ಬೆಂಗಳೂರು: ರಾಜ್ಯ ಆಡಳಿತವನ್ನು ನಿರ್ಣಯಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಬೆಳಗಾವಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ (Karnataka Election results 2023) ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. 18 ಕ್ಷೇತ್ರಗಳಲ್ಲಿ ಕಳೆದ ಬಾರಿ ಬಿಜೆಪಿ 12, ಕಾಂಗ್ರೆಸ್ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ ಈ ಬಾರಿ ಅದು ಕಡಿಮೆಯಾಗುವ ಎಲ್ಲ ಸಾಧ್ಯತೆ ಇದೆ. ಈ ಬಾರಿ ಈಗಿನ ಲೆಕ್ಕಾಚಾರದ ಪ್ರಕಾರ, 10 ಕಾಂಗ್ರೆಸ್ ಮತ್ತು ಎಂಟು ಕಡೆ ಬಿಜೆಪಿ ಮುನ್ನಡೆಯಲ್ಲಿದೆ.
ಅದರಲ್ಲೂ ಮುಖ್ಯವಾಗಿ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಭಾರಿ ಹಿನ್ನಡೆಯಾಗಿದೆ. ಇಲ್ಲಿ ಕಾಂಗ್ರೆಸ್‌ನ ಮಹಾಂತೇಶ್ ಕಡಾಡಿ ಅವರು 17,264 ಮತಗಳನ್ನು ಪಡೆದಿದ್ದರೆ, ರಮೇಶ್ ಜಾರಕಿಹೊಳಿ ಅವರಿಗೆ 16958 ಮತಗಳನ್ನು ಪಡೆದಿದ್ದಾರೆ.
ಇತ್ತ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುನ್ನಡೆಯಲ್ಲಿದ್ದಾರೆ.
ಯಮಕನಮರಡಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಮುನ್ನಡೆ ಒದಗಿದೆ.
ಕುಡಚಿ ಕ್ಷೇತ್ರದಲ್ಲಿ ಬಿ. ರಾಜೀವ್ ದೊಡ್ಡ ಮಟ್ಟದ ಹಿನ್ನಡೆಯಲ್ಲಿದ್ದಾರೆ.
ಕಾಗವಾಡ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಜು ಗೌಡ ಕಾಗೆ ಅವರು ಬಿಜೆಪಿಯ ಶ್ರೀಮಂತ ಪಾಟೀಲ್ ಅವರ ವಿರುದ್ಧ ಮುನ್ನಡೆಯಲ್ಲಿದ್ದಾರೆ.