ಚಾಮರಾಜನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ 20 ದಿನ ಆಗಿಲ್ಲ. ಇಷ್ಟರೊಳಗೆ 45% ಕಮಿಷನ್ ತೆಗೆದುಕೊಳ್ಳಲು ಆಗುತ್ತದೆಯೇ? ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಪ್ರತಿಕ್ರಿಯಿಸಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರ 40% ಕಮಿಷನ್ ಪಡೆಯುತ್ತಿತ್ತು, ಈಗಿನ ಸರ್ಕಾರ 5% ಸೇರಿಸಿ 45% ಕಮಿಷನ್ ಪಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದರು. ಈ ಮಾತಿಗೆ ಸಚಿವ ಕೆ. ವೆಂಕಟೇಶ್ ಪ್ರತಿಕ್ರಿಯಿಸಿದ್ದಾರೆ.
ನಮ್ಮ ಸರ್ಕಾರ ಬಂದೇ 20 ದಿನ ಆಗಿಲ್ವಲ್ಲಪ್ಪ, ಎಲ್ಲಿ ಪರ್ಸೆಂಟೇಜ್ ತಗಳ್ಳೊಕ್ಕೆ ಆಗುತ್ತೆ? ಅವರೇನು ತಿಳುವಳಿಕೆ ಇದ್ದು ಮಾತಾಡ್ತಾರೋ, ಇಲ್ಲದೆ ಮಾತಾಡ್ತಾರೋ? ಅವರೊಬ್ಬ ಮಾಜಿ ಮುಖ್ಯಮಂತ್ರಿ. ಜವಬ್ದಾರಿಯುತವಾಗಿ ಮಾತಾಡಬೇಕು ಎಂದರು.
ವಿದ್ಯುತ್ ದರ ಏರಿಕೆ ಕುರಿತು ಪ್ರತಿಕ್ರಿಯಿಸಿ, ಅದನ್ನು ನಾವು ಮಾಡಿದ್ದಲ್ಲ. ಹಿಂದಿನ ಬಿಜೆಪಿ ಸರ್ಕಾರ ವಿದ್ಯುತ್ ದರ ಪರಿಷ್ಕರಣೆ ಮಾಡಿತ್ತು. ಚುನಾವಣೆ ಬಂದಿದ್ದರಿಂದ ಜಾರಿಯಾಗಿರಲಿಲ್ಲ. ಬಿಜೆಪಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡ್ತಿದ್ದಾರೆ ಎಂದರು. ವಿದ್ಯುತ್ ದರ ಏರಿಕೆಯಿಂದ ಸರ್ಕಾರ ವರ್ಚಸ್ಸಿಗೆ ಧಕ್ಕೆ ಎಂಬ ಶಾಸಕ ತನ್ವೀರ್‌ಸೇಠ್ ಪತ್ರ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: H.D. Kumaraswamy: ಇದು 40+5 ಪರ್ಸೆಂಟ್ ಕಮಿಷನ್ ಸರ್ಕಾರ: ಕಾಂಗ್ರೆಸ್ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್!