ಕಲಬುರಗಿ: ರಾಜ್ಯ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದ್ದರಿಂದ ತೊಗರಿಯ ನಾಡು ಕಲಬುರಗಿಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಭೀಮಾತೀರ ಅಫಜಲಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ನಾಮಪತ್ರ ಸಲ್ಲಿಸಿದರು.
ಇನ್ನೂ ನಾಮಪತ್ರ ಕಾರ್ಯಕ್ರಮದ ನಂತರ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪಾಲ್ಗೊಂಡಿದ್ದರು. ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಲ್ಲಮಪ್ರಭು ಪಾಟೀಲ್ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿ ಬೃಹತ್ ರೋಡ್ ಶೋ ನಡೆಸಿದರು.
ಇದನ್ನೂ ಓದಿ:Karnataka Election 2023: ಕನಕಪುರ ಸ್ಪರ್ಧೆಯಿಂದ ಡಿಕೆಶಿ ಹಿಂದೆ ಸರಿಯುವ ಮಾತೇ ಇಲ್ಲ; ಡಿಕೆಸು ತಿರುಗೇಟು
ಸೇಡಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ನಾಮಪತ್ರ ಸಲ್ಲಿಸಿ ಸಾವಿರಾರು ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ನಡೆಸಿದರು.ಜೇವರ್ಗಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಡಾ ಅಜಯ್‌ಸಿಂಗ್ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಶಾಸಕ ಅವರು ಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಅಲ್ಲದೇ ಜೇವರ್ಗಿ ಜೆಡಿಎಸ್ ಅಭ್ಯರ್ಥಿಯಾಗಿ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ನಾಮಪತ್ರ ಸಲ್ಲಿಸಿದರು.
ಚಿಂಚೋಳಿ ಶಾಸಕ ಡಾ ಅವಿನಾಶ್ ಜಾಧವ್ ಎರಡನೇ ಬಾರಿಗೆ ಅಪಾರ ಬೆಂಬಲಿಗರ ಜೊತೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಇನ್ನೂ ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಹಾಲಿ ಶಾಸಕಿ ಖನೀಜ್ ಫಾತೀಮಾ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.