Karnataka Govt decides to repeal cow protection act passed by BJP Govtಸಂಪುಟ ಸಭೆ ನಿರ್ಧಾರ: 13 ತಿಂಗಳ ಹಿಂದಷ್ಟೆ ಜಾರಿಯಾಗಿದ್ದ ಮತಾಂತರ ನಿಷೇಧ ಕಾಯ್ದೆ ವಾಪಸ್‌: ಸಿಡಿದೆದ್ದ ಬಿಜೆಪಿ Vistara News

ಕರ್ನಾಟಕ

ಸಂಪುಟ ಸಭೆ ನಿರ್ಧಾರ: 13 ತಿಂಗಳ ಹಿಂದಷ್ಟೆ ಜಾರಿಯಾಗಿದ್ದ ಮತಾಂತರ ನಿಷೇಧ ಕಾಯ್ದೆ ವಾಪಸ್‌: ಸಿಡಿದೆದ್ದ ಬಿಜೆಪಿ

ಬಿಜೆಪಿ ಅನೇಕ ವರ್ಷಗಳಿಂದಲೂ ಮತಾಂತರಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. 2021ರಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು.

VISTARANEWS.COM


on

ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನಧಿಕೃತವಾಗಿ ಹಾಗೂ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಗಟ್ಟುವ ಸಲುವಾಗಿ 2022ರ ಮೇನಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯದ ಕಾಂಗ್ರೆಸ್‌ ಸರ್ಕಾರ ಹಿಂಪಡೆಯಲಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದ್ದಾರೆ.

ಬಿಜೆಪಿ ಅನೇಕ ವರ್ಷಗಳಿಂದಲೂ ಮತಾಂತರಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ನಾಗರಿಕರು ತಮ್ಮ ಇಚ್ಛೆಗೆ ಅನುಗುಣವಾಗಿ ಮತಾಂತರವಾಗಲು ಅವಕಾಶ ಇದ್ದರೂ, ಬಲವಂತವಾಗಿ ಹಾಗೂ ಆಮಿಷವನ್ನೊಡ್ಡಿ ಮತಾಂತರ ಮಾಡಲಾಗುತ್ತಿದೆ ಎನ್ನುವುದು ಅನೇಕ ವರ್ಷಗಳಿಂದಲೂ ಚರ್ಚಿತ ವಿಷಯ. ವಿಶೇಷವಾಗಿ ಕ್ರಿಶ್ಚಿಯನ್‌ ಮಿಷನರಿಗಳ ಕುರಿತು ಬಿಜೆಪಿ ಆಗಾಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದೆ. ಇದನ್ನು ತಡೆಯಲು 2022ರಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಮೊದಲಿಗೆ 2022ರ ಮೇನಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ಬಂದ ಕಾಯ್ದೆಯನ್ನು ಸೆಪ್ಟೆಂಬರ್‌ನಲ್ಲಿ ಪ್ರತಿಪಕ್ಷದ ವಿರೋಧದ ನಡುವೆಯೇ ಪಾಸ್‌ ಮಾಡಲಾಗಿತ್ತು.

ಇದೀಗ ಸಿದ್ದರಾಮಯ್ಯ ಸರ್ಕಾರ ಕಾಯ್ದೆಯನ್ನು ಹಿಂಪಡೆಯಲು ನಿರ್ಧಾರ ಮಾಡಿರುವುದಕ್ಕೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಮಾಜಿ ಡಿಸಿಎಂ ಡಾ. ಅಶ್ವತ್ಥನಾರಾಯಣ ಪ್ರತಿಕ್ರಿಯಿಸಿ, ಸಮಾಜದಲ್ಲಿ ಶಾಂತಿ ನೆಲೆಸೋದು ಕಾಂಗ್ರೆಸ್‌ಗೆ ಬೇಕಿಲ್ಲ. ಸಮಾಜದಲ್ಲಿ ಅಶಾಂತಿ, ಗಲಭೆ, ಗೊಂದಲ ಇರಬೇಕು ಅಂತ ಕಾಂಗ್ರೆಸ್ ಬಯಸಿದೆ. ನಾವು ಕಾನೂನು ಪ್ರಕಾರವೇ ಮತಾಂತರ ತಡೆ ಮಸೂದೆ ತಂದಿದ್ದೆವು. ಕಾಯ್ದೆಯಲ್ಲಿ ಲೋಪ ಏನೂ ಇರಲಿಲ್ಲ. ಈಗ ಮತಾಂತರ ತಡೆ ಕಾಯ್ದೆ ವಾಪಸ್ ತೆಗೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸಂಪುಟದ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಈ ಕುರಿತು ಟ್ವೀಟ್‌ ಮಾಡಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರಕ್ಕೆ ಇನ್ನೂ ಘೋಷಿಸಿದ ಗ್ಯಾರಂಟಿಗಳನ್ನ ಜನರಿಗೆ ತಲುಪಿಸಲು ಆಗಿಲ್ಲ. ಆಗಲೇ ಹಿಂದೂ ಸಮಾಜದ ಮೇಲೆ ದ್ವೇಷ ಆರಂಭವಾಗಿದೆ. ಬಿಜೆಪಿ ಸರ್ಕಾರ ಜಾರಿಗೆ ತಂದ ಮತಾಂತರ ನಿಷೇಧ ಕಾನೂನನ್ನ ವಜಾ ಮಾಡಿದ್ದೀರಿ. ಈ ಮೂಲಕ ತಮ್ಮ ಹಿಂದೂ ದ್ವೇಷವನ್ನ ಜಾಹೀರು ಮಾಡಿದ್ದೀರಿ. ಇಷ್ಟು ಆತುರತೆ ಏನಿತ್ತು..? ಹೈಕಮಾಂಡ್ ಒತ್ತಡವೇ..? ಸಿದ್ದರಾಮಯ್ಯನವರೇ..? ಎಂದಿದ್ದಾರೆ. ಎಂದು ಟ್ವೀಟ್

ಮಾಜಿ ಸಚಿವ ವಿ. ಸುನಿಲ್‌ಕುಮಾರ್‌ ಟ್ವೀಟ್‌ ಮಾಡಿ, ಕನ್ನಡಿಗರು ಸುಮ್ಮನೆ ಕುಳಿತರೆ ಬೆಂಗಳೂರಿನಲ್ಲಿ ” ಲೂಲು ಮಾಲ್” ಕಟ್ಟಿದವರ ಇತಿಹಾಸವನ್ನೂ‌ ಮುಂದಿನ ಪೀಳಿಗೆಯ ಜನಕ್ಕೆ ಕಾಂಗ್ರೆಸಿಗರು ಹೇಳಿಕೊಡಬಹುದು. ಮಂಗಳೂರು ಕುಕ್ಕರ್ ಸ್ಪೋಟದ ಆರೋಪಿಗೂ ದೇಶಭಕ್ತರ ಪಠ್ಯದ ಸಾಲಿನಲ್ಲಿ ಅವಕಾಶ ನೀಡಬಹುದು. ವಿದ್ಯಾರ್ಥಿಗಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರದ ಈ‌ ನೀತಿಯ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂಧರ ನಿಷೇಧ ಕಾಯಿದೆ ವಾಪಾಸ್ ತೆಗದುಕೊಳ್ಳುತ್ತದೆ ಎಂದು ನಾವು ಮೊದಲೇ ಎಚ್ಚರಿಸಿದ್ದೆವು. ಈಗ ಅದನ್ನು ನಿಜ‌ ಮಾಡುತ್ತಿದೆ. ಸಮವಸ್ತ್ರ ಸಂಹಿತೆಯನ್ನು ಬದಿಗಿಟ್ಟಿದೆ. ಇಡಿ ರಾಜ್ಯಕ್ಕೆ ಹಿಜಾಬ್ ತೊಡಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Elections 2023: ಮೂರು ರಾಜ್ಯಗಳಲ್ಲಿ ಜಯಭೇರಿ; ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ ವಿಧಾಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ ನಡೆಸಿದ್ದಾರೆ.

VISTARANEWS.COM


on

Bjp Leaders celebration
Koo

ಬೆಂಗಳೂರು: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ (Assembly Elections 2023) ಬಿಜೆಪಿ ಗೆಲುವು ಪಡೆದ ಹಿನ್ನೆಲೆಯಲ್ಲಿ ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ (BJP office) ಬಿಜೆಪಿ ನಾಯಕರು, ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಬಿಜೆಪಿ ಮುಖಂಡ ನಂದೀಶ್ ರೆಡ್ಡಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ | Assembly Elections 2023 : ರಾಜ್ಯದಿಂದ ಹೋದ ಹಣದ ಥೈಲಿಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿವೆ: ಎಚ್‌ಡಿಕೆ

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧೆಡೆ ಬಿಜೆಪಿಯಿಂದ ವಿಜಯೋತ್ಸವ ಆಚರಿಸಲಾಗಿದೆ. ಕೊಪ್ಪಳ, ಹಾವೇರಿ, ಬಳ್ಳಾರಿ, ಮಂಡ್ಯ, ಕೊಡಗಿನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ವಿಜಯಯಾತ್ರೆ ಲೋಕಸಭೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದ ವಿಜಯೇಂದ್ರ

ನವದೆಹಲಿ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ವಿರೋಧಪಕ್ಷಗಳು ಬೊಬ್ಬೆ ಹೊಡೆಯುತ್ತಿದ್ದವು. ಆದರೆ, ದೇಶದಲ್ಲಿ ವಾತಾವರಣ ಬಿಜೆಪಿ ಪರವಾಗಿದ್ದು, ಮೋದಿ ಪರವಾದ ಬಯಕೆ ಇದೆ ಎಂದು ಜನತೆ ಉತ್ತರ ಕೊಟ್ಟಿದ್ದಾರೆ. ಐದು ರಾಜ್ಯಗಳ ಚುನಾವಣೆ ಸೆಮಿಫೈನಲ್ಸ್ ಎನ್ನುವಂತೆ ವ್ಯಾಖ್ಯಾನವಿತ್ತು, ಅಲೆಯಲ್ಲ, ಸುನಾಮಿ ರೀತಿಯಲ್ಲಿ ಬಿಜೆಪಿ ಪರವಾಗಿ ಜನ ಮತನೀಡಿದ್ದಾರೆ. ವಿಜಯಯಾತ್ರೆ ಇಲ್ಲಿಗೆ ನಿಲ್ಲುವುದಿಲ್ಲ, ಲೋಕಸಭೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನ ದೇಶ ರಕ್ಷಣೆಯ ಗ್ಯಾರಂಟಿ ಬಯಸುತ್ತಿದ್ದಾರೆ. ಅಧಿಕಾರ ಕಬಳಿಸುವ ಆಮಿಷದ ಗ್ಯಾರಂಟಿ ಅಲ್ಲ ಎನ್ನುವುದು ಗೊತ್ತಾಗಿದೆ. ಕಳೆದ ವಿಧಾನಸಭಾ ಚುನಾವಣೆ ಕರ್ನಾಟಕದಲ್ಲಿ ಗ್ಯಾರಂಟಿ ಆಮಿಷ ಒಡ್ಡಲಾಗಿತ್ತು, ರಾಜ್ಯದ ಜನ ಪಶ್ಚಾತ್ತಾಪ ಪಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸ ಕುಂಟಿತವಾಗಿದೆ. ಕಳೆದ 6 ತಿಂಗಳ ಕಾರ್ಯವೈಖರಿಗೆ ಜನ ಬೇಸತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ರಾಜ್ಯದ ಎಲ್ಲಾ 28 ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇವತ್ತಿನ ಫಲಿತಾಂಶ ತುಂಬಾ ಸಂತೋಷ ಕೊಟ್ಟಿದೆ. ಮೂರನೇ ಬಾರಿ ಮೋದಿ ಪ್ರಧಾನಿಯಾಗಲಿದ್ದಾರೆ. ತೆಲಂಗಾಣದಲ್ಲಿ ಬಹಳ ನಿರೀಕ್ಷೆ ಇರಲಿಲ್ಲ, ಕರ್ನಾಟಕ ಫಲಿತಾಂಶದಿಂದ‌ ನಮ್ಮಗೆ ಹಿನ್ನಡೆಯಾಗಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಗ್ಯಾರಂಟಿ ಎಲ್ಲ ಕಡೆ ವರ್ಕ್ ಆಗಿಲ್ಲ. ಕರ್ನಾಟಕದಲ್ಲಿ ಮತದಾರರ ಕಣ್ಣಿಗೆ ಬೂದಿ ಎರಚಿದಂತೆ, ತೆಲಂಗಾಣದಲ್ಲೂ ಬೂದಿ ಎರಚಿ ಗೆದ್ದಿದ್ದಾರೆ. ಬಿಆರ್‌ಎಸ್ ಆಡಳಿತ ವಿರೋಧಿ ಅಲೆ ಬಳಸಿಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ ಎಂದು ಹೇಳಿದರು.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

ಕರ್ನಾಟಕ

ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

Atrocity on Lawyer : ಚಿಕ್ಕಮಗಳೂರಿನ ವಕೀಲ ಪ್ರೀತಂ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಜತೆಗೆ ಪ್ರೀತಂ ವಿರುದ್ಧವು ಎಫ್‌ಐಆರ್‌ ದಾಖಲಾಗಿದ್ದು, ಈ ಸಂಘರ್ಷವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

VISTARANEWS.COM


on

By

Chikkamagaluru police lawyer clash The case is being investigated by the CID
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಪೊಲೀಸ್-ವಕೀಲರ ಸಂಘರ್ಷ ಪ್ರಕರಣವನ್ನು (Atrocity on Lawyer) ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿದೆ. ಚಿಕ್ಕಮಗಳೂರಿನ ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಅಹೋರಾತ್ರಿ ಪೊಲೀಸರ ಹಾಗೂ ಕುಟುಂಬಸ್ಥರ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರಠಾಣೆಗೆ ಐಜಿಪಿ ಚಂದ್ರಗುಪ್ತ ಭೇಟಿ ನೀಡಿದರು. ನಿನ್ನೆಯ ಪ್ರತಿಭಟನೆಗೆ ಕಾರಣವಾದ ಲೋಪದೋಷಗಳ ಬಗ್ಗೆ, ಸಮಸ್ಯೆಗಳ ಕುರಿತು ಇಂಚಿಂಚೂ ಮಾಹಿತಿ ಪಡೆದರು. ಬಳಿಕ ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಆಗಿರುವುದಾಗಿ ಸ್ಪಷ್ಟ ಪಡಿಸಿದರು.

ಹೆಲ್ಮೆಟ್‌ ಹಾಕದ ಕಾರಣಕ್ಕೆ ಪ್ರೀತಮ್‌ ಎಂಬ ಯುವ ವಕೀಲನ ಮೇಲೆ ನಗರ ಠಾಣೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ರೊಚ್ಚಿಗೆದ್ದ ವಕೀಲರು ಕಳೆದ ಶುಕ್ರವಾರ ಜಿಲ್ಲಾ ನ್ಯಾಯಾಲಯದ ಮುಂದೆ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ವಕೀಲರ ಪ್ರತಿಭಟನೆಗೆ ಮಣಿದ ಎಸ್‌ಪಿ ವಿಕ್ರಂ, ಓರ್ವ ಪಿಎಸ್ಐ, ಎಎಸ್‌ಐ ಸೇರಿ ಆರು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಈ ಪ್ರಕರಣವು ಹೈಕೋರ್ಟ್‌ ಮೆಟ್ಟಿಲೇರಿದಾಗ ಪೊಲೀಸರ ದೌರ್ಜನ್ಯ (Atrocity on Lawyer) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ (Karnataka High court) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತುರ್ತು ವಿಚಾರಣೆ ನಡೆಸಿತು. ಇತ್ತ ಪೊಲೀಸರಿಗೆ ರಕ್ಷಣೆ ಇಲ್ಲ, ಪೊಲೀಸ್ ಕುಟುಂಬಗಳಿಗೆ ಅನ್ಯಾಯ ಆಗಿದೆ ಎಂದು ಪೊಲೀಸ್‌ ಸಿಬ್ಬಂದಿ ಹಾಗೂ ಕುಟುಂಬಸ್ಥರು ಶನಿವಾರ ಅಹೋರಾತ್ರಿ ಧರಣಿಯನ್ನು ನಡೆಸಿದ್ದರು. ಪೊಲೀಸ್‌ ಸಿಬ್ಬಂದಿಯನ್ನು ಬಂಧಿಸಿದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಸ್‌ಪಿಗೆ ಎಚ್ಚರಿಕೆ ನೀಡಿದ್ದರು. ನಗರದ 6 ಠಾಣೆಗಳ 300ಕ್ಕೂ ಹೆಚ್ಚು ಪೊಲೀಸರು ಕೆಲಸ ನಿಲ್ಲಿಸಿ ಪ್ರತಿಭಟನೆಗೆ ಆಗಮಿಸಿ, ನಾವ್ಯಾರು ಕೆಲಸ ಮಾಡಲ್ಲ ಎಂದು ಪಟ್ಟು ಹಿಡಿದಿದ್ದರು.

Lawyer preetham

ಏನಿದು ಪ್ರಕರಣ?

ಹೆಲ್ಮೆಟ್ ಹಾಕದಿರುವ ವಿಚಾರಕ್ಕೆ ವಕೀಲರನ್ನು ಠಾಣೆಗೆ ಕರೆದೊಯ್ದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಪೊಲೀಸರ ವಿರುದ್ಧ ಸಿಡಿದೆದ್ದ ರಾಜ್ಯ ವಕೀಲರ ಸಂಘ ಬೀದಿಗಿಳಿದು ಪ್ರತಿಭಟನೆ ನಡೆಸಿ ಖಾಕಿ ವಿರುದ್ಧ ಕೆಂಡ ಕಾರಿದ್ದರು. ಕಾಫಿನಾಡಲ್ಲಿ ವಕೀಲರ ಪ್ರತಿಭಟನೆ ಕ್ಷಣ ಕ್ಷಣಕ್ಕೂ ಕಾವು ಪಡೆಯುತ್ತಿದ್ದು, ಹಲ್ಲೆ ನಡೆಸಿದ ಪೊಲೀಸರನ್ನು ಬಂಧಿಸದಿದ್ದರೆ ಮುಂದೆ ಏನಾದರೂ ನಮಗೆ ಗೊತ್ತಿಲ್ಲ ಎಂದು ವಕೀಲರ ಪಡೆ ಖಡಕ್ ವಾರ್ನಿಂಗ್ ಕೊಟ್ಟಿತ್ತು.

ಅಂದಹಾಗೇ ಕಳೆದ ನವೆಂಬರ್‌ 30ರ ರಾತ್ರಿ 7 ಗಂಟೆ ಸುಮಾರಿಗೆ ಹೆಲ್ಮೆಟ್ ಧರಿಸಿದೆ ಹೋಗುತ್ತಿದ್ದ ವಕೀಲ ಪ್ರೀತಮ್‌ನನ್ನು ತಡೆದ ಪೊಲೀಸರು ಬೈಕ್‌ನಿಂದ ಕೆಳಗಿಳಿಸಿ ಕೀ ಕಿತ್ತುಕೊಂಡಿದ್ದರು. ಈ ವಿಚಾರ ದೊಡ್ಡದಾಗಿ ಬೈಕ್ ಸವಾರನನ್ನು ಠಾಣೆಗೆ ಕರೆದು ಕರೆದೊಯ್ದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿರುವ ವಿಚಾರ ಇತರೆ ವಕೀಲರು ಸಿಟ್ಟಿಗೆಳುವಂತೆ ಮಾಡಿತ್ತು.

ದಂಡ ಹಾಕುವ ಬದಲು ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಚಿಕ್ಕಮಗಳೂರು ನಗರ ಠಾಣೆಯ ಮುಂದೆ ರಾತ್ರಿ ಇಡೀ ಪ್ರತಿಭಟನೆ ನಡೆಸಿ ಸುಖಾ ಸುಮ್ಮನೆ ಹಲ್ಲೆ ನಡೆಸಿದ ಪೊಲೀಸರನ್ನು ಬಂಧಿಸುವಂತೆ ವಕೀಲರು ಪಟ್ಟು ಹಿಡಿದಿದ್ದರು. ಚಿಕ್ಕಮಗಳೂರು ಎಸ್‌ಪಿ ವಿಕ್ರಂ ಅಮಟೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದರು ಪಟ್ಟು ಬಿಡದ ನೂರಾರು ವಕೀಲರು ಪೊಲೀಸರನ್ನು ಬಂಧಿಸಿಲೇ ಬೇಕೆಂದು ಒತ್ತಾಯ ಮಾಡಿದರು. ಬಳಿಕ ವಕೀಲರ ಪ್ರತಿಭಟನೆಗೆ ಮಣಿದ ಎಸ್‌ಪಿ ವಿಕ್ರಂ, ಓರ್ವ ಪಿಎಸ್ಐ, ಎಎಸ್‌ಐ ಸೇರಿ ಆರು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಕಪ್ಪಾಳಕ್ಕೆ ಹೊಡೆದಿದ್ದ ಪ್ರೀತಮ್‌!

ಪೊಲೀಸ್‌ ಸಿಬ್ಬಂದಿ ಹೋರಾಟಕ್ಕೆ ಮಣಿದ ಹಿರಿಯ ಅಧಿಕಾರಿಗಳು ವಕೀಲರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದರು. ಪೇದೆ ಗುರುಪ್ರಸಾದ್ ನೀಡಿದ ದೂರಿನ ಮೇಲೆ ವಕೀಲ ಪ್ರೀತಮ್ ಮೇಲೂ ಎಫ್‌ಐಆರ್ ದಾಖಲಾಗಿದೆ. ವಕೀಲ ಪ್ರೀತಮ್ ಗುರುಪ್ರಸಾದ್‌ ಕಪ್ಪಾಳಕ್ಕೆ ಹೊಡಿದಿದ್ದಾರೆ ಎಂದು ಆರೋಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Murder Case: ಆಸ್ತಿ ವಿವಾದ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೈದ ತಂದೆ-ಮಗ

Murder Case: ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ವ್ಯಕ್ತಿಗೆ ರಸ್ತೆಯಲ್ಲೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ.

VISTARANEWS.COM


on

Murder by setting fire
Koo

ಶಿವಮೊಗ್ಗ: ಆಸ್ತಿ ವಿಚಾರಕ್ಕೆ ತಂದೆ-ಮಗ ಸೇರಿ ವ್ಯಕ್ತಿಯೊಬ್ಬರಿಗೆ ರಸ್ತೆಯಲ್ಲೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಆತನ ಅಣ್ಣ ಹಾಗೂ ಮಗ ಅಡ್ಡಗಟ್ಟಿ ಪೆಟ್ರೋಲ್ ಸುರಿದು ಸಜೀವವಾಗಿ ಸುಟ್ಟು (Murder Case) ಹಾಕಿದ್ದಾರೆ.

ಬೆಳಲಕಟ್ಟೆ ಗ್ರಾಮದ ಮಹೇಶಪ್ಪ (60) ಮೃತರು. ಸಹೋದರ ಕುಮಾರ್ ಹಾಗೂ ಆತನ ಮಗ ಕಾರ್ತಿಕ್ ಆರೋಪಿಗಳು. ಮಹೇಶಪ್ಪ ಬೆಳಲಕಟ್ಟೆಯಿಂದ ಬಿಕ್ಕೋನಹಳ್ಳಿಯ ಮಗಳ ಮನೆಗೆ ಹೋಗುತ್ತಿದ್ದಾಗ ಅಡ್ಡ ಹಾಕಿದ ಸಹೋದರ ಮತ್ತು ಆತನ ಮಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದ ಮಹೇಶಪ್ಪನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾನೆ.

ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಆಸ್ತಿ ಮಾರಾಟದ ವಿಚಾರಕ್ಕಾಗಿ ಅಣ್ಣ-ತಮ್ಮನ ನಡುವೆ ಒಂದು ವರ್ಷದಿಂದ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಆದರೆ, ಈ ಕಲಹ ಕೊಲೆಯಲ್ಲಿ ಅಂತ್ಯವಾಗಿದ್ದು, ಹತ್ಯೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೃತ ವ್ಯಕ್ತಿಯು ಘಟನೆ ನಡೆದಾಗ ಅಳಿಯನಿಗೆ ಕರೆ ಮಾಡಿ ತನ್ನ ಹತ್ಯೆ ಮಾಡಿದ ಇಬ್ಬರ ಹೆಸರನ್ನು ಹೇಳಿದ್ದಾನೆ. ಘಟನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಕೊಲೆ ಮಾಡಿದ ತಂದೆ ಮಗನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಮೃತರ ಪುತ್ರಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ | Bomb Blast : ನಾಡಬಾಂಬ್ ಸಿಡಿದು ವ್ಯಕ್ತಿ ಕೈ ಛಿದ್ರ; ಹಾವೇರಿಯಲ್ಲಿ 7 ಜೀವಂತ ಬಾಂಬ್ ಪತ್ತೆ

sommaya

ಮೈಸೂರು: ಪತಿಯೊಬ್ಬ ಪತ್ನಿಯ ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ (Murder case) ಮಾಡಿರುವ ಘಟನೆ ನಡೆದಿದೆ. ಪತ್ನಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಸಿಟ್ಟಿಗೆ ಹತ್ಯೆಗೈದಿದ್ದಾನೆ. ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಹದೇವಸ್ವಾಮಿ (39) ಕೊಲೆಯಾದ ವ್ಯಕ್ತಿ. ಸೋಮಯ್ಯ ಎಂಬಾತ ಮಚ್ಚಿನಿಂದ ಮಹದೇವಸ್ವಾಮಿ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾನೆ. ಪತ್ನಿ ಜತೆಗೆ ಮಹದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಸೋಮಯ್ಯ ಭಾವಿಸಿದ್ದ. ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿ ಮೇಲೆ ಎರಗಿ ಸೋಮಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮಹದೇವಸ್ಮಾಮಿಯನ್ನು ಕೊಲೆ ಮಾಡಿ ಸೋಮಯ್ಯ ಪರಾರಿ ಆಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಡಿವೈಎಸ್‌ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

ಕರ್ನಾಟಕ

Assembly Elections 2023 : ರಾಜ್ಯದಿಂದ ಹೋದ ಹಣದ ಥೈಲಿಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿವೆ: ಎಚ್‌ಡಿಕೆ

Assembly Elections 2023 : ಮೋದಿ ನಾಯಕತ್ವಕ್ಕೆ ಮೂರು ರಾಜ್ಯಗಳಲ್ಲಿ ಜನ ಮತ ಹಾಕಿದ್ದಾರೆ. ಪಂಚರಾಜ್ಯಗಳನ್ನೂ ಆವರಿಸಿಕೊಂಡೇ ಬಿಟ್ಟೆವು ಎಂದು ಬೀಗುತ್ತಿದ್ದ ಕಾಂಗ್ರೆಸ್ ಗರ್ವಭಂಗ ಆಗಿದೆ. ತೆಲಂಗಾಣದ ಗೆಲುವು ಅದರ ಸ್ವಶಕ್ತಿಯಿಂದ ಪಡೆದ ಗೆಲುವಲ್ಲ. ದೇಶದ ಎಲ್ಲಾ ಕಡೆ ಕಾಂಗ್ರೆಸ್ ಪ್ರಭಾವ ಕುಗ್ಗಿದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

HD Kumaraswamy attack on Congress Karnataka
Koo

ಬೆಂಗಳೂರು: ರಾಜ್ಯದಲ್ಲಿ ಲೂಟಿ ಹೊಡೆದ ಹಣವನ್ನು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ (Assembly Elections 2023) ವೆಚ್ಚ ಮಾಡಿ ಕಾಂಗ್ರೆಸ್ ಪಕ್ಷ (Congress Karnataka) ಗೆಲುವು ಸಾಧಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ಬೆಂಗಳೂರಿನಲ್ಲಿ ಚುನಾವಣೆ ಫಲಿತಾಂಶದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಎಚ್.ಡಿ. ಕುಮಾರಸ್ವಾಮಿ, ಪಂಚರಾಜ್ಯಗಳನ್ನೂ ಆವರಿಸಿಕೊಂಡೇ ಬಿಟ್ಟೆವು ಎಂದು ಬೀಗುತ್ತಿದ್ದ ಕಾಂಗ್ರೆಸ್ ಗರ್ವಭಂಗ ಆಗಿದೆ. ತೆಲಂಗಾಣದ ಗೆಲುವು ಅದರ ಸ್ವಶಕ್ತಿಯಿಂದ ಪಡೆದ ಗೆಲುವಲ್ಲ. ದೇಶದ ಎಲ್ಲ ಕಡೆ ಕಾಂಗ್ರೆಸ್ ಪ್ರಭಾವ ಕುಗ್ಗಿದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ ಎಂದು ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: Assembly Session: ಅಧಿವೇಶನಕ್ಕೆ ಬೇಗ ಬಂದವರಿಗೆ ಟೀ ಕಪ್‌; ತಡವಾಗಿ ಬಂದವರಿಗೂ ಪ್ರಶಸ್ತಿ: ಯು.ಟಿ. ಖಾದರ್‌

ಆಸೆ, ಆಮಿಷಗಳನ್ನು ಮುಂದೊಡ್ಡಿ ಕಾಂಗ್ರೆಸ್ ಅಧಿಕಾರಕ್ಕೆ

ಹಲವಾರು ಮತಗಟ್ಟೆ ಸಮೀಕ್ಷೆಗಳು ಜನರ ಮುಂದೆ ಇದ್ದವು. ಎರಡು ರಾಜ್ಯಗಳಲ್ಲಿ ಬಿಜೆಪಿ, ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಂತ ಈ ಸಮೀಕ್ಷೆಗಳು ಭವಿಷ್ಯ ಹೇಳಿದ್ದವು. ಎಲ್ಲವೂ ಉಲ್ಟಾ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬೆಂಬಲದ ರೂಪದಲ್ಲಿ ಜನತೆ ತೀರ್ಮಾನ ಕೈಗೊಂಡಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಆ ಪಕ್ಷದ ಮುಂದೆ ಸಾಕಷ್ಟು ಸವಾಲುಗಳು ಇವೆ. ಅನೇಕ ಆಸೆ, ಆಮಿಷಗಳನ್ನು ಮುಂದೊಡ್ಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಆರ್ಥಿಕ ಥೈಲಿಗಳು, ಚೀಲಗಳು ತೆಲಂಗಾಣದ ಗೆಲುವಿಗೆ ಕಾರಣ

ಕರ್ನಾಟಕದ ನಾಯಕರ ಪ್ರಚಾರದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಕರ್ನಾಟಕದಿಂದ ಅಲ್ಲಿಗೆ ರವಾನೆಯಾದ ಆರ್ಥಿಕ ಥೈಲಿಗಳು, ಚೀಲಗಳು ಈ ಗೆಲುವಿಗೆ ಕಾರಣ. ಇವರ ಸಮಾಜ ಸೇವೆ, ಅಭಿವೃದ್ಧಿಗೆ ಪೂರಕವಾಗಿ ಜನಸೇವೆ ನೋಡಿ ಜನರು ತೆಲಂಗಾಣದಲ್ಲಿ ತೀರ್ಮಾನ ಮಾಡಿದ್ದಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ನಾನಾ ಕಾರಣಗಳಿವೆ, ಕುತಂತ್ರಗಳು ಕೆಲಸ ಮಾಡಿವೆ. ಲೋಕಸಭೆ ಚುನಾವಣೆ ಬಳಿಕ ಏನೇನಾಗುತ್ತದೆ ಎಂಬುದನ್ನು ನೋಡಬೇಕಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ತಿವಿದರು. ‌

ರಾಜ್ಯಪಾಲರಿಗೆ ಬರ ಅಧ್ಯಯನ ವರದಿ ಸಲ್ಲಿಸಿದ ಜೆಡಿಎಸ್‌

ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು (JDS Drought Study) ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಭಾನುವಾರ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಅವರಿಗೆ ಸಲ್ಲಿಸಿದರು. ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರ ಜತೆ ರಾಜಭವನಕ್ಕೆ ನಿಯೋಗದಲ್ಲಿ ತೆರಳಿದ ಅವರು, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕೂಡಲೇ ತಾವು ರಾಜ್ಯದಲ್ಲಿ ಬರ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರದಿಂದ ಅನುದಾನ ಕೊಡಿಸಲು ಮಧ್ಯಪ್ರದೇಶ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿಗಳು ರಾಜ್ಯಪಾಲರಲ್ಲಿ ಮನವಿ ಮಾಡಿದರು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜ್ಯಪಾಲರು, ನಿಮ್ಮ ಅಹವಾಲನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ರಾಜ್ಯ ಎದುರಿಸುತ್ತಿರುವ ತೀವ್ರ ಪರಿಸ್ಥಿತಿಯನ್ನು ಕೇಂದ್ರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಮಾನ್ಸೂನ್ ವೈಫಲ್ಯದಿಂದ ರಾಜ್ಯದಲ್ಲಿ ಒಟ್ಟು 48.15 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಪೈಕಿ 46.09 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ರಾಜ್ಯ ಸರ್ಕಾರವೇ ಅಂದಾಜು ಮಾಡಿರುವಂತೆ ರಾಜ್ಯದಲ್ಲಿ ಒಟ್ಟು 35.162.02 ಕೋಟಿ ರೂಪಾಯಿಯಷ್ಟು ಬೆಳೆ ಹಾನಿ ಆಗಿದ್ದು, ಎನ್‌ಡಿಆರ್‌ಎಫ್ ಮಾನದಂಡದ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ 18,171.44 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ಆದರೆ, ಇಷ್ಟು ಮೊತ್ತದ ಪರಿಹಾರದಿಂದ ರಾಜ್ಯದ ರೈತರ ಬವಣೆ ನೀಗುವುದಿಲ್ಲ. ಕೃಷಿಕರು ಅನುಭವಿಸಿರುವ ಒಟ್ಟಾರೆ ನಷ್ಟದಲ್ಲಿ ಶೇ.10ರಷ್ಟು ಪರಿಹಾರವೂ ಅವರಿಗೆ ಸಿಗುವುದಿಲ್ಲ. ಆದ್ದರಿಂದ ಈ ಹಿಂದೆ ನೀಡದಂತೆ ಪ್ರತಿ ಹೆಕ್ಟೇರ್ ಬೆಳೆ ನಾಶಕ್ಕೆ ಹೆಚ್ಚುವರಿ ಪರಿಹಾರವಾಗಿ 17,500 ರೂಪಾಯಿ ನೀಡಬೇಕು. ಈ ನಿಟ್ಟಿನಲ್ಲಿ ತಾವು ರಾಜ್ಯ ಸರಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ಅವರು ರಾಜ್ಯಪಾಲರಲ್ಲಿ ಮನವಿ ಮಾಡಿದರು.

ಬರ ಪರಿಹಾರ ನಿರ್ವಹಣೆಯಲ್ಲಿ ಸರ್ಕಾರ ಪೂರ್ಣ ವಿಫಲ

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪರಿಹಾರ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅನೇಕ ಜಿಲ್ಲೆಗಳಲ್ಲಿ ಕುಡಿಯುವ ಸಮಸ್ಯೆ ಇದೆ. ಜಾನುವಾರುಗಳು ಕೂಡ ಸಂಕಷ್ಟದಲ್ಲಿವೆ. ರಾಜಧಾನಿ ಬೆಂಗಳೂರಿನಲ್ಲಿಯೂ ನೀರಿನ ಸಂಕಷ್ಟ ಎದುರಾಗಿದೆ ಎಂದು ರಾಜ್ಯಪಾಲರಿಗೆ ಕುಮಾರಸ್ವಾಮಿ ಅವರು ದೂರಿದರು.

ರಾಜ್ಯ ಸರ್ಕಾರ ಬರ ಪರಿಸ್ಥಿತಿಯನ್ನು ಬಹಳ ಅಸಡ್ಡೆಯಿಂದ ನೋಡುತ್ತಿದೆ. ತೀವ್ರ ನಷ್ಟ ಅನುಭವಿಸಿದ ರೈತರಿಗೆ ಬರ ಪರಿಹಾರ ನೀಡದೆ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂಬ ಅಂಶವನ್ನು ಅವರು ರಾಜ್ಯಪಾಲರ ಗಮನಕ್ಕೆ ತಂದರು.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಆರಂಭವಾಗಿದೆ. ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರ ರೈತರ ಬಗ್ಗೆ ಎಳ್ಳಷ್ಟೂ ಕಾಳಜಿ ವಹಿಸಿಲ್ಲ. ರಾಜಕೀಯದಲ್ಲಿ ಮೈ ಮರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ರಾಜ್ಯಪಾಲರಿಂದ ಸಕಾರಾತ್ಮಕ ಸ್ಪಂದನೆ

ರಾಜ್ಯಪಾಲರ ಭೇಟಿ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ಅವರು, ನಮ್ಮ ಮನವಿಗೆ ರಾಜ್ಯಪಾಲರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮನವಿ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ನಾಡಿನ ಜನರ ಹಿತ ಕಾಪಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡರು ಸೇರಿದಂತೆ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

ಇದನ್ನೂ ಓದಿ | Assembly Elections 2023 : ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿಕೆಯ ಸಂಕೇತ: ಡಿಕೆಶಿ

ಮನವಿಯ ಪ್ರಮುಖ ಅಂಶಗಳು

  • ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಮಾನದಂಡದ ಅನ್ವಯ ಕೂಡಲೇ ರಾಜ್ಯಕ್ಕೆ 17,181.44 ಕೋಟಿ ರೂಪಾಯಿ ಬಿಡುಗಡೆ ಮಾಡಿಸಲು ರಾಜ್ಯಪಾಲರು ಮನವೊಲಿಸಬೇಕು.
  • ಕುಡಿಯುವ ನೀರು, ಜಾನುವಾರುಗಳ ಸಂರಕ್ಷಣೆ, ಕೃಷಿ ಕಾರ್ಮಿಕರಿಗೆ ನೆರವು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೆರವು ನೀಡುವ ಉದ್ದೇಶದಿಂದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ 10,000 ಕೋಟಿ ರೂಪಾಯಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.
  • ವಿಮಾ ಕಂಪನಿಗಳು ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯಪಾಲರು ಕ್ರಮ ವಹಿಸಬೇಕು.
  • ಬೆಂಗಳೂರು ನಗರ ಕುಡಿಯುವ ನೀರಿನ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ಇದಕ್ಕೆ ಏಕೈಕ ಪರಿಹಾರ ಆಗಿರುವ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಕೊಡಿಸುವ ನಿಟ್ಟಿನಲ್ಲಿ ರಾಜ್ಯಪಾಲರು ಕ್ರಮ ವಹಿಸಬೇಕು.
Continue Reading
Advertisement
Congress defeated because Opposing Sanatana Dharma Says Acharya Pramod Krishnam
ದೇಶ27 mins ago

Election Result 2023: ಸನಾತನ ಧರ್ಮ ವಿರೋಧಿಸಿದ್ದಕ್ಕೇ ಕಾಂಗ್ರೆಸ್‌ಗೆ ಸೋಲು; ಪಕ್ಷದ ವಿರುದ್ಧವೇ ತಿರುಗಿ ಬಿದ್ದ ನಾಯಕ!

Bjp Leaders celebration
ಕರ್ನಾಟಕ30 mins ago

Assembly Elections 2023: ಮೂರು ರಾಜ್ಯಗಳಲ್ಲಿ ಜಯಭೇರಿ; ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

Election Result 2023 is for good governance and Development says PM Narendra Modi
ದೇಶ58 mins ago

PM Narendra Modi: ಉತ್ತಮ ಆಡಳಿತ, ಅಭಿವೃದ್ಧಿಗೆ ಸಂದ ಜಯ ಎಂದ ಪ್ರಧಾನಿ ಮೋದಿ

Chikkamagaluru police lawyer clash The case is being investigated by the CID
ಕರ್ನಾಟಕ1 hour ago

ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

Murder by setting fire
ಕರ್ನಾಟಕ1 hour ago

Murder Case: ಆಸ್ತಿ ವಿವಾದ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೈದ ತಂದೆ-ಮಗ

HD Kumaraswamy attack on Congress Karnataka
ಕರ್ನಾಟಕ1 hour ago

Assembly Elections 2023 : ರಾಜ್ಯದಿಂದ ಹೋದ ಹಣದ ಥೈಲಿಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿವೆ: ಎಚ್‌ಡಿಕೆ

Suryakuamr Yadav
ಕ್ರಿಕೆಟ್2 hours ago

Ind vs Aus : ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತಕ್ಕೆ ಮೊದಲು ಬ್ಯಾಟಿಂಗ್​

Rahul Gandhi Says, battle of ideology will continue
ದೇಶ2 hours ago

Rahul Gandhi: ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ ಎಂದ ರಾಹುಲ್; ಖರ್ಗೆ ಹೇಳಿದ್ದೇನು?

BL Santhosh and Priyank Kharge
ಕರ್ನಾಟಕ2 hours ago

Assembly Elections 2023 : ಈಗ ಏನಾದ್ರೂ ಹೇಳ್ತೀರಾ ಸರ್‌!; ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌ ಸಂತೋಷ್‌ ಗೇಲಿ

Speaker UT Khadar
ಕರ್ನಾಟಕ2 hours ago

Assembly Session: ಅಧಿವೇಶನಕ್ಕೆ ಬೇಗ ಬಂದವರಿಗೆ ಟೀ ಕಪ್‌; ತಡವಾಗಿ ಬಂದವರಿಗೂ ಪ್ರಶಸ್ತಿ: ಯು.ಟಿ. ಖಾದರ್‌

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ8 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ15 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ1 day ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌