Site icon Vistara News

Karnataka Elections : ಲಿಂಗಾಯತ ಮತ ಸೆಳೆಯಲು ಕಾಂಗ್ರೆಸ್‌ ಮೆಗಾ ಪ್ಲ್ಯಾನ್‌, ಕೂಡಲಸಂಗಮದಲ್ಲಿ ರಾಹುಲ್‌ ನೇತೃತ್ವದಲ್ಲಿ ಬಸವ ಜಯಂತಿ

Basava jayanthi

#image_title

ಬಾಗಲಕೋಟೆ: ಬಿಜೆಪಿಯಲ್ಲಿ ಲಿಂಗಾಯತ ನಾಯಕರು ಮತ್ತು ಮತದಾರರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌, ಈ ವರ್ಗವನ್ನು ಸೆಳೆಯಲು ಮೆಗಾ ಪ್ಲ್ಯಾನ್‌ ಮಾಡಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Elections) ಲಿಂಗಾಯತ ಮತಗಳೇ ಅಧಿಕಾರ ಹಿಡಿಯಲು ಪ್ರಬಲ ಅಸ್ತ್ರ ಎಂದು ಎರಡೂ ಪಕ್ಷಗಳು ನಂಬಿಕೊಂಡಿವೆ. ಹೀಗಾಗಿ ಈ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ಪ್ಲ್ಯಾನ್‌ ಮಾಡಲಾಗುತ್ತಿದೆ.

ಬಸವಣ್ಣನ ಐಕ್ಯ ಸ್ಥಳ ಕೂಡಲ ಸಂಗಮದಲ್ಲಿ ಬಸವ ಜಯಂತಿ ಆಚರಣೆಗಾಗಿ ದೊಡ್ಡ ಕಾರ್ಯಕ್ರಮವೊಂದನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ ಅವರು ಭಾಗಿಯಾಗಲಿದ್ದಾರೆ. ಹಾಗಂತ ಇದು ಕಾಂಗ್ರೆಸ್‌ ಪಕ್ಷದ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮವಲ್ಲ. ಆದರೆ, ಆಯೋಜಿಸುವವರು, ಭಾಗಿಯಾಗುವವರಲ್ಲಿ ಹೆಚ್ಚಿನವರೆಲ್ಲ ಕಾಂಗ್ರೆಸ್‌ನವರೇ ಆಗಿರುತ್ತಾರೆ.

ಏಪ್ರಿಲ್‌ 23ರಂದು ಕೂಡಲ ಸಂಗಮಕ್ಕೆ ರಾಹುಲ್‌ ಗಾಂಧಿ ಭೇಟಿ ನೀಡಲಿದ್ದು, ಸಂಗಮೇಶ್ವರ ದೇವಸ್ಥಾನ, ಅಣ್ಣ ಬಸವಣ್ಣನ ಐಕ್ಯ ಮಂಟಪ ದರ್ಶನ ಮಾಡಲಿದ್ದಾರೆ. ಇದಿಷ್ಟು ಮೊದಲೇ ಫಿಕ್ಸ್‌ ಆಗಿರುವ ಕಾರ್ಯಕ್ರಮ. ಆದರೆ, ಅದಕ್ಕೆ ಬಸವ ಜಯಂತಿ ಸಮಾವೇಶದ ರೂಪವನ್ನು ಹೊಸದಾಗಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಸಭಾಭವನದಲ್ಲಿ ಬಸವ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದೆ.

ಕೂಡಲ ಸಂಗಮದಲ್ಲಿ ಬಸವ ಜಯಂತಿ ಕಾರ್ಯಕ್ರಮಕ್ಕೆ ಸ್ಥಳ ಪರಿಶೀಲನೆ ನಡೆಸುತ್ತಿರುವ ಕಾಂಗ್ರೆಸ್‌ ಮುಖಂಡರು

ಕೂಡಲ ಸಂಗಮದಲ್ಲಿ ಸ್ಥಳ ಪರಿಶೀಲನೆ

ಬಸವ ಜಯಂತಿ ಕಾರ್ಯಕ್ರಮಕ್ಕಾಗಿ ಕಾಂಗ್ರೆಸ್‌ನ ಪ್ರಮುಖ ನಾಯಕರು ಶುಕ್ರವಾರ ಕೂಡಲ ಸಂಗಮದಲ್ಲಿ ಸ್ಥಳ ಮತ್ತು ಸಿದ್ಧತೆಗಳ ಪರಿಶೀಲನೆ ನಡೆಸಿದರು. ಜತೆಗೆ ಸಭೆಯನ್ನೂ ನಡೆಸಿದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಜಿಲ್ಲಾ ಅಧ್ಯಕ್ಷ ಎಸ್.ಜಿ ನಂಜಯ್ಯನಮಠ ಅವರ ಜತೆ ಕೆಪಿಸಿಸಿ ಹಾಗೂ ಎಐಸಿಸಿ ಪ್ರತಿನಿಧಿಗಳು ಸಭೆ ನಡೆಸಿದರು.

ಕಾರ್ಯಕ್ರಮವನ್ನು ಬಸವ ಸಂಘಟನೆಯ ಹೆಸರಿನಲ್ಲಿ ಆಯೋಜನೆ ಮಾಡಲಾಗಿದ್ದು, ಅದರಲ್ಲಿ ರಾಹುಲ್ ಗಾಂಧಿ ಭಾಗಿ ಆಗುತ್ತಾರೆ ಎಂಬಂತೆ ಬಿಂಬಿಸಲಾಗುತ್ತಿದೆ. ರಾಹುಲ್‌ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್ ಪಕ್ಷದ ಯಾವೆಲ್ಲ ಮುಖಂಡರು ಇರ್ತಾರೆ ಎನ್ನುವುದು ಇನ್ನೂ ಫೈನಲ್‌ ಆಗಿಲ್ಲ. ಇದು ಪಕ್ಷಕ್ಕೆ ಸೀಮಿತವಾಗಿ ಮಾಡದೇ ಬೇರೆ ರೂಪ ಕೊಡಲು ಚಿಂತನೆ ನಡೆಯುತ್ತಿದೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ತೊರೆದ ಬಳಿಕ ಬಿಜೆಪಿಯಲ್ಲಿ ಲಿಂಗಾಯತರ ಕಡೆಗಣನೆ ಮಾತು ಜೋರಾಗಿದೆ. ಬಿ.ಎಸ್‌. ಯಡಿಯೂರಪ್ಪ ಅವರ ಸಿಎಂ ಹುದ್ದೆಯಿಂದ ಇಳಿಸಿದ್ದು, ಅವರು ಕಣ್ಣೀರು ಹಾಕಿದ್ದನ್ನು ಕಾಂಗ್ರೆಸ್‌ ಲಿಂಗಾಯತ ಕಡೆಗಣನೆ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ.

ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡಾ ಹಲವು ತಂತ್ರಗಳನ್ನು ಹೆಣೆಯುತ್ತಿದ್ದು, ಒಂದೆರಡು ನಾಯಕರು ಕಮಲ ಪಕ್ಷ ಬಿಟ್ಟು ಹೋದ ಕೂಡಲೇ ಲಿಂಗಾಯತರ ಕಡೆಗಣನೆ ಎಂದಾಗುವುದಿಲ್ಲ. ಲಿಂಗಾಯತರನ್ನು ಸಿಎಂ ಮಾಡುವುದಿದ್ದರೆ ಅದು ಬಿಜೆಪಿ ಮಾತ್ರ ಎಂಬ ವಾದವನ್ನು ಮುಂದಿಡುತ್ತಿದೆ. ಜತೆಗೆ ತಾಕತ್ತಿದ್ದರೆ ಲಿಂಗಾಯತ ಸಿಎಂ ಘೋಷಣೆ ಮಾಡಿ ಎಂದು ಕಾಂಗ್ರೆಸ್‌ಗೆ ಸವಾಲು ಹಾಕುತ್ತಿದೆ.

ಇದನ್ನೂ ಓದಿ : Karnataka Congress: ಬಿಜೆಪಿ ಅಣೆಕಟ್ಟೆ ಒಡೆದಿದೆ; ವೀರಶೈವ ಲಿಂಗಾಯತರು ಕಾಂಗ್ರೆಸ್‌ ಸೇರುವುದನ್ನು ತಡೆಯಲಾಗದು: ಡಿಕೆಶಿ

Exit mobile version