Site icon Vistara News

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣವನ್ನು NIAಗೆ ವಹಿಸಿದ ರಾಜ್ಯ ಸರ್ಕಾರ: ಸಿಎಂ ಬೊಮ್ಮಾಯಿ ಘೋಷಣೆ

Praveen nettaru NIA

ಬೆಂಗಳೂರು: ಸುಳ್ಯದಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಜತೆ ಸಭೆ ನಡೆಸಿದ ನಂತರ ಈ ಕುರಿತು ಮಾತನಾಡಿದ ಬೊಮ್ಮಾಯಿ, ಪ್ರವೀಣ್ ಹತ್ಯೆ,ಸಂಘಟಿತ ಅಪರಾಧವಾಗಿದೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ
ತ್ವರಿತಗತಿಯಾಗಿ ನಡೆಯುತ್ತಿದೆ. ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ NIA ಗೆ ಲೆಟರ್ ಬರೆಯೋದಕ್ಕೆ ಹೇಳಿದ್ದೇನೆ, ಎನ್‌ಐಗೆ ವಹಿಸಲು ತೀರ್ಮಾನಿಸಿದ್ದೇವೆ ಎಂದರು.

ಇದನ್ನೂ ಓದಿ | Praveen Nettaru | ಪ್ರವೀಣ್‌ ಹತ್ಯೆಗೆ ವ್ಯಾಪಕ ಆಕ್ರೋಶ; ದಕ್ಷಿಣ ಕನ್ನಡದ ವಿವಿಧೆಡೆ ಬಂದ್

ಕೇರಳ ಬಾರ್ಡರ್‌ನಲ್ಲಿ ಸಿಸಿಟಿವಿ ಅಳವಡಿಸಿ, ಚೆಕ್ ಪೋಸ್ಟ್ ಹಾಕಿ ಸರ್ವೈಲನ್ಸ್ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಪೋಲಿಸ್ ಕ್ಯಾಂಪ್ ಮಾಡಲು ತಿಳಿಸಲಾಗಿದೆ. ಕೆಎಸ್‌ಆರ್‌ಪಿ ಬೆಟಾಲಿಯನ್ ( ತುಕಡಿ) ದಕ್ಷಿಣ ಕನ್ನಡದಲ್ಲಿ ನೇಮಕ ಮಾಡಲು ಸೂಚನೆ ನೀಡಲಾಗಿದೆ. ರಾತ್ರಿ ಹೊತ್ತು ಹೆಚ್ಚು ದಸ್ತು ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ಫೆಬ್ರವರಿಯಲ್ಲಿ ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನೂ ಈಗಾಗಲೆ ಎನ್‌ಐಎ ತನಿಖೆ ನಡೆಸುತ್ತಿದೆ. ಪ್ರವೀಣ್‌ ಹತ್ಯೆ ಪ್ರಕರಣವನ್ನೂ ಎನ್‌ಐಎಗೆ ವಹಿಸಬೇಕು ಎಂಬ ಒತ್ತಡ ರಾಝ್ಯ ಸರ್ಕಾರದ ಮೇಲೆ ಇತ್ತು. ಈ ಕುರಿತು ಪ್ರವೀಣ್‌ ಸೂದ್‌ ಅವರನ್ನು ಕರೆಸಿಕೊಂಡು ದೀರ್ಘಕಾಲ ಬೊಮ್ಮಾಯಿ ಚರ್ಚೆ ನಡೆಸಿದರು. ನಂತರ ಈ ತೀರ್ಮಾನ ಪ್ರಕಟಿಸಿದ್ದಾರೆ.

ಇದನ್ನೂ ಓದಿ | ಹರ್ಷ ಹತ್ಯೆ ಪ್ರಕರಣ| ಶಿವಮೊಗ್ಗದಲ್ಲಿ ಎನ್‌ಐಎ ಸರ್ಚ್‌ ಆಪರೇಷನ್‌; ಹಲವು ದಾಖಲೆಗಳು ವಶಕ್ಕೆ

Exit mobile version