Site icon Vistara News

Karnataka Election: ಹಳೇ ಮೈಸೂರು, ಅದರಲ್ಲೂ ಮಂಡ್ಯವೇ ಟಾರ್ಗೆಟ್;‌ ಅಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಅನ್ನು ತೊಳೆಯುತ್ತೇವೆ: ಆರ್.‌ ಅಶೋಕ್

minister r ashoka says rs 500 crore supari to finish dk shivakumar

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Election) ಬಿಜೆಪಿಯಿಂದ ಹಳೇ ಮೈಸೂರು ಭಾಗ ಅದರಲ್ಲೂ ಮಂಡ್ಯವನ್ನು ಟಾರ್ಗೆಟ್ ಮಾಡಲಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಅವರು ಈಗಾಗಲೇ ಭೇಟಿ ನೀಡಿದ್ದಾರೆ. ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬರಲಿದ್ದಾರೆ. ಮುಂದಿನ ದಿನದಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅನ್ನು ತೊಳೆಯುತ್ತೇವೆ ಎಂದು ಕಂದಾಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್.‌ ಅಶೋಕ್‌ ಹೇಳಿದರು.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ದಿನಾಂಕವನ್ನು ನಿಗದಿಪಡಿಸಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುವುದು. ಈ ಮೂಲಕ ಪಕ್ಷ ಈ ಭಾಗದಲ್ಲಿ ಹೆಚ್ಚಿನ ಒತ್ತನ್ನು ನೀಡುತ್ತಿದೆ ಎಂದು ಉಸ್ತುವಾರಿ ಸಚಿವ ಆರ್. ಅಶೋಕ್ ಹೇಳಿದರು.

ಬಿಜೆಪಿ ಭ್ರಷ್ಟಾಚಾರದಲ್ಲೇ ನಿರತವಾಗಿದ್ದು, ಸರ್ಕಾರ ಇರುವುದು ಇನ್ನು ೪೫ ದಿನ ಮಾತ್ರವಾಗಿದೆ. ಬಳಿಕ ನಾವು ವಿಧಾನಸೌಧವನ್ನು ಗಂಜಲ ಹಾಕಿ ತೊಳೆಯುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿರುವ ಅಶೋಕ್‌, ಮುಂದಿನ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ನಾವು ತೊಳೆಯುತ್ತೇವೆ ಎಂದು ಹೇಳಿದರು.

ಮಂಡ್ಯ ನನಗೇನು ಹೊಸದಲ್ಲ. ಹಿಂದೆಯೂ ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಲವು ಅಭಿವೃದ್ಧಿ ಕೆಲಸವನ್ನು ಮಾಡಿದ್ದೇನೆ. ಚುನಾವಣೆ ದೃಷ್ಟಿಯಿಂದ ರಾಜಕೀಯ ಬದಲಾವಣೆ ತರುವುದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಎರಡೂ ಪಕ್ಷಗಳನ್ನು ನೋಡಿ ಜನ ಬೇಸರಗೊಂಡಿದ್ದಾರೆ. ನಮ್ಮ ಸರ್ಕಾರ ಬಂದ ಮೇಲೆ ಮೈಶುಗರ್‌ ಫ್ಯಾಕ್ಟರಿಯನ್ನು ಪ್ರಾರಂಭ ಮಾಡಿದೆವು ಎಂದು ಹೇಳಿದರು.

ಇದನ್ನೂ ಓದಿ: Stock market today : ಸೆನ್ಸೆಕ್ಸ್‌ 850 ಅಂಕ ಪತನ, ಷೇರು ಪೇಟೆ ಕುಸಿತಕ್ಕೆ ಕಾರಣವೇನು?

ಈಗಾಗಲೇ ಮಂಡ್ಯದಲ್ಲಿ ನಾವು ಖಾತೆ ಓಪನ್ ಮಾಡಿದ್ದೇವೆ ಈ ಖಾತೆಗೆ ಇನ್ನಷ್ಟು ಸೇರ್ಪಡೆ ಮಾಡುವಂತೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಗುರಿ ನೀಡಿದ್ದಾರೆ. ಅಲ್ಲದೆ, ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸೀಟ್‌ಗಳನ್ನು ಗೆಲ್ಲುವ ಉದ್ದೇಶವನ್ನು ಇಟ್ಟುಕೊಂಡಿದ್ದಾರೆ. ಈ ಭಾಗದಲ್ಲಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಪಕ್ಷ ನನಗೆ ಕೊಟ್ಟಿದೆ ಎಂದು ಹೇಳಿದರು.

Exit mobile version