ಮಂಡ್ಯ: ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷಗಳು ರೈತರಿಗೆ ಮಾರಕವಾಗಿವೆ. ಮುಂಬರುವ ಚುನಾವಣೆಯಲ್ಲಿ (Karnataka Election) ಜನ ಈ ರಾಷ್ಟ್ರೀಯ ಪಕ್ಷಗಳನ್ನು ಜನ ತಿರಸ್ಕರಿಸಿ ಪ್ರಾದೇಶಿಕ ಪಕ್ಷಕ್ಕೆ ಒತ್ತು ಕೊಡಬೇಕು. ಜನರ ನೋವಿಗೆ ಸ್ಪಂದಿಸುವ ಪಕ್ಷವೆಂದರೆ ಅದು ಜೆಡಿಎಸ್ ಮಾತ್ರವೇ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ನಾಗಮಂಗಲ ವಿಧಾನಸಭಾ ಕ್ಷೇತ್ರದ ಮರಳಿಗ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನರ ಪ್ರೀತಿ ವಿಶ್ವಾಸ ಕಡಿಮೆಯಾಗಿಲ್ಲ. ಜನರ ಪ್ರೀತಿ ಮೊದಲಿಗಿಂತಲೂ ದುಪ್ಪಟ್ಟು ಹೆಚ್ಚಾಗಿದೆ. ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ಜನಕ್ಕೆ ಏನೂ ಅನುಕೂಲ ಮಾಡಿಲ್ಲ. ರೈತರಿಗೆ ಏನಾದರೂ ಅನುಕೂಲ ಮಾಡಿಕೊಟ್ಟಿದೆಯೇ? ಎಂದು ಪ್ರಶ್ನೆ ಮಾಡಿದರು.
ಜೆಡಿಎಸ್ ಭದ್ರಕೋಟೆಯನ್ನು ಯಾರಿಂದಲೂ ಛಿದ್ರ ಮಾಡಲು ಸಾಧ್ಯವಿಲ್ಲ. ಭದ್ರಕೋಟೆ ಬಿಗಿ ಮಾಡಲು ಜನರು, ಕಾರ್ಯಕರ್ತರು ಇದ್ದಾರೆ. ಚುನಾವಣೆಯಲ್ಲಿ ಜನರೇ ತೀರ್ಮಾನ ಮಾಡುತ್ತಾರೆ. ರಾಷ್ಟ್ರೀಯ ಪಕ್ಷ ತಿರಸ್ಕರಿಸಿ ಪ್ರಾದೇಶಿಕ ಪಕ್ಷಕ್ಕೆ ಒತ್ತು ಕೊಡಬೇಕಿದೆ ಎಂದು ಹೇಳಿದರು.
ಮಂಡ್ಯದಲ್ಲಿ ರೈತರು ಹೋರಾಟ ಮಾಡುತ್ತಿದ್ದರೂ ಈ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ಉಸ್ತುವಾರಿ ಸಚಿವರು ಮಾತನಾಡುತ್ತಿಲ್ಲ. ಕಾರ್ಖಾನೆ ಮಾಲೀಕರೆಲ್ಲ ಬಿಜೆಪಿ ಮಂತ್ರಿಗಳಾಗಿದ್ದಾರೆ. ಎಲ್ಲಿ ರೈತರ ಬೇಡಿಕೆಯನ್ನು ಈಡೇರಿಸುತ್ತಾರೆ ಎಂದು ಎಚ್‌ಡಿಕೆ ಪ್ರಶ್ನೆ ಮಾಡಿದರು.
ಇದನ್ನೂ ಓದಿ | ಅಮ್ಮನನ್ನು ಥಳಿಸಿ, ಮನೆ ದೋಚಿ ಓಡುತ್ತಿದ್ದ ಕಳ್ಳರನ್ನು ಬೆನ್ನಟ್ಟಿದ 9ವರ್ಷದ ಬಾಲಕಿ; ರಸ್ತೆ ಮಧ್ಯೆ ನಾಟಕವಾಡಿದ ಚೋರರು