Site icon Vistara News

Karnataka Elections : ಜೆಡಿಎಸ್‌ ಸರ್ಕಾರ ಬಂದ್ರೆ ಸಿಲಿಂಡರ್‌ಗೆ 50% ಸಬ್ಸಿಡಿ, ಆಟೋ ಚಾಲಕರಿಗೆ ತಿಂಗಳಿಗೆ 2000 ರೂ.

HD Kumaraswamy

#image_title

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ ಶೇ.50ರಷ್ಟು ಸಬ್ಸಿಡಿ ನೀಡುವ ಮಹತ್ವದ ಘೋಷಣೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (Karnataka Elections) ಮಾಡಿದ್ದಾರೆ.

ಯಶವಂತಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸುವ ವೇಳೆ ಮಧ್ಯಾಹ್ನದ ಭೋಜನ ವಿರಾಮದ ವೇಳೆ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಕೇಂದ್ರ ಸರಕಾರ ಪುಕ್ಕಟ್ಟೆ ಗ್ಯಾಸ್ ನೀಡುವುದಾಗಿ ಹೇಳಿ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದೆ. ಇದನ್ನು ನಂಬಿದ ಮಹಿಳೆಯರಿಗೆ ಒಂದು ಸಿಲಿಂಡರ್ ಕೊಟ್ಟ ಮೇಲೆ ಬೆಲೆ ಏರಿಕೆಯ ಶಾಕ್ ನೀಡಿತು. ಈಗ ಸಿಲಿಂಡರ್ ಬೆಲೆ ಸಾವಿರ ರೂಪಾಯಿ ದಾಟಿದ್ದು, ಬಡಜನರು ಜೀವನ ಸಾಗಿಸುವುದೇ ದುಸ್ತರವಾಗಿದೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ನಮ್ಮಲ್ಲಿ ಅಡುಗೆ ಅನಿಲ ರಿಯಾಯಿತಿ ಒಂದೇ ಯೋಜನೆ ಅಲ್ಲ, ಇನ್ನೂ ಹಲವಾರು ಯೋಜನೆಗಳು ಇವೆ. ವರ್ಷಕ್ಕೆ ಐದು ಸಿಲಿಂಡರ್ ಉಚಿತವಾಗಿ ಸಿಗಲಿವೆ. 10 ಸಿಲಿಂಡರ್‌ಗೆ ಅರ್ಧ ಹಣ ಪಡೆಯಲಿದ್ದೇವೆ. ಇನ್ನು; ಆಟೋ ಚಾಲಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಕೊಡಲಾಗುವುದು. ಹಾಗೆಯೇ, ಅಂಗನವಾಡಿ ಕಾರ್ಯಕರ್ತರ ಶಾಶ್ವತ ಬೇಡಿಕೆ ಏನಿದೆ ಅದನ್ನು ಈಡೇರಿಸುವ ಕೆಲಸ ಮಾಡುತ್ತೇವೆ. ಈ ಬಗ್ಗೆ ಆರ್ಥಿಕ ತಜ್ಞರ ಜೊತೆ ಚರ್ಚೆ ಮಾಡಲಾಗುತ್ತದೆ ಎಂದು ಅವರು ಘೋಷಣೆ ಮಾಡಿದರು.

ಮುಸ್ಲಿಮರು ಬೀದಿಗೆ ಇಳಿದಿದ್ದರೆ ಅಮಾಯಕರ ಬಲಿಯಾಗುತ್ತಿತ್ತು ಎಂದ ಎಚ್‌ಡಿಕೆ

ಬೆಂಗಳೂರು: ತಮಗೆ ಸಿಗುತ್ತಿದ್ದ ಶೇ.4 ಮೀಸಲಾತಿಯನ್ನು ರದ್ದುಪಡಿಸಿದ್ದಕ್ಕೆ ಆಕ್ರೋಶಗೊಂಡು ಮುಸ್ಲಿಂ ಸಮುದಾಯದವರು ಬೀದಿಗೆ ಇಳಿದಿದ್ದರೆ ಅಮಾಯಕರ ಬಲಿಯಾಗುತ್ತಿತ್ತು. ಇದಕ್ಕೆ ಯಾರು ಹೊಣೆಯಾಗುತ್ತಿದ್ದರು? ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಮೀಸಲಾತಿ ಸಂಬಂಧ ಬಂಜಾರ ಸಮುದಾಯ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿರುವ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮೀಸಲಾತಿ ವ್ಯವಸ್ಥೆ ಹೇಗಿರಬೇಕು ಎಂದು ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಒಂದಷ್ಟು ನಿಯಮಾವಳಿ ರೂಪಿಸಿದ್ದಾರೆ. ಆದರೆ ಈ ರೀತಿ ಮತ ಪಡೆಯುವ ಸಲುವಾಗಿ ಜಾತಿ ಜಾತಿಗಳ ನಡುವೆ ಸಂಘರ್ಷ ತಂದಿಡಬಾರದು. ಎರಡೂ ರಾಷ್ಟ್ರೀಯ ಪಕ್ಷಗಳು ಇಂತಹ ಕೆಲಸ ಮಾಡುತ್ತಿವೆ.

ಇದನ್ನೂ ಓದಿ: SC ST Reservation: ಎಲ್ಲಿಂದ ತೆಗೆದು ಮುಸ್ಲಿಂ ಮೀಸಲಾತಿ ನೀಡುತ್ತೀರ? ಒಬಿಸಿ ವಿರೋಧಿ ಕಾಂಗ್ರೆಸ್‌: ಸಂಸದ ತೇಜಸ್ವಿ ಸೂರ್ಯ ಆರೋಪ

ಸ್ವೇಚ್ಛಾಚಾರದಿಂದ ಇಷ್ಟ ಬಂದಂತೆ ಬಿಜೆಪಿ ಸರ್ಕಾರ ತೀರ್ಮಾನ ಮಾಡಿದೆ. ಮುಸ್ಲಿಂ ಸಮುದಾಯದ ನಡವಳಿಕೆಯನ್ನು ನಾನು ಶ್ಲಾಘಿಸುತ್ತೇನೆ. ಬಂಜಾರ ಸಮುದಾಯದಲ್ಲಿ ಆತಂಕ ಉಂಟಾಗಿ ಗಲಾಟೆ ಆಗಿದೆ. ಶೇ> 4 ಮೀಸಲಾತಿ ಕಿತ್ತು ಹಾಕಿದ್ದಕ್ಕೆ ಮುಸ್ಲಿಂ ಸಮುದಾಯ ಬೇಸರವಾಗಿ ಬೀದಿಗೆ ಇಳಿದಿದ್ದರೆ ಅಮಾಯಕರ ಬಲಿಯಾಗುತ್ತಿತ್ತು. ಅದನ್ನು ಯಾರು ತಡೆಯುತ್ತಿದ್ದರು? ಹೊಣೆ ಯಾರು?

Exit mobile version