Karnataka Election Results: ಕಾಂಗ್ರೆಸ್ ‌ಬೆನ್ನಿಗೆ ನಿಂತು, ಜೆಡಿಎಸ್‌ಗೆ ಕೈಕೊಟ್ಟ ಮುಸ್ಲಿಂ ಮತದಾರರು! - Vistara News

ಕರ್ನಾಟಕ

Karnataka Election Results: ಕಾಂಗ್ರೆಸ್ ‌ಬೆನ್ನಿಗೆ ನಿಂತು, ಜೆಡಿಎಸ್‌ಗೆ ಕೈಕೊಟ್ಟ ಮುಸ್ಲಿಂ ಮತದಾರರು!

Karnataka Electin Results: ಕಾಂಗ್ರೆಸ್ ಪರವಾಗಿ ಮತ್ತು ಜೆಡಿಎಸ್ ವಿರುದ್ಧವಾಗಿ ಮುಸ್ಲಿಮ್ ಸಮುದಾಯವು (Muslim Community) ಈ ಬಾರಿ ಚುನಾವಣೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದೆ.

VISTARANEWS.COM


on

Karnataka Election Results, Muslim community totally supported to congress
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು, ಕರ್ನಾಟಕ: ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಜಯದೊಂದಿಗೆ ಇತಿಹಾಸವನ್ನು ಸೃಷ್ಟಿಸಿದೆ. ದಶಕಗಳ ಬಳಿಕ ಭಾರೀ ಗೆಲುವು ದೊರೆತಿದೆ. ಈ ವಿಜಯಕ್ಕೆ ಹಲವಾರು ಕಾರಣಗಳಿವೆ. ಈ ಪೈಕಿ ಮುಸ್ಲಿಮ್ ಮತದಾರರು (Muslim Community) ಕಂಪ್ಲೀಟ್ ಆಗಿ ಕಾಂಗ್ರೆಸ್‌ ಕಡೆಗೆ ವಾಲಿದ್ದಾರೆ. ವಿಶೇಷವಾಗಿ ಜೆಡಿಎಸ್‌ ಪಕ್ಷವನ್ನು ಮುಸ್ಲಿಮ್ ಮತದಾರರು ಸಂಪೂರ್ಣವಾಗಿ ತೊರೆದಿರುವಂತೆ ಕಾಣುತ್ತಿದೆ. ಜೆಡಿಎಸ್ ಪ್ರಾಬಲ್ಯದ ಹಳೇ ಮೈಸೂರು ಭಾಗದಲ್ಲೇ ಮುಸ್ಲಿಮ್ ಸಮುದಾಯದ ಸಂಪೂರ್ಣ ಕೈಕೊಟ್ಟಿದೆ. ಈ ಭಾಗದಲ್ಲಿ ಶೇ.11ರಷ್ಟು ಮುಸ್ಲಿಮ್ ಜನಸಂಖ್ಯೆ ಇದ್ದು, ಕಾಂಗ್ರೆಸ್ ಪರವಾಗಿ ವಾಲಿದ್ದರಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೀಟುಗಳನ್ನು ಗೆದ್ದುಕೊಳ್ಳಲು ಕೈಗೆ ಸಾಧ್ಯವಾಗಿದೆ(Karnataka Election Results).

ಜೆಡಿಎಸ್‌ ಹಳೇ ಮೈಸೂರು ಭಾಗದಲ್ಲಿ ಸಾಮಾನ್ಯವಾಗಿ ಒಕ್ಕಲಿಗ ಪ್ಲಸ್ ಮುಸ್ಲಿಮ್ ಸಮೀಕರಣದ ರಾಜಕಾರಣ ಮಾಡುತ್ತ ಬಂದು, ಕನಿಷ್ಠ 30 ಸೀಟುಗಳನ್ನುಪಡೆದುಕೊಳ್ಳುತ್ತಿತ್ತು. ಆದರೆ, ಬಾರಿ ಚಿತ್ರಣ ಉಲ್ಟಾ ಆಗಿದೆ. ಕಾಂಗ್ರೆಸ್ ಪಕ್ಷವು ಒಟ್ಟು 15 ಮುಸ್ಲಿಮ್ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಈ ಪೈಕಿ 9 ಜನರು ಆಯ್ಕೆಯಾಗಿದ್ದಾರೆ. ಇದೇ ವೇಳೆ, 22 ಮುಸ್ಲಿಮ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೂ ಜೆಡಿಎಸ್ ಒಬ್ಬರೂ ಗೆಲುವು ತಂದುಕೊಟ್ಟಿಲ್ಲ. 2018ರಲ್ಲಿ ಒಟ್ಟು ಏಳು ಮುಸ್ಲಿಮ್ ಅಭ್ಯರ್ಥಿಗಳು ಗೆದ್ದಿದ್ದರು. ಈ ಪೈಕಿ ಐವರು ಕಾಂಗ್ರೆಸ್ ಹಾಗೂ ಇಬ್ಬರು ಜೆಡಿಎಸ್‌ನಿಂದ ಗೆಲವು ಸಾಧಿಸಿದ್ದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 17 ಮತ್ತು ಜೆಡಿಎಸ್ 8 ಮುಸ್ಲಿಮ್ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದವು. 2018 ಆಗಲೀ ಪ್ರಸಕ್ತ ಚುನಾವಣೆಯಾಗಲೀ ಬಿಜೆಪಿ ಒಬ್ಬರಿಗೂ ಟಿಕೆಟ್ ನೀಡಿರಲಿಲ್ಲ!

2011ರ ಜನಗಣತಿಯ ಪ್ರಕಾರ, ಕರ್ನಾಟಕದಲ್ಲಿ ಸುಮಾರು ಶೇ.13ರಷ್ಟು ಮುಸ್ಲಿಮ್ ಜನರಿದ್ದಾರೆ. ರಾಜ್ಯದ ಸುಮಾರು 65 ಕ್ಷೇತ್ರಗಳಲ್ಲಿ ಮುಸ್ಲಿಮ್ ಮತದಾರರು ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾರೆ. ಈ ಬಾರಿ ಕಾಂಗ್ರೆಸ್ ಈ ಕ್ಷೇತ್ರಗಳ ಪೈಕಿ ಅರ್ಧದಷ್ಟು ತನ್ನ ಬುಟ್ಟಿಗೆ ಹಾಕಿಕೊಂಡಿದೆ. ಕರಾವಳಿಯಲ್ಲೂ ಮುಸ್ಲಿಮ್ ಮತದಾರರು ಸಂಖ್ಯೆ ಗಣನೀಯವಾಗಿದ್ದರೂ, ಅಭ್ಯರ್ಥಿಯ ಹಣೆಬರಹವನ್ನು ರೂಪಿಸಲು ಅದು ಸಾಕಾಗವುದಿಲ್ಲ. 2018ರಲ್ಲಿ ಒಟ್ಟು 19 ಸೀಟುಗಳ ಪೈಕಿ 16ರಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ ಕಣಕ್ಕಿಳಿಸಿದ್ದ 15 ಮುಸ್ಲಿಮ್ ಅಭ್ಯರ್ಥಿಗಳ ಪೈಕಿ ಮೂವರು ಕರಾವಳಿಯಲ್ಲೇ ಸ್ಪರ್ಧಿಸಿದ್ದರು!

ಇದನ್ನೂ ಓದಿ: Athani Election Results: 75673 ಮತಗಳ ಭಾರೀ ಅಂತರದಲ್ಲಿ ಅಥಣಿ ಕ್ಷೇತ್ರದಲ್ಲಿ ಗೆದ್ದ ಬೀಗಿದ ಲಕ್ಷ್ಮಣ್ ಸವದಿ!

ಹಿಜಾಬ್, ಹಲಾಲ್, ಮೀಸಲಾತಿ ರದ್ದು ಮ್ಯಾಟರ್ ಆಯ್ತಾ?

ಬಿಜೆಪಿ ಸರ್ಕಾರವು ಮೊದಲಿನಿಂದಲೂ ನೈಜ ವಿಷಯಗಳನ್ನು ಮೆರ ಮಾಚಿ ಹಿಜಾಬ್, ಹಲಾಲ್ ಮತ್ತು ಮುಸ್ಲಿಮ್ ಮೀಸಲಾತಿ ವಿಷಯದಲ್ಲಿ ಹೆಚ್ಚು ಕಾಲ ಕಳೆಯಿತು. ಆ ಮೂಲಕ ಹಿಂದೂ ಮತಗಳನ್ನು ಸಂಪೂರ್ಣವಾಗಿ ಒಂದು ಕಡೆ ಮಾಡುವ ಅವರ ಪ್ರಯತ್ನ ಕೈಗೂಡಲಿಲ್ಲ. ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಬ್ಯಾನ್ ಮಾಡಲಾಯಿತು. ಈ ಪ್ರಕರಣವೀಗ ಸುಪ್ರೀಂ ಕೋರ್ಟ್‌ನಲ್ಲಿದೆ. ಮತ್ತೊಂದೆಡೆ, ಬಿಜೆಪಿ ಬೆಂಬಲಿತ ಹಿಂದೂ ಸಂಘಟನೆಗಳು ನಿತ್ಯ ಹಲಾಲ್ ವಿಷಯವನ್ನು ಚರ್ಚೆಯಲ್ಲಿಟ್ಟಿದ್ದವು. ಯುಗಾದಿ, ದೀಪಾವಳಿ ಹಬ್ಬ ಬಂದಾಗಲೆಲ್ಲ ಹಲಾಲ್ ವಿಷಯವೇ ಪ್ರಧಾನ್ಯತೆಯನ್ನು ಪಡೆದುಕೊಳ್ಳುತ್ತಿತ್ತು. ಇನ್ನು ಬೊಮ್ಮಾಯಿ ಸರ್ಕಾರವೇ, ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4 ಮೀಸಲು ರದ್ದು ಮಾಡಿ, ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿದ್ದರು. ಸರ್ಕಾರ ಈ ನಿರ್ಧಾರ ಕೈಗೊಂಡಾಗ ಮುಸ್ಲಿಮ್ ಸಮುದಾಯದಿಂದ ಯಾವುದೇ ಪ್ರತಿರೋಧವೇ ಕಂಡು ಬಂದಿರಲಿಲ್ಲ. ಆದರೆ, ಅವರು ಮತಪೆಟ್ಟಿಗೆಯ ಮೂಲಕ ತಮ್ಮ ನಿರ್ಧಾರವನ್ನು ತಿಳಿಸಿರುವಂತೆ ಕಾಣುತ್ತಿದೆ!

ಕರ್ನಾಟಕ ಚುನಾವಣಾ ಫಲಿತಾಂಶ ಹಾಗೂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

Lok Sabha Election 2024 : ಏ.13ರಂದು ಬೆಂಗಳೂರಿನ ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ರೂಪಾಯಿಗೆ ವಾರಸುದಾರರು ಯಾರು ಎಂಬುದು ನಿಗೂಢವಾಗಿಯೇ ಉಳಿದಿದೆ. ಈ ನಡುವೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಚುನಾವಣಾಧಿಕಾರಿ ಕೊಟ್ಟ ದೂರನ್ನು ಆಧರಿಸಿ ಸ್ಕೂಟರ್‌ ಹಾಗೂ ಕಾರು ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

VISTARANEWS.COM


on

By

Lok Sabha Election 2024
Koo

ಬೆಂಗಳೂರು: ಚುನಾವಣಾ ಸಮಯದಲ್ಲಿ (Lok Sabha Election 2024) ಹಣದ ಹೊಳೆಯೇ (Lok Sabha Election 2024) ಹರಿಯುತ್ತದೆ. ಸದ್ಯ ಜಯನಗರ ಚೆಕ್‌ಪೋಸ್ಟ್‌ನಲ್ಲಿ ಕಾರೊಂದರಲ್ಲಿ ಸಿಕ್ಕಿದ ಕೋಟ್ಯಂತರ ರೂ. ಹಣದ ಬ್ಯಾಗ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಅಧಿಕಾರಿ ಎನ್‌ ಮಂಜುನಾಥ್‌ ಕೊಟ್ಟ ದೂರನ್ನು ಆಧರಿಸಿ ಏ.15ರಂದು ಸ್ಕೂಟರ್‌ ಹಾಗೂ ಕಾರು ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿ, ಇಬ್ಬರಿಗೂ ನೋಟಿಸ್‌ ನೀಡಿದ್ದಾರೆ.

ವಶಕ್ಕೆ ಪಡೆದಿರುವ ಕೋಟ್ಯಂತರ ರೂ. ಹಣವನ್ನು ನಗರ ಚುನಾವಣಾಧಿಕಾರಿ ಮನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ. ಕಾರಿನಲ್ಲಿ ಸಿಕ್ಕ ಹಣವನ್ನು ಎಣಿಕೆ ಮಾಡಿದಾಗ 1,34,99,000 ರೂ. ಹಣ ಪತ್ತೆಯಾಗಿದ್ದು, ಜತೆಗೆ ಬಿಬಿಎಂಪಿಗೆ ಸಂಬಂಧಿಸಿದ ಕೆಲ ದಾಖಲೆಗಳು ಸಿಕ್ಕಿವೆ. ಇವೆಲ್ಲವನ್ನೂ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು ಪ್ರಕರಣದ ವರದಿಯನ್ನು ಕೊಟ್ಟಿದ್ದಾರೆ.

ಇನ್ನೂ ಕ್ಲಾಸ್ ಒನ್ ಗುತ್ತಿಗೆದಾರನಿಗೆ ಸೇರಿದ ಹಣ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂ. ಹಣವು ಯಾವುದಾದರು ಪಕ್ಷಕ್ಕೆ ಸೇರಿದ್ದಾ? ವೈಯಕ್ತಿಕ ವ್ಯವಹಾರದ್ದ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಸೀಜ್‌ ಮಾಡಿರುವ ಸ್ಕೂಟರ್‌ ಹಾಗೂ ಕಾರಿನ ಮಾಲೀಕರಾದ ಸೋಮಶೇಖರ್ ಮತ್ತು ಧನಂಜಯ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

ಆ ದಿನ ನಡೆದಿದ್ದು ಏನು? ದೂರಿನಲ್ಲಿ ಏನಿದೆ?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬೆಂಗಳೂರು ಪ್ಲೈಯಿಂಗ್‌ ಸ್ಕ್ವಾಡ್‌ ತಂಡ 3ರ ಟೀಮ್‌ ಲೀಡರ್‌ ಆಗಿ ನೇಮಕಗೊಂಡಿರುವ ಮಂಜುನಾಥ್‌ ಪ್ರಕರಣ ಸಂಬಂಧ ದೂರು ನೀಡಿದ್ದಾರೆ. ಆ ದೂರಿನನ್ವಯ ಏ.13ರ ಬೆಳಗ್ಗೆ 11:50ರ ಸುಮಾರಿಗೆ ಜಯನಗರ 4ನೇ ಬ್ಲಾಕ್‌ ಸಮೀಪ ಅಪರಿಚಿತ ವ್ಯಕ್ತಿಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ಹೆಚ್ಚಿನ ಪ್ರಮಾಣದ ನಗದನ್ನು ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ನೋಡಲ್‌ ಅಧಿಕಾರಿ ನಿಖಿತ ಚಿನ್ನಸ್ವಾಮಿ ಅವರು ತೆರಳಿದ್ದರು.

ಈ ವೇಳೆ ನೀಲಿ ಬಣ್ಣದ ಆಕ್ಸಸ್‌ ಗಾಡಿಯಲ್ಲಿ ವ್ಯಕ್ತಿಯೊಬ್ಬ ಬ್ಯಾಗ್‌ ಇಟ್ಟುಕೊಂಡಿದ್ದ. ನೋಡಲ್‌ ಅಧಿಕಾರಿ ನಿಖಿತ ಅವರು ಆತನ ಬಳಿ ಹೋಗಿ ವಿಚಾರಿಸಲು ಮುಂದಾಗುತ್ತಿದ್ದಂತೆ, ಸ್ಕೂಟರ್‌ ಹಾಗೂ ಹಣದ ಬ್ಯಾಗ್‌ ಬಿಟ್ಟು ಪರಾರಿ ಆಗಿದ್ದ. ಅದೇ ರಸ್ತೆಯಲ್ಲಿದ್ದ ಕೆಂಪು ಬಣ್ಣದ ವೋಕ್ಸ್‌ ವ್ಯಾಗನ್‌ ಕಾರು ಮತ್ತು ರಿಜಿಸ್ಟೇಷನ್‌ ನಂಬರ್‌ ಇಲ್ಲದ ಬಿಳಿ ಬಣ್ಣದ ಬೆಂಜ್‌ ಕಾರಿನಲ್ಲೂ ಗರಿ ಗರಿ ನೋಟು ಪತ್ತೆಯಾಗಿತ್ತು.

ಮೊದಮೊದಲು ಬ್ಯಾಗ್‌ನಲ್ಲಿ ಏನಿದೆ ತೋರಿಸಿ ಎಂದಾಗ ಮಾವಿನ ಹಣ್ಣಿನ ಬ್ಯಾಗ್‌ ಎಂದಿದ್ದರು. ಯಾವಾಗ ನೋಡೆಲ್‌ ಅಧಿಕಾರಿ ನಿಖಿತ ಅವರು ಕಾರು ಪರಿಶೀಲನೆ ಮಾಡಲು ಹೋದಾಗ ಕಾರಲ್ಲಿದ್ದ ಐವರು ಕಾಲ್ಕಿತ್ತಿದ್ದರು. ಒಟ್ಟು 1,34,99,000 ಹಣ ಪತ್ತೆಯಾಗಿದೆ. ಜತೆಗೆ ವೋಕ್ಸ್‌ ವ್ಯಾಗನ್‌ ಕಾರಲ್ಲಿ ಬಿಬಿಎಂಪಿ ದಾಖಲಾತಿಗಳು ಹಾಗೂ ರಿಜಿಸ್ಟೇಷನ್‌ ನಂಬರ್‌ ಇಲ್ಲದ ಕಾರಲ್ಲಿ ಒಂದು ಮೊಬೈಲ್‌, ಒಂದು ಕಾರ್ಡ್‌ ಪೌಚ್‌ ದೊರೆತಿದೆ. ಇದೆಲ್ಲವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Dwarakish: ಕನ್ನಡ ಸಿನಿಮಾದ ʼಪ್ರಚಂಡ ಕುಳ್ಳʼ ದ್ವಾರಕೀಶ್ ಬಗ್ಗೆ ನೀವರಿಯದ 12 ವಿಶಿಷ್ಟ ಸಂಗತಿಗಳು ಇಲ್ಲಿವೆ

Actor Dwarakish: ಹಲವು ಹೊಸ ನಟ ನಟಿಯರನ್ನು ಕನ್ನಡಕ್ಕೆ ತಂದ, ಹಲವು ಹೊಸ ಸಾಹಸಗಳನ್ನು ಮಾಡಿದ ಕನ್ನಡದ ಕುಳ್ಳ ದ್ವಾರಕೀಶ್‌ ಅವರ ಬಗ್ಗೆ ನೀವು ತಿಳಿದಿಲ್ಲದಿರಬಹುದಾದ 12 ವಿಶಿಷ್ಟ ಸಂಗತಿಗಳು ಇಲ್ಲಿವೆ.

VISTARANEWS.COM


on

actor dwarakish
Koo

ಬೆಂಗಳೂರು: ಇಂದು ಮುಂಜಾನೆ ನಿಧನರಾದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ (Actor Dwarakish death) ಕನ್ನಡ ಚಿತ್ರರಂಗದಲ್ಲಿ (Kannada Film industry) ಹಲವು ಹೊಸತುಗಳನ್ನು ತಂದವರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರ ನಿಧನದ ಸುಳ್ಳು ಸುದ್ದಿಯೂ (Fake news) ಈ ಹಿಂದೊಮ್ಮೆ ಹರಡಿತ್ತು. ಆಗ ಅವರು “ನಾನಿನ್ನೂ ಬದುಕಿದ್ದೇನೆ” ಎಂದು ಪ್ರತಿಕ್ರಿಯೆ ನೀಡಿದ್ದರು. ಇಂದಿನ ಸುದ್ದಿ ಮಾತ್ರ ವಿಷಾದಕರವಾಗಿ ನಿಜವೇ ಆಗಿದೆ.

ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ರಾಜನಂತೆ ಮೆರೆದವರು. ಹಲವು ನಾಯಕ ನಟರು ನಿರ್ಮಾಣ- ನಿರ್ದೇಶನಕ್ಕೆ ಇವರಿಗೆ ಕಾಲ್‌ಶೀಟ್‌ ನೀಡಿ ಕಾಯುತ್ತಿದ್ದರು. ಇಂಥ ʼಪ್ರಚಂಡ ಕುಳ್ಳʼನ ಬಗ್ಗೆ ನೀವರಿಯದ ಹಲವು ಸಂಗತಿಗಳು ಇಲ್ಲಿವೆ.

1) ನಿರ್ಮಾಪಕರಾಗಿ ಹಲವು ಕಲಾವಿದರನ್ನು ಚಿತ್ರರಂಗ ಪರಿಚಯಸಿದ್ದಾರೆ. ಶ್ರುತಿ ಎಂಬ ಅದ್ಭುತ ನಟಿಯನ್ನು ಚಿತ್ರರಂಗಕ್ಕೆ ಕರೆತಂದವರೇ ದ್ವಾರಕೀಶ್.‌ 1990ರಲ್ಲಿ ದ್ವಾರಕೀಶ್‌ ʼಪುದುವಸಂತಂʼ ತಮಿಳು ಚಿತ್ರವನ್ನು ʼಶ್ರುತಿʼ ಎಂಬ ಹೆಸರಿನಲ್ಲಿ ಕನ್ನಡದಲ್ಲಿ ರಿಮೇಕ್‌ ಮಾಡಿದರು. ಇದರಲ್ಲಿ ಶ್ರುತಿ ಎಂಬ ಹೊಸ ನಟಿಯನ್ನು ಕನ್ನಡಕ್ಕೆ ಪರಿಚಯಿಸಿದರು. ಅಲ್ಲಿಂದ ಮುಂದೆ ಶ್ರುತಿ ಕನ್ನಡ ಚಿತ್ರರಂಗದ ಇತಿಹಾಸವಾದರು.

2) 1964ರಲ್ಲಿ ʼವೀರ ಸಂಕಲ್ಪ’ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ನಟನಾಗಿ ಎಂಟ್ರಿ ಕೊಟ್ಟ ದ್ವಾರಕೀಶ್ ಮೊದಲು ಹಾಸ್ಯ ಕಲಾವಿದರಾಗಿ ಮಿಂಚಿದರು. ನಂತರ ನಿರ್ದೇಶನ ಹಾಗೂ ನಿರ್ಮಾಣಕ್ಕಿಳಿದರು. 1966ರಲ್ಲಿ ʼಮಮತೆಯ ಬಂಧನʼ ಸಿನಿಮಾವನ್ನು ಇನ್ನಿಬ್ಬರು ನಿರ್ಮಾಪಕರ ಜೊತೆ ಸೇರಿ ನಿರ್ಮಿಸಿದರು. 1985ರಲ್ಲಿ ʼನೀ ಬರೆದ ಕಾದಂಬರಿʼ ಮೂಲಕ ನಿರ್ದೇಶನಕ್ಕೆ ಕಾಲಿಟ್ಟ ದ್ವಾರಕೀಶ್‌ ಅವರು 19 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

3) 1973ರಲ್ಲಿ ʼಕೌಬಾಯ್‌ ಕುಳ್ಳʼ ಎಂಬ ಚಿತ್ರವನ್ನು ನಿರ್ಮಿಸಿ ನಟಿಸಿದರು. ಇದು ಕನ್ನಡದಲ್ಲಿ ಮೊದಮೊದಲ ಕೌಬಾಯ್‌ ಮಾದರಿಯ ಚಿತ್ರಗಳಲ್ಲಿ ಒಂದು. ದ್ವಾರಕೀಶ್‌ ಸ್ವತಃ ಇದರಲ್ಲಿ ಹೀರೋ ಆಗಿ ನಟಿಸಿದರು.

4) 1996ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾದರು. ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಸೂಪರ್ ಹಿಟ್ ಆಯಿತು. ವರನಟ ರಾಜ್‌ ಜೊತೆಗೆ ನಾಲ್ಕಾರು ಸಿನಿಮಾಗಳನ್ನು ಮಾಡಿ, ನಂತರ ಅವರು ರಾಜ್‌ ಕ್ಯಾಂಪ್‌ನಿಂದ ಬೇರೆಯಾದರು. ವಿಷ್ಣುವರ್ಧನ್‌ ಅವರಲ್ಲಿ ತಮ್ಮ ಜೊತೆಗಾರನನ್ನು ಕಂಡುಕೊಂಡರು.

5) ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ- ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು. ಮಧ್ಯೆ ಒಮ್ಮೆ ಇಬ್ಬರೂ ವಿರಸದಿಂದ ಬೇರ್ಪಟ್ಟು, ಮತ್ತೆ 2004ರಲ್ಲಿ ʼಆಪ್ತಮಿತ್ರʼ ಚಿತ್ರದಲ್ಲಿ ಒಂದಾದರು.

6) ʼಆಪ್ತಮಿತ್ರʼಕ್ಕೂ ಮೊದಲು ಹಲವು ಫಿಲಂಗಳನ್ನು ಮಾಡಿ ಕೈ ಸುಟ್ಟುಕೊಂಡಿದ್ದ ದ್ವಾರಕೀಶ್‌ ಅವರ ವಿನಂತಿಯ ಮೇರೆಗೆ, ಅವರಿಂದ ಒಂದು ರೂಪಾಯಿಯನ್ನೂ ಪಡೆಯದೆ ವಿಷ್ಣುವರ್ಧನ್‌ ಆಪ್ತಮಿತ್ರದಲ್ಲಿ ನಟಿಸಿದರು. ಅದರ ಯಶಸ್ಸಿನಿಂದ ದ್ವಾರಕೀಶ್‌ ಹಳೆಯ ಸಾಲಗಳನ್ನು ತೀರಿಸಿಕೊಂಡರು.

7) 1992ರಲ್ಲಿ ಶಶಿಕುಮಾರ್‌ ಅವರ ಜೊತೆಯಾಗಿ ʼಹೊಸ ಕಳ್ಳ ಹಳೆ ಕುಳ್ಳʼ ಎಂಬ ಸಿನಿಮಾ ಮಾಡಿ, ವಿಷ್ಣುವರ್ಧನ್‌ ಜೊತೆಗೆ ತಾವು ಮಾಡಿದ ಮ್ಯಾಜಿಕ್‌ ಅನ್ನು ಮರುಸೃಷ್ಟಿಸಲು ಯತ್ನಿಸಿದರು. ಅದು ಮಿಶ್ರಫಲ ನೀಡಿತು. ಶಶಿಕುಮಾರ್‌ ಬೇಡಿಕೆಯ ಹೀರೋ ಆದರು.

8) ಕನ್ನಡದಲ್ಲಿ ತನಗೆ ಸೂಕ್ತ ಮನ್ನಣೆ ಸಿಗುತ್ತಿಲ್ಲ ಎಂದು ಕೋಪಿಸಿಕೊಂಡು ಚೆನ್ನೈಗೆ ತೆರಳಿ ಸ್ವಲ್ಪ ಕಾಲ ಅಲ್ಲಿದ್ದರು. ಆ ಸಂದರ್ಭದಲ್ಲಿ 1983ರಲ್ಲಿ ತಮಿಳಿನಲ್ಲಿ ʼಅಡುತ ವಯಸುʼ ಎಂಬ ಭಾರಿ ಚಿತ್ರವನ್ನು ನಿರ್ಮಾಣ ಮಾಡಿದರು. ಇದರಲ್ಲಿ ರಜನಿಕಾಂತ್‌ ಹೀರೋ ಆಗಿದ್ದರೆ, ಶ್ರೀದೇವಿ ಹೀರೋಯಿನ್‌ ಆಗಿದ್ದರು. ಸಿಲ್ಕ್‌ ಸ್ಮಿತಾ ಕೂಡ ಇದರಲ್ಲಿದ್ದರು.

9) 1983ರಲ್ಲಿ ಗಿರೀಶ್ ಕಾರ್ನಾಡ್ ಅವರನ್ನು ಲೀಡ್‌ ರೋಲ್‌ನಲ್ಲಿ ಹಾಕಿಕೊಂಡು ಸಂಗೀತ ಪ್ರಧಾನವಾದ “ಆನಂದ ಭೈರವಿ” ಎಂಬ ಸಿನಿಮಾ ಮಾಡಿದರು. ಕಾಂಚನ, ಮಾಳವಿಕ, ರಾಜೇಶ್, ಮಹಾಲಕ್ಷ್ಮಿ ತಾರಾಗಣದಲ್ಲಿದ್ದರು. ಇದೊಂದು ಸದಭಿರುಚಿಯ, ಸಾಹಿತ್ಯ- ಸಂಗೀತಪ್ರಧಾನ ಸಿನಿಮಾ ಆಗಿ ಹೆಸರು ಮಾಡಿತು.

10) 1987ರಲ್ಲಿ ವಿನೋದ್‌ ರಾಜ್‌ ಅವರನ್ನು ಹೀರೋ ಆಗಿ ಮಡಲು ಪಣತೊಟ್ಟು, ಅವರಿಗಾಗಿ ʼಡ್ಯಾನ್ಸ್‌ ರಾಜಾ ಡ್ಯಾನ್ಸ್‌ʼ ಎಂಬ ಸಿನಿಮಾ ಮಾಡಿದರು. ಈ ಫಿಲಂ ಇಂಡಸ್ಟ್ರಿ ಹಾಗೂ ಚಿತ್ರರಸಿಕರ ಗಮನ ಸೆಳೆಯಿತಾದರೂ, ವಿನೋದ್‌ ರಾಜ್‌ ಅದೃಷ್ಟ ಇದರಿಂದ ಏನೂ ಬದಲಾಗಲಿಲ್ಲ.

11) 1986ರಲ್ಲಿ ʼಆಫ್ರಿಕಾದಲ್ಲಿ ಶೀಲಾʼ ಎಂಬ ಹಾಲಿವುಡ್‌ ಮಾದರಿಯ ಸಾಹಸ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿ, ನಟಿಸಿದರು. ಇದು ಆಫ್ರಿಕಾದಲ್ಲಿ ಶೂಟಿಂಗ್‌ ಆದ ಕನ್ನಡದ ಮೊದಲ ಚಿತ್ರ ಎನಿಸಿಕೊಂಡಿತು. ಬಪ್ಪಿ ಲಾಹರಿ ಇದಕ್ಕೆ ಸಂಗೀತ ನೀಡಿದ್ದರು. ಇದನ್ನೇ ನಾನಾ ಪಾಟೇಕರ್‌ ಅವರನ್ನು ಹಾಕಿಕೊಂಡು ಹಿಂದಿಯಲ್ಲಿ ರಿಮೇಕ್‌ ಮಾಡಿದರು.

12) ಸದಾ ಹೊಸಬಗೆಯ ಫಿಲಂಗಳನ್ನು ಮಾಡುವ ಕಡೆಗೆ ಅವರ ಮನಸ್ಸು ಇತ್ತು. ʼದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಕಟ್ಟಿಕೊಂಡು ಡಾ.ರಾಜ್‌ಕುಮಾರ್, ವಿಷ್ಣುವರ್ಧನ್‌, ರವಿಚಮದ್ರನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದರು, ನಿರ್ದೇಶಿಸಿದರು. ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.

ಇದನ್ನೂ ಓದಿ: Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

Continue Reading

ಕರ್ನಾಟಕ

Actor Dwarakish: ಅಣ್ಣಾವ್ರಿಗೆ ಆಪ್ತ, ವಿಷ್ಣುವರ್ಧನ್‌ಗೆ ಆಪ್ತಮಿತ್ರ ದ್ವಾರಕೀಶ್;‌ ಇವರ ನಂಟು ಹೇಗಿತ್ತು?

Actor Dwarakish: ಮನೋಜ್ಞ ನಟನೆ, ಅತ್ಯುತ್ತಮ ಹಾಸ್ಯ, ನೇರ ನಡೆ, ನುಡಿಗಳಿಂದಲೇ ಮನೆಮಾತಾಗಿದ್ದ ದ್ವಾರಕೀಶ್‌ ಅವರು ಒಳ್ಳೆಯ ಸ್ನೇಹಜೀವಿಯಾಗಿದ್ದರು. ಸಿಟ್ಟು, ಮುನಿಸಿನ ಮಧ್ಯೆಯೂ ಅವರು ಎಲ್ಲರೊಂದಿಗೂ ಬೆರೆಯುವ, ಸ್ನೇಹ ಸಂಪಾದನೆ ಮಾಡುವ ಗುಣ ಹೊಂದಿದ್ದರು. ಅದರಲ್ಲೂ, ಡಾ.ರಾಜಕುಮಾರ್‌ ಹಾಗೂ ಡಾ.ವಿಷ್ಣುವರ್ಧನ್‌ ಅವರಿಗೆ ದ್ವಾರಕೀಶ್‌ ಅತ್ಯಾಪ್ತರಾಗಿದ್ದರು. ಇವರ ಸ್ನೇಹ, ಆಪ್ತತೆ ಹೇಗಿತ್ತು ಎಂಬುದರ ಕಿರು ನೋಟ ಇಲ್ಲಿದೆ.

VISTARANEWS.COM


on

Actor Dwarakish
Koo

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ, ನಟ, ಹಾಸ್ಯ ಕಲಾವಿದ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಛಾಪು ಮೂಡಿಸಿದ್ದ ದ್ವಾರಕೀಶ್‌ (81) (Actor Dwarakish) ಅವರು ಮಂಗಳವಾರ (ಏಪ್ರಿಲ್‌ 16) ನಿಧನರಾಗಿದ್ದಾರೆ. ಬಹುಮುಖ ಪ್ರತಿಭೆ, ಗಮನ ಸೆಳೆಯುವ ವ್ಯಕ್ತಿತ್ವ ಹೊಂದಿದ್ದ ದ್ವಾರಕೀಶ್‌ ಅವರು ಸ್ನೇಹಜೀವಿಯೂ ಆಗಿದ್ದರು. ಅದರಲ್ಲೂ, ಡಾ.ರಾಜಕುಮಾರ್‌ (Dr Rajkumar), ಡಾ.ವಿಷ್ಣುವರ್ಧನ್‌ (Dr Vishnuvardhan) ಅವರೊಂದಿಗೆ ಉತ್ತಮ ಸ್ನೇಹ, ಬಾಂಧವ್ಯ ಹೊಂದಿದ್ದರು. ಅದರಲ್ಲೂ, ವಿಷ್ಣುವರ್ಧನ್‌ ಅವರ ಜತೆ ಹೆಚ್ಚು ಆತ್ಮೀಯತೆ ಹೊಂದಿದ್ದರು.

ವಿಷ್ಣುವರ್ಧನ್-ದ್ವಾರಕೀಶ್‌ ಜೋಡಿ ಮೋಡಿ

ಕನ್ನಡ ಸಿನಿಮಾ ರಂಗದಲ್ಲಿ ವಿಷ್ಣುವರ್ಧನ್‌ ಹಾಗೂ ದ್ವಾರಕೀಶ್‌ ಅವರ ಜೋಡಿಯು ಮೋಡಿ ಮಾಡಿತ್ತು. ಕಳ್ಳ-ಕುಳ್ಳ, ಕಿಟ್ಟು-ಪುಟ್ಟು, ಸಿಂಗಾಪೂರ್‌ನಲ್ಲಿ ರಾಜ-ಕುಳ್ಳ, ಗುರು-ಶಿಷ್ಯರು, ಕಿಲಾಡಿಗಳು ಸೇರಿ ಹಲವು ಸೂಪರ್‌ ಡೂಪರ್‌ ಹಿಟ್‌ ಆದ ಸಿನಿಮಾಗಳಲ್ಲಿ ಇವರ ಜೋಡಿಯು ಮೋಡಿ ಮಾಡಿತ್ತು. ದ್ವಾರಕೀಶ್‌ ನಿರ್ದೇಶನದ ಮೊದಲ ಚಿತ್ರ ನೀ ಬರೆದ ಕಾದಂಬರಿಯು ಕೂಡ ಭಾರಿ ಹಿಟ್‌ ಆಯಿತು. “ಒಂದು ದಿನವೂ ವಿಷ್ಣುವರ್ಧನ್‌ ಕಾಲ್‌ಶೀಟ್‌ ಇಲ್ಲ ಎಂದಿರಲಿಲ್ಲ” ಎಂಬುದಾಗಿ ಆಗಾಗ ದ್ವಾರಕೀಶ್‌ ಅವರು ಹೇಳುತ್ತಲೇ ಇದ್ದರು.

ಗೆಳೆಯನಿಗಾಗಿ ಸಿನಿಮಾ ಮಾಡಿದ ವಿಷ್ಣು

ಆಪ್ತಮಿತ್ರ ಸಿನಿಮಾ ಬಿಡುಗಡೆಗೂ ಮೊದಲು ದ್ವಾರಕೀಶ್‌ ಅವರು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದರು. ಅವರು ಮನೆ ಕೂಡ ಮಾರಿಕೊಂಡು ಸಂಕಷ್ಟದಲ್ಲಿ ಕಾಲ ಕಳೆಯುತ್ತಿದ್ದರು. ಆಗ, ದ್ವಾರಕೀಶ್‌ ನೆರವಿಗೆ ಧಾವಿಸಿದ ವಿಷ್ಣುವರ್ಧನ್‌ ಅವರು ಒಂದು ರೂಪಾಯಿ ಕೂಡ ಸಂಭಾವನೆ ಪಡೆಯದೆ ದ್ವಾರಕೀಶ್‌ ನಿರ್ಮಾಣದ ಆಪ್ತಮಿತ್ರ ಸಿನಿಮಾದಲ್ಲಿ ನಟಿಸಿದರು. ಆಪ್ತ ಮಿತ್ರ ಸಿನಿಮಾವು ಹಿಟ್‌ ಆಗಿ, ಕಾಲವನ್ನು ತಡೆಯೋರು ಯಾರೂ ಇಲ್ಲ ಎಂದು ವಿಷ್ಣು-ದ್ವಾರಕೀಶ್‌ ಜೋಡಿ ಹಾಡು ಮನೆಮಾತಾಗಿದ್ದಲ್ಲದೆ, ದ್ವಾರಕೀಶ್‌ ಅವರು ಮತ್ತೆ ಸ್ವಂತ ಮನೆಗೆ ಯಜಮಾನರಾದರು. ಅಷ್ಟರಮಟ್ಟಿಗೆ, ಇವರ ಜೋಡಿ, ಸ್ನೇಹವು ಗಟ್ಟಿಯಾಗಿತ್ತು.

ಸ್ನೇಹದ ಸೊಗಸಿನ ಮಧ್ಯೆ ಮುನಿಸು

ವಿಷ್ಣುವರ್ಧನ್‌ ಹಾಗೂ ದ್ವಾರಕೀಶ್‌ ಅವರ ಮಧ್ಯೆ ಆಗಾಗ ಮುನಿಸು, ರಾಜಿ ನಡೆಯುತ್ತಲೇ ಇದ್ದವು. ನಾನು ಯಾವಾಗ ವಿಷ್ಣುವರ್ಧನ್‌ ಜತೆ ಮುನಿಸಿಕೊಂಡು, ನಂತರ ಒಂದಾಗಿ ಸಿನಿಮಾ ಮಾಡಿದ್ದೇನೆಯೋ, ಆ ಸಿನಿಮಾಗಳೆಲ್ಲ ಹಿಟ್‌ ಆಗಿವೆ ಎಂದು ದ್ವಾರಕೀಶ್‌ ಅವರೇ ಹೇಳುತ್ತಿದ್ದರು. ಆದರೆ, ಆಪ್ತಮಿತ್ರ ಸಿನಿಮಾ ಬಳಿಕ ದ್ವಾರಕೀಶ್‌ ಅವರು ವಿಷ್ಣುವರ್ಧನ್‌ ಅವರ ಬಗ್ಗೆ ನೀಡಿದ ಹೇಳಿಕೆಯು ಇಬ್ಬರ ಮಧ್ಯೆ ಮತ್ತೆ ಬಿರುಕು ಮೂಡಿಸಿತು.

ಇನ್ನು, ವಿಷ್ಣುವರ್ಧನ್‌ ಅವರ ಅಗಲಿಕೆಯ ಬಳಿಕ ಯಾವಾಗ ಮಾತನಾಡಿದರೂ ದ್ವಾರಕೀಶ್‌ ಅವರು ವಿಷ್ಣುವರ್ಧನ್‌ ಹೆಸರು ಪ್ರಸ್ತಾಪಿಸದೆ ಇರುತ್ತಿರಲಿಲ್ಲ. “ಸೂಪರ್‌ ಸ್ಟಾರ್‌ ಆಗಿದ್ದ ವಿಷ್ಣುವರ್ಧನ್‌ ಇಲ್ಲದೆ ನಾನಿಲ್ಲ. ಆದರೂ, ಆತನನ್ನು ಚೆನ್ನಾಗಿ ನಡೆಸಿಕೊಳ್ಳಲಿಲ್ಲ” ಎಂದು ದ್ವಾರಕೀಶ್‌ ಅವರು ಆಗಾಗ ಬೇಸರ ವ್ಯಕ್ತಪಡಿಸುತ್ತಿದ್ದರು.

ಅಣ್ಣಾವ್ರಿಗೂ ಆಪ್ತರಾಗಿದ್ದ ದ್ವಾರಕೀಶ್

ಡಾ.ರಾಜಕುಮಾರ್‌ ಅವರಿಗೆ ದ್ವಾರಕೀಶ್‌ ಅವರು ಅತ್ಯಾಪ್ತರಾಗಿದ್ದರು. ಇವರಿಗೆ ಎರಡು ಸಿನಿಮಾಗಳನ್ನು ದ್ವಾರಕೀಶ್‌ ನಿರ್ಮಾಣ ಮಾಡಿದ್ದರು. ಅದರಲ್ಲೂ, ಮೇಯರ್‌ ಮುತ್ತಣ್ಣ ಸಿನಿಮಾದಲ್ಲಿ ರಾಜಕುಮಾರ್‌ ಹಾಗೂ ದ್ವಾರಕೀಶ್‌ ಅವರು ಒಟ್ಟಿಗೆ ನಟಿಸಿದ್ದರು. ಸತ್ಯ ಹರಿಶ್ಚಂದ್ರ ಸಿನಿಮಾದಲ್ಲೂ ರಾಜಕುಮಾರ್‌ ಅವರೊಂದಿಗೆ ನಟಿಸಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. “ಡಾ.ರಾಜಕುಮಾರ್‌ ಅವರು ಯಾವಾಗ ಸಿಕ್ಕರೂ ನನ್ನನ್ನು ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಅವರೊಂದಿಗೆ ಹೆಚ್ಚು ಸಿನಿಮಾ ಮಾಡಲು ಆಸೆ ಇತ್ತು. ಆದರೆ, ಅವರು ತುಂಬ ಬ್ಯುಸಿ ಇರುತ್ತಿದ್ದರು. ಆತ್ಮೀಯತೆ ಮಾತ್ರ ಚೆನ್ನಾಗಿತ್ತು” ಎಂದು ದ್ವಾರಕೀಶ್‌ ಹೇಳಿದ್ದರು.

ಮುನಿಸು, ಸಿಟ್ಟು, ಸೆಡವಿನ ಮಧ್ಯೆಯೂ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಸ್ನೇಹ ಸಂಪಾದಿಸಿದ್ದರು. ರೆಬೆಲ್‌ ಸ್ಟಾರ್‌ ಅಂಬರೀಶ್‌, ಸೂಪರ್‌ ಸ್ಟಾರ್‌ ರಜನಿಕಾಂತ್‌, ಶಂಕರ್‌ನಾಗ್‌ ಅವರ ಜತೆಯೂ ದ್ವಾರಕೀಶ್‌ ಅವರು ಉತ್ತಮ ಬಾಂಧವ್ಯ ಹೊಂದಿದ್ದರು.

ಇದನ್ನೂ ಓದಿ: Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

Continue Reading

Lok Sabha Election 2024

Lok Sabha Election 2024: ಡಿಕೆಶಿ – ಎಚ್‌ಡಿಕೆ ವೈಯಕ್ತಿಕ ಕಾದಾಟಕ್ಕೆ ಇದೇ ಕಾರಣ! ಏನಿದು ಇನ್‌ಸೈಡ್‌ ಕಹಾನಿ?

Lok Sabha Election 2024: ಒಕ್ಕಲಿಗ ಸಮುದಾಯದ ನಾಯಕತ್ವ ಪಟ್ಟವನ್ನು ಸಂಪೂರ್ಣವಾಗಿ ಪಡೆಯಲು ಇದು ಸರಿಯಾದ ಸಮಯವಾಗಿದೆ ಎಂಬ ಲೆಕ್ಕಾಚಾರವನ್ನು ಡಿಸಿಎಂ ಡಿ.ಕೆ ಹೊಂದಿದ್ದಾರೆ. ಈ ಸಂದರ್ಭದಲ್ಲಿ ಕೈ ಚೆಲ್ಲಿದರೆ ಒಕ್ಕಲಿಗ ಸಮುದಾಯ ನಾಯಕತ್ವ ಪಟ್ಟವು ಸಹ ತಮ್ಮಿಂದ ಕೈ ತಪ್ಪಲಿದೆ ಎಂಬ ಆತಂಕ ಎಚ್.ಡಿ. ಕುಮಾರಸ್ವಾಮಿ ಅವರದ್ದಾಗಿದೆ. ಹೀಗಾಗಿ ಅದನ್ನು ಉಳಿಸಿಕೊಳ್ಳಬೇಕು ಎಂದು ಎಚ್‌ಡಿಕೆ ನೇರವಾಗಿ ಯುದ್ಧಕ್ಕೆ ನಿಂತಿದ್ದಾರೆ.

VISTARANEWS.COM


on

Lok Sabha Election 2024 What is the reason for DK Shivakumar and HD Kumaraswamy personal fight
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಾಕ್ಸಮರಗಳು ತಾರಕಕ್ಕೇರಿವೆ. ಪರಸ್ಪರ ಕಿತ್ತಾಟಗಳು ಜೋರಾಗಿಯೇ ನಡೆಯುತ್ತಿವೆ. ಟೀಕೆಗಳು ವೈಯಕ್ತಿಕ ಮಟ್ಟಕ್ಕೆ ಇಳಿಯುತ್ತಿವೆ. ಈಗ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ನಡುವೆ ಭಾರಿ ಫೈಟ್‌ ನಡೆಯುತ್ತಿದೆ. ಇದಕ್ಕೆ ಎರಡು ಪ್ರಮುಖ ಕಾರಣಗಳಿವೆ. ಒಕ್ಕಲಿಗ ನಾಯಕತ್ವ ಪಟ್ಟಕ್ಕಾಗಿ ಜಿದ್ದಾಜಿದ್ದಿ ಏರ್ಪಟ್ಟಿದೆ. ಈ ಅಲ್ಲದೆ, ಸಮುದಾಯದ ಮತಗಳನ್ನು ಹೆಚ್ಚಿಗೆ ಪಡೆಯುವ ಮೂಲಕ ತಮ್ಮ ವರ್ಚಸ್ಸನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಪ್ಲ್ಯಾನ್‌ ಉಭಯ ನಾಯಕರದ್ದಾಗಿದೆ.

ಈ ಎರಡು ಕಾರಣಕ್ಕಾಗಿ ಹಾಲಿ ಡಿಸಿಎಂ ಮತ್ತು ಮಾಜಿ ಸಿಎಂ ಮಧ್ಯೆ ಮಾತಿನ ಸಮರ ಏರ್ಪಟ್ಟಿದೆ. ಹೀಗಾಗಿ ಲೋಕಸಭಾ ಅಖಾಡದಲ್ಲಿ ಒಕ್ಕಲಿಗ ಸಮುದಾಯದ ಮತ ಸೆಳೆಯಲು ನೇರಾನೇರ ಕುಸ್ತಿಗೆ ಬಿದ್ದಿದ್ದಾರೆ.

ಒಕ್ಕಲಿಗ ಸಮುದಾಯದ ನಾಯಕತ್ವ ಪಟ್ಟವನ್ನು ಸಂಪೂರ್ಣವಾಗಿ ಪಡೆಯಲು ಇದು ಸರಿಯಾದ ಸಮಯವಾಗಿದೆ ಎಂಬ ಲೆಕ್ಕಾಚಾರವನ್ನು ಡಿಸಿಎಂ ಡಿ.ಕೆ ಹೊಂದಿದ್ದಾರೆ. ಈ ಸಂದರ್ಭದಲ್ಲಿ ಕೈ ಚೆಲ್ಲಿದರೆ ಒಕ್ಕಲಿಗ ಸಮುದಾಯ ನಾಯಕತ್ವ ಪಟ್ಟವು ಸಹ ತಮ್ಮಿಂದ ಕೈ ತಪ್ಪಲಿದೆ ಎಂಬ ಆತಂಕ ಎಚ್.ಡಿ. ಕುಮಾರಸ್ವಾಮಿ ಅವರದ್ದಾಗಿದೆ. ಹೀಗಾಗಿ ಅದನ್ನು ಉಳಿಸಿಕೊಳ್ಳಬೇಕು ಎಂದು ಎಚ್‌ಡಿಕೆ ನೇರವಾಗಿ ಯುದ್ಧಕ್ಕೆ ನಿಂತಿದ್ದಾರೆ.

ಡಿ.ಕೆ. ಶಿವಕುಮಾರ್‌ ವಾದವೇನು?

ಜೆಡಿಎಸ್‌ಗೆ ಅಸ್ತಿತ್ವವಿಲ್ಲ. ಅಲ್ಲಿದ್ದು ಏನು ಮಾಡುತ್ತೀರಾ? ದೇವೇಗೌಡರ ಕುಟುಂಬದವರು ಮಾತ್ರ ಬೆಳೆದರು. ಒಳಿದ ಒಕ್ಕಲಿಗರನ್ನು ಬೆಳೆಯಲು ಬಿಟ್ಟಿಲ್ಲ. ಜೆಡಿಎಸ್‌ ಈಗ ಬಿಜೆಪಿ ಜತೆ ಹೋಗಿದೆ. ಹೀಗಾಗಿ ಒಕ್ಕಲಿಗರಿಗಾಗಿ ನಾನು ಇದ್ದೇನೆ, ಬನ್ನಿ ಎಂಬ ಸಂದೇಶವನ್ನು ಡಿ.ಕೆ. ಶಿವಕುಮಾರ್‌ ಅವರು ಒಳಗೊಳಗೇ ರವಾನೆ ಮಾಡುತ್ತಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ ವಾದವೇನು?

ಡಿ.ಕೆ. ಶಿವಕುಮಾರ್‌ ತಮ್ಮ ಮೇಲೆ ಮಾಡಿರುವ ಆರೋಪಕ್ಕೆ ಕೆಂಡವಾಗಿರುವ ಎಚ್.ಡಿ. ಕುಮಾರಸ್ವಾಮಿ, ಒಕ್ಕಲಿಗರಿಗೆ ಸಿಎಂ ಆಗುವ ಅವಕಾಶವಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿಕೊಂಡರು. ಆದರೆ, ಸಮುದಾಯದವರು ಪೆನ್ನು, ಪೇಪರ್ ಕೊಟ್ಟಿದ್ದರೂ ಯಾವುದೇ ಲಾಭವಿಲ್ಲ ಎಂದು ಸಂದೇಶ ರವಾನೆ ‌ಮಾಡುತ್ತಿದ್ದಾರೆ.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 26ರಂದು ಬೆಂಗಳೂರಲ್ಲಿ ಐಟಿ ಕಂಪನಿಗಳಿಗೆ ಕಡ್ಡಾಯ ರಜೆ; ತುಷಾರ್ ಗಿರಿನಾಥ್ ಆದೇಶ

ವಿಧಾನಸಭೆಯಲ್ಲಿ ಸಕ್ಸಸ್‌ ಆಗಿದ್ದ ಡಿಕೆಶಿ

ವಿಧಾನಸಭೆ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತ ಸೆಳೆಯಲು ಡಿ.ಕೆ. ಶಿವಕುಮಾರ್‌ ಸಕ್ಸಸ್ ಆಗಿದ್ದರು. ನಾನು ಸಿಎಂ ಆಗಲು ಅವಕಾಶವಿದೆ ಎಂದು ಒಕ್ಕಲಿಗರ ಮತ ಬೇಟೆ ಮಾಡಿದ್ದರು. ಇದೀಗ ಲೋಕಸಭೆ ಚುನಾವಣೆಯಲ್ಲೂ ಅದೇ ಅಸ್ತ್ರ ಪ್ರಯೋಗ ಮಾಡಿದ್ದಾರೆ. ದೆಹಲಿಯಲ್ಲಿ ಏನು ತೀರ್ಮಾನ ಆಗಬೇಕೋ ಅದು ಆಗಿದೆ. ಒಕ್ಕಲಿಗರು ಬಲ ತುಂಬಿದರೆ ಲೋಕಸಭೆ ಬಳಿಕ ಸಿಎಂ ಆಗುವ ಅವಕಾಶವಿದೆ ಎಂಬ ಸಂದೇಶವನ್ನು ಡಿ.ಕೆ. ಶಿವಕುಮಾರ್‌ ನೀಡುತ್ತಿದ್ದಾರೆ.

ಮತ್ತೊಂದೆಡೆ ಒಕ್ಕಲಿಗರ ಮತ ಸೆಳೆಯಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಯತ್ನ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಕೈ ಕೊಟ್ಟಿದ್ದ ಸಮುದಾಯದ‌ ಮತಗಳು ಲೋಕಸಭೆಯಲ್ಲಿ ಪಡೆಯಲೇಬೇಕು ಎಂದು ಹಠ ತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ.

Continue Reading
Advertisement
Lok Sabha Election 2024
ಬೆಂಗಳೂರು13 mins ago

Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

actor dwarakish
ಪ್ರಮುಖ ಸುದ್ದಿ18 mins ago

Actor Dwarakish: ಕನ್ನಡ ಸಿನಿಮಾದ ʼಪ್ರಚಂಡ ಕುಳ್ಳʼ ದ್ವಾರಕೀಶ್ ಬಗ್ಗೆ ನೀವರಿಯದ 12 ವಿಶಿಷ್ಟ ಸಂಗತಿಗಳು ಇಲ್ಲಿವೆ

ಕ್ರೀಡೆ18 mins ago

IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

Actor Dwarakish
ಕರ್ನಾಟಕ22 mins ago

Actor Dwarakish: ಅಣ್ಣಾವ್ರಿಗೆ ಆಪ್ತ, ವಿಷ್ಣುವರ್ಧನ್‌ಗೆ ಆಪ್ತಮಿತ್ರ ದ್ವಾರಕೀಶ್;‌ ಇವರ ನಂಟು ಹೇಗಿತ್ತು?

Lok Sabha Election 2024 What is the reason for DK Shivakumar and HD Kumaraswamy personal fight
Lok Sabha Election 202427 mins ago

Lok Sabha Election 2024: ಡಿಕೆಶಿ – ಎಚ್‌ಡಿಕೆ ವೈಯಕ್ತಿಕ ಕಾದಾಟಕ್ಕೆ ಇದೇ ಕಾರಣ! ಏನಿದು ಇನ್‌ಸೈಡ್‌ ಕಹಾನಿ?

Rama Navami
ಪ್ರಮುಖ ಸುದ್ದಿ33 mins ago

Ram Navami 2024: ರಾಮ ನವಮಿಯನ್ನು ವಿಶೇಷವಾಗಿ ಆಚರಿಸುವ ಟಾಪ್‌ 5 ಸ್ಥಳಗಳಿವು

RR vs KKR
ಕ್ರೀಡೆ54 mins ago

RR vs KKR: ಅಗ್ರಸ್ಥಾನಕ್ಕೆ ಇಂದು ಕೆಕೆಆರ್​-ರಾಜಸ್ಥಾನ್ ಮಧ್ಯೆ ಹೈವೋಲ್ಟೇಜ್ ಕದನ

Toyota Kirloskar Motor Launches New Innova Hicross Petrol GX (O) Grade
ದೇಶ57 mins ago

Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

Lok Sabha Election 2024 IT companies to remain closed in Bengaluru on April 26 BBMP order
Lok Sabha Election 20241 hour ago

Lok Sabha Election 2024: ಏಪ್ರಿಲ್‌ 26ರಂದು ಬೆಂಗಳೂರಲ್ಲಿ ಐಟಿ ಕಂಪನಿಗಳಿಗೆ ಕಡ್ಡಾಯ ರಜೆ; ತುಷಾರ್ ಗಿರಿನಾಥ್ ಆದೇಶ

NEET PG-2024
ಶಿಕ್ಷಣ1 hour ago

NEET PG-2024: ನೀಟ್‌ ಪಿಜಿ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ; ಇಲ್ಲಿದೆ ನೋಂದಣಿ ಮಾಹಿತಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ9 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌