Site icon Vistara News

7th Pay Commission: 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್; ನೌಕರರಿಗೆ ಗುಡ್‌ ನ್ಯೂಸ್

7th Pay Commission

Karnataka Government Approves To Implementation Of 7th Pay Commission

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ನೌಕರರ ವೇತನ (Karnataka Government Employees) ಜಾಸ್ತಿಯಾಗಲಿದೆ. ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಕರ್ನಾಟಕ ಸರ್ಕಾರ (Karnataka Government) ತೀರ್ಮಾನ ಮಾಡಿದೆ.

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಕೆಲ ವರ್ಷಗಳಿಂದಲೂ ಏಳನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇತ್ತು.

Cauvery Dispute

ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರ ಮಹತ್ವದ ಬೇಡಿಕೆ ಈಡೇರಿದಂತಾಗಿದೆ. ಇದಲ್ಲದೆ, ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್‌ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.
ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು ಮತ್ತೊಂದು ಬೇಡಿಕೆಯಾಗಿದೆ.

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಯನ್ನು ಜಾರಿಗೆ ತರಲು ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: 05-09-2022 ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರೆ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ಚಿಕಿತ್ಸೆ ಪಡೆಯಲು ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡಬೇಕು ಎಂಬುದು ಮತ್ತೊಂದು ಬೇಡಿಕೆಯಾಗಿದೆ.

ಇದನ್ನೂ ಓದಿ: OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

Exit mobile version