Site icon Vistara News

Ganiga Nigama : ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ, ಆರು ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಉತ್ತೇಜನ

Ganiga development corporation

#image_title

ಬೆಂಗಳೂರು: ಸುಮಾರು ಆರು ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಯ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಸೋಮವಾರ ʻಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮʼವನ್ನು (Ganiga Nigama) ಸ್ಥಾಪಿಸಿ ಆದೇಶ ಹೊರಡಿಸಿದೆ.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮಸಂಖ್ಯೆ 78(ಎ)ಯಿಂದ (ಇ)ವರೆಗೆ ಬರುವ ಗಾಣಿಗ, ತೇಲಿ, ಗಾಂಡ್ಲ, ವನಿಯನ್‌ ಹಾಗೂ ಜ್ಯೋತಿನಗರ, ಜ್ಯೋತಿನಗರ ವೈಶ್ಯ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆದೇಶಿಸಲಾಗಿದೆ.

ಈ ನಿಗಮ ಸ್ಥಾಪನೆಯಿಂದ ಸುಮಾರು ೪೫ ಲಕ್ಷ ಜನಸಂಖ್ಯೆ ಹೊಂದಿರುವ ಸಮುದಾಯಕ್ಕೆ ಅನುಕೂಲ ಆಗಲಿದೆ. ಈ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕ ಎಂದು ಹಲವು ವರ್ಷಗಳಿಂದ ಬೇಡಿಕೆ ಇತ್ತು. ಬೊಮ್ಮಾಯಿ ನೇತೃತ್ವದ ಸರ್ಕಾರ ಇದೀಗ ಚುನಾವಣೆಯ ಹೊಸ್ತಿಲಿನಲ್ಲಿ ನಿಗಮ ಸ್ಥಾಪನೆಯನ್ನು ಘೋಷಿಸಿದೆ.

ಇದೇ ವೇಳೆ ರಾಜ್ಯ ಸರ್ಕಾರ ಬಿಲ್ಲವ – ಈಡಿಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಸ್ಥಾಪನೆಯನ್ನು ಪ್ರಕಟಿಸಿದೆ. ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ 15/4ರ ಅನ್ವಯ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು ಅನುಚ್ಚೇದ 16/4ರ ಅನ್ವಯ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹಿರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪ್ರವರ್ಗ 2ಎ ಕ್ರಮಸಂಖ್ಯೆ 4a ಯಿಂದ zವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : Narayanaguru Nigama : ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ; ಈಡೇರಿತು ಬಿಲ್ಲವ/ಈಡಿಗ ಸಮುದಾಯದ ಬಹುಕಾಲದ ಬೇಡಿಕೆ

Exit mobile version