Site icon Vistara News

Israel Palestine War: ಇಸ್ರೇಲ್‌ನಲ್ಲಿನ ಕನ್ನಡಿಗರಿಗಾಗಿ ರಾಜ್ಯ ಸರ್ಕಾರದಿಂದ ಹೆಲ್ಪ್‌ಲೈನ್‌

Israel Palestine War

ಬೆಂಗಳೂರು: ಇಸ್ರೇಲ್‌ ಮೇಲೆ ಪ್ಯಾಲೇಸ್ತೀನ್‌ನ ಹಮಾಸ್‌ ಉಗ್ರರು ಭೀಕರ ರಾಕೆಟ್‌ ದಾಳಿ ನಡೆಸಿದ್ದರಿಂದ ಇಸ್ರೇಲ್‌ ಯುದ್ಧ ಘೋಷಿಸಿದೆ. ಇದರಿಂದ ಇಸ್ರೇಲ್‌ನಲ್ಲಿ ನೆಲೆಸಿರುವ ಕನ್ನಡಿಗರು ಸೇರಿ ಸಾವಿರಾರು ಭಾರತೀಯರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅಲ್ಲಿನ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಇಸ್ರೇಲ್‌ನಲ್ಲಿನ ಸದ್ಯದ ಪರಿಸ್ಥಿತಿ ಬಹಳ ಕಳವಳಕಾರಿಯಾಗಿದೆ. ಅಲ್ಲಿ ನೆಲೆಸಿರುವ ರಾಜ್ಯದ ನಾಗರಿಕರ ರಕ್ಷಣೆಗಾಗಿ ನಾವು, ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ನಿಕಟ ಸಂಪರ್ಕದಲ್ಲಿದ್ದೇವೆ. ಯಾವುದೇ ರೀತಿಯ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ 080 22340676, 080 22253707 ಸಂಪರ್ಕಿಸಬಹುದು. ಅದೇ ರೀತಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ +97235226748 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯು ಅಧಿಕಾರಿಗಳ ಸೂಚನೆ ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಲಾಗಿದೆ. ದಯವಿಟ್ಟು ಹೆಚ್ಚಿನ ಜಾಗರೂಕತೆ ವಹಿಸುತ್ತಾ, ಅನಗತ್ಯ ಪ್ರಯಾಣಗಳನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ (Bomb Shelter) ಹತ್ತಿರ ಇರಬೇಕಾಗಿ ವಿನಂತಿ ಮಾಡಿದ್ದಾರೆ.

ಇದನ್ನೂ ಓದಿ | Israel Palestine War: ಹಮಾಸ್‌ ಬೆನ್ನಲ್ಲೇ ಲೆಬನಾನ್‌ನ ಹೆಜ್ಬುಲ್ಲಾ ಉಗ್ರರ ದಾಳಿ; ಇಸ್ರೇಲ್‌ಗೆ ಡಬಲ್ ಸಂಕಷ್ಟ‌

ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್‌ಸೈಟ್ (https://www.oref.org.illen) ಅಥವಾ ಅವರ ಸಿದ್ಧತೆ ಕರಪತ್ರವನ್ನು ನೋಡಿ. ತುರ್ತು ಸಂದರ್ಭದಲ್ಲಿ, ದಯವಿಟ್ಟು ನಮ್ಮನ್ನು +97235226748 ಸಂಪರ್ಕಿಸಿ ಅಥವಾ consL.telaviv@mea.gov.in ನಲ್ಲಿ e-ಮೇಲ್ ಸಂದೇಶವನ್ನು ಕಳುಹಿಸಿ. ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸಂಪರ್ಕಿಸಿ ಎಂದು ತಿಳಿಸಿದ್ದಾರೆ.

Exit mobile version