karnataka election Siddaramai says BJP leaders situation is like frog sitting over snake hood Karnataka Election: ʼಹಾವಿನ ಹೆಡೆಯ ಮೇಲಿನ ಕಪ್ಪೆʼಯಂತೆ ಬಿಜೆಪಿ ಲಿಂಗಾಯತ ನಾಯಕರ ಸ್ಥಿತಿ: ಸಿದ್ದರಾಮಯ್ಯ Vistara News

ಕರ್ನಾಟಕ

Karnataka Election: ʼಹಾವಿನ ಹೆಡೆಯ ಮೇಲಿನ ಕಪ್ಪೆʼಯಂತೆ ಬಿಜೆಪಿ ಲಿಂಗಾಯತ ನಾಯಕರ ಸ್ಥಿತಿ: ಸಿದ್ದರಾಮಯ್ಯ

ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು ಆರ್‌ಎಸ್‌ಎಸ್‌ನ ‘ವಿಘ್ನ ಸಂತೋಷಿ’ಗಳೇ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರ ವಿರುದ್ಧ ಆರೋಪ ಮಾಡಿದ್ದಾರೆ. (Karnataka Election)

VISTARANEWS.COM


on

Siddaramaiah remembers Basavanna's quote while giving speech against BJP. Karnataka Election updates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ‘ ಹಾವಿನ ಹೆಡೆಯ ಮೇಲಿನ ಕಪ್ಪೆ, ಹಾರುವ ನೊಣಕ್ಕೆ ಆಶಿಸಿದಂತೆ… ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಲಿಂಗಾಯತ ಸಿಎಂಗಳೇ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಹೇಳಿಕೆ ನಂತರ ಎದ್ದಿರುವ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನದಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್‌ಎಸ್‌ಎಸ್‌ನ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ. (Karnataka Election)

ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು ಆರ್‌ಎಸ್‌ಎಸ್‌ನ ‘ವಿಘ್ನ ಸಂತೋಷಿ’ಗಳೇ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ.

ಜಗದೀಶ್ ಶೆಟ್ಟರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ ಗಳು. ಕಾಂಗ್ರೆಸ್ ಅಲ್ಲ. ಗೆಲ್ಲುವ ಅವಕಾಶವೇ ಇಲ್ಲದ ವರುಣ ಕ್ಷೇತ್ರದಲ್ಲಿ ಒಲ್ಲೆನೆಂದರೂ ಬಲಾತ್ಕಾರವಾಗಿ ವಿ. ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಕೂಡಾ ಇದೇ ಆರ್‌ಎಸ್‌ಎಸ್‌ನ ‘ವಿಘ್ನ ಸಂತೋಷಿ’ಗಳು.

ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಇದೇ ಆರ್‌ಎಸ್‌ಎಸ್‌ ‘ವಿಘ್ನ ಸಂತೋಷಿ’ಗಳು. ಈಗ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಕೂಡಾ ಬಿ.ಎಸ್. ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಇವರಲ್ಲಿ ಯಾರೂ ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ?

ಆದರೆ ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್‌ಎಸ್‌ಎಸ್‌ ನ ‘ವಿಘ್ನ ಸಂತೋಷಿ’ಗಳ ಹುನ್ನಾರವೇ ಆಗಿದೆ.

ಬದಲಾವಣೆಯ ಹೆಸರಲ್ಲಿ ಬಿಜೆಪಿಯೊಳಗಿನ ಆರ್‌ಎಸ್‌ಎಸ್‌ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ ಎನ್ನುವುದನ್ನು ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಮತ್ತು ಒಟ್ಟು ಲಿಂಗಾಯತ ಸಮುದಾಯ ಅರಿತುಕೊಳ್ಳಬೇಕಾಗಿದೆ.

ಈಗಲೂ ಕಾಲ ಮಿಂಚಿಲ್ಲ, ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ‘ಲಿಂಗಾಯತ ಸಿಎಂ ಭ್ರಷ್ಟಾಚಾರ’ ಹೇಳಿಕೆ; ಸಿದ್ದರಾಮಯ್ಯ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕಕ್ಕೆ ಚಾಲನೆ

ಮಹಿಳೆಯರು ಇಂದು ಎಲ್ಲ ವಲಯಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಉದ್ಯಮ ರಂಗದಲ್ಲೂ ಯಶಸ್ಸನ್ನು ಸಾಧಿಸಿ ಮಾದರಿಯಾಗುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹೇಳಿದರು.

VISTARANEWS.COM


on

kalpamrutha cold pressed oil production unit inaugurated
Koo

ತುಮಕೂರು: ಉದ್ಯಮದಲ್ಲಿ ಆಸಕ್ತಿ ಇರುವ ಮಹಿಳೆಯರಿಗೆ ಸೂಕ್ತ ನೆರವು ನೀಡಿ ಪ್ರೋತ್ಸಾಹಿಸಬೇಕಿದೆ ಎಂದು ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಮತ್ತು ಉಬುಂಟು ಕನ್ಸೋರ್ಟಿಯಂ ಸ್ಥಾಪಕ ಅಧ್ಯಕ್ಷರಾದ ಕೆ. ರತ್ನಪ್ರಭಾ (K. Ratna prabha) ಅವರು ಅಭಿಪ್ರಾಯಪಟ್ಟರು.

ಕಲ್ಪಾಮೃತ ಫುಡ್ ಆ್ಯಂಡ್ ಬೆವರೇಜಸ್‌ ಪ್ರೈ.ಲಿ. (Kalpamrutha Food and Beverages) ಸಂಸ್ಥೆಯಿಂದ ಆಯೋಜಿಸಿದ್ದ ಕಲ್ಪಾಮೃತ ನೂತನ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕ ಪ್ರಾರಂಭೋತ್ಸವ, ಮಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಿಳೆಯರು ಇಂದು ಎಲ್ಲ ವಲಯಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಉದ್ಯಮ ರಂಗದಲ್ಲೂ ಯಶಸ್ಸನ್ನು ಸಾಧಿಸಿ ಮಾದರಿಯಾಗುತ್ತಿದ್ದಾರೆ. ಆದರೆ ಮಹಿಳೆಯರು ಉದ್ಯಮ ರಂಗಕ್ಕೆ ಕಾಲಿಟ್ಟು ಮುನ್ನಡೆಯುವುದು ಸುಲಭವಲ್ಲ. ಕುಟುಂಬದಿಂದ ಮೊದಲ್ಗೊಂಡು ಸಾಮಾಜಿಕ ಮತ್ತು ಅಧಿಕಾರಶಾಹಿ ವಲಯದಲ್ಲಿ ಅವರು ಅಡೆತಡೆಗಳನ್ನು ಎದುರಿಸುತ್ತಿದ್ದಾರೆ. ಉದ್ಯಮ ನಡೆಸಲು ಮಹಿಳೆಯರಿಗೆ ಮುಕ್ತ ಅವಕಾಶ ಮತ್ತು ನೆರವು ನೀಡಬೇಕಾದ ಅಗತ್ಯ ಇದೆ ಎಂದು ರತ್ನಪ್ರಭಾ ಅವರು ಹೇಳಿದರು.

ಇದನ್ನೂ ಓದಿ | Money Guide: 1.5 ಲಕ್ಷ ರೂ. ಹೂಡಿಕೆ ಮಾಡಿ 2.27 ಕೋಟಿ ರೂ. ಗಳಿಸಿ! ಯಾವುದು ಈ ಸ್ಕೀಂ?

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೆ.ಬಿ. ಕ್ರಾಸ್‌ ರಸ್ತೆಯ ಮುನಿಯೂರು ಗೇಟ್‌ ಬಳಿಯ ಕಲ್ಪಾಮೃತ ಫುಡ್ & ಬೆವರೇಜಸ್‌ ಪ್ರೈ.ಲಿ. (ಕೆಎಫ್‌ಬಿ) ಆವರಣದಲ್ಲಿ ಈ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ, ಇಂದು ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಸ್ಟಾರ್ಟಪ್‌ಗಳನ್ನು ಆರಂಭಿಸಿ ಯಶ ಕಾಣುತ್ತಿದ್ದಾರೆ. ಆದರೆ ಅವರಿಗೆ ಪ್ರೋತ್ಸಾಹದ ಕೊರತೆ ಇದೆ. ಮಹಿಳೆಯರೇ ಆರಂಭಿಸುವ ಸ್ಟಾರ್ಟಪ್‌ಗಳಿಗೆ ಸರ್ಕಾರ ಮತ್ತಷ್ಟು ನೆರವು ನೀಡಬೇಕಿದೆ ಎಂದು ಸಲಹೆ ನೀಡಿದರು.

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕ

ವಿಸ್ತಾರ ನ್ಯೂಸ್‌ ಕಾರ್ಯ ನಿರ್ವಾಹಕ ಸಂಪಾದಕ ಶರತ್‌ ಎಂ ಎಸ್‌, ಕಲ್ಪಾಮೃತ ಫುಡ್ ಆ್ಯಂಡ್ ಬೆವರೇಜನ್ ಪ್ರೈವೇಟ್ ಲಿಮಿಟೆಡ್ ಗೌರವ ಸಲಹೆಗಾರರು ಮತ್ತು ಮಾರ್ಗದರ್ಶಕ ಎಂ.ಬಿ. ಸಿದ್ಧಬಸಪ್ಪ, ಸಂಸ್ಥಾಪಕರು ಮತ್ತು ಸಿಇಒ ದಿವ್ಯ ಎಂ.ಬಿ., ನಿರ್ದೇಶಕರಾದ ಪ್ರೇಮಾ ಸಿದ್ದಬಸಪ್ಪ ಉಪಸ್ಥಿತರಿದ್ದರು.

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಮಳಿಗೆ

ಏನಿದರ ವಿಶೇಷ?

ಕಲ್ಪತರು ನಾಡಿನ ಕಲ್ಪಾಮೃತ ಫುಡ್ & ಬೆವರೇಜಸ್‌ ಪ್ರೈ.ಲಿ. ಸಂಸ್ಥೆಯು ಸಾಂಪ್ರದಾಯಿಕ ಗಾಣಗಳನ್ನು ಬಳಸಿ ಶುದ್ಧ ಕೊಬ್ಬರಿ, ಕಡಲೇಕಾಯಿ ಬೀಜಗಳಿಂದ ತಯಾರಿಸಿದ ಎಣ್ಣೆ ಹಾಗೂ ಕಲ್ಪತರು ನಾಡಿನ ತೆಂಗಿನಿಂದ ತಯಾರಿಸಿದ ವಿಶೇಷ ಸಿಹಿ ತಿನಿಸುಗಳನ್ನು ಗ್ರಾಹಕರಿಗೆ ಪೂರೈಸಲು ಮುಂದಾಗಿದೆ.

ತುರುವೇಕೆರೆ ತಾಲೂಕಿನ ಎಂ ಗಂಗನಹಳ್ಳಿಯಲ್ಲಿ ಕಲ್ಪಾಮೃತ ನೂತನ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿತು

ಇದನ್ನೂ ಓದಿ | Kannada Pustaka Habba: ಡಿ. 3ರಂದು ರಾಷ್ಟ್ರೋತ್ಥಾನ ಸಾಹಿತ್ಯದ ʼಕನ್ನಡ ಪುಸ್ತಕ ಹಬ್ಬʼ ಸಮಾರೋಪ

ತುರುವೇಕೆರೆ ಸ್ವ-ಸಹಾಯ ಸಂಘ ಹಾಗೂ ಮಹಿಳಾ ಉದ್ಯಮಿಗಳ ಜಾಗತಿಕ ವೇದಿಕೆ ʼಉಬುಂಟುʼ ಸದಸ್ಯರಾಗಿರುವ ದಿವ್ಯ ಎಂ.ಬಿ. ಅವರು ಯುವ ಮಹಿಳಾ ಉದ್ಯಮಿಯಾಗಿ ಈ ಬಹುದೊಡ್ಡ ಯೋಜನೆಯ ಪ್ರಾರಂಭದಲ್ಲಿ ಜಿನಿವಾದಿಂದ ಐ.ಎಫ್.ಆರ್.ಸಿ. (ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆ)ಯ ಸ್ಪರ್ಧೆಯಲ್ಲಿ ಭಾಗವಹಿಸಿ ಸೀಡ್ ಮನಿಯನ್ನು ಪಡೆದ ಕರ್ನಾಟಕ ಮೂಲದ ಮಹಿಳಾ ಪ್ರತಿನಿಧಿಯಾಗಿದ್ದಾರೆ.

Continue Reading

ಕರ್ನಾಟಕ

Road Accident : ಸೋದರನ ನಿಶ್ಚಿತಾರ್ಥ ಮುಗಿಸಿ ಹೊರಟ ಇಬ್ಬರು ಅಪಘಾತದಲ್ಲಿ ಮೃತ್ಯು

Road Accident : ಗದಗ ಜಿಲ್ಲೆಯ ಗಜೇಂದ್ರ ಗಡದಲ್ಲಿ ದೊಡ್ಡ ದುರಂತವೊಂದು ಸಂಭವಿಸಿದೆ. ಸೋದರನ ನಿಶ್ಚಿತಾರ್ಥ ಮುಗಿಸಿ ಮರಳುತ್ತಿದ್ದಾಗ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Gadaga accident two bike riders dead
ಹಸನಸಾಬ್ ಹುಸೇನಸಾಬ್ ಖಾನಗೌಡರ್ ಮತ್ತು ದಾವಲಸಾಬ್ ಹುಸೇನಸಾಬ್ ಮ್ಯಾಗೇರಿ
Koo

ಗದಗ: ಕರ್ನಾಟಕ ರಾಜ್ಯ ಸರ್ಕಾರಿ ಬಸ್‌ (KSRTC Bus) ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು (Two riders dead) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ತಮ್ಮ ಸೋದರನ ಮದುವೆಯ ನಿಶ್ಚಿತಾರ್ಥದಲ್ಲಿ ಭಾಗವಹಿಸಿದ ಖುಷಿಯಲ್ಲಿದ್ದ ಅವರು ರಸ್ತೆ ಮಧ್ಯೆ ಹೆಣವಾಗಿದ್ದಾರೆ.

ದಾವಲಸಾಬ್ ಹುಸೇನಸಾಬ್ ಮ್ಯಾಗೇರಿ(28), ಹಸನಸಾಬ್ ಹುಸೇನಸಾಬ್ ಖಾನಗೌಡರ್ (25) ಮೃತಪಟ್ಟ ದುರ್ದೈವಿಗಳು. ಇವರು ಕೊಪ್ಪಳ ಜಿ.ಕುಷ್ಟಗಿ ತಾಲೂಕಿನ ಕಲಾಲಬಂಡಿ ಗ್ರಾಮದವರಾಗಿದ್ದು, ರೋಣ ತಾಲೂಕಿನ ಸವಡಿ ಗ್ರಾಮದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು.

ಇವರ ಸಹೋದರ ವಿವಾಹ ನಿಶ್ಚಿತಾರ್ಥ ರೋಣದ ಬಳಿ ನಡೆದಿತ್ತು. ಸಹೋದರನ ನಿಶ್ಚಿತಾರ್ಥ ಮಗಿಸಿಕೊಂಡು ವಾಪಸ್ ಬರುವ ವೇಳೆ ದುರ್ಘಟನೆ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. KSRTC ಬಸ್ ಸಿಂಧನೂರಿನಿಂದ ಗಜೇಂದ್ರಗಡಕ್ಕೆ ಬರುತ್ತಿತ್ತು.

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿಯಾಗಿ ಇಬ್ಬರು ಸವಾರರು ಮೃತ್ಯು

ವಿಜಯಪುರ: ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ವೇಗವಾಗಿ ಧಾವಿಸಿ ಬಂದ ಬೈಕ್ ಡಿಕ್ಕಿಯಾಗಿ (Bike Rams into tractor) ಸವಾರರಿಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ (Bike riders dead) ದಾರುಣ ಘಟನೆ (Road Accident) ವಿಜಯಪುರ ಜಿಲ್ಲೆಯ (Vijayapura news) ತಾಳಿಕೋಟಿ ತಾಲೂಕಿನ ದೇವರಹುಲಗಬಾಳ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ.

ತಾಳಿಕೋಟಿ ಮುದ್ದೇಬಿಹಾಳ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಮೃತರನ್ನು ತಾಳಿಕೋಟಿ ತಾಲೂಕಿನ ತುಂಬಗಿ ಗ್ರಾಮದವರಾದ ಹುಸೇನಸಾಬ ಇನಾಂದಾರ್ (30), ಮೈಬುಸಾಬ ನದಾಫ್ (33) ಎಂದು ಗುರುತಿಸಲಾಗಿದೆ.

vijaypura accident

ಕಬ್ಬು ತುಂಬಿಕೊಂಡು ಬಂದು ನಿಂತಿದ್ದ ಟ್ರ್ಯಾಕ್ಟರ್‌ಗೆ ಅತಿ ವೇಗದಲ್ಲಿ ಬಂದ ಬೈಕ್‌ ಡಿಕ್ಕಿಯಾಗಿದೆ. ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ತಾಳಿಕೋಟೆಯಿಂದ ಮುದ್ದೇಬಿಹಾಳ ಕಡೆಗೆ ಹೊರಟಿದ್ದ ಬೈಕ್ ಸವಾರರಿಗೆ ಹೇಗೆ ನಿಯಂತ್ರಣ ತಪ್ಪಿತೋ, ಬೈಕ್‌ ಯಾಕೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆಯಿತೋ ಸ್ಪಷ್ಟತೆ ಇಲ್ಲ. ತಾಳಿಕೋಟಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಬರ್ತ್‌ಡೇ ದಿನವೇ ಡೆತ್‌ಡೇ; ಸ್ನೇಹಿತರಿಬ್ಬರ ಪ್ರಾಣ ತೆಗೆದ ಬಸ್‌!

Continue Reading

ಕರ್ನಾಟಕ

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Road accident : ವಿಜಯಪುರದ ತಾಳಿಕೋಟೆ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

VISTARANEWS.COM


on

vijaypura accident
ತಾಳಿಕೋಟೆ ಅಪಘಾತದಲ್ಲಿಸಂಪೂರ್ಣ ನಜ್ಜಗುಜ್ಜಾಗಿರುವ ಬೈಕ್‌
Koo

ವಿಜಯಪುರ: ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ವೇಗವಾಗಿ ಧಾವಿಸಿ ಬಂದ ಬೈಕ್ ಡಿಕ್ಕಿಯಾಗಿ (Bike Rams into tractor) ಸವಾರರಿಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ (Bike riders dead) ದಾರುಣ ಘಟನೆ (Road Accident) ವಿಜಯಪುರ ಜಿಲ್ಲೆಯ (Vijayapura news) ತಾಳಿಕೋಟಿ ತಾಲೂಕಿನ ದೇವರಹುಲಗಬಾಳ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ.

ತಾಳಿಕೋಟಿ ಮುದ್ದೇಬಿಹಾಳ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಮೃತರನ್ನು ತಾಳಿಕೋಟಿ ತಾಲೂಕಿನ ತುಂಬಗಿ ಗ್ರಾಮದವರಾದ ಹುಸೇನಸಾಬ ಇನಾಂದಾರ್ (30), ಮೈಬುಸಾಬ ನದಾಫ್ (33) ಎಂದು ಗುರುತಿಸಲಾಗಿದೆ.

ಕಬ್ಬು ತುಂಬಿಕೊಂಡು ಬಂದು ನಿಂತಿದ್ದ ಟ್ರ್ಯಾಕ್ಟರ್‌ಗೆ ಅತಿ ವೇಗದಲ್ಲಿ ಬಂದ ಬೈಕ್‌ ಡಿಕ್ಕಿಯಾಗಿದೆ. ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ತಾಳಿಕೋಟೆಯಿಂದ ಮುದ್ದೇಬಿಹಾಳ ಕಡೆಗೆ ಹೊರಟಿದ್ದ ಬೈಕ್ ಸವಾರರಿಗೆ ಹೇಗೆ ನಿಯಂತ್ರಣ ತಪ್ಪಿತೋ, ಬೈಕ್‌ ಯಾಕೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆಯಿತೋ ಸ್ಪಷ್ಟತೆ ಇಲ್ಲ. ತಾಳಿಕೋಟಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಬರ್ತ್‌ಡೇ ದಿನವೇ ಡೆತ್‌ಡೇ; ಸ್ನೇಹಿತರಿಬ್ಬರ ಪ್ರಾಣ ತೆಗೆದ ಬಸ್‌!

KSRTC ಬಸ್‌ ಮತ್ತು ಬೈಕ್‌ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

ಗದಗ: ಕರ್ನಾಟಕ ರಾಜ್ಯ ಸರ್ಕಾರಿ ಬಸ್‌ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ದಾವಲಸಾಬ್ ಹುಸೇನಸಾಬ್ ಮ್ಯಾಗೇರಿ(28), ಹಸನಸಾಬ್ ಹುಸೇನಸಾಬ್ ಖಾನಗೌಡರ್ (25) ಮೃತಪಟ್ಟ ದುರ್ದೈವಿಗಳು. ಇವರು ಕೊಪ್ಪಳ ಜಿ.ಕುಷ್ಟಗಿ ತಾಲೂಕಿನ ಕಲಾಲಬಂಡಿ ಗ್ರಾಮದವರಾಗಿದ್ದು, ರೋಣ ತಾಲೂಕಿನ ಸವಡಿ ಗ್ರಾಮದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು.

ಸಹೋದರನ ನಿಶ್ಚಿತಾರ್ಥ ಮಗಿಸಿಕೊಂಡು ವಾಪಸ್ ಬರುವ ವೇಳೆ ದುರ್ಘಟನೆ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ವಿಜಯನಗರ

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Vijayanagara News: ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.

VISTARANEWS.COM


on

Task force committee meeting at Kottur
ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.
Koo

ಕೊಟ್ಟೂರು: ಇಡೀ ಕ್ಷೇತ್ರದಲ್ಲಿ ಜನರ ಮೂಲಭೂತ ಸೌಕರ್ಯಗಳಿಗೆ (Infrastructure) ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಶಾಸಕ ನೇಮಿರಾಜ ನಾಯ್ಕ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೊಟ್ಟೂರು ತಾಲೂಕಿನ 14 ಗ್ರಾಮ ಪಂಚಾಯಿತಿಗಳಲ್ಲಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಅಧಿಕಾರಿಗಳು ಸ್ಪಂದಿಸಬೇಕು ಎಂದು ತಿಳಿಸಿದರು.

ಕೊಟ್ಟೂರು ಪಟ್ಟಣದಲ್ಲಿ ಜನತೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಮುಖ್ಯಾಧಿಕಾರಿಗಳಿಗೆ ಸೂಚಿಸಿದ ಶಾಸಕರು, ಶುದ್ಧ ಕುಡಿಯುವ ನೀರಿನ ಘಟಕಗಳೇನಾದರೂ ದುರಸ್ತಿಯಿದ್ದರೆ ಕೂಡಲೇ ಅವುಗಳನ್ನು ಸರಿಪಡಿಸಲು ತಿಳಿಸಿದರು.

ಇದನ್ನೂ ಓದಿ: ಕೇಂದ್ರದ ಪಿಎಂ ಗರೀಬ್ ಕಲ್ಯಾಣ್ ಅನ್ನ ಸ್ಕೀಂ 5 ವರ್ಷದವರೆಗೆ ವಿಸ್ತರಣೆ!

ಬರದ ಹಿನ್ನಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒಗಳು ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೊಟ್ಟೂರು ಪಟ್ಟಣದ ಸಾರ್ವಜನಿಕರು ತಮ್ಮ ತಮ್ಮ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಇಲ್ಲವಾದರೆ ಸೈಟ್‌ಗಳ ಮಾಲೀಕರಿಗೆ ದಂಡ ಹಾಕಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಡಿ.1ರಿಂದ ಸಿಮ್‌ ಕಾರ್ಡ್‌ ಹೊಸ ರೂಲ್ಸ್; ನಿಯಮ ಮೀರಿದ್ರೆ 10 ಲಕ್ಷ ರೂ. ದಂಡ!

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಅಮರೇಶ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಕಂದಾಯ ನಿರೀಕ್ಷಕ ಹಾಲಸ್ವಾಮಿ, ಜೆಸ್ಕಾಂ ಶಾಖಾಧಿಕಾರಿ ಚೇತನ್, ತಾಲೂಕು ಆರೋಗ್ಯಾಧಿಕಾರಿ ಪ್ರದೀಪ್, ಮುಖ್ಯಾಧಿಕಾರಿ ನಸುರುಲ್ಲಾ ಸೇರಿದಂತೆ ಪಿಡಿಒಗಳು ಹಾಗೂ ಇತರರು ಹಾಜರಿದ್ದರು.

Continue Reading
Advertisement
Fashion Show
ದೇಶ17 mins ago

Fashion Show : ಏಕತೆಗೆ ಧಕ್ಕೆ; ಫ್ಯಾಶನ್​ ಶೋದಲ್ಲಿ ಬುರ್ಖಾ ಹಾಕಿದ್ದಕ್ಕೆ ಮುಸ್ಲಿಂ ನಾಯಕನ ಆಕ್ಷೇಪ!

kalpamrutha cold pressed oil production unit inaugurated
ಕರ್ನಾಟಕ18 mins ago

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕಕ್ಕೆ ಚಾಲನೆ

Gadaga accident two bike riders dead
ಕರ್ನಾಟಕ18 mins ago

Road Accident : ಸೋದರನ ನಿಶ್ಚಿತಾರ್ಥ ಮುಗಿಸಿ ಹೊರಟ ಇಬ್ಬರು ಅಪಘಾತದಲ್ಲಿ ಮೃತ್ಯು

Anju who went to Pakistan for to marry her lover, returns to India
ದೇಶ21 mins ago

Anju Love Story: ಪಾಕ್‌ಗೆ ಹೋಗಿ ಪ್ರಿಯಕರನ ಮದ್ವೆಯಾಗಿದ್ದ ಅಂಜು ಭಾರತಕ್ಕೆ ವಾಪಸ್!

vijaypura accident
ಕರ್ನಾಟಕ34 mins ago

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Task force committee meeting at Kottur
ವಿಜಯನಗರ45 mins ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ49 mins ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್1 hour ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ1 hour ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ1 hour ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ16 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌