Site icon Vistara News

Karnataka Election: ವಿವಿಧೆಡೆ ಪಕ್ಷಗಳ ಕಾರ್ಯಕರ್ತರ ಚಕಮಕಿ; ಬಿಜೆಪಿ- ಕಾಂಗ್ರೆಸ್‌ ಬೆಂಬಲಿಗರಿಗೆ ಹಲ್ಲೆ, ಗಾಯ

party workers

ದಾವಣಗೆರೆ/ವಿಜಯನಗರ: ರಾಜ್ಯದ ಎರಡು ಕಡೆ ಎರಡು ರಾಜಕೀಯ ಪಕ್ಷಗಳ ಬೆಂಬಲಿಗರು ಚಕಮಕಿ ಮಾಡಿಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ.

ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಾಳು ಮಧು (24) ಅವರನ್ನು ಆಸ್ಪತ್ರೆ ಸೇರಿಸಲಾಗಿದೆ. ಪ್ರವೀಣ್, ಪ್ರಕಾಶ್, ತೀರ್ಥಲಿಂಗ ಸೇರಿ ಕೆಲ‌ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ಘಟನೆ ನಡೆದಿದೆ. ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶಾಂತನಗೌಡ ಗೆದ್ದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ‌ ಪಟಾಕಿ ಹಚ್ಚಿದ ವಿಚಾರಕ್ಕೆ ಜಗಳ ಶುರುವಾಗಿದೆ. ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿಗೆ ಬೆಂಬಲಿಸಿದ್ದಕ್ಕೆ ಹಲ್ಲೆ

ವಿಜಯನಗರ: ಬಿಜೆಪಿಗೆ ಬೆಂಬಲ ನೀಡಿದ್ದೀರಿ ಎಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಗೊಂಡವನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ, ಭರತ್ ಎಂಬ ಯುವಕ ಬಿಜೆಪಿಗೆ ಬೆಂಬಲ ನೀಡಿದ್ದಾನೆ ಎಂದು ಆರೋಪಿಸಿ ಕಾಂಗ್ರೆಸ್‌ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಹಲ್ಲೆ ಮಾಡಿದವರು, ಹಲ್ಲೆಗೊಳಗಾದವರು ಇಬ್ಬರೂ ದೂರು ಪ್ರತಿದೂರು ನೀಡಿದ್ದಾರೆ. ಗಾಯಾಳು ಹೊಸಪೇಟೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು, ಹೊಸಪೇಟೆಯ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿವೆ.

ಇದನ್ನೂ ಓದಿ: Karnataka Election Results: ಕೆ.ಆರ್‌.ನಗರದಲ್ಲಿ ಸಾ.ರಾ.ಮಹೇಶ್ ಸೋಲಿಗೆ ಮನನೊಂದು ಅಭಿಮಾನಿ ಆತ್ಮಹತ್ಯೆಗೆ ಯತ್ನ

Exit mobile version