Karnataka Elections : ಅಯ್ಯಪ್ಪ ಮಾಲೆ ಧರಿಸಿದ ಶ್ರೀರಾಮುಲು; ಚುನಾವಣೆಗೆ ಮುನ್ನ ದೇವರ ಮೊರೆ ಹೋದ ಸಚಿವರು - Vistara News

ಕರ್ನಾಟಕ

Karnataka Elections : ಅಯ್ಯಪ್ಪ ಮಾಲೆ ಧರಿಸಿದ ಶ್ರೀರಾಮುಲು; ಚುನಾವಣೆಗೆ ಮುನ್ನ ದೇವರ ಮೊರೆ ಹೋದ ಸಚಿವರು

ಸಚಿವ ಶ್ರೀರಾಮುಲು ಅವರು ಈ ಬಾರಿ ಎಲ್ಲ ಬಿಟ್ಟು ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ (Karnataka Elections) ಕಣಕ್ಕೆ ಇಳಿಯಲಿದ್ದಾರೆ. ಹಾಗೆ ಕಣಕ್ಕೆ ಇಳಿಯುವ ಮುನ್ನ ಅವರು ಶಬರಿಮಲೆಗೆ ಹೊರಟಿದ್ದಾರೆ.

VISTARANEWS.COM


on

Sriramulu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ಅವರು ಈ ಬಾರಿ ಚುನಾವಣೆಯಲ್ಲಿ (Karnataka Elections) ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವುದನ್ನು ಖಚಿತಪಡಿಸಿದ್ದಾರೆ. 2018ರ ಚುನಾವಣೆಯಲ್ಲಿ ಮೊಳಕಾಲ್ಮುರು ಮತ್ತು ಸಿದ್ದರಾಮಯ್ಯ ವಿರುದ್ಧ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಮೊಳಕಾಲ್ಮುರುವಿನಲ್ಲಿ ಮಾತ್ರ ಗೆದ್ದಿದ್ದ ಅವರು ಈ ಬಾರಿ ಎರಡೂ ಕ್ಷೇತ್ರಗಳನ್ನು ಬಿಟ್ಟು ತಮ್ಮ ಕಾರ್ಯಕ್ಷೇತ್ರವಾದ ಬಳ್ಳಾರಿಯಲ್ಲೇ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

ಆದರೆ, ಬಳ್ಳಾರಿ ಗ್ರಾಮಾಂತರ ಕ್ಷೇತ್ರ ಎನ್ನುವುದು ಅಷ್ಟು ಸುಲಭದಲ್ಲಿ ಗೆಲುವು ಸಾಧಿಸಬಲ್ಲ ಕ್ಷೇತ್ರವಲ್ಲ ಎನ್ನುವುದು ಶ್ರೀರಾಮುಲು ಅವರಿಗೆ ಅರಿವಾಗಿದೆ. ಯಾಕೆಂದರೆ ಇಲ್ಲಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವುದು, ಹಾಲಿ ಶಾಸಕರಾಗಿರುವ ನಾಗೇಂದ್ರ. ನಾಗೇಂದ್ರ ಮತ್ತು ಶ್ರೀರಾಮುಲು ಹಳೆ ಸ್ನೇಹಿತರು. ಅವರಿಬ್ಬರು ಬೇರೆ ಬೇರೆ ಪಕ್ಷದಲ್ಲಿದ್ದರೂ ಪರಸ್ಪರರ ಗೆಲುವಿಗೆ ಸಹಕಾರ ಕೊಡುತ್ತಿದ್ದರು ಎಂಬ ಮಾತಿದೆ. ಆದರೆ, ಈಗ ಅವರೇ ಮುಖಾಮುಖಿಯಾಗಲಿದ್ದಾರೆ. ಇದರ ಜತೆಗೆ ಇನ್ನೊಂದು ಕಡೆ ಒಂದು ಕಾಲದ ಆಪ್ತ ಗೆಳೆಯ ಜನಾರ್ದನ ರೆಡ್ಡಿ ಅವರು ಕೂಡಾ ತಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರ ಅವರಿಗೂ ಪ್ರತಿಷ್ಠೆಯ ಕಣವೆ. ಈ ರೀತಿ ತ್ರಿಕೋನ ಸ್ಪರ್ಧೆಯ ಕಣದಲ್ಲಿ ಸಿಲುಕಲಿರುವ ಶ್ರೀರಾಮುಲು ಸ್ಪರ್ಧೆಗೆ ಮುನ್ನ ಒಂದಿಷ್ಟು ದೇವರ ದಯೆಯನ್ನು ಕ್ರೋಡೀಕರಿಸಿಕೊಳ್ಳಲು ಮುಂದಾಗಿದ್ದಾರೆ.

ಹೌದು, ಶ್ರೀರಾಮುಲು ಅವರು ಈಗ ಅಯ್ಯಪ್ಪ ಮಾಲೆ ಧರಿಸಿದ್ದು, ಒಂದೆರಡು ದಿನಗಳ ಮಟ್ಟಿಗೆ ಸನ್ನಿಧಿಗೆ ಹೋಗಿ ಬರುವುದಾಗಿ ಆಪ್ತರಿಗೆ ತಿಳಿಸಿದ್ದಾರೆ. ಮಹಾನ್‌ ದೈವಭಕ್ತರಾಗಿರುವ ರಾಮುಲು ಮನೆಯಲ್ಲಿ ದಿನವೂ ಬಹುಗಂಟೆಗಳ ಪೂಜೆ ಮಾಡುತ್ತಾರೆ. ಇತ್ತೀಚೆಗಂತೂ ಅವರು ಹೊರಗಡೆ ಹೋಗುವಾಗಲೂ ಸಾಂಪ್ರದಾಯಿಕ ದಿರಸುಗಳಲ್ಲೇ ಕಾಣಿಸಿಕೊಳ್ಳುತ್ತಿರುವುದೇ ಹೆಚ್ಚು.

ಬಳ್ಳಾರಿ ಗ್ರಾಮಾಂತರದಿಂದಲೇ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ ಬಳಿಕವೇ ಅಯ್ಯಪ್ಪ ಸನ್ನಿಧಿಗೆ ಹೋಗುವುದಾಗಿ ಘೋಷಿಸಿ ಅವರು ಮಾಲೆ ಧರಿಸಿದ್ದಾರೆ. ನಿಜವೆಂದರೆ, ಪ್ರತಿ ಬಾರಿ ಚುನಾವಣೆ ವೇಳೆ ಅಥವಾ ನಾಮಪತ್ರ ಸಲ್ಲಿಸುವ ಮುಂಚೆ ಮಾಲೆ ಧಾರಣೆ ಮಾಡುವುದು ರೂಢಿ.

ಈ ಬಾರಿಯೂ ಶುಕ್ರವಾರ ಬಳ್ಳಾರಿ ರಾಕ್ ಗಾರ್ಡನ್ ಹೋಟೆಲ್ ನಲ್ಲಿ ಗ್ರಾಮೀಣ ಕ್ಷೇತ್ರದ ಮುಖಂಡರ ಮತ್ತು ಕಾರ್ಯಕರ್ತರ ಸಭೆ ನಡೆಸಿದ ರಾಮುಲು ಎರಡು ದಿನ ಶಬರಿ ಮಲೆಗೆ ಹೋಗಿ ಬರುತ್ತೇನೆ, ನಂತರ ಚುನಾವಣೆ ಕೆಲಸ ಶುರು ಮಾಡೋಣ ಎಂದು ಹೇಳಿದ್ದಾರೆ.

ಎರಡು ದಿನ ಮಾತ್ರ ವ್ರತಾಚರಣೆ ಮಾಡುವ ಶ್ರೀರಾಮುಲು ಭಾನುವಾರ ಶಬರಿಮಲೆಗೆ ತೆರಳಲಿದ್ದಾರೆ. ಆಪ್ತರ ಸಮ್ಮುಖದಲ್ಲಿ ಮಾಲಾಧಾರಣೆ ಮಾಡಿರುವ ಅವರು ಕೆಲವು ಸ್ನೇಹಿತರೊಂದಿಗೆ ಶಬರಿಮಲೆಗೆ ತೆರಳಲಿದ್ದಾರೆ.

ಶ್ರೀರಾಮುಲು ಅವರು ಬಳ್ಳಾರಿಯಿಂದ ಸ್ಪರ್ಧೆ ಮಾಡುವುದರಿಂದ ಅವರಿಗೆ ಬೇರೆ ಕಡೆ ಹೆಚ್ಚು ಗಮನ ನೀಡಲು ಕಷ್ಟವಾದೀತು ಎಂಬ ಮಾತುಗಳು ಕೇಳಿಬರುತ್ತಿವೆ. ನಿಜವೆಂದರೆ, ಕಳೆದ ಬಾರಿ ಸಿದ್ದರಾಮಯ್ಯ ಅವರಿಗೇ ಪೈಪೋಟಿ ನೀಡಿದ್ದ ಶ್ರೀರಾಮುಲು ಅವರಿಗೆ ಪಕ್ಷದೊಳಗೂ ದೊಡ್ಡ ಮಟ್ಟದ ಒಲವೇನೂ ಇಲ್ಲ. ಪ್ರತಿ ಬಾರಿ ವಿರೋಧಿಗಳ ಜತೆಗೆ ಬಡಿದಾಡಿದ್ದ ಅವರು ಈ ಬಾರಿ ತಮ್ಮ ಆಪ್ತ ಸ್ನೇಹಿತರ ವಿರುದ್ಧ ಹೊಡೆದಾಡಬೇಕಾಗಿದೆ. ದೂರವಾದ ಆಪ್ತರು ರಾಮುಲು ಅವರಿಗೆ ಎಷ್ಟು ದೊಡ್ಡ ಪೆಟ್ಟು ಕೊಡುತ್ತಾರೆ, ಅದನ್ನು ರಾಮುಲು ಹೇಗೆ ಮೀರಿ ನಿಲ್ಲುತ್ತಾರೆ ಎಂದು ಕಾದುನೋಡಬೇಕಾಗಿದೆ.

ಇದನ್ನೂ ಓದಿ : Karnataka Elections : ಬಳ್ಳಾರಿ ಗ್ರಾಮೀಣ ಶ್ರೀರಾಮುಲು, ನಾಗೇಂದ್ರ ಕದನ ಕಣ? ಗೊತ್ತಿರಲಿ, ಇದು ಫ್ರೆಂಡ್ಲಿ ಫೈಟಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Election Officer Raid: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ಚುನಾವಣಾ ಅಧಿಕಾರಿಗಳು, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ ಎಂದು ಗೊತ್ತಾಗಿದೆ. ದಾಳಿ ವೇಳೆ ಯಾವುದೇ ಅಕ್ರಮ ಹಣವಾಗಲಿ, ಅಕ್ರಮ ಲಿಕ್ಕರ್ ಆಗಲಿ, ಅಕ್ರಮ ಚಿನ್ನಾಭರಣವಾಗಲೀ ಪತ್ತೆಯಾಗಿಲ್ಲ.

VISTARANEWS.COM


on

actress amulya father in law election officers ride
Koo

ಬೆಂಗಳೂರು: ನಟಿ ಅಮೂಲ್ಯ (Actress Amulya) ಅವರ ಮಾವ, ಮಾಜಿ ಕಾರ್ಪೊರೇಟರ್‌ (corporater) ಹಾಗೂ ಬಿಜೆಪಿ ಮುಖಂಡ (BJP leader) ಆಗಿರುವ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾ ಅಧಿಕಾರಿಗಳು ನಿನ್ನೆ ತಡರಾತ್ರಿ ದಾಳಿ (Election Officer Raid) ನಡೆಸಿದ್ದಾರೆ. ಆರ್.ಆರ್ ನಗರದಲ್ಲಿರುವ ಅವರ ನಿವಾಸದ ಮೇಲೆ ರಾತ್ರಿ ‌10 ಗಂಟೆ ಸುಮಾರಿಗೆ ದಾಳಿ ನಡೆದಿದ್ದು, ಮುಂಜಾನೆಯವರೆಗೂ ಪರಿಶೀಲನೆ ನಡೆಯಿತು.

10 ವಾಹನಗಳಲ್ಲಿ ಬಂದಿರುವ ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ರಾಮಚಂದ್ರ ಅವರು ನಟಿ ಅಮೂಲ್ಯ ಅವರ ಮಾವನಾಗಿದ್ದು, ಸದ್ಯ ರಾಮಚಂದ್ರ, ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮನೆಯಲ್ಲೇ ಇದ್ದಾರೆ.

ನಿರಂತರ ಪರಿಶೀಲನೆಯ ನಂತರ ಮನೆ ಕೆಲಸದವರನ್ನು ಒಬ್ಬೊಬ್ಬರನ್ನಾಗಿ ಮನೆ ಒಳಗಿನಿಂದ ಹೊರ ಬಿಡಲಾಯಿತು. ಸತತ 4 ಗಂಟೆಗಳ ಕಾಲ‌ ಶೋಧ‌ ಕಾರ್ಯ ನಡೆದ ಬಳಿಕ ಚುನಾವಣಾ ಅಧಿಕಾರಿಗಳ‌ ದಾಳಿ ಅಂತ್ಯ‌ವಾಗಿದ್ದು, ಕೆಲವು ದಾಖಲೆಗಳನ್ನು ಪಡೆದು ಅಧಿಕಾರಿಗಳು ತೆರಳಿದ್ದಾರೆ.

ಚುನಾವಣಾ ಅಧಿಕಾರಿಗಳು, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ ಎಂದು ಗೊತ್ತಾಗಿದೆ. ದಾಳಿ ವೇಳೆ ಯಾವುದೇ ಅಕ್ರಮ ಹಣವಾಗಲಿ, ಅಕ್ರಮ ಲಿಕ್ಕರ್ ಆಗಲಿ, ಅಕ್ರಮ ಚಿನ್ನಾಭರಣವಾಗಲೀ ಪತ್ತೆಯಾಗಿಲ್ಲ.

ದಾಳಿ ಮಾಹಿತಿ ತಿಳಿದು ಬಿಜೆಪಿ ಕಾರ್ಯಕರ್ತರು ಮನೆ ಬಳಿ ಜಮಾಯಿಸಿದ್ದರು. ದಾಳಿ‌ ಮುಗಿಸಿ ಹೊರಟ ಅಧಿಕಾರಿಗಳಿಗೆ “ಚೊಂಬು ಸಿಗ್ತಾ, ಚೊಂಬು- ಡಿಕೆ ಚೊಂಬು” ಎಂದು ಬಿಜೆಪಿ ಕಾರ್ಯಕರ್ತರು ವ್ಯಂಗ್ಯ ಮಾಡಿದರು. ಮನೆ ಮುಂದೆ ಜಮಾಯಿಸಿದ್ದ ಕಾರ್ಯಕರ್ತರು ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿ‌ ಅಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಿಂದ ಅಧಿಕಾರ ದುರುಪಯೋಗ

ಕಾಂಗ್ರೆಸ್‌ನವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಮನೆ ಮೇಲೆ ದಾಳಿ ಮಾಡಿಸಿದ್ದಾರೆ” ಎಂದು ಬಿಜೆಪಿ ಮುಖಂಡ‌ ರಾಮಚಂದ್ರ ಈ ಕುರಿತು ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ನವರು ಈ ಭಾಗದಲ್ಲಿ ಇಂದು ಹಣ ಹಂಚಿಕೆ‌ ಮಾಡ್ತಿದ್ರು. ಅದಕ್ಕೆ ನಾವು ಅಡ್ಡಿ ಪಡಿಸುತ್ತೇವೆ ಅಂತ ನಮ್ಮ ಮನೆ ಮೇಲೆ‌ ದಾಳಿ ಮಾಡಿದ್ದಾರೆ. ದಾಳಿ ವೇಳೆ ಆರ್‌ಓಗೆ ಪದೇ ಪದೆ ಪೋನ್ ಬರ್ತಾನೆ ಇತ್ತು. ಅವ್ರನ್ನು ಎರಡು ದಿನಕ್ಕಾದ್ರು ಒಳಕ್ಕೆ ‌ಹಾಕಿಸಿ ಅಂತ ಫೋನ್‌ನಲ್ಲಿ ಹೇಳ್ತಿದ್ರು” ಎಂದು ರಾಮಚಂದ್ರ ಹೇಳಿದ್ದಾರೆ.

“ಏನೋ‌ ದೊಡ್ಡದಾಗಿ‌ ಸಿಗುತ್ತೆ, ಕೂಲ್ ಆಗುತ್ತೆ ಅಂತ ಬಂದ್ರು, ಹಾಟ್ ಆಗಿ ಹೋದ್ರು. ಮೊಮ್ಮಕ್ಕಳ ಹುಟ್ಟುಹಬ್ಬಕ್ಕಾಗಿ ಲಿಕ್ಕರ್ ತರಿಸಿದ್ದೆ. ‌‌ಚುನಾವಣೆ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹುಟ್ಟುಹಬ್ಬ ಮಾಡಬಾರದು ಅಂತಾ ಸುಮ್ನೇ ಇದ್ದೆವು. ಅದನ್ನು ವಶಕ್ಕೆ ಪಡೆದಿದ್ದಾರೆ. ಏನು ವಶಕ್ಕೆ ಪಡೆದಿದ್ದೇವೆ ಅಂತ ಒಂದು ಸಹಿ ಪಡೆದಿದ್ದಾರೆ” ಎಂದಿದ್ದಾರೆ. “ಈ ಭಾಗದಲ್ಲಿ ಬಿಜೆಪಿಗೆ ಲೀಡ್ ಬರುತ್ತೆ. ಕಳೆದ ಬಾರಿ 18 ಸಾವಿರ ಲೀಡ್ ಬಂದಿತ್ತು. ಅದನ್ನು ಸಹಿಸಲಾಗದೆ ಅಧಿಕಾರ ಮಿಸ್‌ಯೂಸ್ ಮಾಡಿದ್ದಾರೆ” ಎಂದು ರಾಮಚಂದ್ರ ಆರೋಪಿಸಿದರು.

ಇದನ್ನೂ ಓದಿ: Lok Sabha Election: ಕರ್ನಾಟಕ ಸೇರಿ 13 ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ; ಪಿನ್‌ ಟು ಪಿನ್‌ ಮಾಹಿತಿ ಇಲ್ಲಿದೆ

Continue Reading

ಕರ್ನಾಟಕ

Lok Sabha Election: ಕರ್ನಾಟಕ ಸೇರಿ 13 ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ; ಪಿನ್‌ ಟು ಪಿನ್‌ ಮಾಹಿತಿ ಇಲ್ಲಿದೆ

Lok Sabha Election: ಕರ್ನಾಟಕವೂ ಒಳಗೊಂಡಂತೆ ದೇಶದ 13 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಚುನಾವಣೆ ಆಯೋಗ ತೀರ್ಮಾನಿಸಿದೆ.

VISTARANEWS.COM


on

Lok Sabha Election
Koo

ಬೆಂಗಳೂರು/ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನಕ್ಕೆ ಕರ್ನಾಟಕ, ಕೇರಳ ಸೇರಿ ದೇಶದ 13 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಜ್ಜಾಗಿವೆ. ಕರ್ನಾಟಕದ (Karnataka) 14 ಲೋಕಸಭೆ ಕ್ಷೇತ್ರಗಳು ಸೇರಿ ಎರಡನೇ ಹಂತದಲ್ಲಿ ಶುಕ್ರವಾರ (ಏಪ್ರಿಲ್‌ 26) ಒಟ್ಟು 88 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಮತಗಟ್ಟೆಗಳಲ್ಲಿ ಸಕಲ ಸೌಕರ್ಯ, ಸಿಬ್ಬಂದಿಗೆ ವಾಹನದ ವ್ಯವಸ್ಥೆ, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜನೆ ಸೇರಿ ಎರಡನೇ ಹಂತದ ಮತದಾನಕ್ಕೆ (2nd Phase Voting) ಸಕಲ ರೀತಿಯ ವ್ಯವಸ್ಥೆ ಮಾಡಿಕೊಂಡಿದೆ.

ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್‌

ಕೋಲಾರ, ಮಂಡ್ಯ, ಉಡುಪಿ-ಚಿಕ್ಕಮಗಳೂರು, ಹಾಸನ, ಮೈಸೂರು, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರ ಕೇಂದ್ರ, ಬೆಂಗಳೂರು ಉತ್ತರ, ದಕ್ಷಿಣ ಕನ್ನಡ, ಚಾಮರಾಜನಗರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮತಗಟ್ಟೆಗಳಲ್ಲಿ ಹೆಚ್ಚಿನ ಜನರ ಸರತಿ ಸಾಲು ಇದ್ದರೆ ಮತದಾನದ ಸಮಯವನ್ನು ಒಂದು ಗಂಟೆವರೆಗೆ ವಿಸ್ತರಣೆ ಮಾಡಲಾಗುತ್ತದೆ.

ಯಾವ ರಾಜ್ಯದ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಕೇರಳದ ಎಲ್ಲ 20, ಕರ್ನಾಟಕ 14, ರಾಜಸ್ಥಾನ 13, ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದ ತಲಾ 8, ಮಧ್ಯಪ್ರದೇಶ 6, ಬಿಹಾರ ಹಾಗೂ ಅಸ್ಸಾಂನ ತಲಾ 5, ಛತ್ತೀಸ್‌ಗಢ ಹಾಗೂ ಪಶ್ಚಿಮ ಬಂಗಾಳದ ತಲಾ 3, ತ್ರಿಪುರ, ಜಮ್ಮು-ಕಾಶ್ಮೀರ ಹಾಗೂ ಮಣಿಪುರದ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 7 ಹಂತಗಳಲ್ಲಿ ನಡೆಯುವ ಚುನಾವಣೆಯು ಜೂನ್‌ 1ರಂದು ಮುಕ್ತಾಯವಾಗಲಿದೆ. ಜೂನ್‌ 4ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಕಣದಲ್ಲಿರುವ ಪ್ರಮುಖರು

ಕೇರಳದಲ್ಲಿ ರಾಹುಲ್‌ ಗಾಂಧಿ, ಕೆ.ಸಿ. ವೇಣುಗೋಪಾಲ್‌, ಶಶಿ ತರೂರ್‌, ರಾಜೀವ್‌ ಚಂದ್ರಶೇಖರ್‌, ರಾಜಸ್ಥಾನದಲ್ಲಿ ಓಂ ಬಿರ್ಲಾ, ಗಜೇಂದ್ರ ಸಿಂಗ್‌ ಶೇಖಾವತ್‌, ಉತ್ತರ ಪ್ರದೇಶದಲ್ಲಿ ಹೇಮಾ ಮಾಲಿನಿ, ಡ್ಯಾನಿಶ್‌ ಅಲಿ, ಮಧ್ಯಪ್ರದೇಶದಲ್ಲಿ ವಿಜೇಂದ್ರ ಕುಮಾರ್‌ ಖಾತಿಕ್‌, ಸಿದ್ಧಾರ್ಥ್‌ ಸುಖಲಾಲ್‌ ಕುಶ್ವಾಹ ಕಣದಲ್ಲಿರುವ ಪ್ರಮುಖರಾಗಿದ್ದಾರೆ. ಹಾಗೆಯೇ, ಪ್ರಕಾಶ್‌ ಅಂಬೇಡ್ಕರ್‌ (ವಿಬಿಎ ಪಕ್ಷ), ನವನೀತ್‌ ಕೌರ್‌ ರಾಣಾ, ಪಪ್ಪು ಯಾದವ್‌ ಸೇರಿ ಇತರ ಗಣ್ಯರು ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ.

2019ರ ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 88 ಕ್ಷೇತ್ರಗಳ ಪೈಕಿ 61 (ಬಿಜೆಪಿ 52, ಶಿವಸೇನೆ 4, ಜೆಡಿಯು 4, ಸ್ವತಂತ್ರ 1) ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇನ್ನು ಕಾಂಗ್ರೆಸ್‌ ನೇತೃತ್ವದ ಯುಪಿಎ 24 (ಕಾಂಗ್ರೆಸ್‌ 18, ಐಯುಎಂಎಲ್‌ 2, ಜೆಡಿಎಸ್‌ 1, ಕೇರಳ ಕಾಂಗ್ರೆಸ್‌ ಮಣಿ 1, ಆರ್‌ಎಸ್‌ಪಿ 1, ಸ್ವತಂತ್ರ 1) ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿಗೆ ‘ಪ್ರಾಮಿಸ್ಡ್ ನೇಷನ್’ ಪುಸ್ತಕ ಅರ್ಪಣೆ

Continue Reading

ಶ್ರದ್ಧಾಂಜಲಿ

Subramanya Dhareshwar: ಜೇನುದನಿಯ ಗಾನಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

VISTARANEWS.COM


on

Subramanya Dhareshwar
Koo

ಉಡುಪಿ: ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ, ಯಕ್ಷಗಾನದ (Yakshagana) ಬಡಗುತಿಟ್ಟಿನ ಶ್ರೇಷ್ಠ ಭಾಗವತ (Bhagavatha) ಸುಬ್ರಹ್ಮಣ್ಯ ಧಾರೇಶ್ವರ (Subramanya Dhareshwar) ಇನ್ನಿಲ್ಲ. ಅವರು ತಮ್ಮ 67ನೇ ವಯಸ್ಸಿನಲ್ಲಿ ಬೆಂಗಳೂರಿನ ಮನೆಯಲ್ಲಿ ಏ.25ರಂದು ಬೆಳಗ್ಗೆ ನಿಧನ ಹೊಂದಿದರು.

ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

1957ರ ಸೆ.5ರಂದು ಜನಿಸಿದ ಅವರನ್ನು ಯಕ್ಷರಂಗದ ತಜ್ಞ ಭಾಗವತರೆಂದೇ ಗುರುತಿಸಲಾಗುತ್ತಿತ್ತು. ಯಕ್ಷಗಾನದ ಹೊಸ ಹಾಗೂ ಹಳೆಯ ಪ್ರಸಂಗಗಳ ಪರಿಣಿತರಾಗಿದ್ದರು. ಕೋಟ ಅಮೃತೇಶ್ವರಿ ಮೇಳ, ಪೆರ್ಡೂರು ಮೇಳಗಳಲ್ಲಿ ಭಾಗವತರಾಗಿ, ಹೊಸರಾಗಗಳನ್ನು ಹೊಸ ತಾಂತ್ರಿಕತೆಯನ್ನು ಯಕ್ಷರಂಗದಲ್ಲಿ ಯಶಸ್ವಿಯಾಗಿ ಬಳಸಿದರು. ಸುಮಾರು 400ಕ್ಕಿಂತಲೂ ಅಧಿಕ ಯಕ್ಷಗಾನದ ಆಡಿಯೋ ಕ್ಯಾಸೆಟ್ ಗಳಲ್ಲಿ ಧಾರೇಶ್ವರರ ಧ್ವನಿ ಇದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ, ಸನ್ಮಾನಗಳಿಗೆ ಪಾತ್ರರಾಗಿರುವ ಧಾರೇಶ್ವರ ಅವರು ಗುರುಗಳಾದ ನಾರಾಯಣಪ್ಪ ಉಪ್ಪೂರರನ್ನು ಸದಾ ಸ್ಮರಿಸುತ್ತಿದ್ದರು. ಸಾಂಪ್ರದಾಯಿಕ ರಾಗಗಳೊಂದಿಗೆ ಹೊಸ ರಾಗಗಳನ್ನು ತಂದು ಪೌರಾಣಿಕ ಹಾಗೂ ಸಾಮಾಜಿಕ ಪ್ರಸಂಗಗಳನ್ನು ಚೆನ್ನಾಗಿ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಧಾರೇಶ್ವರರು, ಕಾಳಿಂಗ ನಾವಡರರ ನಂತರ ಯಕ್ಷಗಾನ ರಂಗದಲ್ಲಿ ತನ್ನ ಇಂಪಾದ ಕಂಠದಿಂದ ಜನಪ್ರಿಯರಾದವರು.

ಮೂಲತಃ ಎಲೆಕ್ಟ್ರಿಕಲ್ ಅಂಗಡಿ ಮಾಡಿಕೊಂಡಿದ್ದ ಸುಬ್ರಹ್ಮಣ್ಯ ಧಾರೇಶ್ವರ ಕೋಟದಲ್ಲಿ ಯಕ್ಷಗಾನ ಕೇಂದ್ರಕ್ಕೆ ಸೇರಿ ಅಲ್ಲಿ ಭಾಗವತಿಕೆಯ ಮಟ್ಟುಗಳನ್ನು ಕಲಿತರು. ಉಪ್ಪೂರರಿಂದ ಭಾಗವತಿಕೆಯ ಎಲ್ಲ ಪಟ್ಟುಗಳನ್ನು ಕಲಿತರು. ಆರಂಭದಲ್ಲಿ ಎಲೆಕ್ಟ್ರಿಶಿಯನ್ ಆಗಿ ಅಮೃತೇಶ್ವರಿ ಮೇಳಕ್ಕೆ ಸೇರಿದರು. ಈ ಸಂದರ್ಭ ಗುರುಗಳಾದ ಉಪ್ಪೂರರ ಒತ್ತಾಸೆಯಿಂದ ಭಾಗವತಿಕೆ ಮಾಡಲು ಆರಂಭಿಸಿದರು. ಪೀಠಿಕೆ ಸ್ತ್ರೀವೇಷದವರೆಗೆ ಪದ್ಯ ಹೇಳಿ, ಎಲೆಕ್ಟ್ರಿಶಿಯನ್ ಆಗಿ, ಹಗಲು ಮೈಕ್ ಜಾಹೀರಾತು ನೀಡುವ ಕೆಲಸವನ್ನು ಮಾಡುತ್ತಿದ್ದ ಧಾರೇಶ್ವರರು, ಬಳಿಕ ಭಾಗವತಿಕೆಯಲ್ಲೇ ತೊಡಗಿಸಿಕೊಂಡು ಜನಪ್ರಿಯರಾದರು. ಪೆರ್ಡೂರು ಮೇಳದಲ್ಲಿ ಸುಮಾರು 26ಕ್ಕೂ ಅಧಿಕ ವರ್ಷಗಳ ತಿರುಗಾಟ ಸಹಿತ ಧಾರೇಶ್ವರ ಚಾರಿಟೇಬಲ್ ಟ್ರಸ್ಟ್ ಮೂಲಕ ಯಕ್ಷಗಾನ ಸೇವೆ ಮಾಡಿದ್ದಾರೆ.

ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಪುರಂದರದಾಸ, ಕನಕದಾಸ, ಬಸವಣ್ಣ, ಚೆನ್ನಮಲ್ಲಿಕಾರ್ಜುನರ ಕೀರ್ತನೆಗಳನ್ನೂ ಅವರು ಹಾಡಿದ್ದಾರೆ. ಕುವೆಂಪು, ಬೇಂದ್ರೆಯವರ ಹಾಡುಗಳೂ ಯಕ್ಷಗಾನದ ಹಾಡುಗಳಾಗಿದ್ದು ಧಾರೇಶ್ವರರ ಕಂಠದಲ್ಲಿ. ಅಮೃತ ವರ್ಷಿಣಿ, ಸಿಂಧೂರ ಭಾಗ್ಯ, ರಕ್ತ ತಿಲಕ, ಶೂದ್ರ ತಪಸ್ವಿನಿ, ಚಾರು ಚಂದ್ರಿಕೆ, ಗಗನ ಗಾಮಿನಿ, ವಸಂತ ಸೇನೆ ನಿರ್ದೇಶಿಸಿದ ಎಲ್ಲ ಪ್ರಸಂಗಗಳೂ ಸೂಪರ್ ಹಿಟ್ ಆಗಿವೆ.

ಇದನ್ನೂ ಓದಿ: Hariprakash Konemane: ಯಕ್ಷಗಾನ ಅಕಾಡೆಮಿಯಲ್ಲಿ ಉತ್ತರ ಕನ್ನಡ ಕಡೆಗಣನೆ; ಹರಿಪ್ರಕಾಶ್‌ ಕೋಣೆಮನೆ ಖಂಡನೆ

Continue Reading

ತುಮಕೂರು

Road Accident: ದ್ರಾಕ್ಷಿ ತುಂಬಿಕೊಂಡು ಬರುತ್ತಿದ್ದ ಬೊಲೆರೋ ಲಾರಿಗೆ ಡಿಕ್ಕಿ, ಇಬ್ಬರು ಸಾವು

Road Accident: ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು.

VISTARANEWS.COM


on

road accident tumkur news
Koo

ತುಮಕೂರು: ಲಾರಿಯ ಹಿಂಬದಿಗೆ ವೇಗವಾಗಿ ಬಂದ ಬೊಲೆರೋ (Lorry Bolero Hit) ವಾಹನ ಡಿಕ್ಕಿಯಾಗಿ (Road Accident) ಇಬ್ಬರು (two death) ಸಾವಿಗೀಡಾಗಿದ್ದಾರೆ. ತುಮಕೂರು (tumkur news) ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH 48) ಈ ದುರ್ಘಟನೆ ನಡೆದಿದೆ.

ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು. ಇವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ.

ಬೊಲೆರೋದಲ್ಲಿ ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ಅಪಘಾತ ನಡೆದಿದೆ. ಬೊಲೆರೋ ವಾಹನ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಡುರಾತ್ರಿ ಲಾರಿಯ ವೇಗ ಗೊತ್ತಾಗದೆ ಬೊಲೆರೋ ವಾಹನ ಚಾಲಕ ಹಿಂದಿನಿಂದ ಬಂದು ಅಪ್ಪಳಿಸಿದ್ದಾನೆ ಎಂದು ಶಂಕಿಸಲಾಗಿದೆ.

ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

ರಾಯಚೂರು: ಕಾರು ಟಯರ್ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಇಬ್ಬರು ಬೈಕ್ ಸವಾರರು ದುರ್ಮರಣ ಹೊಂದಿದ ಘಟನೆ (Road Accident) ಜಿಲ್ಲೆಯ ‌ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಜಾಲಹಳ್ಳಿ ನಿವಾಸಿಗಳಾದ ಗುತ್ತೆಪ್ಪ (45), ಜಗದೀಶ್ (50) ಮೃತರು. ದೇವದುರ್ಗ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು 10 ಕುರಿಗಳ ಸಾವು

ವಿಜಯಪುರ: ಸಿಡಿಲು ಬಡಿದು 10 ಕುರಿಗಳು ಮೃತಪಟ್ಟ ಘಟನೆ ಜಿಲ್ಲೆಯ ದೇವರ ಹಿಪ್ಪರಗಿಯ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ. ಸುಬ್ಬರಾಯ ನಾಟೀಕಾರ ಎಂಬುವವರ 10 ಕುರಿಗಳು ಮೃತಪಟ್ಟಿವೆ. ಜಮೀನಿನಲ್ಲಿ ಕುರಿಗಳು ಮೇಯಲು ಹೋದಾಗ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ.

ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Road accident in Ankola The biker was burnt to death

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಗ್ರಾಮದ ಬಳಿ ತಡರಾತ್ರಿ ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಬೈಕ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಮಂತ ಹರಿಕಂತ್ರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಸುಮಿತ್ ಹರಿಕಂತ್ರ, ಚಾಣಕ್ಯ ಹರಿಕಂತ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ, ಬೈಕ್‌ ಸವಾರನ ಮೇಲೆ ಬೈಕ್‌ ಬಿದ್ದಿದ್ದರಿಂದ ಮೇಲೆ ಏಳಲು ಆಗಿಲ್ಲ. ಹೀಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲೇ ಸಿಲುಕಿದ್ದ ಬೈಕ್‌ ಸವಾರ ಸುಮಂತ ಹರಿಕಂತ್ರ ಅವರ ಮೈಗೂ ಬೆಂಕಿ ತಗುಲಿದೆ. ಹೀಗಾಗಿ ಅವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗಾಯಾಳುಗಳಾದ ಸುಮಿತ್‌ ಹಾಗೂ ಚಾಣಕ್ಯ ಹರಿಕಂತ್ರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

Continue Reading
Advertisement
actress amulya father in law election officers ride
ಕ್ರೈಂ3 mins ago

Election Officer Raid: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

Rahul Gandhi
ದೇಶ7 mins ago

Rahul Gandhi: ಶೀಘ್ರವೇ ಅಯೋಧ್ಯೆಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ರಾಮಲಲ್ಲಾನ ದರ್ಶನ!

IPL 2024
ಕ್ರೀಡೆ16 mins ago

IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ

Amitabh Bachchan, AR Rahman honoured with Deenanath Mangeshkar award
ಸಿನಿಮಾ28 mins ago

Amitabh Bachchan: ಅಮಿತಾಭ್‌ ಬಚ್ಚನ್, ಎ ಆರ್ ರೆಹಮಾನ್‌ ಸೇರಿ ಹಲವರಿಗೆ ʻದೀನನಾಥ್ ಮಂಗೇಶ್ಕರ್ ಪ್ರಶಸ್ತಿʼ ಗೌರವ

Lok Sabha Election
ಕರ್ನಾಟಕ41 mins ago

Lok Sabha Election: ಕರ್ನಾಟಕ ಸೇರಿ 13 ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ; ಪಿನ್‌ ಟು ಪಿನ್‌ ಮಾಹಿತಿ ಇಲ್ಲಿದೆ

Subramanya Dhareshwar
ಶ್ರದ್ಧಾಂಜಲಿ41 mins ago

Subramanya Dhareshwar: ಜೇನುದನಿಯ ಗಾನಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

IPL 2024 Points Table
ಕ್ರೀಡೆ44 mins ago

IPL 2024 Points Table: ಡೆಲ್ಲಿ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ

road accident tumkur news
ತುಮಕೂರು1 hour ago

Road Accident: ದ್ರಾಕ್ಷಿ ತುಂಬಿಕೊಂಡು ಬರುತ್ತಿದ್ದ ಬೊಲೆರೋ ಲಾರಿಗೆ ಡಿಕ್ಕಿ, ಇಬ್ಬರು ಸಾವು

karnataka CET Exam 2024
ಪ್ರಮುಖ ಸುದ್ದಿ1 hour ago

JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

murder case bengaluru karaga
ಕ್ರೈಂ2 hours ago

Murder Case: ಕರಗ ಉತ್ಸವದ ವೇಳೆ ಅಣ್ಣಮ್ಮ ದೇವಾಲಯದ ಮುಂದೆ ಹಲ್ಲೆ, ಯುವಕ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌