Site icon Vistara News

Karnataka Election | ಕರ್ನಾಟಕದಲ್ಲೂ ಬಿಜೆಪಿಯನ್ನು ಜನ ಕಸದ ಬುಟ್ಟಿಗೆ ಎಸೆಯುತ್ತಾರೆ: ಕಾಂಗ್ರೆಸ್‌ ಟ್ವೀಟ್‌

Congress BJP ಕಾಂಗ್ರೆಸ್‌ ಟ್ವೀಟ್‌

ಬೆಂಗಳೂರು: ಗುಜರಾತ್ ಫಲಿತಾಂಶ ಮುಂದಿನ ಕರ್ನಾಟಕ ವಿಧಾಸಭಾ ಚುನಾವಣೆಗೆ (Karnataka Election) ದಿಕ್ಸೂಚಿ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕಿಡಿಕಾರಿರುವ ರಾಜ್ಯ ಕಾಂಗ್ರೆಸ್‌, ಟ್ವೀಟ್‌ ಮೂಲಕ ತಿರುಗೇಟು ನೀಡಿದೆ. ಕೇವಲ ಗುಜರಾತ್‌ ಫಲಿತಾಂಶವನ್ನು ಮಾತ್ರ ನೋಡಬೇಡಿ, ಹಿಮಾಚಲ ಪ್ರದೇಶದ ರಿಸಲ್ಟ್‌ ಅನ್ನೂ ನೋಡಿ ಎಂದು ಕಾಲೆಳೆದಿದೆ.

ಕಾಂಗ್ರೆಸ್‌ ಟ್ವೀಟ್‌ನಲ್ಲೇನಿದೆ?
ಬಿಜೆಪಿ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ. ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ.

ಜನರ ಸ್ಪಂದನೆಯೇ ಇಲ್ಲದ ಖಾಲಿ ಕುರ್ಚಿಗಳ ಸಮಾವೇಶಗಳನ್ನು ಮಾಡಿದ ಬಿಜೆಪಿ ಪಕ್ಷದವರು ಮತ್ತೆ ಗೆಲ್ಲುತ್ತೇವೆ ಎಂದು ಹೇಳುತ್ತಿರುವುದು ಪರಮಹಾಸ್ಯ. ಕುರ್ಚಿಗಳು ಮತ ಹಾಕುವುದಿಲ್ಲ ಎಂಬುದನ್ನು ಬಿಜೆಪಿ ನಾಯಕರು ಮನಗಾಣಲಿ! ಪ್ರಧಾನಿಯ ಮೆಗಾ ರೋಡ್ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ? ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವಾಗಿದೆಯಲ್ಲವೇ? ಎಂದು ಟ್ವೀಟ್‌ ಮೂಲಕ ರಾಜ್ಯ ಬಿಜೆಪಿಯನ್ನು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ಸಾಮಾನ್ಯ ಜನರ ಗೆಲುವು- ಡಿ.ಕೆ. ಶಿವಕುಮಾರ್
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಪ್ರಗತಿ ಮತ್ತು ಶಾಂತಿಯನ್ನು ಬಯಸುವ ಸಾಮಾನ್ಯ ಜನರ ಗೆಲುವಾಗಿದೆ. ಪಕ್ಷವು ಎಂದಿನಂತೆ ಜನರಿಗೆ ಸಮೃದ್ಧಿಯ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ ಎಂಬುದು ನನಗೆ ಖಾತ್ರಿಯಿದೆ. ಈ ಗಮನಾರ್ಹ ಗೆಲುವಿಗಾಗಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ | Himachal Election Result | ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಗೆಲುವು, ಕಾರಣಗಳು ಹಲವು!

Exit mobile version