ಕೊಪ್ಪಳ: ಅಮೃತ ಕಾಲ ವರ್ಷದಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ (Karnataka election 2023) ನಡೆಯುತ್ತಿದೆ. ಕರ್ನಾಟಕ ಜನತೆ ಪ್ರಧಾನಿ ನರೇಂದ್ರ ಮೋದಿ (narendra modi) ಕಾರ್ಯಕ್ರಮಗಳನ್ನು ಒಪ್ಪಿಕೊಂಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ಎಸ್‌ಟಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಸಮೀರ್ ಆರೋನಾ ತಿಳಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಗತ್ತು ಭಾರತದ ಕಡೆ ನೋಡುತ್ತಿದೆ. ಕರ್ನಾಟಕದಲ್ಲಿ ಜನತೆ ಬಿಜೆಪಿ ಪರವಾಗಿದ್ದಾರೆ. ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಪರಿಶಿಷ್ಟರ ಆಶಯದಂತೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಪರಿಶಿಷ್ಟರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲಾಗಿದೆ. ಪೌಷ್ಟಿಕ ಆಹಾರ ನೀಡಲು ಸಿರಿ ಧಾನ್ಯಕ್ಕೆ ಉತ್ತೇಜನ ನೀಡಲಾಗಿದೆ ಎಂದರು.
ಡಬಲ್ ಎಂಜಿನ್ ಸರ್ಕಾರ
ರಾಜ್ಯದಲ್ಲಿ ಬಿಜೆಪಿ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಡಬಲ್ ಎಂಜಿನ್ ಸರ್ಕಾರ ಕೆಲಸ ಮಾಡುತ್ತಿದೆ. ಮೋದಿ (narendra modi) ನಮ್ಮ ರಾಷ್ಟ್ರೀಯ ನಾಯಕರಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ (Basavaraj Bommai) ಸೇರಿ ಹಲವು ನಾಯಕರಿದ್ದಾರೆ. ನಿಶ್ಚಿತವಾಗಿಯೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.
ಇನ್ನು ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷ ಬಿಟ್ಟು ಹೋಗಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಮಳೆ ಬಂದಾಗ ಕಲ್ಲು ಮಣ್ಣು ಹರಿದುಹೋಗುತ್ತದೆ ಎಂದು ವ್ಯಾಖ್ಯಾನಿಸಿದರು.