karnataka election other district MLAs conducting campaign in BengaluruKarnataka Election: ಬೆಂಗಳೂರಿನಲ್ಲಿ ʼಸ್ನೇಹ ಮಿಲನʼಗಳ ಭರಾಟೆ: ಮತಬೇಟೆಗೆ ಮುಂದಾದ ಅನ್ಯ ಜಿಲ್ಲೆಗಳ BJP ಶಾಸಕರು Vistara News
Connect with us

ಕರ್ನಾಟಕ

Karnataka Election: ಬೆಂಗಳೂರಿನಲ್ಲಿ ʼಸ್ನೇಹ ಮಿಲನʼಗಳ ಭರಾಟೆ: ಮತಬೇಟೆಗೆ ಮುಂದಾದ ಅನ್ಯ ಜಿಲ್ಲೆಗಳ BJP ಶಾಸಕರು

ಚುನಾವಣೆಯಲ್ಲಿ ( Karnataka Election) ಪ್ರತಿ ಮತವೂ ಮುಖ್ಯವಾದ್ಧರಿಂದ, ದೂರದ ಬೆಂಗಳೂರಿನಲ್ಲಿ ನೆಲೆಸಿರುವ ಮತದಾರರನ್ನೂ ಸೆಳೆಯಲು ಶಾಸಕರು ಪ್ರಯತ್ನ ನಡೆಸುತ್ತಿದ್ದಾರೆ.

VISTARANEWS.COM


on

karnataka election other district MLAs conducting campaign in Bengaluru
Koo
Super Speciality Hospital

ರಮೇಶ ದೊಡ್ಡಪುರ, ಬೆಂಗಳೂರು
ವಿಧಾನಸಭೆ ಚುನಾವಣೆಯಲ್ಲಿ ಮತಗಳನ್ನು ಗಳಿಸಲು ಅವರವರ ಕ್ಷೇತ್ರಗಳಲ್ಲಿ ಮತ ಯಾಚನೆ ಸಾಮಾನ್ಯ. ಅಲ್ಲಿನ ಎಲ್ಲ ಜನರನ್ನೂ ತಲುಪಿ ಮತ ಸೆಳೆಯಲು ವಿವಿಧ ಆಮಿಷಗಳನ್ನೂ ಒಡ್ಡಲಾಗುತ್ತದೆ. ಆದರೆ ಇದೀಗ ರಾಜ್ಯದ ವಿವಿಧೆಡೆಯ ಶಾಸಕರು ಬೆಂಗಳೂರಿನಲ್ಲಿ ಮತಬೇಟೆಗೆ ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕಿನ ಜನರೂ ಇದ್ದಾರೆ. ಕೆಲವರು ಇಲ್ಲಿಯೇ ನೆಲೆ ಕಂಡುಕೊಂಡಿದ್ದರೆ, ಬಹಳಷ್ಟು ಜನರು ಸದ್ಯದ ಕೆಲಸಕ್ಕಾಗಿ ತಾತ್ಕಾಲಿಕವಾಗಿ ವಾಸವಿದ್ದಾರೆ. ಇವರೆಲ್ಲರ ಮತಗಳು ಇನ್ನೂ ತಮ್ಮ ಊರಿನ ಮತಗಟ್ಟೆಯಲ್ಲೇ ಇವೆ. ಅವುಗಳನ್ನು ಸೆಳೆಯಬೇಕೆಂದು ಇದೀಗ ಶಾಸಕರು ಬೆಂಗಳೂರಿನಲ್ಲೇ ಕೌಟುಂಬಿಕ, ಮನರಂಜನಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕಾರ್ಯಕ್ರಮ ನಡೆಸುತ್ತಿರುವುದು ರಾಜಕೀಯಕ್ಕಾದರೂ ಸ್ನೇಹ ಮಿಲನ, ಸ್ನೇಹ ಸಮ್ಮಿಲನ ಎಂಬಂತಹ ಹೆಸರನ್ನು ಇರಿಸಲಾಗುತ್ತಿದೆ.

ಕಳೆದ ವರ್ಷದಿಂದಲೇ ಈ ಕಾರ್ಯಕ್ರಮಗಳು ಬೆಂಗಳೂರಿನಲ್ಲಿ ನಡೆಯುತ್ತಿವೆ. 2022ರ ಸೆಪ್ಟೆಂಬರ್‌ನಲ್ಲಿ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅರಮನೆ ಮೈದಾನದಲ್ಲಿ ʼಸ್ನೇಹ ಮಿಲನʼ ಕಾರ್ಯಕ್ರಮ ಆಯೋಜಿಸಿದ್ದರು. ಕುಟುಂಬ ಸದಸ್ಯರೊಂದಿಗೆ ಇಡೀ ದಿನ ಕಳೆಯುವ ಕಾರ್ಯಕ್ರಮದಲ್ಲಿ ಮನರಂಜನೆ, ಕ್ರೀಡೆಗಳು, ಪ್ರತಿಭಾ ಪ್ರದರ್ಶನಗಳಿಗೆ ಅವಕಾಶ ನೀಡಲಾಗಿತ್ತು. ಬಹುತೇಕ ಇದೇ ಮಾದರಿಯನ್ನು ಇತರೆ ಎಲ್ಲ ಶಾಸಕರೂ ಅನುಸರಿಸಿದ್ದಾರೆ.

  1. ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅರಮನೆ ಮೈದಾನದಲ್ಲಿ 2022ರ ಸೆಪ್ಟೆಂಬರ್‌ 18ರಂದು ಸ್ನೇಹಮಿಲನ ನಡೆಸಿದ್ದರು.
  2. ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು, ಬೆಂಗಳೂರು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಜನವರಿ 8ರಂದು ಸ್ನೇಹ ಸಮ್ಮಿಲನ ಆಯೋಜಿಸಿದ್ದರು
  3. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 15ರಂದು ಕಾರ್ಯಕ್ರಮ ಆಯೋಜಿಸಿದ್ದರು.
  4. ತೀರ್ಥಹಳ್ಳಿ ಶಾಸಕ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಜಯನಗರದಲ್ಲಿರುವ ಎಬಿವಿಪಿ ಕಚೇರಿಯ ಕಟ್ಟಡದಲ್ಲಿ ಫೆಬ್ರವರಿ 24ರಂದು ಸ್ನೇಹ ಸಮ್ಮಿಲನ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಕಂದಾಯ ಸಚಿವ ಆರ್‌. ಅಶೋಕ್‌ ಭಾಗವಹಿಸಿದ್ದರು.
  5. ಶೃಂಗೇರಿ ಮಾಜಿ ಶಾಸಕ ಹಾಗೂ ಈ ಬಾರಿ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಡಿ.ಎನ್‌. ಜೀವರಾಜ್‌ ಅವರು ಜ್ಞಾನಜ್ಯೋತಿ ಸಭಾಂಗಣದಲ್ಲಿ ಫ್ರಬ್ರವರಿ 26ರಂದು ಸ್ನೇಹ ಮಿಲನ ನಡೆಸಿದ್ದರು.
  6. ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್‌ ಮಾರ್ಚ್‌ 4ರಂದು ವಿಜಯನಗರದ ಬಂಟರ ಭವನದಲ್ಲಿ ಮೂಲ್ಕಿ ಮತ್ತು ಮೂಡಬಿದಿರೆ ಮೂಲದ ಜನರಿಗೆ ಕಾರ್ಯಕ್ರಮ ನಡೆಸಿದರು.
  7. ಬಂಟ್ವಾಳ ಶಾಸಕ ರಾಜೇಶ್‌ ನಾಯಕ್‌ ಅವರು ಜಯಮಹಲ್‌ ಪ್ಯಾಲೇಸ್‌ನಲ್ಲಿ ಮಾರ್ಚ್‌ 5ರಂದು ಸ್ನೇಹ ಸಂಗಮ ಕಾರ್ಯಕ್ರಮ ನಡೆಸಿದ್ದರು.

ಇದರಲ್ಲಿ ಎಲ್ಲರೂ ಬಿಜೆಪಿ ಶಾಸಕರೆ. ಬೇರೆ ಪಕ್ಷದ ಶಾಸಕರೂ ಅಲ್ಲಲ್ಲಿ ಕಾರ್ಯಕ್ರಮ ನಡೆಸಿದ್ದಾರಾದರೂ ಬಿಜೆಪಿ ಶಾಸಕರದ್ದೇ ಮೇಲುಗೈ.

  1. ಬೆಂಗಳೂರಿನಲ್ಲಿ ನೆಲೆಸಿರುವ ನಾಗಮಂಗಲ ಮತದಾರರನ್ನು ಸೆಳೆಯಲು ಜೆಡಿಎಸ್‌ ಶಾಸಕ ಸುರೇಶ್‌ ಗೌಡ ಅವರು ಮಾರ್ಚ್‌ 5ರಂದು ಪ್ರತಿಜ್ಞಾ ಸಮಾವೇಶ ಆಯೋಜಿಸಿ ಎಚ್‌.ಡಿ. ಕುಮಾರಸ್ವಾಮಿಯವರನ್ನು ಆಹ್ವಾನಿಸಿದ್ದರು.
  2. ಅದೇ ದಿನ ನಾಗಮಂಗಲದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಹಾಗೂ ಮಾಜಿ ಶಾಸಕ ಚೆಲುವರಾಯಸ್ವಾಮಿ ಬೆಂಗಳೂರಿನ ನಂದಿ ಲಿಂಕ್‌ ಗ್ರೌಂಡ್‌ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು.

ಬೆಂಗಳೂರಿನಲ್ಲಿ ನೆಲೆಸಿರುವ ಮತದಾರರನ್ನು ತಮ್ಮತ್ತ ಸೆಳೆದು ಚುನಾವಣೆ ಸಮಯದಲ್ಲಿ ಊರಿಗೆ ಆಗಮಿಸಿ ಮತ ಚಲಾಯಿಸುವಂತೆ ಮಾಡುವುದು ಇದರ ಮುಖ್ಯ ಉದ್ದೇಶ. ಅನೇಕ ಸಂದರ್ಭದಲ್ಲಿ ಕೆಲವೇ ನೂರು ಮತಗಳಿಂದ ಜಯಗಳಿಸಿದ, ಸೋತ ಉದಾಹರಣೆಗಳಿವೆ. ಹಾಗಾಗಿ ಪ್ರತಿ ಮತವೂ ಮುಖ್ಯವಾದದ್ದು. ಇತ್ತೀಚೆಗೆ ಮೃತಪಟ್ಟ ಕಾಂಗ್ರೆಸ್‌ ನಾಯಕ ಧ್ರುವ ನಾರಾಯಣ ಅವರು ಈ ಹಿಂದೆ ಕೇವಲ ಒಂದು ಮತದ ಅಂತರದಲ್ಲಿ ಜಯಗಳಿಸಿದ್ದರು.

ಮೊದಲನೆಯದು ನೇರವಾಗಿ ಮತ ಸೆಳೆಯುವುದು ಒಂದಾದರೆ, ಬೆಂಗಳೂರಿನಲ್ಲಿರುವವರಿಂದ ಕ್ಷೇತ್ರದಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳುವ ಪ್ರಯತ್ನವೂ ಇದಕ್ಕೆ ಕಾರಣ. ಬೆಂಗಳೂರಿನಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜಿಸಿದರೆ ಅದರ ಸುದ್ದಿ ಸ್ಥಳೀಯವಾಗಿ ಪ್ರಕಟವಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಕಾರ್ಯಕ್ರಮಗಳ ಫೋಟೊಗಳು, ವಿಡಿಯೋ ಹರಿದಾಡುತ್ತದೆ. ಶಾಸಕರು ತಮ್ಮನ್ನು ಆಥ್ಮೀಯವಾಗಿ ಮಾತನಾಡಿಸಿದ ಫೋಟೊಗಳನ್ನು ಕ್ಷೇತ್ರದಲ್ಲಿನ ಸ್ನೇಹಿತರು, ಕುಟುಂಬದವರಿಗೆ ಹಂಚುತ್ತಾರೆ. ಇದರಿಂದ ಶಾಸಕರ ಕುರಿತು ಜನರಲ್ಲಿ ಮೃದು ಭಾವನೆ ಮೂಡುತ್ತದೆ. ಬೆಂಗಳೂರಿನಲ್ಲಿರುವವರಿಗೆ ಕ್ಷೇತ್ರದಲ್ಲಿ ಮತ ಇಲ್ಲದಿದ್ದರೂ ಅವರು ತಮ್ಮ ಸ್ನೇಹಿತರು ಹಾಗೂ ಕುಟುಂಬದವರ ಮೇಲೆ ಪ್ರಭಾವ ಬೀರಿ ಮತ ಹಾಕಿಸಬಹುದು ಎಂಬ ಲೆಕ್ಕಾಚಾರವೂ ಇದರ ಹಿಂದಿದೆ.

ಅನ್ಯ ರಾಜ್ಯಗಳ ಸಮಾವೇಶ

ಅನ್ಯ ಜಿಲ್ಲೆಗಳ ಮತಗಳನ್ನು ಸೆಳೆಯುವುದು ಒಂದೆಡೆಯಾದರೆ, ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯದ ಮತದಾರರಿಗೂ ಬಿಜೆಪಿ ಗಾಳ ಹಾಕಿದೆ. ಇಲ್ಲಿಯೇ ಅನೇಕ ತಲೆಮಾರುಗಳಿಂದ ನೆಲೆಸಿರುವ ರಾಜಸ್ಥಾನಿ, ಗುಜರಾತಿ, ಬಂಗಾಳಿ, ಬಿಹಾರಿ ಕುಟುಂಬಗಳು ಇಲ್ಲಿಯೇ ಮತದಾರರಾಗಿದ್ದಾರೆ. ಆದರೆ ತಂತಮ್ಮ ರಾಜ್ಯಗಳ ರಾಜಕಾರಣ, ಅಲ್ಲಿನ ರಾಜಕಾರಣಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.

ಬೆಂಗಳೂರಿನಲ್ಲಿ ಉತ್ತರ ಭಾರತೀಯರ ಸಮುದಾಯವಾರು ಸಭೆಗಳನ್ನು ನಡೆಸುತ್ತಿರುವ ಬಿಜೆಪಿ, ಆಯಾ ರಾಜ್ಯದ ಬಿಜೆಪಿ ನಾಯಕರು, ಮುಖ್ಯಮಂತ್ರಿ, ಸಚಿವರು, ಕೇಂದ್ರ ಸಚಿವರನ್ನು ಆಹ್ವಾನಿಸಿ ಸಭೆ ನಡೆಸಲಾಗುತ್ತಿದೆ. ಕಡಿಮೆ ಸಂಖ್ಯೆಯಲ್ಲಿದ್ದರೂ ಈ ಮತಗಳನ್ನೂ ಬಿಡಬಾರದು ಎಂದು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ.

ಇದನ್ನೂ ಓದಿ: Farmers Suicide: 10 ವರ್ಷದಲ್ಲಿ 7,398 ರೈತರ ಆತ್ಮಹತ್ಯೆ; ದಿನಕ್ಕಿಬ್ಬರ ಸಾವು: ಮೂರೂ ಪಕ್ಷದ ಅವಧಿಯಲ್ಲಿ ನೀಗಲಿಲ್ಲ ಅನ್ನದಾತನ ಬವಣೆ

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ಕರ್ನಾಟಕ

Karnataka Election: ಜೆಡಿಎಸ್‌, ಬಿಜೆಪಿಯ ತಲಾ ಒಂದು ವಿಕೆಟ್‌ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ

ಅನೇಕ ವರ್ಷ ಕಾಂಗ್ರೆಸ್‌ನಲ್ಲಿದ್ದ ಗೋಪಾಲಕೃಷ್ಣ ಮತ್ತೆ ಅದೇ ಪಕ್ಷಕ್ಕೆ ತೆರಳಬಹುದು ಎನ್ನಲಾಗಿದ್ದು, ಎ.ಟಿ. ರಾಮಸ್ವಾಮಿ ಬಿಜೆಪಿ ಸೇರುವ ಸಾಧ್ಯತೆಯಿದೆ.

VISTARANEWS.COM


on

Edited by

karnataka election AT Ramaswamy and NY Gopalakrishna resigns
Koo

ಬೆಂಗಳೂರು: ರಾಜ್ಯ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ಇಬ್ಬರು ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಒಬ್ಬರು ಬಿಜೆಪಿಗೆ, ಮತ್ತೊಬ್ಬರು ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಅರಕಲಗೂಡು ಜೆಡಿಎಸ್‌ ಶಾಸಕ ಹಾಗೂ ಮಾಜಿ ಸಚಿವ ಎ.ಟಿ. ರಾಮಸ್ವಾಮಿ ಬೆಂಗಳೂರಿನಲ್ಲಿ ವಿಧಾನಸಭೆ ಕಾರ್ಯದರ್ಶಿ ಮೂಲಕ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎ.ಟಿ. ರಾಮಸ್ವಾಮಿ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸಂತೋಷದಿಂದ ರಾಜೀನಾಮೆ ನೀಡಿದ್ದೇನೆ. ಕಾರ್ಯದರ್ಶಿ ಗೆ ರಾಜೀನಾಮೆ ನೀಡಿದ್ದೇನೆ, ಸ್ಪೀಕರ್ ಬಂದ ಬಳಿಕ ಅಂಗೀಕಾರ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.

ನಾನು ಇಂದೇ ಶಾಸಕರ ಭವನದ ಕೊಠಡಿ ಬಿಟ್ಟು ಕೊಡುತ್ತಿದ್ದೇನೆ. ಜೆಡಿಎಸ್ ನಾಯಕರು ನನಗೆ ಅವಕಾಶ ಮಾಡಿಕೊಟ್ಟಿದಕ್ಕೆ ಧನ್ಯವಾದಗಳನ್ನ ಸಲ್ಲಿಸುತ್ತೇನೆ. ನಾನು ಅಧಿಕಾರ ಆಸೆ ಪಡೆದವನಲ್ಲ. ನಾನು ವಿರೋಧ ಪಕ್ಷದವರ ಜತೆ ಸಹ ಉತ್ತಮವಾಗಿದ್ದೇನೆ. ನಾನು ರಾಜಕೀಯ ವಿರೋಧಿಗಳಿಗೂ ಒಳ್ಳೆಯದಾಗ್ಲಿ ಎಂದು ಭಾವಿಸುತ್ತೇನೆ. ಜನ ಸೇವೆಗಾಗಿ ಅವಕಾಶ ಸಿಕ್ಕಿತ್ತು.

ಮುಂದೆ ಅವಕಾಶ ಸಿಕ್ರೆ ಜನರ ಸೇವೆಗೆ ಮುಡುಪಾಗಿ ಇಡುತ್ತಿದ್ದೇನೆ. ಕರ್ನಾಟಕದ ರಾಜಕಾರಣ ಕೆಟ್ಟು ಹೋಗಿದೆ. ಒಲೈಕೆ ರಾಜಕಾರಣ ಜಾಸ್ತಿ ಆಗಿದೆ. ವಿಧಾನ ಸಭೆ ಮತ್ತು ಪರಿಷತ್ ಹಣದ ಸಭೆ ಆಗದೇ ಜನರ ಸಭೆ ಆಗಲಿ. ಜನರ ಹಿತಾಸಕ್ತಿಗೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾನು ಜೆಡಿಎಸ್ ಬಿಡಲಿಲ್ಲ. ಎಂದೂ ಸಹ ಸಹ ಜೆಡಿಎಸ್ ಬಿಡಲಿಲ್ಲ. ಎಲ್ಲ ಪಕ್ಷಗಳಲ್ಲೂ ಲೋಪದೋಷಗಳಿವೆ. ಮನಿ ಪವರ್ ಮುಂದೆ ಬಲಿಪಶು ಆದೆ. ಅಕ್ರಮಗಳನ್ನ ಎತ್ತಿ ಹಿಡಿದಿದ್ದೆ ಶಾಪ ಎನ್ನುವುದಾದರೆ ಅದನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತೇನೆ ಎಂದರು.

ಯಾವ ಪಕ್ಷ ಸೇರುತ್ತೇನೆ ಎನ್ನುವ ಕುರಿತು ರಾಮಸ್ವಾಮಿ ಸ್ಪಷ್ಟವಾಗಿ ತಿಳಿಸಿಲ್ಲ. ಅವರು ಬಿಜೆಪಿ ಅಭ್ಯರ್ಥಿಯಾಗಿ ಅರಕಲಗೂಡಿನಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ.

ಗೋಪಾಲಕೃಷ್ಣ ರಾಜೀನಾಮೆ

ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನೆಗೆ ತೆರಳಿ ರಾಜೀನಾಮೆ ನೀಡಿದ್ದಾರೆ. ವಯಸ್ಸಿನ ಕಾರಣಕ್ಕೆ ರಾಜಕೀಯ ನಿವೃತ್ತಿ ಪಡೆಯಲು ರಾಜೀನಾಮೆ ನೀಡುತ್ತೇನೆ ಎಂದು ಗೋಪಾಲಕೃಷ್ಣ ಹೇಳಿದ್ದಾರೆ.

ಆದರೆ ಅವರು ಮೊಳಕಾಲ್ಮೂರಿನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಕನ್ಪರ್ಮ್ ಮಾಡಿಕೊಂಡೇ ರಾಜೀನಾಮೆ ನೀಡಿದ್ದಾರೆ. ಹಿಂದಿನ ಎಲೆಕ್ಷನ್ ನಲ್ಲಿ ಟಿಕೆಟ್ ನಿಂದ ವಂಚಿತ ಆಗಿದ್ದ ಗೋಪಾಲಕೃಷ್ಣ, ಜನಾರ್ದನ ರೆಡ್ಡಿ, ಶ್ರೀರಾಮುಲು ಪ್ರಭಾವದಿಂದ ಕೂಡ್ಲಿಗಿಯಿಂದ ಸ್ಪರ್ಧಿಸಿದ್ದರು. ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Elections : ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ ನಾಳೆ ಬಿಜೆಪಿಗೆ ರಾಜೀನಾಮೆ, ಕಾಂಗ್ರೆಸ್‌ಗೆ ಸೇರ್ಪಡೆ

Continue Reading

ಕರ್ನಾಟಕ

Hiriyur News: ಕಾಂಗ್ರೆಸ್ ಸೇರಿದ ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್; ಬಿಜೆಪಿಗೆ ಆಘಾತ

Hiriyur News: ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ನಗರ ಸಭೆಯ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್ ಅವರನ್ನು ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಬರ ಮಾಡಿಕೊಂಡರು.

VISTARANEWS.COM


on

Edited by

T Chandrasekhar Former city council president Hiriyur
ಕಾಂಗ್ರೆಸ್ ಸೇರಿದ ನಗರ ಸಭೆಯ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್.
Koo

ಹಿರಿಯೂರು: ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ನಗರಸಭೆಯ (city council) ಮಾಜಿ ಅಧ್ಯಕ್ಷ ಹಾಗೂ ಭೋವಿ ಸಮಾಜದ ನಾಯಕ ಟಿ. ಚಂದ್ರಶೇಖರ್ ಬಿಜೆಪಿಗೆ ಸದ್ದಿಲ್ಲದೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.

ಟಿ. ಚಂದ್ರಶೇಖರ್, ಎಸ್‌ಟಿ ಮೋರ್ಚಾ ಅಧ್ಯಕ್ಷ ಮಂಜುನಾಥ್, ತಿಮ್ಮಭೋವಿ, ರಂಗಸ್ವಾಮಿ ಸೇರಿದಂತೆ ಮತ್ತಿತರರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ.

ಕಾಂಗ್ರೆಸ್‌ನಲ್ಲಿದ್ದ ಟಿ. ಚಂದ್ರಶೇಖರ್ ಅವರು, ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ನಂತರ ನಗರಸಭಾ ಅಧ್ಯಕ್ಷರಾಗಿದ್ದರು. ಬಳಿಕ ನಡೆದ ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಶಾಸಕಿ ಕೆ. ಪೂರ್ಣಿಮಾ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರ ಜತೆಗಿದ್ದ ಚಂದ್ರಶೇಖರ್ ಅವರು ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಂತರ ಕಾಯ್ದುಕೊಂಡಿದ್ದರು. ಇದೀಗ ಗುರುವಾರ (ಮಾ.30) ರಾತ್ರಿ ಮಾಜಿ ಸಚಿವ ಡಿ. ಸುಧಾಕರ್ ಅವರು ತಮ್ಮ ಮನೆಯಲ್ಲಿಯೇ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Karnataka Election: ಕನ್ನಡಿಗರ ವಿರುದ್ಧ ತಮಿಳರನ್ನು ಮುನಿರತ್ನ ಎತ್ತಿಕಟ್ಟುತ್ತಿದ್ದಾರೆ: ಆಡಿಯೊ ಬಿಡುಗಡೆ ಮಾಡಿದ ಡಿ.ಕೆ. ಸುರೇಶ್‌

ಚಂದ್ರಶೇಖರ್ ಅವರು ಬಿಜೆಪಿ ತೊರೆದಿರುವುದರಿಂದ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಹಿನ್ನಡೆ ಉಂಟಾಗಲಿದೆ ಎಂಬ ವಿಶ್ಲೇಷಣೆ ಸಹ ಈ ವೇಳೆ ನಡೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭೋವಿ ಸಮಾಜದ ಮತಗಳು ಹೆಚ್ಚು ಬಂದಿದ್ದವು. ಆದರೆ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರಿಯಾಗಲಿದೆಯೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಪಕ್ಷ ಸೇರ್ಪಡೆ ಕುರಿತು ಮಾತನಾಡಿದ ಮಾಜಿ ಸಚಿವ ಡಿ. ಸುಧಾಕರ್, ಚಂದ್ರಶೇಖರ್ ಅವರು ಕಾಂಗ್ರೆಸ್‌ನ ತತ್ತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ವಾಪಸ್ ಬಂದಿದ್ದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಭ್ರಷ್ಟಾಚಾರ, ಜನ ವಿರೋಧಿ ಆಡಳಿತ ಕೊನೆಗೊಂಡಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading

ಆರೋಗ್ಯ

Shivamogga News: ವಿನ್‌ಲೈಫ್ ಟ್ರಸ್ಟ್ ವತಿಯಿಂದ ಏ. 2ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ

Shivamogga News: ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶದಲ್ಲಿ ಜೀವ ರಕ್ಷಕ ತರಬೇತಿ, ಕಿರು ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ವಿನ್‌ಲೈಫ್ ಟ್ರಸ್ಟಿ ಡಾ.ಪೃಥ್ವಿ ಮಾಹಿತಿ ನೀಡಿದ್ದಾರೆ.

VISTARANEWS.COM


on

Edited by

WinLife Trust shivamogga
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನ್ ಲೈಫ್ ಟ್ರಸ್ಟಿ ಡಾ.ಪೃಥ್ವಿ .
Koo

ಶಿವಮೊಗ್ಗ: ವಿನ್‌ಲೈಫ್ ಟ್ರಸ್ಟ್ (WinLife Trust) ವತಿಯಿಂದ ಕುವೆಂಪು ರಂಗ ಮಂದಿರದಲ್ಲಿ ಏ.2 ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನ್‌ಲೈಫ್ ಟ್ರಸ್ಟಿ ಡಾ.ಪೃಥ್ವಿ, “ಈ ಸಮಾವೇಶದಲ್ಲಿ ತುರ್ತು ಜೀವ ರಕ್ಷಕ ತರಬೇತಿ ಮತ್ತು ಕಾರ್ಯಾಗಾರ ನಡೆಯಲಿದ್ದು, ದೈನಂದಿನ ಬದುಕಿನಲ್ಲಿ ಒತ್ತಡ ನಿರ್ವಹಣೆ, ಮಧುಮೇಹ @360 ಈ ವಿಷಯ ಕುರಿತು ಅರಿವು ಮೂಡಿಸಲಾಗುವುದು. ಆರೋಗ್ಯ ಕುರಿತು ಪ್ರಾಯೋಗಿಕ ತರಬೇತಿ, ಕಾರ್ಯಾಗಾರ, ಯೋಗ, ವಸ್ತು ಪ್ರದರ್ಶನ, ಕಿರು ನಾಟಕ ಪ್ರದರ್ಶನ, ಸಮಾಲೋಚನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: Ananya Panday: ತನ್ನನ್ನು ಎಸಿಪಿ ಎಂದು ಕರೆಯದಂತೆ ಮಾಧ್ಯಮಗಳಿಗೆ ವಿನಂತಿಸಿದ ಅನನ್ಯಾ ಪಾಂಡೆ

ಸುದ್ದಿಗೋಷ್ಠಿಯಲ್ಲಿ ವಿನ್‌ಲೈಫ್ ನಿರ್ದೇಶಕರಾದ ಡಾ.ಶಂಕರ್, ಡಾ.ವಿಜಯ ಕುಮಾರ್, ರೆಹಮತ್ ಹಾಗೂ ಬದ್ರಿನಾಥ್ ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Karnataka Elections : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್‌ವೈ ಗೋಪಾಲಕೃಷ್ಣ; ಕಾಂಗ್ರೆಸ್‌ ಸೇರಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ!

ಕೂಡ್ಲಿ ಬಿಜೆಪಿ ಶಾಸಕ ಎನ್‌.ವೈ ಗೋಪಾಲಕೃಷ್ಣ ಅವರು ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹಾಗಿದ್ದರೆ ಮೊಳಕಾಲ್ಮುರು ಕ್ಷೇತ್ರದಿಂದ ಮಗನಿಗೆ ಕಾಂಗ್ರೆಸ್‌ ಟಿಕೆಟ್‌ ಕೊಡಿಸುತ್ತಾರಾ?

VISTARANEWS.COM


on

Edited by

NY Gopalakrishna resigns
ಕೂಡ್ಲಿಗಿ ಬಿಜೆಪಿ ಶಾಸಕ ಎನ್‌.ವೈಗೋಪಾಕೃಷ್ಣ ಅವರು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ನೀಡಿದರು.
Koo

ಶಿರಸಿ/ವಿಜಯನಗರ: ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಅವರು ತಮ್ಮ ಶಾಸಕ ಸ್ಥಾನಕ್ಕೆ (Karnataka Elections) ರಾಜೀನಾಮೆ ನೀಡಿದ್ದು, ಅದರ ಬೆನ್ನಿಗೇ ರಾಜಕೀಯ ನಿವೃತ್ತಿಯ ಘೋಷಣೆಯನ್ನು ಮಾಡಿದ್ದಾರೆ. ತಾನು ಯಾವುದೇ ಪಕ್ಷ ಸೇರುವುದಿಲ್ಲ, ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದರು.

ವಿಧಾನಸಭೆಯ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶಿರಸಿಯ ಅವರ ನಿವಾಸದಲ್ಲಿ ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರು ಕಾಂಗ್ರೆಸ್‌ ಸೇರುವ ಮತ್ತು ಮೊಳಕಾಲ್ಮುರು ಕ್ಷೇತ್ರದಿಂದ ಅಭ್ಯರ್ಥಿಯಾಗುವ ಸಾಧ್ಯತೆಗಳನ್ನು ಅಲ್ಲಗಳೆದರು. ಮಾತ್ರವಲ್ಲ, ತಾನು ರಾಜಕೀಯದಿಂದಲೇ ನಿವೃತ್ತಿ ಹೊಂದುವುದಾಗಿ ಪ್ರಕಟಿಸಿದರು.

ವಿಸ್ತಾರ ನ್ಯೂಸ್‌ನೊಂದಿಗೆ ಮಾತನಾಡಿದ ಅವರು, ನಾನು ಯಾವ ಪಕ್ಷವನ್ನೂ ಸೇರೊಲ್ಲ, ರಾಜಕೀಯದಿಂದಲೇ ದೂರವಿರುತ್ತೇನೆ ಎಂದು ಹೇಳಿದರು. ಆದರೆ ಈ ಬಾರಿ ತಮ್ಮ ಮಗನಿಗೆ ಟಿಕೆಟ್‌ ಕೊಡಿಸಲು ಅವರು ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಅವರು ಸೂಚ್ಯವಾಗಿ ಹೇಳಿದ್ದಾರೆ.

ʻʻನನಗೆ ವಯಸ್ಸಾಗಿದೆ. ಕ್ಷೇತ್ರದ ಜನರು ಬೇರೆಯವರಿಗೆ ನೀಡಿ ಎನ್ನುತ್ತಿದ್ದಾರೆ. ಜೊತೆಗೆ ಮಕ್ಕಳು ನಮಗೆ ಅವಕಾಶ ನೀಡಿ ಎಂದು ಕೇಳುತ್ತಿದ್ದಾರೆ. ಆದರೆ, ಅವರು ಯಾವ ಪಕ್ಷಕ್ಕೆ ಹೋಗುತ್ತಾರೋ ಗೊತ್ತಿಲ್ಲ.ʼʼ ಎಂದು ಎನ್‌.ವೈ ಗೋಪಾಲಕೃಷ್ಣ ಹೇಳಿದರು.

ಮಂತ್ರಿ ಸ್ಥಾನ ನೀಡದ ಬಗ್ಗೆ ಬೇಸರ

ಆರು ಬಾರಿ ಗೆಲುವು ಸಾಧಿಸಿದರೂ ಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ಬಗ್ಗೆ ಎನ್‌ವೈ ಗೋಪಾಲಕೃಷ್ಣ ಅವರಿಗೆ ಬೇಸರ ಇರುವುದು ಸ್ಪಷ್ಟವಾಗಿದೆ. ʻʻನಾಲ್ಕು ಬಾರಿ ಗೆದ್ದವರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಆದರೆ ನಾನು ಆರು ಬಾರಿ ಶಾಸಕನಾದರೂ ಮಂತ್ರಿ ಸ್ಥಾನ ನೀಡಿಲ್ಲ. ಬಿಜೆಪಿಯೂ ನೀಡಿಲ್ಲ. ಕಾಂಗ್ರೆಸ್ ಸಹ ನೀಡಿಲ್ಲ. ಇದಕ್ಕೆ ಅಸಮಧಾನವಿದೆʼʼ ಎಮದು ಹೇಳಿದರು.

ʻʻನನಗೆ ಈಗ 73 ವರ್ಷ. ವಯಸ್ಸಾದ ಕಾರಣಕ್ಕೆ, ಆರೋಗ್ಯದ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೂ ಸೇರೋದಿಲ್ಲ. ಅದಕ್ಕೆ ರಾಜಕೀಯದಿಂದ ದೂರವಿರುತ್ತೇನೆ. ರಾಜಕೀಯ ನಿವೃತ್ತಿ ಪಡೆಯಲೆಂದೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಾಸಕನಾಗಿದ್ದರೆ ಅವರು ಕರೆಯುವುದು, ಇವರು ಕರೆಯುವ ಗೊಂದಲ ಉಂಟಾಗುತ್ತದೆ. ನಾನು ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದೆಲ್ಲ ಸುದ್ದಿಯಾಗಿದೆ. ಆದರೆ, ಸ್ಪಷ್ಟವಾಗಿ ಹೇಳುತ್ತೇನೆ. ನಾನು ಯಾವ ಪಕ್ಷಕ್ಕೂ ಹೋಗುವುದಿಲ್ಲʼʼ ಎಂದಿದ್ದಾರೆ.

ಹಾಗಿದ್ದರೆ ಮುಂದಿನ ಕಥೆ ಏನು?

ಇದುವರೆಗಿನ ಮಾಹಿತಿ ಪ್ರಕಾರ ಎನ್‌ವೈ ಗೋಪಾಲಕೃಷ್ಣ ಅವರು ಶಾಸಕತ್ವಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಈಗ ಸ್ವತಃ ಗೋಪಾಲಕೃಷ್ಣ ಅವರೇ ಬೇರೆ ಪಕ್ಷ ಸೇರುವ, ಸ್ಪರ್ಧಿಸುವ ಸಾಧ್ಯತೆಯನ್ನು ನಿರಾಕರಿಸಿರುವುದರಿಂದ ಮುಂದೇನು ಎಂಬ ಕುತೂಹಲ ಮೂಡಿದೆ. ಒಂದು ಸಾಧ್ಯತೆಯ ಪ್ರಕಾರ, ಎನ್‌.ವೈ. ಗೋಪಾಲಕೃಷ್ಣ ಅವರ ಪುತ್ರ ಮೊಳಕಾಲ್ಮುರು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಲಿದ್ದಾರೆ. ಅದಕ್ಕಾಗಿಯೇ ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವುದು ಸ್ಪಷ್ಟ.

ಆರು ಬಾರಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು

ಎನ್‌. ಯಲ್ಲಪ್ಪ ಗೋಪಾಲಕೃಷ್ಣ ಅವರು ಒಟ್ಟು ಆರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ಮೊಳಕಾಲ್ಮುರುವಿನಿಂದ (1993ರಿಂದ 2013) ಶಾಸಕರಾಗಿದ್ದು, 2014ರಲ್ಲಿ ಕಾಂಗ್ರೆಸ್‌ನಿಂದ ಬಳ್ಳಾರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಅವರು 2018ರಲ್ಲಿ ಬಿಜೆಪಿ ಸೇರಿ ಕೂಡ್ಲಿಗಿ ಶಾಸಕರಾದರು.

ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ನಂತರ 2018ರಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣ ಕೂಡ್ಲಿಗಿಯಿಂದ ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ : Karnataka Elections : ಬಿಜೆಪಿಯ ಮತ್ತೊಂದು ವಿಕೆಟ್‌ ಪತನ, ಕೂಡ್ಲಿಗಿ ಶಾಸಕ ಎನ್‌.ವೈ ಗೋಪಾಲಕೃಷ್ಣ ಕಾಂಗ್ರೆಸ್‌ಗೆ

Continue Reading
Advertisement
Dakshina Kannada District 1st PUC result 2023 declared; here how to check
ಶಿಕ್ಷಣ9 mins ago

1st PUC Result 2023 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

Producer K Manju from Padmanabha Nagar assembly constituency Entry into the political arena
ರಾಜಕೀಯ11 mins ago

K. Manju: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ನಿರ್ಮಾಪಕ ಕೆ ಮಂಜು? ರಾಜಕೀಯ ಅಖಾಡಕ್ಕೆ ಎಂಟ್ರಿ?

is State is Impotent? why did stop hate speech, asks supreme Court
ಕೋರ್ಟ್14 mins ago

Supreme Court: ದ್ವೇಷ ಭಾಷಣ ತಡೆಗೆ ಸರ್ಕಾರಕ್ಕೆ ಶಕ್ತಿ ಇಲ್ಲವೇ?: ಕೇಂದ್ರ ವಿರುದ್ಧ ಸುಪ್ರೀಂ ಕೋರ್ಟ್ ಗರಂ

karnataka election AT Ramaswamy and NY Gopalakrishna resigns
ಕರ್ನಾಟಕ22 mins ago

Karnataka Election: ಜೆಡಿಎಸ್‌, ಬಿಜೆಪಿಯ ತಲಾ ಒಂದು ವಿಕೆಟ್‌ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ

T Chandrasekhar Former city council president Hiriyur
ಕರ್ನಾಟಕ33 mins ago

Hiriyur News: ಕಾಂಗ್ರೆಸ್ ಸೇರಿದ ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್; ಬಿಜೆಪಿಗೆ ಆಘಾತ

MLA scrapes off the asphalt Of Road In Uttar Pradesh Video Viral
ದೇಶ35 mins ago

Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!

IPL 2023: Dhoni injured; Doubt for the first game
ಕ್ರಿಕೆಟ್36 mins ago

IPL 2023: ಧೋನಿಗೆ ಗಾಯ; ಮೊದಲ ಪಂದ್ಯಕ್ಕೆ ಅನುಮಾನ; ಸ್ಟೋಕ್ಸ್​ ನಾಯಕತ್ವ ಸಾಧ್ಯತೆ

WinLife Trust shivamogga
ಆರೋಗ್ಯ40 mins ago

Shivamogga News: ವಿನ್‌ಲೈಫ್ ಟ್ರಸ್ಟ್ ವತಿಯಿಂದ ಏ. 2ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ

NY Gopalakrishna resigns
ಉತ್ತರ ಕನ್ನಡ40 mins ago

Karnataka Elections : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್‌ವೈ ಗೋಪಾಲಕೃಷ್ಣ; ಕಾಂಗ್ರೆಸ್‌ ಸೇರಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ!

Question paper leak
ಕರ್ನಾಟಕ48 mins ago

SSLC Exam 2023: ಕಲಬುರಗಿಯಲ್ಲಿ ಎಸ್ಎಸ್ಎಲ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ವಾಟ್ಸಾಪ್‌ನಲ್ಲಿ ಹರಿದಾಡಿದ ಕನ್ನಡ ಪೇಪರ್‌

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Sphoorti Salu
ಸುವಚನ9 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ20 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ1 day ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!