ನವದೆಹಲಿ: ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಬುಧವಾರ ದಿಲ್ಲಿಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಮಾಹಿತಿ ನೀಡಿ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 10ಕ್ಕೆ ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಸದ್ಯ ಬಿಜೆಪಿ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ಪ್ರಮುಖ ಪ್ರತಿಪಕ್ಷವಾಗಿದೆ. ಜೆಡಿಎಸ್ ಕೂಡ ತನ್ನ ಸದಸ್ಯರನ್ನು ಹೊಂದಿದೆ. ರಾಜ್ಯದಲ್ಲಿ ಈಗಾಗಲೇ ಚುನಾವಣಾ ಕಾವು ಜೋರಾಗಿದೆ. ಚುನಾವಣೆಗಳನ್ನು ದಿನಾಂಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ(Karnataka Election 2023 LIVE).
Karnataka Election 2023 LIVE: ಮೇ 10ಕ್ಕೆ ಮತದಾನ ನಡೆಯಲಿದೆ.
Karnataka Election 2023 LIVE: 13 ಏಪ್ರಿಲ್ ನೋಟಿಫಿಕೇಷನ್ ಆರಂಭವಾಗಲಿದೆ. ಮತದಾನ ಒಂದೇ ಹಂತದಲ್ಲಿ ನಡೆಯಲಿದೆ
Karnataka Election 2023 LIVE: ನೀತಿ ಸಂಹಿತೆ ಜಾರಿಯಾಗುವ ಮೊದಲೇ ಕರ್ನಾಟಕದಲ್ಲಿ ಉಚಿತ ಕೊಡುಗೆಗಳು ನೀಡಲಾಗುತ್ತಿದೆ. ಮದ್ಯ, ಸೀರೆ, ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣೆಯಲ್ಲಿ ಧನಬಲವನ್ನು ಕುಗ್ಗಿಸಲು ಆಯೋಗ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನೀತಿ ಸಂಹಿತೆ ಜಾರಿಯಾಗುವ ಮೊದಲೇ ಅಧಿಕಾರಿಗಳು ಚುರುಕು ಆಗಿದ್ದಾರೆ. ಸಾಕಷ್ಟು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆಯೋಗ
Karnataka Election 2023 LIVE: ಪ್ರಸಕ್ತ ಕರ್ನಾಟಕ ವಿಧಾನಸಭೆ ಅವಧಿ ಮೇ 24ವರೆಗೆ ಇರಲಿದೆ. ಮೇ 24ರೊಳಗೇ ಎಲ್ಲ ಚುನಾವಣಾ ಪ್ರಕ್ರಿಯೆಗಳನ್ನು ಪೂರೈಸಲಾಗುತ್ತದೆ.
– ಆಯೋಗ
Karnataka Election 2023 LIVE: ವಿಚಕ್ಷಣಾ ತಂಡಗಳನ್ನು ಹೆಚ್ಚಿಸಲಾಗಿದೆ. ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ಕ್ಯಾಡ್‌ಗಳನ್ನು ಹೆಚ್ಚಿಸಲಾಗಿದೆ. ಈ ಮೂಲಕ ನ್ಯಾಯಸಮ್ಮತ ಚುನಾವಣೆಯನ್ನು ನಡೆಸಲಾಗುತ್ತಿದೆ.