Karnataka Elections : ಸರ್ವೋದಯ ಪಕ್ಷದ ಅಭ್ಯರ್ಥಿ ದರ್ಶನ್‌ ಪುಟ್ಟಣ್ಣಯ್ಯಗೆ ಚಿನಕುರುಳಿ ಗ್ರಾಮಸ್ಥರಿಂದ 3.25 ಲಕ್ಷ ರೂ. ದೇಣಿಗೆ - Vistara News

ಕರ್ನಾಟಕ

Karnataka Elections : ಸರ್ವೋದಯ ಪಕ್ಷದ ಅಭ್ಯರ್ಥಿ ದರ್ಶನ್‌ ಪುಟ್ಟಣ್ಣಯ್ಯಗೆ ಚಿನಕುರುಳಿ ಗ್ರಾಮಸ್ಥರಿಂದ 3.25 ಲಕ್ಷ ರೂ. ದೇಣಿಗೆ

Darshan Puttannayya : ಮೇಲುಕೋಟೆ ಕ್ಷೇತ್ರದ ಸರ್ವೋದಯ ಪಕ್ಷದ ಅಭ್ಯರ್ಥಿ ದರ್ಶನ್‌ ಪುಟ್ಟಣ್ಣಯ್ಯ ಅವರಿಗೆ ಚಿನಕುರುಳಿ ಗ್ರಾಮಸ್ಥರು ಚುನಾವಣಾ ಖರ್ಚಿಗಾಗಿ 3.25 ಲಕ್ಷ ರೂ. ಸಂಗ್ರಹಿಸಿ ಕೊಟ್ಟಿದ್ದಾರೆ!

VISTARANEWS.COM

on

Darshan puttannayya
ಚಿನಕುರುಳಿ ಗ್ರಾಮಸ್ಥರು ತಾವು ಸಂಗ್ರಹಿಸಿದ 3.25 ಲಕ್ಷ ರೂ.ವನ್ನು ದರ್ಶನ್‌ ಪುಟ್ಟಣ್ಣಯ್ಯ ಅವರಿಗೆ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಹಿಂದಿನ ಕಾಲದಲ್ಲಿ ಕೆಲವು ಅಭ್ಯರ್ಥಿಗಳಿಗೆ ಜನರೇ ದುಡ್ಡು ಸಂಗ್ರಹಿಸಿಕೊಟ್ಟು ಚುನಾವಣೆಗೆ ನಿಲ್ಲಿಸುತ್ತಿದ್ದರು ಎಂಬ ಸುದ್ದಿಯನ್ನು ಕೇಳಿದ್ದೇವೆ. ಅಂಥ ಕೆಲವು ಘಟನೆಗಳು ಈಗಲೂ ನಡೆಯುತ್ತಿವೆ. ಮೇಲುಕೋಟೆ ಕ್ಷೇತ್ರದಲ್ಲಿ (Karnataka Elections) ಸರ್ವೋದಯ ಪಕ್ಷದಿಂದ ಸ್ಪರ್ಧಿಸುತ್ತಿರುವ ದರ್ಶನ್‌ ಪುಟ್ಟಣ್ಣಯ್ಯ ಅವರಿಗೆ ಈ ರೀತಿಯ ಗೌರವ ಸಂದಿದೆ.

ಚುನಾವಣಾ ವೆಚ್ಚಕ್ಕಾಗಿ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಚಿನಕುರುಳಿ ಗ್ರಾಮಸ್ಥರು 3.25 ಲಕ್ಷ ರೂ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಚಿನಕುರುಳಿ ಎಂದರೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಒಂದು ಗ್ರಾಮ. ಇದು ಮೇಲುಕೋಟೆಯ ಹಾಲಿಯ ಶಾಸಕ, ಜೆಡಿಎಸ್‌ನ ಸಿ.ಎಸ್ ಪುಟ್ಟರಾಜು ಹುಟ್ಟೂರು.

ದೇವನೂರು ಮಹಾದೇವ ಅವರು ರೈತರ ಸಂಘ ಮತ್ತಿತರ ಸಂಘಟನೆಗಳನ್ನು ಸೇರಿಸಿಕೊಂಡು ಸ್ಥಾಪಿಸಿದ ಸರ್ವೋದಯ ಪಕ್ಷದ ಅಭ್ಯರ್ಥಿಯಾಗಿ ದರ್ಶನ್ ಪುಟ್ಟಣಯ್ಯ ಕಣದಲ್ಲಿದ್ದಾರೆ. ಇವರು ರೈತ ಸಂಘದ ಕೆ.ಎಸ್‌. ಪುಟ್ಟಣ್ಣಯ್ಯ ಅವರ ಪುತ್ರ. ತಂದೆಯ ಮರಣಾನಂತರ ರಾಜಕೀಯ ಪ್ರವೇಶಿಸಿದ್ದಾರೆ.

ದರ್ಶನ್‌ ಅವರು ಪ್ರಚಾರಕ್ಕೆ ಬಂದಕೂಡಲೇ ಗ್ರಾಮದ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಸಂಗ್ರಹಿಸಿದ್ದ ದೇಣಿಗೆಯನ್ನು ಅವರಿಗೆ ನೀಡಿದ್ದಾರೆ. ಮತ್ತು ಚುನಾವಣೆಯಲ್ಲಿ ಗೆದ್ದು ಬರುವಂತೆ ಗ್ರಾಮದ ಹಿರಿಯರು ಹಾರೈಸಿದ್ದಾರೆ.

ಮೇಲುಕೋಟೆಯಲ್ಲಿ ಕಾಂಗ್ರೆಸ್‌ ದರ್ಶನ್‌ ಪುಟ್ಟಣ್ಣಯ್ಯ ಅವರಿಗೆ ಬೆಂಬಲ ನೀಡುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಸರ್ವೋದಯ ಪಕ್ಷವು ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅವರನ್ನು ಬೆಂಬಲಿಸಿತ್ತು. ಈಗ ಸುಮಲತಾ ಅವರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಅವರು ದರ್ಶನ್‌ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸುತ್ತಾರಾ ಎನ್ನುವ ಕುತೂಹಲವಿದೆ.

2018ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಸಿ.ಎಸ್‌. ಪುಟ್ಟರಾಜು ಅವರಿಗೆ 96003 ಮತಗಳು ಬಂದಿದ್ದರೆ, ದರ್ಶನ್‌ ಪುಟ್ಟಣ್ಣಯ್ಯ ಅವರಿಗೆ 73,779 ಮತಗಳು ಬಂದಿದ್ದವು.

ಇದನ್ನೂ ಓದಿ : Karnataka Election 2023: ಮಂಡ್ಯದಲ್ಲಿ ಎಚ್‌ಡಿಕೆ, ಸುಮಲತಾ ಸ್ಪರ್ಧೆ ಫಿಕ್ಸ್?; ‌ಬ್ಯಾಂಕ್‌ ಖಾತೆ ತೆರೆದ ಮಾಜಿ ಸಿಎಂ, ಸಂಸದೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

Self Harming: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾರ್ಮೆಂಟ್ಸ್‌ನಲ್ಲಿ ಕೆಲಸದಿಂದ ತೆಗೆದು ಬೇರೆಲ್ಲೂ ಕೆಲಸ ಸಿಗದಂತೆ ಕಿರುಕುಳ ನೀಡಲಾಗಿದೆ ಎಂದು ಡೆತ್‌ ನೋಟ್‌ನಲ್ಲಿ ಯುವಕ ಉಲ್ಲೇಖಿಸಿದ್ದಾನೆ.

VISTARANEWS.COM

on

Self Harming
Koo

ಮೈಸೂರು: ಕಂಪನಿಯಲ್ಲಿ ಕೆಲಸದಿಂದ ತೆಗೆದು ಕಿರುಕುಳ ನೀಡಿದ್ದಾರೆ ಎಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಿ.ನರಸೀಪುರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ಯುವಕ.

ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್‌ನಲ್ಲಿ ಯುವಕ ಕಿರಣ್‌ ಕೆಲಸ ಮಾಡುತ್ತಿದ್ದ. ಆದರೆ, ಕಂಪನಿಯಲ್ಲಿ ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎ.ಜಿ.ಎಂ ಲೋಕೇಶ್‌ ಹಾಗೂ ಎಚ್.ಆರ್. ಎ.ಜಿ.ಎಂ ಅನಿಲ್ ಕಾರಣ ಎಂದು ಡೆತ್‌ ನೋಟ್‌ನಲ್ಲಿ ಯುವಕ ಉಲ್ಲೇಖಿಸಿದ್ದಾನೆ.

ನನ್ನನ್ನು ಕೆಲಸದಿಂದ ಬೇಕಂತಲೇ ತೆಗೆದಿದ್ದಾರೆ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಲೋಕೇಶ್‌ ಮತ್ತು ಅನಿಲ್‌ ಅವರಿಂದ ಕೆಲಸ ಸಿಗದ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಮೃತ ಕಿರಣ್ ಉಲ್ಲೇಖ ಮಾಡಿದ್ದಾನೆ. ಈ ಬಗ್ಗೆ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Life threat

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ (Life threat) ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ಬಂದಿರೋ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್‌ ಕುಮಾರ ಶ್ರೀಪಾದಗೆ ಬೆದರಿಕೆ ಮೇಲ್ ಬಂದಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದ್ದು, ” ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ” ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಬೆದರಿಕೆ ಸಂದೇಶ ಬಂದಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಈ ಬಗ್ಗೆ ಟರ್ಮಿನಲ್‌ ಉಸ್ತುವಾರಿ ಪ್ರತಾಪ ಅವರ ಗಮನಕ್ಕೆ ರೂಪೇಶ್‌ ಕುಮಾರ್‌ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರಿಗೆ ಗಾಯ

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ನಗರದ ಕಾಶಿಪುರದಲ್ಲಿ ನಡೆದಿದೆ. ಗಣೇಶ್ ಹಾಗೂ ರಾಜು ಗಾಯಾಳುಗಳು.

ಸೆಂಟ್ರಿಂಗ್ ಕೆಲಸ ಮಾಡುವ ವೇಳೆ ಪಕ್ಕದಲ್ಲೇ ಇದ್ದ ವಿದ್ಯುತ್ ತಂತಿಯನ್ನು ರಾಜು ಮುಟ್ಟಿದ್ದಾನೆ. ರಾಜುವನ್ನು ರಕ್ಷಿಸಲು ಹೋಗಿ ಗಣೇಶ್‌ಗೂ ಶಾಕ್‌ ಹೊಡೆದಿದೆ. ಹೀಗಾಗಿ ಗಾಯಗೊಂಡ ಇಬ್ಬರನ್ನೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

ಕ್ರೈಂ

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Robbery Case: ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್‌ನಲ್ಲಿ ಜುವೆಲ್ಲರಿ ಶಾಪ್‌ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ.

VISTARANEWS.COM

on

jewellery robbery case
Koo

ಬೆಂಗಳೂರು: ರಾಜಧಾನಿಯ ಚಿನ್ನಾಭರಣದ (Jewelry) ಅಂಗಡಿಗೆ ನುಗ್ಗಿದ ಕಳ್ಳರು ಮಾಲೀಕರಿಗೆ ಗನ್ (gun point) ತೋರಿಸಿ ಕೇವಲ 30 ಸೆಕೆಂಡುಗಳಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದು (Robbery Case) ಪರಾರಿಯಾಗಿರುವ ಘಟನೆ ಬೆಂಗಳೂರಿನ (Bangalore Crime) ಮಾದನಾಯಕನಹಳ್ಳಿಯ ಲಕ್ಷ್ಮಿಪುರದಲ್ಲಿ ನಡೆದಿದೆ.

ಕೇವಲ 30 ಸೆಕೆಂಡಿನಲ್ಲಿ 60 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್‌ನಲ್ಲಿ ಜುವೆಲ್ಲರಿ ಶಾಪ್‌ನಲ್ಲಿ ದರೋಡೆ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ.

ಒಬ್ಬ ಕಳ್ಳ ಗನ್ ಹಿಡಿದು ಮಾಲೀಕರಿಗೆ ಬೆದರಿಕೆ ಹಾಕಿದ್ದು, ಮತ್ತೊಬ್ಬ ಚಿನ್ನಭಾರಣಗಳನ್ನು ಚೀಲಕ್ಕೆ ತುಂಬಿಕೊಂಡಿದ್ದ. ಇನ್ನೊಬ್ಬ ಕಳ್ಳ ಹೊರಗೆ ಬೈಕ್‌ನಲ್ಲಿ ಕಾಯುತ್ತಿದ್ದ. ಕೆಲವೇ ಸೆಕೆಂಡಿನಲ್ಲಿ ಚಿನ್ನಾಭರಣಗಳನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ. 750 ಗ್ರಾಂಗಿಂತ ಹೆಚ್ಚು ಚಿನ್ನ ಕದ್ದು ಅಲ್ಲಿಂದ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಎಸ್ಕೇಪ್‌ ಆಗಿದ್ದಾರೆ. ಈ ದರೋಡೆಕೋರರ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ, ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ (Life threat) ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ಬಂದಿರೋ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಗೋಕುಲ ರೋಡ್ ಪೊಲೀಸ್‌ ಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್‌ ಕುಮಾರ ಶ್ರೀಪಾದಗೆ ಬೆದರಿಕೆ ಮೇಲ್ ಬಂದಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದ್ದು, ” ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ” ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಬೆದರಿಕೆ ಸಂದೇಶ ಬಂದಿದೆ.

ಈ ಬಗ್ಗೆ ಟರ್ಮಿನಲ್‌ ಉಸ್ತುವಾರಿ ಪ್ರತಾಪ ಅವರ ಗಮನಕ್ಕೆ ರೂಪೇಶ್‌ ಕುಮಾರ್‌ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

Continue Reading

ಕರ್ನಾಟಕ

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Life threat: ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದೆ. ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ ಎಂದು ಬೆದರಿಕೆ ಹಾಕಲಾಗಿದೆ.

VISTARANEWS.COM

on

Life threat
Koo

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ (Life threat) ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ಬಂದಿರೋ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್‌ ಕುಮಾರ ಶ್ರೀಪಾದಗೆ ಬೆದರಿಕೆ ಮೇಲ್ ಬಂದಿದೆ. ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಸಂದೇಶ ಬಂದಿದ್ದು, ” ನಾವು ನಿಮ್ಮನ್ನು ನಾಶ ಮಾಡುತ್ತೇವೆ, ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರಿ” ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಎಂದು ಬೆದರಿಕೆ ಸಂದೇಶ ಬಂದಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಈ ಬಗ್ಗೆ ಟರ್ಮಿನಲ್‌ ಉಸ್ತುವಾರಿ ಪ್ರತಾಪ ಅವರ ಗಮನಕ್ಕೆ ರೂಪೇಶ್‌ ಕುಮಾರ್‌ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರಿಗೆ ಗಾಯ

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ನಗರದ ಕಾಶಿಪುರದಲ್ಲಿ ನಡೆದಿದೆ. ಗಣೇಶ್ ಹಾಗೂ ರಾಜು ಗಾಯಾಳುಗಳು.

ಸೆಂಟ್ರಿಂಗ್ ಕೆಲಸ ಮಾಡುವ ವೇಳೆ ಪಕ್ಕದಲ್ಲೇ ಇದ್ದ ವಿದ್ಯುತ್ ತಂತಿಯನ್ನು ರಾಜು ಮುಟ್ಟಿದ್ದಾನೆ. ರಾಜುವನ್ನು ರಕ್ಷಿಸಲು ಹೋಗಿ ಗಣೇಶ್‌ಗೂ ಶಾಕ್‌ ಹೊಡೆದಿದೆ. ಹೀಗಾಗಿ ಗಾಯಗೊಂಡ ಇಬ್ಬರನ್ನೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ; ಹಣ ಸುಲಿಗೆ

sural falls assault case

ಬೆಳಗಾವಿ: ಕರ್ನಾಟಕದ ಪ್ರವಾಸಿಗರನ್ನು (Karnataka Tourists) ಗೋವಾದ ಅರಣ್ಯ ಇಲಾಖೆ (Goa Forest department) ಸಿಬ್ಬಂದಿ ಮನಬಂದಂತೆ ಥಳಿಸಿದ (Assault Case) ಘಟನೆ ಗೋವಾ ಗಡಿಯಲ್ಲಿರುವ ಸೂರಲ್ ಜಲಪಾತದ (Sural Falls) ಬಳಿ ನಡೆದಿದೆ. ಜಲಪಾತ ವೀಕ್ಷಣೆಗೆ ಹೋಗಿದ್ದ ಕನ್ನಡದ ಪ್ರವಾಸಿಗರಿಗೆ ಮೈಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿ, ಅವರಿಂದ ಹಣ ಕಿತ್ತುಕೊಂಡು ವಿಕೃತಿ ಮೆರೆದಿದ್ದಾರೆ.

ಬೆಳಗಾವಿ ಮತ್ತು ಗೋವಾ ಗಡಿಯಲ್ಲಿರುವ ಖಾನಾಪೂರ ತಾಲೂಕಿನ ಕಣಕುಂಬಿ ಬಳಿಯ ಸೂರಲ್ ಜಲಪಾತ ಬಳಿ ಇದು ನಡೆದಿದೆ. ಮಳೆಗಾಲ ಆರಂಭ ಆಗುತ್ತಿದ್ದಂತೆ ಕರ್ನಾಟಕದಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ತೆರಳುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಪ್ರವಾಸಿಗರಿಂದ ಹೆಚ್ಚಿನ ಹಣ ವಸೂಲಿ ಮಾಡುವುದಲ್ಲದೆ, ಪ್ರಶ್ನಿಸಿದರೆ ಮೈಮೇಲೆ ಏರಿ ಬರುತ್ತಾರೆ.

ನಿರಂತರವಾಗಿ ಪ್ರವಾಸಿಗರಿಂದ ಒಂದಿಲ್ಲೊಂದು ಕಾರಣ ಹೇಳಿ ಹಣ ಕಿತ್ತುಕೊಳ್ಳುತ್ತಿರುವ ಆರೋಪ ಇವರ ಮೇಲಿದೆ. ಸೂರಲ್ ಜಲಪಾತದ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಣ ವಸೂಲಿ ಆರೋಪ ಮೊದಲಿನಿಂದಲೂ ಇದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರದ ಐವರು ಯುವಕರ ತಂಡವನ್ನು ಇವರು ತಡೆದು ಥಳಿಸಿದ್ದಾರೆ. ಬೆನ್ನು, ಕಾಲು ಕೈಗೆ ಬಾಸುಂಡೆ ಬರುವ ಹಾಗೆ ಥಳಿಸಿ ವಿಕೃತಿ ತೋರಿದ್ದಾರೆ.

ಇದನ್ನೂ ಓದಿ | Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

ಹಲ್ಲೆ ಮಾಡಿದ್ದಲ್ಲದೇ ಪರ್ಸ್‌ನಲ್ಲಿದ್ದ ಹಣವನ್ನೂ ಕಿತ್ತುಕೊಂಡಿದ್ದಾರೆ. 1 ಸಾವಿರ ಫೋನ್ ಪೇ ಮಾಡಿಸಿಕೊಂಡಿದ್ದು ಸೇರಿ ಒಟ್ಟು 9 ಸಾವಿರ ರೂಪಾಯಿ ಹಣ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೌರ್ಜನ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸುತ್ತಿದ್ದು, ಯಾರೂ ದೂರು ನೀಡುತ್ತಿಲ್ಲ ಎಂದು ಹಲ್ಲೆಗೊಳಗಾದವರು ಅಲವತ್ತುಕೊಂಡಿದ್ದಾರೆ. ಗೋವಾ ಅರಣ್ಯ ಇಲಾಖೆಯ ಅಧಿಕಾರಿಗಳು ಇವರ ದೂರನ್ನು ಕೇಳಿಸಿಕೊಂಡಿಲ್ಲ.

Continue Reading

ಕ್ರೀಡೆ

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Para Badminton Ranking: ಹೊಸದಾಗಿ ಪ್ರಕಟಗೊಂಡ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸುಹಾಸ್‌ ಒಂದು ಸ್ಥಾನ ಏರಿಕೆ ಕಾಣುವ ಮೂಲಕ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಫ್ರಾನ್ಸ್‌ನ ಲುಕಾಸ್‌ ಮಜುರ್‌ರನ್ನು ಹಿಂದಿಕ್ಕಿದರು

VISTARANEWS.COM

on

Para Badminton Ranking
Koo

ನವದೆಹಲಿ: ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ, ಕನ್ನಡಿಗ ಸುಹಾಸ್ ಯತಿರಾಜ್(Suhas Lalinakere Yathiraj) ಅವರು ಪ್ಯಾರಾ ಬ್ಯಾಡ್ಮಿಂಟನ್‌ ಪುರುಷರ ಸಿಂಗಲ್ಸ್‌ನ(Para Badminton Ranking) ಎಸ್‌ಎಲ್‌4 ವಿಭಾಗದಲ್ಲಿ ವಿಶ್ವ ನಂ.1 ಸ್ಥಾನಕ್ಕೇರಿದ್ದಾರೆ. ಈ ಸಂತಸ ವಿಚಾರವನ್ನು ಸುಹಾಸ್(Suhas L Yathiraj) ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ಹೊಸದಾಗಿ ಪ್ರಕಟಗೊಂಡ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸುಹಾಸ್‌ ಒಂದು ಸ್ಥಾನ ಏರಿಕೆ ಕಾಣುವ ಮೂಲಕ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಫ್ರಾನ್ಸ್‌ನ ಲುಕಾಸ್‌ ಮಜುರ್‌ರನ್ನು ಹಿಂದಿಕ್ಕಿದರು. ಸುಹಾಸ್​ ಇದೇ ವರ್ಷ ಥಾಯ್ಲೆಂಡ್‌ನಲ್ಲಿ ನಡೆದಿದ್ದ ಪ್ಯಾರಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದ ಜಯಿಸಿದ್ದರು. ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ 2 ಬಾರಿ ಸ್ವರ್ಣ ಪದಕ ಗೆದ್ದಿರುವ ಅವರು ಮುಂದಿನ ತಿಂಗಳು ನಡೆಯುವ ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ.

“ಅಂತಿಮವಾಗಿ ವಿಶ್ವ ನಂಬರ್ 1… ಈ ವಿಚಾರವನ್ನು ಹಂಚಿಕೊಳ್ಳಲು ಸಂತೋಷವಾಗಿದೆ. ಪುರುಷರ ಸಿಂಗಲ್ಸ್ ವಿಭಾಗಕ್ಕೆ ಘೋಷಿಸಲಾದ ಇತ್ತೀಚಿನ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಪ್ಯಾರಾ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ, ನಾನು ವಿಶ್ವದ ಅಗ್ರ ಶ್ರೇಯಾಂಕವನ್ನು ಪಡೆದುಕೊಂಡಿದ್ದೇನೆ. ಜೀವನದಲ್ಲಿ ಮೊದಲ ಬಾರಿಗೆ ಈ ಸಾಧನೆ ಮಾಡಿ ಫ್ರಾನ್ಸ್‌ನ ಲೂಕಾಸ್ ಮಜೂರ್ ಅವರ ಸ್ಥಾನವನ್ನು ವಶಪಡಿಸಿಕೊಂಡಿರುವೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆ ಇರಲಿ. ಜೈ ಹಿಂದ್” ಎಂದು ಸುಹಾಸ್ ಯತಿರಾಜ್ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ Spanish Para-Badminton: ಕಂಚಿನ ಪದಕ ವಿಜೇತ ಕನ್ನಡಿಗ ಸುಹಾಸ್ ಸ್ವದೇಶಕ್ಕೆ ಆಗಮನ

ಉತ್ತರ ಪ್ರದೇಶದ ಗೌತಮ್‌ ಬುದ್ಧ ನಗರದ ಜಿಲ್ಲಾಧಿಕಾರಿಯಾಗಿರುವ ಸುಹಾಸ್‌ ಹಾಸನ ಮೂಲದ ಐಎಎಸ್ ಅಧಿಕಾರಿಯಾಗಿದ್ದಾರೆ. ಎಸ್‌ಎಲ್‌4 ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಅವರು ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಫೈನಲ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು. ಈ ಮೂಲಕ ಪ್ಯಾರಾಲಿಂಪಿಕ್ಸ್‌ ಪದಕ ಗೆದ್ದ ಮೊದಲ ಐಎಎಸ್‌ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು.

2007ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಸುಹಾಸ್‌, ದುರ್ಬಲ ಕಾಲನ್ನು ಹೊಂದಿದ್ದಾರೆ. ಕಾಲಿನಲ್ಲಿ ತೀವ್ರ ಬಲಹೀನತೆಯಿದ್ದರೆ ಅಂತಹವರನ್ನು ಎಸ್‌ಎಲ್‌4 ವಿಭಾಗಕ್ಕೆ ಸೇರಿಸಲಾಗುತ್ತದೆ. ಇಂತಹ ಸಮಸ್ಯೆಗಳ ಮಧ್ಯೆಯೂ ಸುಹಾಸ್‌ ಐಎಎಸ್‌ ಅಧಿಕಾರಿಯಾಗಿದ್ದಾರೆ.

ಸುಹಾಸ್‌ ಅವರು ಹಿಂದೆಮ್ಮೊ ಸಂದರ್ಶನದಲ್ಲಿ ಮಾತನಾಡುವ ವೇಳೆ “ದೇಶವನ್ನು ಪ್ರತಿನಿಧಿಸುವುದು ಗೌರವದ ವಿಷಯ. ಅದರಲ್ಲೂ ದೇಶಕ್ಕಾಗಿ ಪದಕ ಗೆಲ್ಲುವುದು ತುಂಬಾ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿರುತ್ತದೆ. ಯಾವಾಗಲೂ ಅತ್ಯುತ್ತಮ ಪ್ರದರ್ಶನಕ್ಕೆ ಪ್ರಯತ್ನ ನಡೆಸುತ್ತಿರುತ್ತೇನೆ” ಎಂದು ಹೇಳಿದ್ದರು. ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಜಯಿಸಲಿ ಎನ್ನುವುದು ಎಲ್ಲ ಕನ್ನಡಿಗರ ಆಶಯವಾಗಿದೆ.

Continue Reading
Advertisement
ಕ್ರೀಡೆ4 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್10 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ16 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ16 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest28 mins ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Asaduddin Owais
ದೇಶ31 mins ago

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Actor Darshan support by anchor hemalatha
ಸ್ಯಾಂಡಲ್ ವುಡ್35 mins ago

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Life threat
ಕರ್ನಾಟಕ50 mins ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Para Badminton Ranking
ಕ್ರೀಡೆ1 hour ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Actor Darshan Renukaswamy assault police lathi found How did D Gang get
ಕ್ರೈಂ1 hour ago

Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌