ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಸಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ (Karnataka Election Results) ಶುಭಾಶಯಗಳು ಹರಿದುಬರುತ್ತಿವೆ. ಇದರ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ಕುರಿತು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
“ಕರ್ನಾಟಕದಲ್ಲಿ ಐತಿಹಾಸಿಕ ಗೆಲುವಿಗೆ ಕಾರಣರಾದ ಮತದಾರರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. ಮಹೋನ್ನತ ಗುರಿಗಾಗಿ ರಾಜ್ಯದ ಜನ ಕಾಂಗ್ರೆಸ್‌ಅನ್ನು ಗೆಲ್ಲಿಸಿದ್ದಾರೆ. ಕರ್ನಾಟಕವನ್ನು ಅಭಿವೃದ್ಧಿಗೊಳಿಸುವ ಧ್ಯೇಯಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಆಯ್ಕೆ ಮಾಡಲಾಗಿದೆ. ಇದು ದೇಶದ ರಾಜಕೀಯವನ್ನು ಒಗ್ಗೂಡಿಸುವ ಶಕ್ತಿಗೆ ಸಿಕ್ಕ ಗೆಲುವು” ಎಂದು ಬಣ್ಣಿಸಿದ್ದಾರೆ.
ಇದನ್ನೂ ಓದಿ: Karnataka Election Results: ಪ್ರಾಬಲ್ಯದ ವಿರುದ್ಧ ಜನಶಕ್ತಿ ಗೆದ್ದಿದೆ; ಫಲಿತಾಂಶದ ಬಳಿಕ ರಾಹುಲ್ ಗಾಂಧಿ ಹೇಳಿದ್ದಿಷ್ಟು
ಇನ್ನು ಕಾಂಗ್ರೆಸ್ ಗೆಲುವಿನ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ಕರ್ನಾಟಕದ ಜನರಿಗೆ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ, ಆಶೀರ್ವದಿಸಿದ್ದಾರೆ. ಗೆಲುವಿಗಾಗಿ ಶ್ರಮಿಸಿದ ಕರ್ನಾಟಕದ ನಾಯಕರಿಗೂ ನಾನು ಅಭಿನಂದಿಸುತ್ತೇನೆ. ರಾಜ್ಯದಲ್ಲಿ ದ್ವೇಷದ ವಿರುದ್ಧ ಪ್ರೀತಿ ಗೆದ್ದಿದೆ. ನಾವು ಜನರ ಪ್ರೀತಿಯನ್ನು ಗಳಿಸವಲ್ಲಿ ಯಶಸ್ವಿಯಾಗಿದ್ದೇವೆ. ಜನರ ಹೃದಯದಲ್ಲಿ ನಾವು ಸ್ಥಾನ ಗಳಿಸಿದ್ದೇವೆ. ನಾವು ಪ್ರೀತಿಯಿಂದ ಚುನಾವಣೆ ಎದುರಿಸಿದ ಕಾರಣ, ಜನರ ಪ್ರೀತಿ ಗಳಿಸಿದ್ದೇವೆ” ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿಯು ಸ್ಪಷ್ಟ ಬಹುಮತದತ್ತ ಹೆಜ್ಜೆ ಹಾಕುತ್ತಿದೆ. ಒಟ್ಟು 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅದರಲ್ಲೂ, ಬಿಜೆಪಿಯ ಡಾ.ಕೆ.ಸುಧಾಕರ್, ಶ್ರೀರಾಮುಲು, ಗೋವಿಂದ ಕಾರಜೋಳ ಸೇರಿ ಘಟಾನುಘಟಿ ನಾಯಕರೇ ಸೋಲನುಭವಿಸಿದ್ದಾರೆ. ಇನ್ನು ಹಿನ್ನಡೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ನಾಯಕರು, ನಾವು ಜನರ ತೀರ್ಪನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ. ಇನ್ನು ಸೋಲಿನ ಹೊಣೆ ಹೊರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.