Karnataka Elections 2023 : ಪಿಎಸ್‌ಐ ಡೀಲ್‌ ನಡೆದಿದ್ದೇ ಬಿಎಸ್‌ವೈ ಪುತ್ರನ ಮನೆಯಲ್ಲಿ; ವಿಜಯೇಂದ್ರ ವಿರುದ್ಧ ಸಿದ್ದು ವಾಗ್ದಾಳಿ - Vistara News

ಕರ್ನಾಟಕ

Karnataka Elections 2023 : ಪಿಎಸ್‌ಐ ಡೀಲ್‌ ನಡೆದಿದ್ದೇ ಬಿಎಸ್‌ವೈ ಪುತ್ರನ ಮನೆಯಲ್ಲಿ; ವಿಜಯೇಂದ್ರ ವಿರುದ್ಧ ಸಿದ್ದು ವಾಗ್ದಾಳಿ

ಚುನಾವಣೆ ಘೋಷಣೆಯಾದ (Karnataka Elections 2023) ಮೊದಲ ದಿನವೇ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದಾರೆ. ಮೊದಲ ದಿನವೇ ವಿಜಯೇಂದ್ರ ಟಾರ್ಗೆಟ್‌ ಮಾಡಿದ್ದಾರೆ.

VISTARANEWS.COM


on

siddaramaiah, vijayendra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ರಾಜ್ಯದಲ್ಲಿ ಚುನಾವಣೆ ಘೋಷಣೆಯ (Karnataka Elections 2023) ದಿನವೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವರುಣ ಕ್ಷೇತ್ರದಲ್ಲಿ ಅದ್ಧೂರಿ ಪ್ರಚಾರವನ್ನು ಆರಂಭಿಸಿದ್ದಾರೆ ಮತ್ತು ಆರಂಭದ ದಿನವೇ ಮಾಜಿ ಮುಖ್ಯಮಂತ್ರಿ ಬಿ.ವೈ. ವಿಜಯೇಂದ್ರ (BY Vijayendra) ಅವರ ಹೆಸರು ಪ್ರಸ್ತಾಪಿಸದೆ ವಾಗ್ದಾಳಿ ನಡೆಸಿದರು.

ʻʻರಾಜ್ಯದಲ್ಲಿ ಪಿಎಸ್‌ಐ ಹಗರಣ ನಡೆದಿರುವುದು ಎಲ್ಲರಿಗೂ ಗೊತ್ತು. ಒಂದು ಹುದ್ದೆಗೆ 15-20 ಲಕ್ಷ ರೂ. ಲಂಚ ಫಿಕ್ಸಾಗಿತ್ತು. ಎಲ್ಲ ವ್ಯವಹಾರ ನಡೆದಿರುವುದು ಬಿ.ಎಸ್‌. ಯಡಿಯೂರಪ್ಪ ಅವರ ಮಗನ ಮನೆಯಲ್ಲೇ ನಡೆದಿದೆ. ಇದನ್ನು ನಾನು ಹೇಳುತ್ತಿಲ್ಲ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾನೆ. ಈ ಹಗರಣದಲ್ಲಿ ಎಡಿಜಿಪಿ ಒಬ್ಬ ಜೈಲಿಗೆ ಹೋಗಿದ್ದಾನೆ. ಯತ್ನಾಳ್ ಸತ್ಯವನ್ನೇ ಒಪ್ಪಿಕೊಂಡಿದ್ದಾನೆʼʼ ಎಂದು ವಾಗ್ದಾಳಿ ನಡೆಸಿದರು.

ʻʻಸಿಎಂ ಆಗಬೇಕಾದರೆ ಎರಡೂವರೆ ಸಾವಿರ ಹಣ ಕೊಡಬೇಕು ಅಂತಲೂ ಬಸನಗೌಡ ಪಾಟೀಲ್‌ ಯತ್ನಾಳ್ ಹೇಳಿದ್ದಾನೆ. ಒಂದೊಮ್ಮೆ ಯತ್ನಾಳ್‌ ಹೇಳಿದ್ದು ಸುಳ್ಳೇ ಆಗಿದ್ದರೆ ಅವರನ್ನು ಪಕ್ಷದಿಂದ ಕಿತ್ತು ಹಾಕಬೇಕಿತ್ತಲ್ವಾ? ಯಾಕೆ ತೆಗೆದುಹಾಕಿಲ್ಲ? ಅಂದ್ರೆ ಸತ್ಯವನ್ನೇ ಹೇಳಿದ್ದಾನೆ. ಅದಕ್ಕೆ ತೆಗೆದುಹಾಕಿಲ್ಲʼʼ ಎಂದು ಸಿದ್ದರಾಮಯ್ಯ ಹೇಳಿದರು.

ನಾವು 15 ಲಕ್ಷ ಮನೆ ಕಟ್ಟಿಕೊಟ್ಟೆವು, ಅವರು ಒಂದೂ ಇಲ್ಲ

ʻʻನಮ್ಮ ಸರ್ಕಾರ ಅಧಿಕಾರದಲ್ಲಿರುವಾಗ 15 ಲಕ್ಷ ಮನೆ ಕಟ್ಟಿಕೊಟ್ಟಿದ್ದೆವು. ಮುಂದೆ ಅಧಿಕಾರಕ್ಕೆ ಬಂದರೆ 20 ಲಕ್ಷ ಮನೆ ಕಟ್ಟಿಸಿ ಕೊಡುತ್ತೇವೆ. ಈ ಮನೆ ಹಾಳರು ಬಂದರು. ಒಂದೇ ಒಂದು ಮನೆ ಕಟ್ಟಿ ಕೊಡಲಿಲ್ಲ. ಬಿಜೆಪಿಯವರು ವಿದ್ಯಾರ್ಥಿಗಳಿಗೆ ಸ್ಕಾಲರ್‌ಷಿಪ್‌ ಕೊಟ್ಟಿಲ್ಲ, ಸೈಕಲ್ ಕೊಟ್ಟಿಲ್ಲʼʼ ಎಂದು ಹೇಳಿದರು.

ʻʻಬೊಮ್ಮಾಯಿ ಧರ್ಮರಾಯನ ಥರ ಮಾತನಾಡುತ್ತಾರೆ. ಆದರೆ, ರಾಜ್ಯದಲ್ಲಿ ಶೇ.40, ಬೆಂಗಳೂರಿನಲ್ಲಿ ಶೇ.50ರಷ್ಟು ಕಮಿಷನ್ ಅಧಿಕೃತವಾಗಿದೆ. ಮುಂದೆ ಮುಂದೆ ಭ್ರಷ್ಟಾಚಾರ ರಹಿತ ಸರ್ಕಾರ ಕೊಡುತ್ತೇವೆ ಎಂದು ಅಮಿತ್ ಶಾ ಹೇಳುತ್ತಾರೆ. ಹಾಗಿದ್ದರೆ ಇದುವರೆಗೆ ಭ್ರಷ್ಟಾಚಾರ ತಡೆಯಲು ಆಗಿಲ್ವ?ʼʼ ಎಂದು ಪ್ರಶ್ನಿಸಿದರು.

ʻʻಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದರು ಅಂತ ನರೇಂದ್ರ ‌ಮೋದಿ ಹೇಳುತ್ತಾರೆ. ಆದರೆ, ಸಚಿವ ಕೆ.ಎಸ್‌. ಈಶ್ವರಪ್ಪ ಪಾರ್ಟಿ ವರ್ಕರ್ ಹತ್ತಿರವೂ 40% ಕೇಳ್ತಾನೆ. ಅವನಿಗೆ ಮರ್ಯಾದೆ ಇದೆಯಾʼʼ ಎಂದು ಸಿದ್ದರಾಮಯ್ಯ ಕೇಳಿದರು.

ವರುಣಾ ಕ್ಷೇತ್ರದೆಲ್ಲೆಡೆ ಸಂಚಾರ ನಡೆಸಿದ ಸಿದ್ದರಾಮಯ್ಯ ಮೊದಲ ಸುತ್ತಿನ ಪ್ರಚಾರವನ್ನು ಮಾಡಿದರು. ಮುಂದೆ ಪದೇಪದೆ ಪ್ರಚಾರಕ್ಕೆ ಬರಲು ಆಗುವುದಿಲ್ಲ. ಪುತ್ರ ಯತೀಂದ್ರ ಪ್ರಚಾರದ ಜವಾಬ್ದಾರಿ ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

ಬಿ.ವೈ ವಿಜಯೇಂದ್ರ ವರುಣದಿಂದ ನಿಲ್ತಾರಾ?

ಈ ನಡುವೆ, ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಅವರೇ ಕಣಕ್ಕಿಳಿಯುತ್ತಾರಾ ಎಂಬ ಪ್ರಶ್ನೆ ಜೋರಾಗಿ ಚರ್ಚೆಯಲ್ಲಿದೆ. ಗೃಹ ಸಚಿವ ಅಮಿತ್‌ ಶಾ ಅವರು ಯಡಿಯೂರಪ್ಪ ಅವರ ನಿವಾಸಕ್ಕೆ ಬಂದ ದಿನವೂ ವರುಣ ಕ್ಷೇತ್ರದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಅಮಿತ್‌ ಶಾ ಬಂದು ಹೋದ ಮೇಲೆ ವಿಜಯೇಂದ್ರ ಅವರ ಸ್ಪರ್ಧೆಯ ಕುತೂಹಲ ಹೆಚ್ಚಿದೆ. ಕಳೆದ ಬಾರಿ ಯತೀಂದ್ರ ಅವರು ಕಣಕ್ಕಿಳಿದಾಗಲೂ ವಿಜಯೇಂದ್ರ ಹೆಸರು ಕೇಳಿಬಂದಿತ್ತು.

ಇದನ್ನೂ ಓದಿ : Karnataka Election 2023: ವರುಣ ಕ್ಷೇತ್ರದ ಪ್ರಚಾರಕ್ಕೆ ಹೋಗಲ್ಲ, ಹೆಲಿಕಾಪ್ಟರ್‌ನಲ್ಲಿ ರಾಜ್ಯ ಪ್ರವಾಸ; ದಿನಕ್ಕೆ 4 ಕ್ಷೇತ್ರದಲ್ಲಿ ಪ್ರಚಾರ: ಸಿದ್ದರಾಮಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

Chit Fund: ಚೀಟಿ ಕಟ್ಟಿಸಿಕೊಂಡು ಕೋಟಿಗಟ್ಟಲೆ ಚೀಟಿಂಗ್ ಮಾಡಿದ ಖತರ್ನಾಕ್‌ ಫ್ಯಾಮಿಲಿಯೊಂದು ತಲೆಮರೆಸಿಕೊಂಡಿತ್ತು. ಚಿಟ್‌ ಫಂಡ್‌ ಹೆಸರಿನಲ್ಲಿ ವಂಚಿಸುತ್ತಿದ್ದ ಖತರ್ನಾಕ್‌ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Fraud Case
ದಂಪತಿ ಸಿದ್ದಲಿಂಗಯ್ಯ ಮತ್ತು ಪ್ರೇಮಕುಮಾರಿ. ಠಾಣೆ ಮುಂದೆ ಜಮಾಯಿಸಿರುವ ಜನರು
Koo

ಬೆಂಗಳೂರು: ಚೀಟಿ ಹಣ (Chit Fund) ಗುಳುಂ ಮಾಡಿ ಇಡೀ ಕುಟುಂಬವೇ (Fraud Case) ಪರಾರಿ ಆದ ಘಟನೆ ಬೆಂಗಳೂರಲ್ಲಿ ನಡೆದಿದೆ. ಮಧ್ಯಮ ವರ್ಗದವರನ್ನೇ ಟಾರ್ಗೆಟ್‌ ಮಾಡುತ್ತಿದ್ದ ವಂಚಕ ದಂಪತಿ ನಯವಾದ ಮಾತುಗಳಿಂದ ಪರಿಚಯ ಮಾಡಿಕೊಳ್ಳುತ್ತಿತ್ತು. ನಂತರ ಲಕ್ಷಾಂತರ ರೂ. ಹಣ ಕಟ್ಟಿಸಿಕೊಂಡು ಪರಾರಿ ಆಗುತ್ತಿದ್ದರು. ಸದ್ಯ ನೂರಕ್ಕೂ ಹೆಚ್ಚು ಜನರಿಗೆ ಚಿಟ್‌ ಫಂಡ್‌ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಚೀಟಿ ಹಣ ವಾಪಸ್‌ ಕೊಡಿಸುವಂತೆ ಚೀಟಿದಾರರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದರು.

ಬ್ಯಾಡರಹಳ್ಳಿ ಪೊಲೀಸ್ ಠಾಣಾ ಮುಂದೆ 50ಕ್ಕೂ ಹೆಚ್ಚು ಜನ ಜಮಾಯಿಸಿ ಪ್ರತಿಭಟಿಸಿದರು. ಸಿದ್ದಲಿಂಗಯ್ಯ ಎಂಬಾತ ಶ್ರೀ ಸಾಯಿ ಲಕ್ಷ್ಮಿ ಕೃಪೆ ಚಿಟ್ಸ್‌ ಹೆಸರಿನಲ್ಲಿ ಚಿಟ್‌ ಕಂಪೆನಿಯನ್ನು ನಡೆಸುತ್ತಿದ್ದ. ಇದರಲ್ಲಿ 10, 12, 15 ಹಾಗೂ 16 ಲಕ್ಷ ರೂ. ಹೀಗೆ ಹಲವಾರು ಬಗೆಯಲ್ಲಿ ಚೀಟಿಯನ್ನು ನಡೆಸುತ್ತಿದ್ದ. ನಮ್ಮ ಸಂಸ್ಥೆಯಲ್ಲಿ ಚೀಟಿ ಹಾಕಿದರೆ ನಿಮಗೆ ಅಪಾರವಾದ ಲಾಭವನ್ನು ಮಾಡಿಕೊಡುತ್ತೆವೆ ಅಂದಿದ್ದ. ಸಿದ್ದಲಿಂಗಯ್ಯನನ್ನು ನಂಬಿದ ಜನರು ಲಕ್ಷಾಂತರ ರೂ. ಹೂಡಿಕೆ ಮಾಡಿದ್ದರು.

ಆದರೆ ಮೊನ್ನೆ ಇದ್ದಕ್ಕಿದ್ದಂತೆ ಸಿದ್ದಲಿಂಗಯ್ಯನ ಕುಟುಂಬದವರು ಯಾರಿಗೂ ಹೇಳದಂತೆ ಮನೆ ಖಾಲಿ ಮಾಡಿದ್ದಾರೆ. ಇದರಿಂದ ಕಂಗಲಾದ ಚೀಟಿದಾರರು ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಗೆ ದೂರು‌ ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ತಲೆಮರೆಸಿಕೊಂಡಿದ್ದ ಸಿದ್ದಲಿಂಗಯ್ಯ ಹಾಗೂ ಅವರ ಪತ್ನಿ ಪ್ರೇಮಕುಮಾರಿ ಎಂಬವರನ್ನು ಬಂಧಿಸಿದ್ದಾರೆ. ಇತ್ತ ಚೀಟಿ ಹಣ ಕೊಡಿಸುವಂತೆ ಠಾಣೆ ಮುಂದೆ ಚೀಟಿದಾರರು ಪ್ರತಿಭಟನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Food poisoning: ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥ

Food poisoning: ಬುಧವಾರ ರಾಮನವಮಿ ಹಿನ್ನೆಲೆಯಲ್ಲಿ ಕುಣಿಗಲ್ ತಾಲೂಕಿನ ಮಂಗಳಾ ಗೇಟ್ ಬಳಿಯಿರುವ ಸುಬ್ರಮಣ್ಯ ದೇವಸ್ಥಾನದಲ್ಲಿ ಭಕ್ತರು ಮಜ್ಜಿಗೆ, ಪಾನಕವನ್ನು ಸೇವನೆ ಮಾಡಿದ್ದರು. ಇವರಿಗೆ ಮಧ್ಯರಾತ್ರಿಯಿಂದ ಹೊಟ್ಟೆನೋವು ಬಂದಿದೆ. ಬಳಿಕ ವಾಂತಿ- ಭೇದಿ ಶುರುವಾಗಿದೆ. ಯಡಿಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

Food poisoning 45 people fall ill after consuming drink buttermilk
Koo

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೊಡವತ್ತಿ ಕ್ರಾಸ್‌ನ ಗೊಲ್ಲರಹಟ್ಟಿಯಲ್ಲಿ ರಾಮನವಮಿಯಂದು ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥರಾಗಿರುವ‌ (Food poisoning) ಪ್ರಕರಣ ನಡೆದಿದೆ.

ಬುಧವಾರ ರಾಮನವಮಿ ಹಿನ್ನೆಲೆಯಲ್ಲಿ ಕುಣಿಗಲ್ ತಾಲೂಕಿನ ಮಂಗಳಾ ಗೇಟ್ ಬಳಿಯಿರುವ ಸುಬ್ರಮಣ್ಯ ದೇವಸ್ಥಾನದಲ್ಲಿ ಭಕ್ತರು ಮಜ್ಜಿಗೆ, ಪಾನಕವನ್ನು ಸೇವನೆ ಮಾಡಿದ್ದರು. ಇವರಿಗೆ ಮಧ್ಯರಾತ್ರಿಯಿಂದ ಹೊಟ್ಟೆನೋವು ಬಂದಿದೆ. ಬಳಿಕ ವಾಂತಿ- ಭೇದಿ ಶುರುವಾಗಿದೆ.

ಹೀಗಾಗಿ ಬೆಳಗ್ಗೆ ಯಡಿಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Continue Reading

ಬೆಂಗಳೂರು

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

Self harming: ಮನೆಯಿಂದ ಬಂದ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಮತ್ತೊಂದು ಕಡೆ ಅಪರಿಚಿತ ವೃದ್ಧನ ಮೃತದೇಹವು ರಸ್ತೆ ಬದಿ ಪತ್ತೆಯಾಗಿದೆ.

VISTARANEWS.COM


on

By

Student Death in Bengaluru
Koo

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

Lok Sabha Election 2024: ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ. ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ. ಅಲ್ಲದೆ, ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

VISTARANEWS.COM


on

Koo

ಚಿಕ್ಕಬಳ್ಳಾಪುರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ (Chikkaballapur Lok Sabha constituency) ಅಭೂತಪೂರ್ವವಾಗಿ ರಕ್ಷಾ ರಾಮಯ್ಯ (Raksha Ramayya) ಗೆಲ್ಲುತ್ತಾರೆ. ಅಲ್ಲದೆ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಭವಿಷ್ಯ ನುಡಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್‌ ಶೋ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಕರೆ ನೀಡಿದರು.

ಭ್ರಷ್ಟಾಚಾರಿ ಎನ್ನುವ ಕಾರಣಕ್ಕೇ ಇಲ್ಲಿಯ ಜನತೆ ಸುಧಾಕರ್ ಅವರನ್ನು ಸೋಲಿಸಿದ್ದೀರಿ. ಇವರ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಇವರ ಭ್ರಷ್ಟಾಚಾರ ಸಾಬೀತಾಗುತ್ತದೆ. ಬಳಿಕ ಸುಧಾಕರ್ ಎಲ್ಲಿಗೆ ಹೋಗಬೇಕೋ ಅಲ್ಲಿಗೇ ಹೋಗ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜನತಾ ನ್ಯಾಯಾಲಯದಲ್ಲಿ ಶಿಕ್ಷೆ ಕೊಡಿ

ಎನ್‌ಡಿಎ ಅಭ್ಯರ್ಥಿ ಸುಧಾಕರ್ ಅವರಿಗೆ ಜನತಾ ನ್ಯಾಯಾಲಯದಲ್ಲಿ ನೀವೂ ಶಿಕ್ಷೆ ಕೊಡಬೇಕು. ಶಿಕ್ಷೆ ಕೊಟ್ಟರೆ ಮಾತ್ರ ಕ್ಷೇತ್ರದ ಜನತೆಯ ಹೆಸರಿನಲ್ಲಿ ಮಾಡಿದ ಮೋಸಕ್ಕೆ ಮತ್ತು ಮಂತ್ರಿಯಾಗಿ ಮಾಡಿದ ಭ್ರಷ್ಟಾಚಾರಕ್ಕೆ ತಕ್ಕ ಶಾಸ್ತಿ ಮಾಡಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Jai Shree Ram slogan: ಹಿಂದೂ ವಿರೋಧಿ ಕೃತ್ಯಗಳಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಜೋಶಿ ಕಿಡಿ

ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ

ನಮ್ಮ ಸರ್ಕಾರ ರಾಜ್ಯದಲ್ಲಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಕುಟುಂಬದ ಮಹಿಳೆಯರ ಅಕೌಂಟಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಜಮೆ ಆಗುತ್ತದೆ. ರಾಜ್ಯ ಸರ್ಕಾರ ಕೊಡುವ ಪ್ರತಿ ತಿಂಗಳ 2 ಸಾವಿರ ರೂಪಾಯಿ ಕೂಡ ಇದಕ್ಕೆ ಸೇರಿ ವರ್ಷಕ್ಕೆ ಒಂದು ಲಕ್ಷದ 24 ಸಾವಿರ ರೂಪಾಯಿ ಪ್ರತಿ ಕುಟುಂಬಗಳ ಖಾತೆಗೆ ಬರುತ್ತದೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಡೀ ದೇಶದ ಅಷ್ಟೂ ರೈತರ ಸಾಲ ಮನ್ನಾ ಮಾಡಲಾಗುವುದು. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಲಕ್ಷ ನಿರುದ್ಯೋಗ ಭತ್ಯೆ ಸಿಗುತ್ತದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಚಿತವಾಗಿ ನೀಡಲಾಗುವುದು. ಪ್ರಧಾನಿ ಮೋದಿಯವರ ಕೆಟ್ಟ ನೀತಿಯಿಂದಾಗಿ ಹದಗೆಟ್ಟಿರುವ ಭಾರತದ ಆರ್ಥಿಕತೆಯನ್ನು ಸರಿ ದಾರಿಗೆ ತಂದು ಜನರ ಪರವಾದ ಆರ್ಥಿಕತೆಯನ್ನು ಪುನರ್ ಸ್ಥಾಪಿಸಲಾಗುವುದು.‌ ನೂರಕ್ಕೆ ನೂರು ಈ ಬಾರಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ. ಇವರಿಗೆ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಆಶೀರ್ವಾದ ಇರಲಿ ಎಂದು ಕೋರಿದರು.

Continue Reading
Advertisement
Fact Check
Fact Check5 mins ago

Fact Check: ಮತದಾನ ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ? ವಾಸ್ತವ ಹೀಗಿದೆ

Paris Olympics 2024
ಕ್ರೀಡೆ17 mins ago

Paris Olympics 2024: ಒಲಿಂಪಿಕ್ಸ್​ಗಾಗಿ ಸರ್ಕಾರಿ ಕಟ್ಟಡದಿಂದ ನೂರಾರು ವಲಸಿಗರ ತೆರವು

Fraud Case
ಬೆಂಗಳೂರು30 mins ago

Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

Food poisoning 45 people fall ill after consuming drink buttermilk
ತುಮಕೂರು56 mins ago

Food poisoning: ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥ

Unblock A Kitchen Sink
ಲೈಫ್‌ಸ್ಟೈಲ್57 mins ago

Unblock A Kitchen Sink: ನಿಮ್ಮ ಅಡುಗೆ ಮನೆಯ ಸಿಂಕ್‌ ಆಗಾಗ ಬ್ಲಾಕ್ ಆಗುತ್ತದೆಯೆ? ಇಲ್ಲಿದೆ ಸರಳ ಉಪಾಯ

Mahua Moitra
ದೇಶ57 mins ago

Mahua Moitra: ‘ಸೆಕ್ಸ್’‌ ನನ್ನ ಸಾಮರ್ಥ್ಯದ ಗುಟ್ಟು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ!

Best Airport
ಪ್ರಮುಖ ಸುದ್ದಿ58 mins ago

Best Airport: ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳ ಪಟ್ಟಿ; ಸಿಂಗಾಪುರದ ಚಾಂಗಿಯನ್ನು ಹಿಂದಿಕ್ಕಿದ ದೋಹಾದ ಹಮದ್

IPL 2024
ಕ್ರೀಡೆ1 hour ago

IPL 2024: ಕಾನ್ವೆ ಬದಲಿಗೆ ಚೆನ್ನೈ ತಂಡ ಸೇರ್ಪಡೆಗೊಂಡ ರಿಚರ್ಡ್ ಗ್ಲೀಸನ್

Viral News
ವೈರಲ್ ನ್ಯೂಸ್1 hour ago

Viral News: ಬಿಕಿನಿ ಧರಿಸಿ ಬಸ್‌ ಏರಿದ ಮಹಿಳೆಯಿಂದ ಅಸಭ್ಯ ವರ್ತನೆ: ಬೆಚ್ಚಿಬಿದ್ದ ಪ್ರಯಾಣಿಕರು; ಇಲ್ಲಿದೆ ವಿಡಿಯೊ

Lok sabha election 2024
ದೇಶ2 hours ago

Lok sabha election: 2019ರ ಅವಲೋಕನ; ಗರಿಷ್ಠ- ಕನಿಷ್ಠ ಮತಗಳ ಅಂತರದಿಂದ ಗೆದ್ದವರು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌