Site icon Vistara News

Karnataka Election: ಯಡಿಯೂರಪ್ಪ ಅವರನ್ನು ಬ್ಲ್ಯಾಕ್‌ಮೇಲ್‌ ಮಾಡಿ ವರುಣಾದಲ್ಲಿ ವಿಜಯೇಂದ್ರಗೆ ಟಿಕೆಟ್‌: ಕಾಂಗ್ರೆಸ್‌ ಆರೋಪ

BSY vijayendra Amit shah karnataka election yediyurappa is being blackmailed accused congress

#image_title

ಬೆಂಗಳೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಮೇಲಿರುವ ಪ್ರಕರಣಗಳನ್ನು ಆಧಾರವಾಗಿಸಿ ಬಿ.ಎಸ್.‌ ಯಡಿಯೂರಪ್ಪ ಅವರನ್ನು ಬಿಜೆಪಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು, ನಮಗೆ ಬಂದಿರುವ ಮಾಹಿತಿ ಪ್ರಕಾರ ಯಡಿಯೂರಪ್ಪ ಅವರನ್ನು ಬ್ಲಾಕ್ ಮೇಲ್‌ ಮಾಡುವ ಪ್ರಯತ್ನ ಮುಂದುವರಿಸಿದ್ದು, ನಿನ್ನೆ ಅವರ ಮೇಲೆ ಒತ್ತಡ ಹಾಕಿ ಅವರ ಪುತ್ರ ವಿಜಯೇಂದ್ರ ಅವರನ್ನು ವರುಣಾದಲ್ಲಿ ನಿಲ್ಲಿಸಲು ತೀರ್ಮಾನಿಸಲಾಗಿದೆ.

ಜುಲೈ 25, 2021 ಬಿಜೆಪಿ ಇತಿಹಾಸದಲ್ಲಿ ಕಪ್ಪು ಚುಕ್ಕೆ. ಕಾರಣ ಯಡಿಯೂರಪ್ಪ ಅವರು ಕಣ್ಣೀರು ಹಾಕಿ ರಾಜೀನಾಮೆ ನೀಡಿದರು. ಯಡಿಯೂರಪ್ಪ ಅವರನ್ನು ಬಳಸಿಕೊಂಡು ವ್ಯವಸ್ಥಿತವಾಗಿ ಅವರನ್ನು ಮೂಲೆಗುಂಪು ಮಾಡಲು ಮುಂದಾಗಿದೆ ಬಿಜೆಪಿ. ಯಡಿಯೂರಪ್ಪ ಅವರು ವಿಜಯೇಂದ್ರ ಅವರನ್ನು ಎಂಎಲ್‌ಸಿ ಮಾಡಿ ರಾಜ್ಯ ಸಂಪುಟದಲ್ಲಿ ಹಾಗೂ ರಾಘವೇಂದ್ರ ಅವರನ್ನು ಕೇಂದ್ರ ಸಂಪುಟದಲ್ಲಿ ಸೇರಿಸುವಂತೆ ಬಿಜೆಪಿ ನಾಯಕರಿಗೆ ತಿಳಿಸಿದರೂ ಇದುವರೆಗೂ ಯಾವುದೂ ಸಾಧ್ಯವಾಗಿಲ್ಲ.

ವಿಜಯೇಂದ್ರ ಅವರ ಮೇಲೆ ಐದಾರು ಇಡಿ ಹಾಗೂ ಐಟಿ ಪ್ರಕರಣಗಳು ಬಾಕಿ ಇವೆ. ಇವುಗಳನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಲು ಒತ್ತಾಯಿಸುತ್ತಿದ್ದಾರೆ.

ಯಡಿಯೂರಪ್ಪ ಅವರು ಆರು ತಿಂಗಳ ಮುನ್ನವೇ ಶಿಕಾರಿಪುರದಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡುವುದಾಗಿ ಹೇಳಿದ್ದರು. ಆದರೆ ಈಗ ವರುಣಾದಲ್ಲಿ ಸ್ಪರ್ಧಿಸುವ ಬಗ್ಗೆ ಒತ್ತಡ ಹಾಕುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ. ತಮ್ಮ ಪುತ್ರನಿಗೆ ಶಿಕಾರಿಪುರದಲ್ಲಿ ಟಿಕೆಟ್ ಸಿಗದ ಆತಂಕ ಯಡಿಯೂರಪ್ಪ ಅವರಿಗೆ ಇದೆ. ಒಳ ಮೀಸಲಾತಿ ವಿಚಾರದಲ್ಲಿ ಶಿಕಾರಿಪುರದಲ್ಲಿ ಯಾವ ಪರಿಸ್ಥಿತಿ ನಿರ್ಮಿಸಿದ್ದಾರೆ, ಇಂತಹ ಅನೇಕ ತಂತ್ರಗಾರಿಕೆಗಳನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ.

ವಿರೋಧ ಪಕ್ಷಗಳ ಮೇಲೆ ಬಿಜೆಪಿ ಸರ್ಕಾರದ ಇಡಿ ಮತ್ತು ಐಟಿ ದಾಳಿ ಸದ್ಯದಲ್ಲೇ ಆರಂಭವಾಗುವ ಸಾಧ್ಯತೆ ಇದೆ. ಬಿಜೆಪಿಯವರು ಏನೇ ಮಾಡಿದರೂ ರಾಜ್ಯದ ಜನರ ಮನಸ್ಸು ಬದಲಿಸಲು ಆಗುವುದಿಲ್ಲ.

ಜೆಡಿಎಸ್ ಎಷ್ಟೇ ಬೊಂಬಡ ಬಡೆದುಕೊಂಡರು ಅಧಿಕಾರಕ್ಕೆ ಬರುವುದಿಲ್ಲ ಎಂದು ಸಿದ್ದರಾಮಯ್ಯ ಇತ್ತೀಚೆಗೆ ತಿಳಿಸಿದ್ದರು. ಇದನ್ನು ಟೀಕಿಸುವ ಭರದಲ್ಲಿ ಕುಮಾರಸ್ವಾಮಿ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ. ಅವರು ಬಿಜೆಪಿ ಬಿ ಟೀಂ ಆಗಿ ಕೆಲಸ ಮಾಡುತ್ತಿದ್ದು, ಈಗಾಗಲೇ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಗೆಲ್ಲುವ ಕ್ಷೇತ್ರಗಳಲ್ಲಿ ಬಿಜೆಪಿ ನಿರ್ದೇಶದನದಂತೆ ಅಭ್ಯರ್ಥಿ ಕಣಕ್ಕಿಳಿಸುವ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರ ಬೆಂಬಲದೊಂದಿಗೆ ಇವರ ಷಡ್ಯಂತ್ರವನ್ನು ಮೆಟ್ಟಿನಿಂತು 135-140 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ನೀಡಲಿ: ರಮೇಶ್‌ ಬಾಬು ಆಗ್ರಹ

Exit mobile version