Site icon Vistara News

Karnataka election 2023 : ಕಾರಟಗಿಯ (Karatagi) ಕಿಂದಿಕ್ಯಾಂಪ್‌ನಲ್ಲಿ ಇವಿಎಂ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ; ಮತದಾನದ ಕುರಿತು ಜಾಗೃತಿ

voter awareness programme at Karatagi

voter awareness programme

ಕಾರಟಗಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ (Karnataka elections 2023) ಹಿನ್ನೆಲೆಯಲ್ಲಿ ತಾಲೂಕಿನ ಯರಡೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಂದಿಕ್ಯಾಂಪ್‌ನಲ್ಲಿ ಮಂಗಳವಾರ ತಾಲೂಕು ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ (voter awareness programme) ಕಾರ್ಯಕ್ರಮದಲ್ಲಿ ಗ್ರಾಮದ ನಿವಾಸಿಗಳಿಂದ ಅಣಕು ಮತದಾನ ಮಾಡಿಸಲಾಯಿತು.

ಈ ವೇಳೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಮೇಶ್ ತಿಮ್ಮಾರೆಡ್ಡಿ ಮಾತನಾಡಿ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಮತಗಟ್ಟೆಗೆ ತೆರಳಿ ಮತ ಚಲಾಯಿಸಿ ಎಂದು ಕರೆ ನೀಡಿದರು.

ಸಂವಿಧಾನಾತ್ಮಕವಾಗಿ ಮತ ಹಾಕುವುದು ನಮ್ಮ ಕರ್ತವ್ಯ. ಗ್ರಾಮದಲ್ಲಿನ ಪ್ರತಿಯೊಬ್ಬರೂ ಮತದಾನದಿಂದ ಯಾರು ಹೊರಗುಳಿಯಬಾರದು. ನಮ್ಮ ಗ್ರಾಮ ಪಂಚಾಯತಿಯ ಶೇಕಡಾ 100 ರಷ್ಟು ಮತದಾನವಾಗಲು‌ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

ಇದನ್ನೂ ಓದಿ: PF For Medical Reason : ಅನಾರೋಗ್ಯದ ಸಂದರ್ಭ ಪಿಎಫ್‌ನಿಂದ ಮುಂಗಡ ಪಡೆಯುವುದು ಹೇಗೆ? ಇಲ್ಲಿದೆ ಡಿಟೇಲ್ಸ್

ನಂತರ ತಾ.ಪಂ ಐಇಸಿ ‌ಸಂಯೋಜಕ ಸೋಮನಾಥ ನಾಯಕ ಅವರು ಇವಿಎಂ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಕುರಿತು ಮಾಹಿತಿ ನೀಡಿ, ಕ್ಯಾಂಪ್ ನ ನಿವಾಸಿಗಳಿಂದ ಅಣಕು ಮತದಾನ ಮಾಡಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಕಾರ್ಯದರ್ಶಿ ಹನುಮಂತಪ್ಪ, ಸಿಬ್ಬಂದಿಗಳಾದ ಗ್ಯಾನಪ್ಪ ಕುಂಟೋಜಿ, ಹುಸೇನಪ್ಪ, ರಾಮಲಿಂಗಪ್ಪ, ದುರಗಪ್ಪ ಸೇರಿ ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version