ಕನಕಗಿರಿ: ಕನಕಗಿರಿ ಶಾಸಕ ಶಿವರಾಜ ತಂಗಡಗಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಕನಕಗಿರಿ ಬ್ಲಾಕ್ ಕಾಂಗ್ರೆಸ್ (Block Congress) ಅಧ್ಯಕ್ಷ ಕೆ. ಗಂಗಾಧರಸ್ವಾಮಿ ಒತ್ತಾಯಿಸಿದರು.
ಪಟ್ಟಣದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅತ್ಯಧಿಕ ಮತಗಳ ಅಂತರದಲ್ಲಿ ಅಭೂತಪೂರ್ವ ಗೆಲುವು ನೀಡಿದ ಮತದಾರ ಬಂಧುಗಳಿಗೆ ಹಾಗೂ ಹಗಲಿರುಳು ಎನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಬಳಿಕ ಅವರು ಮಾತನಾಡಿದರು.
ಇದನ್ನೂ ಓದಿ: Weather Report : ರಾಮನಗರ, ಮೈಸೂರು ಸೇರಿ ಹಲವೆಡೆ ಗುಡುಗು ಮಳೆ; ಯಾವ ಜಿಲ್ಲೆಗಳಲ್ಲಿ ಉರಿ ಬಿಸಿಲು?
ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಶಿವರಾಜ ತಂಗಡಗಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವಲ್ಲಿ ಶ್ರಮ ವಹಿಸಿದ್ದಾರೆ. ಕನಕಗಿರಿ ವಿಧಾನಸಭಾ ಕ್ಷೇತ್ರ ಮಳೆಯಾಧಾರಿತ ಪ್ರದೇಶವಾಗಿದ್ದು ಈ ಭಾಗದ ಅಭಿವೃದ್ಧಿಯಾಗಬೇಕಾದರೆ, ಈಗಾಗಲೇ ಎರಡು ಬಾರಿ ಸಚಿವ ಸ್ಥಾನಮಾನವನ್ನು ನಿಭಾಯಿಸಿರುವ, ನಿಪುಣತೆ ಹೊಂದಿರುವ ಶಿವರಾಜ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಬಳಿಕ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರೇಶ್ ಸಮಗಂಡಿ ಮತ್ತು ತಾಲೂಕ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವಂತಗೌಡ ಪಾಟೀಲ್ ಮಾತನಾಡಿದರು.
ಇದನ್ನೂ ಓದಿ: ನನ್ನ ದೇಶ ನನ್ನ ದನಿ: “ಬೇಟೆಯಾಡಲು ಹೋಗಿ ಅಜಂತಾ ಕಂಡುಹಿಡಿದನಲ್ಲಾ ಒಬ್ಬ ಬ್ರಿಟಿಷ್ ಅಧಿಕಾರಿ, ಅದು ಅದ್ಭುತ”!
ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ರವಿ ಪಾಟೀಲ್, ಪಟ್ಟಣ ಪಂಚಾಯತ್ ಸದಸ್ಯರಾದ ರಾಜಸಾಬ್ ನಂದಾಪುರ್, ಸಂಗಪ್ಪ ಸಜ್ಜನ್, ಅನಿಲ್ ಬಿಜ್ಜಳ, ಶರಣೆಗೌಡ ಪಾಟೀಲ್, ಕಂಠಿರಂಗ ನಾಯಕ ಪಂಪಾಪತಿ ಹನುಮೇಶ ಹಡಪದ್, ಹೊನ್ನೂರಸಾಬ್ ಉಪ್ಪು, ಚಂದೂಸಾಬ್ ಗುರಿಕಾರ್, ಹೊನ್ನೂರ್ ಸಾಬ್ ಸೇರಿದಂತೆ ಇತರರು ಉಪಸ್ಥಿತರಿದ್ದರು.