Site icon Vistara News

Karnataka Election 2023 LIVE: ಕರ್ನಾಟಕದಲ್ಲಿ ಮೇ 10ಕ್ಕೆ ಮತದಾನ, 13ಕ್ಕೆ ರಿಸಲ್ಟ್, ಒಂದೇ ಹಂತದ ಎಲೆಕ್ಷನ್

Karnataka Election 2023 LIVE

ನವದೆಹಲಿ: ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಬುಧವಾರ ದಿಲ್ಲಿಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಮಾಹಿತಿ ನೀಡಿ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 10ಕ್ಕೆ ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಸದ್ಯ ಬಿಜೆಪಿ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ಪ್ರಮುಖ ಪ್ರತಿಪಕ್ಷವಾಗಿದೆ. ಜೆಡಿಎಸ್ ಕೂಡ ತನ್ನ ಸದಸ್ಯರನ್ನು ಹೊಂದಿದೆ. ರಾಜ್ಯದಲ್ಲಿ ಈಗಾಗಲೇ ಚುನಾವಣಾ ಕಾವು ಜೋರಾಗಿದೆ. ಚುನಾವಣೆಗಳನ್ನು ದಿನಾಂಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ(Karnataka Election 2023 LIVE).

Mallikarjun Tippar

ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದಿಲ್ಲಿಯಲ್ಲಿ ಬುಧವಾರ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ, ಕರ್ನಾಟಕ ವಿಧಾನಸಭೆ ಚುನಾವಣೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ

Mallikarjun Tippar

ಕರ್ನಾಟಕ ವಿಧಾನಸಭೆ ಒಟ್ಟು 224 ಸದಸ್ಯ ಬಲವನ್ನು ಹೊಂದಿದೆ.

Exit mobile version