ಬೆಂಗಳೂರು: ಮಂಗಳೂರಿನ ನಾಗುರಿಯಲ್ಲಿ ಇತ್ತೀಚೆಗೆ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ವಿಚಾರಣೆ ನಡೆಸಲು ರಾಷ್ಟ್ರೀಯ ತನಿಖಾ ದಳಕ್ಕೆ(ಎನ್‌ಐಎ) ವಹಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಈ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಆದೇಶ ಹೊರಡಿಸಿದ್ದು, ಮುಂದಿನ ತನಿಖೆಯನ್ನು, ಕೇಂದ್ರ ತನಿಖಾ ಸಂಸ್ಥೆ NIAಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.
ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ, ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಭಯೋತ್ಪಾದನಾ ಪ್ರಕರಣಗಳನ್ನು ವಿಚಾರಣೆ ನಡೆಸುವ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (UAPA) ಅನ್ವಯ ತನಿಖೆಯನ್ನು ಎನ್‌ಐಎ ನಡೆಸಲು ಶಿಫಾರಸು ಮಾಡಿದೆ ಎಂದು ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕರಣೆ ಹೊರಡಿಸಿದ್ದಾರೆ.
ಇಲ್ಲಿಯವರೆಗೂ ನಡೆದಿರುವ ತನಿಖೆಗಳು, ಸಾಕ್ಷಿಯ ಮಾಹಿತಿಗಳನ್ನು ಎನ್‌ಐಎಗೆ ವಹಿಸಬೇಕು ಎಂದು ರಾಜ್ಯ ಪೊಲೀಸರಿಗೆ ಸೂಚಿಸಲಾಗಿದೆ.
ಇದನ್ನೂ ಓದಿ | ಮಂಗಳೂರು ಸ್ಫೋಟ | ಹಿಂದುಗಳ ತಲೆಗೆ ಕಟ್ಟುವ ಪ್ಲ್ಯಾನ್ ವಿಫಲ, ಆದರೂ ಎಚ್ಚರ ಅಗತ್ಯ ಎಂದ ಸಿ.ಟಿ ರವಿ