Site icon Vistara News

Karnataka Elections 2023 : ಜೆಡಿಎಸ್‌ನಿಂದ ಇನ್ನೂ 6 ಕ್ಷೇತ್ರಗಳ ಪಟ್ಟಿ ರಿಲೀಸ್‌; ಮಾಲಕ ರೆಡ್ಡಿ, ರಘು ಆಚಾರ್‌ಗೆ ಟಿಕೆಟ್‌

AB Malaka Reddy

#image_title

ಬೆಂಗಳೂರು: ವಿಧಾನಸಭಾ ಚುನಾವಣೆಗಾಗಿ (Karnataka Elections 2023) ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಜೆಡಿಎಸ್‌ ಶನಿವಾರ ಆರು ಜನರ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಬೇರೆ ಪಕ್ಷದಿಂದ ಬಂದಿರುವ ಪ್ರಮುಖ ನಾಯಕರೇ ಇರುವುದು ವಿಶೇಷ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಐವರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದರು.

ಚಿತ್ರದುರ್ಗಕ್ಕೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ ಕ್ಷೇತ್ರಕ್ಕೆ ದೇವರಾಜ್ ಪಾಟೀಲ್ ಹಾಗೂ ಯಾದಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಅವರು ಜೆಡಿಎಸ್ ಅಭ್ಯರ್ಥಿಗಳು ಎಂದು ಮಾಧ್ಯಮಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಪ್ರಕಟಿಸಿದರು.

ಎನ್ ಆರ್ ಸಂತೋಷ್, ದೇವರಾಜ್ ಪಾಟೀಲ್ ಸೇರ್ಪಡೆ

ಇದೇ ಸಂದರ್ಭದಲ್ಲಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ, ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಪಕ್ಷಕ್ಕೆ ಸೇರಿದರು. ಎನ್‌.ಆರ್‌. ಸಂತೋಷ್‌ ಅವರಿಗೆ ಅರಸೀಕರೆ ಕ್ಷೇತ್ರದ ಟಿಕೆಟನ್ನು ನೀಡಲಾಗುತ್ತಿದೆ. ಕುಮಾರಸ್ವಾಮಿ ಅವರು, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇಬ್ಬರೂ ನಾಯಕರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

ಪ್ರಣಾಳಿಕೆಗೆ ಮುನ್ನ ಜೆಡಿಎಸ್‌ನ 12 ಭರವಸೆ ಪ್ರಕಟಿಸಿದ ದೇವೇಗೌಡರು

ಬೆಂಗಳೂರು: ಮಹಿಳಾ ಸಬಲೀಕರಣ, ಆರೋಗ್ಯ ಚೈತನ್ಯ, ಸೇರಿದಂತೆ ಮುಂದಿನ ವಿಧಾನಸಭಾ ಚುನಾವಣೆಯ (Karnataka Elections) ಬಳಿಕ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಅನುಷ್ಠಾನಗೊಳಿಸುವ 12 ಭರವಸೆಗಳನ್ನು ಪ್ರಕಟಿಸಿದ್ದಾರೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ.

ಶನಿವಾರ ಪದ್ಮನಾಭ ನಗರದ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 12 ಭರವಸೆಗಳನ್ನು ಪ್ರಕಟಿಸಿದರು. ಇದು ಚುನಾವಣಾ ಪ್ರಣಾಳಿಕೆಯಲ್ಲ. ಪ್ರಣಾಳಿಕೆಯನ್ನು ಮುಂದಿನ ದಿನಗಳಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಡುಗಡೆ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ. ನಾನು 12 ಭರವಸೆಗಳನ್ನು ಘೋಷಣೆ ಮಾಡುತ್ತಿದ್ದೇನೆ ಎಂದು ಹೇಳಿದರು.

ʻʻಅಲ್ಪಸಂಖ್ಯಾತರಿಗೆ ಏನೇನು ಮಾಡಬೇಕು ಎನ್ನುವ ಬಗ್ಗೆ ಒಂದು ಸಮಿತಿ ನೇಮಕ ಮಾಡಿ ಅದು ಕೊಟ್ಟ ವರದಿ ಜಾರಿ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರ ಬಗ್ಗೆ ಏನು ಮಾಡಿದ್ದಾರೆ ಅಂತ ವಿವರವಾಗಿ ಹೇಳಿದ್ದಾರೆ. ಪ್ರಣಾಳಿಕೆ ಬಿಡುಗಡೆ ಬೇರೆ ದಿನ ಆಗುತ್ತದೆ. ಇಂದು ಕಾರ್ಯಕ್ರಮಗಳ ಭರವಸೆ ಮಾತ್ರ ಇಂದು ಹಂಚಿಕೊಳ್ಳುತ್ತೇನೆʼʼ ಎಂದು ಎಚ್‌.ಡಿ. ದೇವೇಗೌಡ ಹೇಳಿದರು.

ಎಚ್.ಡಿ ಕುಮಾರಸ್ವಾಮಿ ಅವರು, ರಾಜ್ಯಾಧ್ಯಕ್ಷರಾಗಿರುವ ಸಿ.ಎಂ. ಇಬ್ರಾಹಿಂ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಬಾಕಿ ಉಳಿದ ಕ್ಷೇತ್ರಗಳ ಟಿಕೆಟ್‌ ಘೋಷಣೆ ಮಾಡಲಿದ್ದಾರೆ ಎಂದರು.

ಟಿಕೆಟ್‌ ವಿಚಾರದಲ್ಲಿ ಕೆಲವೊಂದು ಹೈ ಡ್ರಾಮಾಗಳು ನಡೆಯುತ್ತಿವುದು ನನಗೆ ಗೊತ್ತಿದೆ. ಅದರೆ, ಉಳಿದ ಅಭ್ಯರ್ಥಿಗಳ ಆಯ್ಕೆಯಲ್ಲಿ ನನ್ನದು ಯಾವುದೇ ತಕರಾರಿಲ್ಲ. ಬೇರೆ ಯಾವುದಕ್ಕೂ ನಾನು ಕೈ ಹಾಕಲ್ಲ. ಕುಮಾರಸ್ವಾಮಿಯವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಮನವಿ ಮಾಡ್ತೀನಿ ಎಂದು ಕೇಳಿಕೊಂಡರು ದೇವೇಗೌಡರು.

ಇದನ್ನೂ ಓದಿ : Karnataka Elections : ವರ್ಷಕ್ಕೆ 5 ಉಚಿತ ಸಿಲಿಂಡರ್‌, ಹಿರಿಯ ನಾಗರಿಕರಿಗೆ 5 ಸಾವಿರ ರೂ. ಮಾಸಾಶನ; ಏನೇನಿದೆ ಜೆಡಿಎಸ್‌ ಪ್ರಾಮಿಸ್‌ನಲ್ಲಿ?

Exit mobile version