Site icon Vistara News

Karnataka Elections : ಕಾಂಗ್ರೆಸ್‌ ಟಿಕೆಟ್‌ಗಾಗಿ ಹಣ ಸಂಗ್ರಹ ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಆರೋಪ, ಆಯೋಗಕ್ಕೆ ದೂರು

Shobha Karandlaje

#image_title

ಬೆಂಗಳೂರು: ಕಾಂಗ್ರೆಸ್‌ ಪಕ್ಷವು ವಿಧಾನಸಭಾ ಚುನಾವಣೆ (Karnataka Elections) ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲು ಹಣ ಸಂಗ್ರಹಿಸಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದೆ. ಇದು ಲಂಚ ಸ್ವೀಕಾರಕ್ಕೆ ಸರಿಸಮಾನ ಮತ್ತು ನೀತಿ ಸಂಹಿತೆಗಳ ಉಲ್ಲಂಘನೆ ಎಂದು ಬಿಜೆಪಿ ಆರೋಪಿಸಿದೆ. ಈ ಸಂಬಂಧ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆಯೂ ಆಗಿರುವ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಶೇಷಾದ್ರಿ ರಸ್ತೆ ಬಳಿ ಇರುವ ಕಚೇರಿಗೆ ಅವರು ಭೇಟಿ ನೀಡಿ ಪಕ್ಷದ ವಿರುದ್ಧ ದೂರು ಸಲ್ಲಿಸಿದರು.

ʻʻಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ಬಿ-ಫಾರಂ ನೀಡುವ ಅಧಿಕೃತ ವ್ಯಕ್ತಿಯೂ ಆಗಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಹಣ ಸಂಗ್ರಹಿಸಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಲಂಚವೇ ಆಗಿದೆ. ಮತ್ತು ಚುನಾವಣಾ ಕಾನೂನುಗಳು ಮತ್ತು ಮಾದರಿ ನೀತಿ ಸಂಹಿತೆಯ ಗಂಭೀರ ಉಲ್ಲಂಘನೆಯಾಗಿದೆʼʼ ಎಂದು ದೂರಿನಲ್ಲಿ ಗಮನ ಸೆಳೆಯಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್‌ ಕೊಡಲು ಅವರು ಪ್ರತಿ ಆಕಾಂಕ್ಷಿಗಳಿಂದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದ್ದು,, ಕ್ರಮಕ್ಕೆ ಅವರು ವಿನಂತಿಸಿದರು. ಯಾವುದೇ ಚುನಾವಣಾ ಹಕ್ಕನ್ನು ಚಲಾಯಿಸಲು ಯಾರು ಹಣವನ್ನು ನೀಡುತ್ತಾರೆ ಮತ್ತು/ಅಥವಾ ತೆಗೆದುಕೊಳ್ಳುತ್ತಾರೆ ಎಂಬುದು ಲಂಚಕ್ಕೆ ಸಮನಾಗಿರುತ್ತದೆ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ವಿನಂತಿಸಲಾಯಿತು.

ಹಣ ನೀಡಿರುವವರಲ್ಲಿ ಅಭ್ಯರ್ಥಿಯೂ ಸೇರಿದ್ದಾರೆ ಎಂಬುದು ಸ್ಪಷ್ಟವಾಗಿದ್ದು, ಲಂಚ ನೀಡಿದ ಅಭ್ಯರ್ಥಿಗಳು ಮುಂಬರುವ ಚುನಾವಣಾ ಪ್ರಕ್ರಿಯೆಯಿಂದ ಅನರ್ಹರಾಗುತ್ತಾರೆ. ಹಣವನ್ನು ತೆಗೆದುಕೊಂಡು ಬಿ ಫಾರ್ಮ್ ಕೊಡುವುದು ಕೂಡ ನೀಡುವುದು ಕಾನೂನುಬಾಹಿರವಾಗಿದೆ ಮತ್ತು ಆದ್ದರಿಂದ ಕಾಂಗ್ರೆಸ್ ಪಕ್ಷ / ಡಿ.ಕೆ ಶಿವಕುಮಾರ್ ತನ್ನ ಅಭ್ಯರ್ಥಿಗಳಿಗೆ ನೀಡಿದ ಎಲ್ಲಾ ಬಿ ಫಾರ್ಮ್‍ಗಳು ಅಕ್ರಮದಿಂದ ಕೂಡಿದೆ ಮತ್ತು ತಿರಸ್ಕರಿಸಲೂಬಹುದು. ಈ ಮೂಲಕ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿರುವ 1,350 ಟಿಕೆಟ್ ಆಕಾಂಕ್ಷಿಗಳಿಂದ ಪಕ್ಷ 23 ಕೋಟಿ ಸಂಗ್ರಹಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಲಂಚ ಪಡೆದು ಕಾಂಗ್ರೆಸ್ ಟಿಕೆಟ್ ನೀಡಿರುವುದು ಸ್ಪಷ್ಟವಾಗಿದೆ ಎಂದು ಮನವಿಪತ್ರದಲ್ಲಿ ವಿವರಿಸಲಾಗಿದೆ.

ʻʻಹೀಗೆ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷವು ಚುನಾವಣಾ ಹಕ್ಕನ್ನು ಮುಕ್ತವಾಗಿ ಚಲಾಯಿಸುವಲ್ಲಿ ಮಧ್ಯಪ್ರವೇಶಿಸುತ್ತಿದೆ, ಬಿ ಫಾರಂಗಳನ್ನು ನೀಡುವುದು ಮತ್ತು ಹಣ ಪಡೆದು ಆಕಾಂಕ್ಷಿಗಳಿಗೆ ಟಿಕೆಟ್ ನೀಡುವುದು ಕಾನೂನುಬಾಹಿರ ಮತ್ತು ಕಳಂಕವಾಗಿದೆ. ಆದ್ದರಿಂದ ಈ ಪ್ರಕ್ರಿಯೆಯನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕುʼʼ ಎಂದು ಮನವಿಯಲ್ಲಿ ಕೋರಲಾಗಿದೆ.

ʻʻಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಬೇಕಾಗಿದೆ. ಕಾಂಗ್ರೆಸ್ ಅಧ್ಯಕ್ಷರು ಮತ್ತು ಟಿಕೆಟ್‍ಗಾಗಿ ಲಂಚ ಪಡೆದಿರುವ/ ನೀಡಿದ ಎಲ್ಲ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ವಿನಂತಿಸಲಾಯಿತು. ಚುನಾವಣೆಗಳು ಮತ್ತು ಅಕ್ರಮ ಎಸಗುವ ಮೂಲಕ ನೀಡಲಾದ ಬಿ ಫಾರ್ಮ್‍ಗಳನ್ನು ತಿರಸ್ಕರಿಸಬೇಕು ಹಾಗೂ ನ್ಯಾಯ ಮತ್ತು ಸೂಕ್ತ ದಂಡದ ಕ್ರಮಗಳು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಿʼʼ ಎಂದು ಕೋರಿದರು.

ಇದನ್ನೂ ಓದಿ : BJP Karnataka: ಕಾಂಗ್ರೆಸ್‌ ಮಾಜಿ ಶಾಸಕ ಎಸ್.‌ ಬಾಲರಾಜು ಬಿಜೆಪಿ ಸೇರ್ಪಡೆ: 140 ಸ್ಥಾನ ನಿಶ್ಚಿತ ಎಂದ ಬಿ.ಎಸ್‌. ಯಡಿಯೂರಪ್ಪ

Exit mobile version