Site icon Vistara News

Karnataka Election : ನಾಮಪತ್ರ ಸಲ್ಲಿಸಿದ ಬಿಜೆಪಿ ಗ್ರಾಮಾಂತರ ಅಭ್ಯರ್ಥಿ ಕೆ.ಬಿ. ಅಶೋಕನಾಯ್ಕ

#image_title

ಶಿವಮೊಗ್ಗ: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (Karnataka Election) ಕೆ.ಬಿ.ಅಶೋಕನಾಯ್ಕ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಸಾವಿರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಅಶೋಕನಾಯ್ಕ ಅವರು ಚುನಾವಣಾ ಕಾರ್ಯಾಲಯದ ಆವರಣಕ್ಕೆ ಆಗಮಿಸಿದರು.

ಮಂಗಳವಾರ ಬೆಳಗ್ಗೆ ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಾಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರಿಗೆ ಸಾವಿರಾರು ಕಾರ್ಯಕರ್ತರು ಶುಭಾಶಯ ಕೋರಿದರು. ಡೊಳ್ಳು ಹಾಗೂ ಚಂಡೆ ವಾದನ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಬಿಜೆಪಿಯ ಥೀಂ ಸಾಂಗ್ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿತ್ತು. ಎತ್ತಿನ ಗಾಡಿಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು. ಕೇಸರಿ ಶಾಲು, ಪೇಟ ಧರಿಸಿ ಬಿಜೆಪಿ ಪಕ್ಷದ ಬಾವುಟ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.


ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ಉತ್ತರಾಖಂಡ ಮಾಜಿ ಎಂಎಲ್‌ಎ ಮುಖೇಶ್ ಸಿಂಗ್ ಕೋಲಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಡಾ.ಧನಂಜಯ ಸರ್ಜಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ್ ಕಲ್ಲಜ್ಜನಾಳ್ ಸೇರಿದಂತೆ ಗ್ರಾಮಾಂತರ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.


ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಿಂದ ಸಾವಿರಾರು ಕಾರ್ಯಕರ್ತರ ಜತೆಯಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಅವರು ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯುದ್ದಕ್ಕೂ ಬಿಜೆಪಿಗೆ ಜೈಘೋಷ ಹಾಕಿ ಕಾರ್ಯಕರ್ತರು ಸಂಭ್ರಮಿಸಿದರು. ನರೇಂದ್ರ ಮೋದಿ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಮುಖಂಡರಿಗೆ ಜೈಘೋಷ ಹಾಕಿದರು.
ಕೆ.ಬಿ. ಅಶೋಕನಾಯ್ಕ ಅವರು ಗ್ರಾಮಾಂತರ ಕ್ಷೇತ್ರದ ಚುನಾವಣಾ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಎಚ್.ಸಿ.ಬಸವರಾಜಪ್ಪ, ರಾಮಚಂದ್ರ, ಮಹದೇವಪ್ಪ ಸಾಥ್ ನೀಡಿದರು.


ಈ ವೇಳೆ ಮಾತನಾಡಿದ ಅಶೋಕ್‌ ನಾಯ್ಕ ಅವರು, “ಬಿಜೆಪಿ ಪಕ್ಷದ ಹಿರಿಯ ನಾಯಕರ ಆಶೀರ್ವಾದದಿಂದ ಮತ್ತೊಮ್ಮೆ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚಿನ ಬೆಂಬಲ, ಜನರ ಪ್ರೀತಿ ವ್ಯಕ್ತವಾಗಿದೆ. ಸಾವಿರಾರು ಕಾರ್ಯಕರ್ತರು ಆಗಮಿಸುವ ಮೂಲಕ ಮತ್ತೊಮ್ಮೆ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂಬುದನ್ನು ತೋರಿಸಿದ್ದಾರೆ.” ಎಂದು ಹೇಳಿದ್ದಾರೆ.

Exit mobile version