Site icon Vistara News

Karnataka Elections 2023 : ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ಏ. 18ರಂದು ನಾಮಪತ್ರ ಸಲ್ಲಿಕೆ

KB Ashok Naik

#image_title

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ಹೇಳಿದರು.

ಹೊಳೆಹೊನ್ನೂರು ಮಂಡಲ ವ್ಯಾಪ್ತಿಯ ಅರಹತೋಳಲು ಕೈಮರ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಮಂಗಳವಾರ ಏಪ್ರಿಲ್ 18ರ ಬೆಳಗ್ಗೆ 8.30ಕ್ಕೆ ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಕಾರ್ಯಕರ್ತರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.

ಐದು ವರ್ಷಗಳಲ್ಲಿ ಗ್ರಾಮಾಂತರ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಪ್ರಾಮುಖ್ಯತೆ ಕೊಟ್ಟು ಕೆಲಸ ಮಾಡಿದ್ದೇನೆ. ಎಲ್ಲರ ಬೆಂಬಲ ಹಾಗೂ ಆಶೀರ್ವಾದದಿಂದ ಬಿಜೆಪಿ ಮತ್ತೊಮ್ಮೆ ಗೆಲ್ಲಿಸಲು ಎಲ್ಲ ಕಾರ್ಯಕರ್ತರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತಕ್ಕೆ ತರಬೇಕಿದೆ ಎಂದರು.

ದೇವಕಾತಿಕೊಪ್ಪದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ 51ನೇ ವರ್ಷದ ಶ್ರೀ ಆದಿಶಕ್ತಿ ಜಕಾತಮ್ಮ ದೇವಿಯ ಹಬ್ಬದ ಪ್ರಯುಕ್ತ ಶುಕ್ರವಾರದಂದು ಗ್ರಾಮಾಂತರ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ಅವರು ದೇವರ ದರ್ಶನ ಪಡೆದು ಆರ್ಶೀವಾದ ಪಡೆದರು. ನಂತರ ಹೊಳೆಹೊನ್ನೂರು, ಚಂದನಕೆರೆ ಭಾಗಗಳಲ್ಲಿ ಗ್ರಾಮದ ಪ್ರಮುಖರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಮುದುವಾಲ ಗ್ರಾಮದಲ್ಲಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.

ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಬಿ.ಕೆ. ಶ್ರೀನಾಥ್, ಗ್ರಾಮಾಂತರ ಮಂಡಲ ರತ್ನಾಕರ ಶೆಣೈ, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಂಜುನಾಥ ಕಲ್ಲಜ್ಜನಾಳ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಗೋಪಾಲ್, ಗಿರೀಶ್, ಹೊಳೆಹೊನ್ನೂರು ಮಂಡಲ ಪ್ರಧಾನ ಕಾರ್ಯದರ್ಶಿ ಉಜ್ಜಿನಪ್ಪ, ಮಲ್ಲೇಶ್, ಪ್ರಮುಖರಾದ ಜಗದೀಶ್, ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : Karnataka Elections : ಅವರಿಬ್ಬರು ಒಂದೇ ಹಾರ ಹಾಕ್ಕೊಂದು ಓಡಾಡಿದ್ರೆ ಏನು ಭೂಕಂಪ ಆಗುತ್ತಾ?; ಕಿಮ್ಮನೆ-ಮಂಜುನಾಥ್‌ ಜೋಡಿಗೆ ಆರಗ ವ್ಯಂಗ್ಯ

Exit mobile version