Site icon Vistara News

Karnataka Election: ಎಲ್ಲೆಡೆ ನಮ್ಮ ಪಕ್ಷಕ್ಕೆ ಅಪಾರ ಜನಬೆಂಬಲ, ಗೆಲುವು ನಿಶ್ಚಿತ: ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕನಾಯ್ಕ

kb ashok naik shimoga constituency candidate

kb ashok naik

ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯ ಪರಿಣಾಮಕಾರಿ ಯೋಜನೆಗಳಿಂದ ಗ್ರಾಮ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಬಿಜೆಪಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (Karnataka Election) ಕೆ.ಬಿ. ಅಶೋಕನಾಯ್ಕ (kb ashok naik) ಹೇಳಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಹರಿಗೆ, ಹಾಥಿನಗರ, ಯಲವಟ್ಟಿ ಕ್ಯಾಂಪ್ ಸೇರಿದಂತೆ ವಿವಿಧ ಕಡೆಗಳಲ್ಲಿ ಪ್ರಚಾರ ಸಭೆ ಹಾಗೂ ಮನೆ ಮನೆಗಳಿಗೆ ಭೇಟಿ ನೀಡಿ ಬಿಜೆಪಿ ಗೆಲ್ಲಿಸುವಂತೆ ಮನವಿ ಮಾಡಿದರು. ಬಿಜೆಪಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದರು.

“ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಕೋಟಿ ರೂ.ಗೂ ಅಧಿಕ ಅನುದಾನವನ್ನು ಉಪಯೋಗಿಸಿ ಅಭಿವೃದ್ಧಿ ಕೆಲಸಗಳನ್ನು ನಡೆಸಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು. ರಾಜ್ಯದಲ್ಲಿ ಮಾದರಿ ಗ್ರಾಮಗಳ ನಿರ್ಮಾಣಕ್ಕೆ ಬಿಜೆಪಿಯೇ ಭರವಸೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಅಧಿಕಾರಕ್ಕೆ ಬರಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: Shivamogga Jail: ಶಿವಮೊಗ್ಗ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು; ಕೊಲೆಯೆಂದು ಕುಟುಂಬಸ್ಥರ ಆರೋಪ

“ದೇಶದ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹತ್ತರ ಕೆಲಸಗಳನ್ನು ಮಾಡುತ್ತಿದೆ. ದೇಶದಲ್ಲಿ ಉತ್ತಮ ಆಡಳಿತ ನಡೆಸುವ ಸದೃಢ ರಾಷ್ಟ್ರ ನಿರ್ಮಾಣ ಆಗಿದೆ. ಪ್ರಧಾನಿ ನರೇಂದ್ರ ನರೇಂದ್ರ ಮೋದಿ ನಾಯಕತ್ವಕ್ಕೆ ವಿಶ್ವಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಡಬಲ್ ಎಂಜಿನ್ ಸರ್ಕಾರದ ಕೊಡುಗೆಯಿಂದಾಗಿ ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕೆಲಸಗಳು ಆಗಿವೆ” ಎಂದರು.

ಪ್ರಮುಖರಾದ ವಿರೂಪಾಕ್ಷಪ್ಪ, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಹರಿಗೆ, ಹಾಥಿನಗರ, ಯಲವಟ್ಟಿ ಕ್ಯಾಂಪ್‌ನ ಸ್ಥಳೀಯರು ಹಾಜರಿದ್ದರು. ಕ್ಷೇತ್ರ ಪ್ರಭಾರಿ ಎಸ್. ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ ಕಲ್ಲಜ್ಜನಾಳ್, ಸ್ವರೂಪ್ ಸೇರಿದಂತೆ ಪಕ್ಷದ ವಿವಿಧ ಸಮಿತಿ ಮುಖಂಡರು, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಚುನಾವಣಾ ಕಾರ್ಯಾಲಯದಲ್ಲಿ ಸಭೆ ನಡೆಸಿದರು.

Exit mobile version