಂತೆ ಕಾಣುವ ವ್ಯಕ್ತಿಯೊಬ್ಬರು ಬೆಂಗಳೂರಿನ ರಸ್ತೆಯಲ್ಲಿ ಸ್ಕೂಟರ್‌ ಓಡಿಸುತ್ತಿದ್ದಾರೆ. ಅವರ ಮುಂದುಗಡೆ ಲ್ಯಾಪ್‌ಟಾಪ್‌ ಓಪನ್‌ ಆಗಿದ್ದು, ವಿಡಿಯೊ ಕಾನ್ಫರೆನ್ಸ್‌ ನಡೆಯುತ್ತಿದೆ. ಅದರಲ್ಲಿ ಈ ವ್ಯಕ್ತಿಯೂ ಭಾಗಿಯಾಗಿದ್ದಾರೆ ಎಂಬುದು ಗೊತ್ತಾಗುತ್ತದೆ. ಬೆಂಗಳೂರಿನ ವಾಹನನಿಬಿಡ ರಸ್ತೆಯಲ್ಲಿ ಸ್ಕೂಟರ್‌ ಚಲಾವಣೆಯನ್ನೂ ಕಚೇರಿ ಕೆಲಸವನ್ನೂ ಬ್ಯಾಲೆನ್ಸ್‌ ಮಾಡುತ್ತಿರುವ ಈ ವ್ಯಕ್ತಿಯ ಚಾಕಚಕ್ಯತೆ ಹಲವರಲ್ಲಿ ಬೆರಗು ಮೂಡಿಸಿತ್ತು. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಉಲ್ಲಾಸದ, ಟೀಕೆಯ, ವಿನೋದದ ಪ್ರತಿಕ್ರಿಯೆಗಳನ್ನು ಹುಟ್ಟು ಹಾಕಿತ್ತು. ಕೆಲವು ಬಳಕೆದಾರರು ರಸ್ತೆ ಸುರಕ್ಷತೆ ಮತ್ತು ಕೆಲಸದ ಒತ್ತಡದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Bengaluru Traffic: ಟ್ರಾಫಿಕ್‌ ಚಕ್ರವ್ಯೂಹಕ್ಕೆ ಸಿಲುಕಿ 12 ಕಿ.ಮೀ ನಡೆದು ಮನೆ ತಲುಪಿದ ವ್ಯಕ್ತಿ!

ಅದಕ್ಕೂ ಹಿಂದೆ ಆನ್‌ಲೈನ್‌ ಫುಡ್‌ ಡೆಲಿವರಿ ಮಾಡುವವರು ಬೆಂಗಳೂರಿನ ಟ್ರಾಫಿಕ್‌ನಲ್ಲೇ ಆರ್ಡರ್‌ ಮಾಡಿದ ವ್ಯಕ್ತಿಗೆ ಆಹಾರ ವಿತರಿಸಿ ಸುದ್ದಿಯಾಗಿದ್ದರು. ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿಕೊಂಡಿದ್ದ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಿಶಿವತ್ಸ್‌ ಡೊಮಿನೋಸ್‌ನಿಂದ ಆಹಾರ ಆರ್ಡರ್‌ ಮಾಡಿದ್ದರು. ಅವರ ಲೈವ್‌ ಲೊಕೇಷನ್‌ ಟ್ರ್ಯಾಕ್‌ ಮಾಡಿದ ಫುಡ್‌ ಡೆಲಿವರಿ ಏಜೆಂಟ್‌ಗಳು ಕಾರಿನ ಬಳಿಗೇ ಬಂದು ಡೆಲಿವರಿ ಮಾಡಿದ್ದರು. ರಿಶಿವತ್ಸ್‌ ಟ್ರಾಫಿಕ್‌ ಜಾಮ್‌ನಲ್ಲಿ ಸಿಕ್ಕಿ ಹಾಕಿಕೊಂಡಾಗ ಡೊಮಿನೋಸ್‌ನ ಏಜೆಂಟ್‌ಗಳಿಬ್ಬರು ಸ್ಕೂಟರ್‌ನಲ್ಲಿ ಆಗಮಿಸಿದ್ದರು. ಬಳಿಕ ಅವರು ತಮ್ಮ ವಾಹನವನ್ನು ರಸ್ತೆ ಬದಿ ನಿಲ್ಲಿ ಕಾರಿನ ಬಳಿಗೆ ಬಂದು ಆರ್ಡರ್‌ ನೀಡಿದ್ದರು. ಈ ದೃಶ್ಯ ವೈರಲ್‌ ಆಗಿತ್ತು.

Continue Reading

ಕ್ರೈಂ

Road Accident: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

Road Accident: ಚಾಲಕನ ನಿಯಂತ್ರಣ ತಪ್ಪಿದ ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ಜರುಗಿದೆ.

VISTARANEWS.COM


on

driver lost control and the jeep hit a tree driver died on the spot
Koo

ರಿಪ್ಪನ್‌ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Road Accident) ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ.

ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ.

ಇದನ್ನೂ ಓದಿ: Karnataka Weather : ನಾಳೆ ಬೆಳಗಾವಿ, ಚಾಮರಾಜನಗರದಲ್ಲಿ ಮಳೆ ; ಉಳಿದೆಡೆ ಬಿಸಿಲ ಶಾಕ್‌

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ.ವೈ. ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
Namma metro
ಕ್ರೀಡೆ6 mins ago

TCS World 10K Run : ಈ ದಿನದಂದು ಮೆಟ್ರೊ ರೈಲು ಸೇವೆ ಬೆಳಗ್ಗೆ 4.10ಕ್ಕೆ ಆರಂಭ

Job Alert
ಉದ್ಯೋಗ24 mins ago

Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Viral Video
ವೈರಲ್ ನ್ಯೂಸ್47 mins ago

Viral Video: ಮಕ್ಕಳ ಮುಗ್ಧ ನಗುವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಶಿಕ್ಷಕಿ ಏನು ಮಾಡಿದ್ದಾರೆ ನೋಡಿ…

world record
ಕ್ರೀಡೆ55 mins ago

World Record : ಒಂದೇ ಒಂದು ರನ್​ ನೀಡದೇ 7 ವಿಕೆಟ್​ ಉರುಳಿಸಿದ ಬೌಲರ್​​; ಕ್ರಿಕೆಟ್​ ಕ್ಷೇತ್ರದಲ್ಲಿ ವಿಶ್ವ ದಾಖಲೆ

Viral Video
ವೈರಲ್ ನ್ಯೂಸ್59 mins ago

Viral Video: ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ; ಇದು ವರ್ಕ್‌ ಫ್ರಮ್‌ ಟ್ರಾಫಿಕ್‌ ಬ್ರೋ!

driver lost control and the jeep hit a tree driver died on the spot
ಕ್ರೈಂ1 hour ago

Road Accident: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

2nd PUC Exam 2 KSRTC BMTC bus travel free for students in exam timing
Lok Sabha Election 20242 hours ago

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯುತ್ತೀರಾ? ಹಾಗಿದ್ರೆ ನಿಮ್ಗೆ ಬಸ್‌ ಪ್ರಯಾಣ ಫ್ರೀ!

Money Guide
ಮನಿ-ಗೈಡ್2 hours ago

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

2nd PUC Exam 2 from April 29 and make Another mistake
ಶಿಕ್ಷಣ2 hours ago

2nd PUC Exam: ಏಪ್ರಿಲ್‌ 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಮತ್ತೊಂದು ಎಡವಟ್ಟು!

Salman Khan
ಪ್ರಮುಖ ಸುದ್ದಿ2 hours ago

Salman Khan : ಸಲ್ಮಾನ್​ ಮನೆ ಬಳಿ ಗುಂಡಿನ ದಾಳಿ; ಪಂಜಾಬ್​​ನಲ್ಲಿ ಗನ್​ ಕೊಟ್ಟವರಿಬ್ಬರ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ5 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ6 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ9 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202411 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌