ನವದೆಹಲಿ: ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಬುಧವಾರ ದಿಲ್ಲಿಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಮಾಹಿತಿ ನೀಡಿ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 10ಕ್ಕೆ ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಸದ್ಯ ಬಿಜೆಪಿ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ಪ್ರಮುಖ ಪ್ರತಿಪಕ್ಷವಾಗಿದೆ. ಜೆಡಿಎಸ್ ಕೂಡ ತನ್ನ ಸದಸ್ಯರನ್ನು ಹೊಂದಿದೆ. ರಾಜ್ಯದಲ್ಲಿ ಈಗಾಗಲೇ ಚುನಾವಣಾ ಕಾವು ಜೋರಾಗಿದೆ. ಚುನಾವಣೆಗಳನ್ನು ದಿನಾಂಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ(Karnataka Election 2023 LIVE).
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡದಿರಲು ಬಿಜೆಪಿ ನಿರ್ಧರಿಸಿದೆ ಎಂದು ಟೈಮ್ಸ್ ನೌ ಸುದ್ದಿ ವಾಹನಿಯು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
Karnataka election 2023 Live: ಕರ್ನಾಟಕ ವಿಧಾನಸಭೆಗೆ ಚುನಾವಣಾ ಆಯೋಗ ಪ್ರಕಟಿಸಿದ ಚುನಾವಣಾ ವೇಳಾ ಪಟ್ಟಿ ಹೀಗಿದೆ…
ಚುನಾವಣೆ ಘೋಷಣೆ ಬೆನ್ನಲ್ಲೆ ರಾಜ್ಯದಲ್ಲಿ ಪೊಲೀಸರು ಹೈ-ಅಲರ್ಟ್. ಹೆದ್ದಾರಿಗಳಲ್ಲಿ ವಾಹನ ತಪಾಸಣೆ ಮಾಡುತ್ತಿರುವ ಪೊಲೀಸರು. ರಾಷ್ಟ್ರೀಯ ಹೆದ್ದಾರಿ 48 ಹಾಗೂ 75 ರಲ್ಲಿ ಹೈ ಅಲರ್ಟ್ . ನೆಲಮಂಗಲ ಬಳಿಯ ಜಾಸ್‌ಟೋಲ್, ಲ್ಯಾಂಕೋ ಟೋಲ್, ನೈಸ್ ರೋಡ್ ಟೋಲ್ ಸೇರಿದಂತೆ ವಿವಿಧೆಡೆ ಪರಿಶೀಲನೆ. ಚುನಾವಣೆಗಾಗಿ ಅಕ್ರಮ ಮದ್ಯ, ಹಣ, ಗಿಫ್ಟ್ ಸಾಗಾಟದ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಪೊಲೀಸರು.
ನೀತಿ ಸಂಹಿತಿ ಜಾರಿಯಾಗ್ತಿದ್ದಂತೆ ಸರ್ಕಾರಿ ಕಾರು ಬಿಟ್ಟ ಸಚಿವ ಎಂಟಿಬಿ. ಸರ್ಕಾರಿ ಕಾರು ವಾಪಸ್ ಕಳಿಸಿ ಖಾಸಗಿ ಕಾರಿನಲ್ಲಿ ಪ್ರಯಾಣ. ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದಿಂದ ಪ್ರಯಾಣ. ಅರ್ಧಕ್ಕೆ ಸಿಸಿ ರಸ್ತೆ ಕಾಮಗಾರಿಗಳನ್ನ ಮೊಟಕುಗೊಳಿಸಿ ತೆರಳಿದ ಸಚಿವ ಎಂಟಿಬಿ. ಕಾರು ಹತ್ತುವ ವೇಳೆ ನೀತಿ ಸಂಹಿತಿ ಜಾರಿ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ. ಹೀಗಾಗಿ ಕಾರು ಬಿಟ್ಟು ತೆರಳಿದ ಸಚಿವ ಹಾಗೂ ಬೆಂಬಲಿಗರು.
ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ. ಸರ್ಕಾರಿ ಕಾರುಗಳ ಬಿಟ್ಟು, ಖಾಸಗಿ ಕಾರಿನಲ್ಲಿ ಓಡಾಟ. ಸಿಎಂ ನಿವಾಸಕ್ಕೆ ಖಾಸಗಿ ಕಾರಿನಲ್ಲಿ ಬಂದ ಸಚಿವ ಸೋಮಣ್ಣ ಹಾಗೂ ಮುನಿರತ್ನ